1 ಅರಸುಗಳು 8:66 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201966 ಎಂಟನೆಯ ದಿನ ಜನರಿಗೆ ಹೋಗುವುದಕ್ಕೆ ಅಪ್ಪಣೆಯಾಗಲು ಅವರು ಅರಸನನ್ನು ವಂದಿಸಿ ಯೆಹೋವನು ತನ್ನ ಸೇವಕನಾದ ದಾವೀದನಿಗೂ ತನ್ನ ಪ್ರಜೆಗಳಾದ ಇಸ್ರಾಯೇಲರಿಗೂ ಮಾಡಿದ ಸರ್ವೋಪಕಾರಗಳನ್ನು ನೆನದು ಆನಂದಚಿತ್ತರಾಗಿ, ಹರ್ಷಿಸುತ್ತಾ ತಮ್ಮ ತಮ್ಮ ನಿವಾಸಗಳಿಗೆ ತೆರಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)66 ಎಂಟನೆಯ ದಿವಸ ಜನರಿಗೆ ಹೋಗುವುದಕ್ಕೆ ಅಪ್ಪಣೆಯಾಯಿತು. ಅವರು ಅರಸನನ್ನು ವಂದಿಸಿ, ಸರ್ವೇಶ್ವರ ತಮ್ಮ ದಾಸ ದಾವೀದನಿಗೂ ತಮ್ಮ ಪ್ರಜೆಗಳಾದ ಇಸ್ರಯೇಲರಿಗೂ ಮಾಡಿದ ಸರ್ವೋಪಕಾರಗಳನ್ನು ಸ್ಮರಿಸಿ, ಆನಂದಚಿತ್ತರಾಗಿ ಹರ್ಷಿಸುತ್ತಾ, ತಮ್ಮ ತಮ್ಮ ನಿವಾಸಗಳಿಗೆ ತೆರಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)66 ಎಂಟನೆಯ ದಿವಸ ಜನರಿಗೆ ಹೋಗುವದಕ್ಕೆ ಅಪ್ಪಣೆಯಾಗಲು ಅವರು ಅರಸನನ್ನು ವಂದಿಸಿ ಯೆಹೋವನು ತನ್ನ ಸೇವಕನಾದ ದಾವೀದನಿಗೂ ತನ್ನ ಪ್ರಜೆಗಳಾದ ಇಸ್ರಾಯೇಲ್ಯರಿಗೂ ಮಾಡಿದ ಸರ್ವೋಪಕಾರಗಳನ್ನು ನೆನಸಿ ಆನಂದಚಿತ್ತರಾಗಿ ಹರ್ಷಿಸುತ್ತಾ ತಮ್ಮತಮ್ಮ ನಿವಾಸಗಳಿಗೆ ತೆರಳಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್66 ಮಾರನೆಯ ದಿನ ಸೊಲೊಮೋನನು ಜನರಿಗೆ ಮನೆಗೆ ಹೋಗುವಂತೆ ಹೇಳಿದನು. ಜನರೆಲ್ಲರು ರಾಜನನ್ನು ಅಭಿನಂದಿಸಿ ತಮ್ಮ ತಮ್ಮ ಮನೆಗಳಿಗೆ ಹೋದರು. ಯೆಹೋವನು ತನ್ನ ಸೇವಕನಾದ ದಾವೀದನಿಗೆ ಮತ್ತು ಇಸ್ರೇಲಿನ ಜನರಿಗೆ ಒಳ್ಳೆಯವುಗಳನ್ನು ಮಾಡಿದ್ದರಿಂದ ಅವರು ಸಂತೋಷವಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ66 ಎಂಟನೆಯ ದಿನದಲ್ಲಿ ಅವನು ಜನರಿಗೆ ಹೋಗುವುದಕ್ಕೆ ಅಪ್ಪಣೆಕೊಡಲು, ಆಗ ಅವರು ಅರಸನನ್ನು ಆಶೀರ್ವದಿಸಿ ಯೆಹೋವ ದೇವರು ತಮ್ಮ ಸೇವಕನಾದ ದಾವೀದನಿಗೂ, ತನ್ನ ಜನರಾದ ಇಸ್ರಾಯೇಲರಿಗೂ ಮಾಡಿದ ಸಮಸ್ತ ಉಪಕಾರದ ನಿಮಿತ್ತ ಅವರು ಹೃದಯದಲ್ಲಿ ಆನಂದಭರಿತರಾಗಿ ಸಂತೋಷಪಡುತ್ತಾ ಅವರವರ ಡೇರೆಗಳಿಗೆ ಹೋದರು. ಅಧ್ಯಾಯವನ್ನು ನೋಡಿ |