Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 8:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಮಂಜೂಷದಲ್ಲಿ ಎರಡು ಕಲ್ಲಿನ ಹಲಿಗೆಗಳ ಹೊರತಾಗಿ ಬೇರೇನೂ ಇರಲಿಲ್ಲ. ಯೆಹೋವನು ಐಗುಪ್ತದಿಂದ ಬಂದ ಇಸ್ರಾಯೇಲರೊಡನೆ ಹೋರೇಬ್ ಬೆಟ್ಟದ ಬಳಿಯಲ್ಲಿ ಒಡಂಬಡಿಕೆ ಮಾಡಿಕೊಂಡ ಮೇಲೆ ಮೋಶೆಯು ಅವುಗಳನ್ನು ಅದರಲ್ಲಿರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಮಂಜೂಷದಲ್ಲಿ ಎರಡು ಶಿಲಾಶಾಸನಗಳನ್ನು ಬಿಟ್ಟರೆ, ಬೇರೇನೂ ಇರಲಿಲ್ಲ. ಸರ್ವೇಶ್ವರ ಈಜಿಪ್ಟಿನಿಂದ ಬಂದ ಇಸ್ರಯೇಲರೊಡನೆ ಹೋರೇಬ್ ಬೆಟ್ಟದ ಬಳಿ ಒಡಂಬಡಿಕೆ ಮಾಡಿಕೊಂಡ ಮೇಲೆ, ಮೋಶೆ ಆ ಶಾಸನಗಳನ್ನು ಅದರಲ್ಲಿ ಇಟ್ಟಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಮಂಜೂಷದಲ್ಲಿ ಎರಡು ಕಲ್ಲಿನ ಹಲಿಗೆಗಳ ಹೊರತಾಗಿ ಬೇರೇನೂ ಇರಲಿಲ್ಲ. ಯೆಹೋವನು ಐಗುಪ್ತದಿಂದ ಬಂದ ಇಸ್ರಾಯೇಲ್ಯರೊಡನೆ ಹೋರೇಬ್ ಬೆಟ್ಟದ ಬಳಿಯಲ್ಲಿ ಒಡಂಬಡಿಕೆ ಮಾಡಿಕೊಂಡ ಮೇಲೆ ಮೋಶೆಯು ಅವುಗಳನ್ನು ಅದರಲ್ಲಿಟ್ಟಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಪವಿತ್ರ ಪೆಟ್ಟಿಗೆಯಲ್ಲಿರುವ ಒಂದೇ ವಸ್ತುವೆಂದರೆ ಎರಡು ಕಲ್ಲಿನ ಹಲಿಗೆಗಳು. ಮೋಶೆಯು ಹೋರೇಬ್ ಎಂಬ ಸ್ಥಳದಲ್ಲಿ ಪವಿತ್ರ ಪೆಟ್ಟಿಗೆಯಲ್ಲಿಟ್ಟ ಎರಡು ಕಲ್ಲಿನ ಹಲಗೆಗಳೇ. ಇವು ಈಜಿಪ್ಟಿನಿಂದ ಹೊರಬಂದ ಇಸ್ರೇಲಿನ ಜನರೊಂದಿಗೆ ಯೆಹೋವನು ಒಪ್ಪಂದ ಮಾಡಿಕೊಂಡ ಸ್ಥಳವೇ ಹೋರೇಬ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಇಸ್ರಾಯೇಲರು ಈಜಿಪ್ಟ್ ದೇಶದಿಂದ ಹೊರಬಂದ ನಂತರ ಯೆಹೋವ ದೇವರು ಅವರ ಸಂಗಡ ಒಡಂಬಡಿಕೆ ಮಾಡಿದಾಗ, ಮೋಶೆಯು ಹೋರೇಬ್ ಬೆಟ್ಟದ ಬಳಿಯಲ್ಲಿ ಮಂಜೂಷದೊಳಗೆ ಇಟ್ಟ ಕಲ್ಲಿನ ಎರಡು ಹಲಗೆಗಳ ಹೊರತು ಅದರಲ್ಲಿ ಮತ್ತೇನೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 8:9
25 ತಿಳಿವುಗಳ ಹೋಲಿಕೆ  

ಆ ಕೃಪಾಸನವನ್ನು ಮಂಜೂಷದ ಮೇಲಿರಿಸಬೇಕು. ನಾನು ನಿನಗೆ ಕೊಡುವ ಆಜ್ಞಾಶಾಸನಗಳನ್ನು ಆ ಮಂಜೂಷದೊಳಗೆ ಇರಿಸಬೇಕು


ಅದರಲ್ಲಿ ಚಿನ್ನದ ಧೂಪಾರತಿಯು ಮತ್ತು ಚಿನ್ನದ ತಗಡಿನಿಂದ ಹೊದಿಸಿದ ಒಡಂಬಡಿಕೆಯ ಮಂಜೂಷಗಳಿದ್ದವು. ಆ ಮಂಜೂಷದೊಳಗೆ ಮನ್ನ ಇಟ್ಟಿದ್ದ ಚಿನ್ನದ ಪಾತ್ರೆಯೂ, ಆರೋನನ ಚಿಗುರಿದ ಕೋಲೂ, ಒಡಂಬಡಿಕೆಯ ಕಲ್ಲಿನ ಹಲಿಗೆಗಳೂ ಇದ್ದವು.


ಅವನು ಆಜ್ಞಾಶಾಸನಗಳನ್ನು ಮಂಜೂಷದಲ್ಲಿಟ್ಟು ಮಂಜೂಷಕ್ಕೆ ಕೋಲುಗಳನ್ನು ಹಾಕಿ ಕೃಪಾಸನವನ್ನು ಇರಿಸಿದನು.


ಮಂಜೂಷದಲ್ಲಿ ಎರಡು ಕಲ್ಲಿನ ಹಲಗೆಗಳ ಹೊರತಾಗಿ ಬೇರೇನೂ ಇರಲಿಲ್ಲ, ಐಗುಪ್ತ ದೇಶದಿಂದ ಬಂದ ಇಸ್ರಾಯೇಲರೊಡನೆ, ಹೋರೇಬ್ ಬೆಟ್ಟದ ಬಳಿಯಲ್ಲಿ ಯೆಹೋವನು ಒಡಂಬಡಿಕೆ ಮಾಡಿಕೊಂಡ ಮೇಲೆ, ಮೋಶೆಯು ಅವುಗಳನ್ನು ಅದರಲ್ಲಿಟ್ಟಿದ್ದನು.


ನೀವು ಅನುಸರಿಸಬೇಕೆಂದು ಆತನು ನೇಮಿಸಿದ ನಿಬಂಧನೆಯನ್ನು ಅಂದರೆ ಹತ್ತು ಆಜ್ಞೆಗಳನ್ನು ನಿಮಗೆ ವಿವರಿಸಿ, ಎರಡು ಕಲ್ಲಿನ ಹಲಗೆಗಳಲ್ಲಿ ಅದನ್ನು ಕೆತ್ತಿಸಿದನು.


ದೇವರ ಮಹಿಮೆಯಿಂದಲೂ, ಆತನ ಶಕ್ತಿಯಿಂದಲೂ ಉಂಟಾದ ಹೊಗೆಯಿಂದ ಆ ಆಲಯ ತುಂಬಿತ್ತು. ಆ ಏಳು ಮಂದಿ ದೇವದೂತರ ಕೈಯಲ್ಲಿದ್ದ ಏಳು ಉಪದ್ರವಗಳು ತೀರುವ ತನಕ ಆ ಆಲಯವನ್ನು ಪ್ರವೇಶಿಸುವುದಕ್ಕೆ ಯಾರಿಂದಲೂ ಸಾಧ್ಯವಾಗಲಿಲ್ಲ.


ಇದಲ್ಲದೆ ಯೆಹೋವನ ತೇಜಸ್ಸು ಕೆರೂಬಿಗಳನ್ನು ಬಿಟ್ಟು ಮೇಲಕ್ಕೇರಿ ದೇವಾಲಯದ ಹೊಸ್ತಿಲಿನ ಮೇಲ್ಗಡೆ ನಿಂತಿತು; ದೇವಾಲಯದಲ್ಲಿಯೂ ಮೇಘವು ತುಂಬಿತ್ತು; ಯೆಹೋವನ ತೇಜಸ್ಸಿನ ಅದ್ಭುತಕಾಂತಿಯು ಅಂಗಳದಲ್ಲೆಲ್ಲಾ ವ್ಯಾಪಿಸಿತ್ತು.


ಇದಲ್ಲದೆ ಐಗುಪ್ತದೇಶದಿಂದ ಬಿಡುಗಡೆ ಹೊಂದಿದ ನಮ್ಮ ಪೂರ್ವಿಕರಿಗೆ ಯೆಹೋವನಿಂದ ದೊರಕಿದ ನಿಬಂಧನಾಶಾಸನಗಳಿರುವ ಮಂಜೂಷಕ್ಕೆ ಸ್ಥಳವನ್ನು ಪ್ರತ್ಯೇಕಿಸಿ ಅಲ್ಲಿ ಅದನ್ನು ಇರಿಸಿದೆನು” ಎಂದು ಹೇಳಿದನು.


“ನೀವು ಈ ಧರ್ಮಶಾಸ್ತ್ರ ಪುಸ್ತಕವನ್ನು ನಿಮ್ಮ ವಶಕ್ಕೆ ತೆಗೆದುಕೊಂಡು ನಿಮ್ಮ ದೇವರಾದ ಯೆಹೋವನ ಆಜ್ಞಾಶಾಸನಗಳ ಮಂಜೂಷದ ಬಳಿಯಲ್ಲಿ ಇಡಿರಿ. ಇಸ್ರಾಯೇಲರೇ, ಅಲ್ಲಿ ಇದು ನಿಮಗೆ ವಿರುದ್ಧವಾಗಿ ಸಾಕ್ಷಿಕೊಡುವುದಾಗಿರಲಿ.


ತರುವಾಯ ಯೆಹೋವನು ಮೋಶೆಗೆ, “ಆರೋನನ ಕೋಲನ್ನು ತಿರುಗಿ ಆಜ್ಞಾಶಾಸನಗಳ ಮುಂದೆ ಇಡಬೇಕು. ಅದು ತಿರುಗಿಬೀಳುವವರಿಗೆ ದೃಷ್ಟಾಂತವಾಗಿ ಅಲ್ಲೇ ಇರಬೇಕು. ಇವರು ಇನ್ನು ಮುಂದೆ ನನಗೆ ವಿರುದ್ಧವಾಗಿ ಗುಣುಗುಟ್ಟಿ ನಾಶವಾಗದಂತೆ ನೀನು ಹೀಗೆ ಮಾಡು” ಎಂದು ಆಜ್ಞಾಪಿಸಿದನು.


ಇಸ್ರಾಯೇಲರು ದೇವದರ್ಶನದ ಗುಡಾರವನ್ನು ಎತ್ತಿ ನಿಲ್ಲಿಸಿದ ದಿನದಲ್ಲಿ ಮೇಘವು ದೇವದರ್ಶನದ ಗುಡಾರವನ್ನು ಆವರಿಸಿಕೊಂಡಿತು. ಅದು ಸಂಜೆಯಿಂದ ಮುಂಜಾನೆಯವರೆಗೆ ಬೆಂಕಿಯಂತೆ ಕಾಣಿಸುತ್ತಿತ್ತು.


“ನಿನ್ನ ಅಣ್ಣನಾದ ಆರೋನನು ಮನಸ್ಸಿಗೆ ಬಂದಾಗೆಲ್ಲಾ ತೆರೆಯನ್ನು ದಾಟಿ ಮಹಾಪವಿತ್ರವಾದ ಸ್ಥಾನದೊಳಕ್ಕೆ ಮಂಜೂಷದ ಮೇಲಣ ಕೃಪಾಸನದ ಹತ್ತಿರಕ್ಕೆ ಬರಬಾರದೆಂದು ಅವನಿಗೆ ಹೇಳು. ನಾನು ಕೃಪಾಸನದ ಮೇಲೆ ಮೇಘದಲ್ಲಿ ಕಾಣಿಸಿಕೊಳ್ಳುವುದರಿಂದ ಅವನು ನಾಶವಾಗುವನು.


ಆದಕಾರಣ ಮೋಶೆಯು ಆರೋನನಿಗೆ, “ನೀನು ಒಂದು ಪಾತ್ರೆಯನ್ನು ತೆಗೆದುಕೊಂಡು, ಅದರಲ್ಲಿ ಒಂದು ಸೇರಿನಷ್ಟು ಮನ್ನವನ್ನು ಹಾಕಿ ನಿಮ್ಮ ಸಂತತಿಯವರು ನೋಡುವುದಕ್ಕಾಗಿ ಅದನ್ನು ಯೆಹೋವನ ಸನ್ನಿಧಿಯಲ್ಲಿ ಇಡಬೇಕು” ಎಂದು ಹೇಳಿದನು.


ಆರೋನನು ಇಸ್ರಾಯೇಲರ ಸಮೂಹಕ್ಕೆಲ್ಲಾ ಈ ಮಾತುಗಳನ್ನು ತಿಳಿಸುತ್ತಿರುವಾಗ, ಅವರು ಮರುಭೂಮಿಯ ಕಡೆಗೆ ನೋಡಲಾಗಿ, ಮೇಘದಲ್ಲಿ ಯೆಹೋವನ ತೇಜಸ್ಸು ಅವರಿಗೆ ಕಾಣಿಸಿತು.


ಬೆಳಗಿನ ಜಾವದಲ್ಲಿ ಯೆಹೋವನು ಆ ಅಗ್ನಿ ಸ್ತಂಭ ಮತ್ತು ಮೇಘ ಸ್ತಂಭದೊಳಗಿನಿಂದ ಐಗುಪ್ತ್ಯರ ದಂಡಿನ ಕಡೆಗೆ ನೋಡಿ ಅವರಲ್ಲಿ ಗಲಿಬಿಲಿಯನ್ನು ಉಂಟುಮಾಡಿದನು.


ಯೆಹೋವನು ಹಗಲು ಹೊತ್ತಿನಲ್ಲಿ ದಾರಿತೋರಿಸುವುದಕ್ಕೆ ಮೇಘಸ್ತಂಭದಲ್ಲಿಯೂ, ರಾತ್ರಿವೇಳೆಯಲ್ಲಿ ಬೆಳಕುಕೊಡುವುದಕ್ಕೆ ಅಗ್ನಿಸ್ತಂಭದಲ್ಲಿಯೂ ಇದ್ದು ಅವನ್ನು ನಡೆಸುತಿದ್ದನು. ಈ ರೀತಿಯಲ್ಲಿ ಅವರು ಹಗಲಿರುಳು ಪ್ರಯಾಣಮಾಡಿದರು.


ಆ ಮಂಜೂಷದಲ್ಲಿ ನಾನು ನಿನಗೆ ಕೊಡುವ ಆಜ್ಞಾಶಾಸನವನ್ನು ಇಡಬೇಕು.


ಮಂಜೂಷಕ್ಕಿಂತಲೂ ಉದ್ದವಾಗಿದ್ದ ಆ ಕೋಲುಗಳ ತುದಿಗಳು ಗರ್ಭಗುಡಿಯ ಎದುರಿನಲ್ಲಿ ನಿಂತವರಿಗೆ ಕಾಣಿಸುತ್ತಿದ್ದವು. ಆದರೆ ಹೊರಗೆ ನಿಂತವರಿಗೆ ಕಾಣಿಸುತ್ತಿರಲಿಲ್ಲ; ಮಂಜೂಷವು ಇಂದಿನವರೆಗೂ ಅಲ್ಲೇ ಇದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು