Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 8:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಕೆರೂಬಿಗಳ ರೆಕ್ಕೆಗಳು ಮಂಜೂಷವಿದ್ದ ಸ್ಥಳದ ಮೇಲೆ ಚಾಚಿದವುಗಳಾಗಿದ್ದುದರಿಂದ ಮಂಜೂಷವೂ ಅದರ ಕೋಲುಗಳೂ ಪೂರ್ಣವಾಗಿ ಅವುಗಳ ನೆರಳಿನಲ್ಲಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಕೆರೂಬಿಗಳ ರೆಕ್ಕೆಗಳು ಮಂಜೂಷವಿದ್ದ ಸ್ಥಳದ ಮೇಲೆ ಚಾಚಿದವುಗಳಾಗಿದ್ದುದರಿಂದ ಮಂಜೂಷವು ಹಾಗು ಅದರ ಕೋಲುಗಳು ಪೂರ್ಣವಾಗಿ ಅವುಗಳ ನೆರಳಿನಲ್ಲಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಕೆರೂಬಿಗಳ ರೆಕ್ಕೆಗಳು ಮಂಜೂಷವಿದ್ದ ಸ್ಥಳದ ಮೇಲೆ ಚಾಚಿದವುಗಳಾಗಿದ್ದದರಿಂದ ಮಂಜೂಷವೂ ಅದರ ಕೋಲುಗಳೂ ಪೂರ್ಣವಾಗಿ ಅವುಗಳ ನೆರಳಿನಲ್ಲಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಕೆರೂಬಿಗಳ ರೆಕ್ಕೆಗಳು ಪವಿತ್ರ ಪೆಟ್ಟಿಗೆಯ ಮೇಲೆಲ್ಲಾ ಹರಡಿಕೊಂಡಿದ್ದವು. ಅವು ಪವಿತ್ರ ಪೆಟ್ಟಿಗೆಯನ್ನು ಮತ್ತು ಅದನ್ನು ಹೊರುವ ಕೋಲುಗಳನ್ನು ಮುಚ್ಚಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಕೆರೂಬಿಗಳು ಮಂಜೂಷವಿದ್ದ ಸ್ಥಳದ ಮೇಲೆ ತಮ್ಮ ರೆಕ್ಕೆಗಳನ್ನು ಚಾಚಿಕೊಂಡಿದ್ದವು. ಹೀಗೆಯೇ ಕೆರೂಬಿಗಳು ಮಂಜೂಷವನ್ನೂ, ಅದರ ಕೋಲುಗಳನ್ನೂ ಮೇಲಿನಿಂದ ಮುಚ್ಚಿಕೊಂಡಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 8:7
7 ತಿಳಿವುಗಳ ಹೋಲಿಕೆ  

ಅದರ ಮೇಲೆ ಕೃಪಾಸನವನ್ನು ಮುಚ್ಚುವ ತೇಜಸ್ಸಿನ ಕೆರೂಬಿಗಳೂ ಇದ್ದವು. ಅದನ್ನು ಈಗ ಒಂದೊಂದಾಗಿ ವಿವರಿಸಲು ಸಾಧ್ಯವಿಲ್ಲ.


ಆ ಕೆರೂಬಿಗಳು ಮೇಲಕ್ಕೆ ರೆಕ್ಕೆಗಳನ್ನು ಚಾಚಿರುವಂತೆಯೂ ಮತ್ತು ಕೃಪಾಸನವನ್ನು ತಮ್ಮ ರೆಕ್ಕೆಗಳಿಂದ ಮುಚ್ಚಿರುವಂತೆಯೂ ಇರಿಸಬೇಕು. ಅವುಗಳ ಮುಖಗಳು ಎದುರುಬದುರಾಗಿ ಕೃಪಾಸನವನ್ನು ನೋಡುವಂತಿರಬೇಕು.


ಅವನು ಅವುಗಳನ್ನು ದೇವಾಲಯದ ಗರ್ಭಗೃಹದಲ್ಲಿಡಿಸಿದನು. ಅವುಗಳ ರೆಕ್ಕೆಗಳು ಚಾಚಿದಂತಿದ್ದುದರಿಂದ ಮೊದಲನೆಯ ಕೆರೂಬಿಯ ಒಂದು ರೆಕ್ಕೆಯು ಈಚೆಯ ಗೋಡೆಗೂ, ಎರಡನೆಯ ಕೆರೂಬಿಯ ಒಂದು ರೆಕ್ಕೆಯು ಆಚೆಯ ಗೋಡೆಗೂ ತಗುಲಿದ್ದವು. ಅವುಗಳ ಬೇರೆ ಎರಡು ರೆಕ್ಕೆಗಳು ಮನೆಯ ಮಧ್ಯದಲ್ಲಿ ಒಂದನ್ನೊಂದು ತಗುಲಿದಂತೆ ಇತ್ತು.


ಯಾಜಕರು ಯೆಹೋವನ ಒಡಂಬಡಿಕೆಯ ಮಂಜೂಷವನ್ನು ತೆಗೆದುಕೊಂಡು ಬಂದು ಮಹಾಪರಿಶುದ್ಧ ಸ್ಥಳವೆನಿಸಿಕೊಳ್ಳುವ ಗರ್ಭಗೃಹದಲ್ಲಿ ಕೆರೂಬಿಗಳ ರೆಕ್ಕೆಗಳ ಕೆಳಗೆ ಅದಕ್ಕೆ ನೇಮಕವಾದ ಸ್ಥಳದಲ್ಲಿ ಇಟ್ಟರು.


ಆ ಕೋಲುಗಳು ಬಹಳ ಉದ್ದವಾಗಿದ್ದುದರಿಂದ ಅವುಗಳ ತುದಿಗಳು ಗರ್ಭಗೃಹದ ಎದುರಿನಲ್ಲಿರುವ ಪರಿಶುದ್ಧ ಸ್ಥಳದಲ್ಲಿ ನಿಂತವರಿಗೆ ಕಾಣಿಸಿದರೂ ಹೊರಗೆ ನಿಂತವರಿಗೆ ಕಾಣಿಸುತ್ತಿರಲಿಲ್ಲ. ಅವು ಇಂದಿನವರೆಗೂ ಅಲ್ಲೇ ಇವೆ.


ಅದರ ಮೇಲೆ ಹಸನಾದ ತೊಗಲನ್ನೂ ಮತ್ತು ನೀಲಿ ಬಟ್ಟೆಯನ್ನೂ ಹೊದಿಸಿ, ಮಂಜೂಷದ ಬಳೆಗಳಲ್ಲಿ ಹೊರುವ ಕೋಲುಗಳನ್ನು ಸೇರಿಸಬೇಕು.


ಆತನ ಸುತ್ತಲು ಸೆರಾಫಿಯರು ಇದ್ದರು. ಪ್ರತಿಯೊಬ್ಬನು ಆರಾರು ರೆಕ್ಕೆಯುಳ್ಳವನಾಗಿ, ಎರಡರಿಂದ ತನ್ನ ಮುಖವನ್ನು, ಎರಡರಿಂದ ತನ್ನ ಕಾಲುಗಳನ್ನು ಮುಚ್ಚಿಕೊಂಡು, ಇನ್ನೆರಡು ರೆಕ್ಕೆಗಳಿಂದ ಹಾರುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು