Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 9:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಐಗುಪ್ತದ ಅರಸನಾದ ಫರೋಹನು ಗೆಜೆರ್ ಪಟ್ಟಣವನ್ನು ಹಿಡಿದು ಅದಕ್ಕೆ ಬೆಂಕಿಹೊತ್ತಿಸಿ, ಅದರಲ್ಲಿದ್ದ ಕಾನಾನ್ಯರನ್ನು ಹತಿಸಿ, ಅದನ್ನು ವಶಮಾಡಿಕೊಂಡು ಸೊಲೊಮೋನನ ಹೆಂಡತಿಯಾದ ತನ್ನ ಮಗಳಿಗೆ ಮದುವೆಯ ಉಡುಗೊರೆಯಾಗಿ ಕೊಟ್ಟಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಈಜಿಪ್ಟಿನ ಅರಸ ಫರೋಹನು, ಗೆಜೆರ್ ಪಟ್ಟಣವನ್ನು ಹಿಡಿದು ಅದನ್ನು ವಶಮಾಡಿಕೊಂಡು, ಸೊಲೊಮೋನನ ಹೆಂಡತಿಯಾದ ತನ್ನ ಮಗಳಿಗೆ ಉಡುಗೊರೆಯಾಗಿ ಕೊಟ್ಟಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಐಗುಪ್ತದ ಅರಸನಾದ ಫರೋಹನು ಗೆಜೆರ್‍ಪಟ್ಟಣವನ್ನು ಹಿಡಿದು ಅದಕ್ಕೆ ಬೆಂಕಿಹೊತ್ತಿಸಿ ಅದರಲ್ಲಿದ್ದ ಕಾನಾನ್ಯರನ್ನು ಹತಿಸಿ ಅದನ್ನು ವಶಮಾಡಿಕೊಂಡು ಸೊಲೊಮೋನನ ಹೆಂಡತಿಯಾದ ತನ್ನ ಮಗಳಿಗೆ ಬಳುವಳಿಯಾಗಿ ಕೊಟ್ಟಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಹಿಂದೊಮ್ಮೆ, ಈಜಿಪ್ಟಿನ ರಾಜನು ಗೆಜೆರ್ ನಗರದ ವಿರುದ್ದ ಹೋರಾಟಮಾಡಿ, ಅದನ್ನು ಸುಟ್ಟುಹಾಕಿದ್ದನು. ಅವನು ಅಲ್ಲಿ ನೆಲೆಸಿದ್ದ ಕಾನಾನ್ಯ ಜನರನ್ನು ಕೊಂದು ಹಾಕಿದ್ದನು. ಸೊಲೊಮೋನನು ಫರೋಹನ ಮಗಳನ್ನು ಮದುವೆಯಾದನು. ಆದ್ದರಿಂದ ಫರೋಹನು ಆ ನಗರವನ್ನು ಸೊಲೊಮೋನನಿಗೆ ಮದುವೆಯ ಕೊಡುಗೆಯಾಗಿ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಈಜಿಪ್ಟಿನ ಅರಸನಾದ ಫರೋಹನು ಹೊರಟುಹೋಗಿ, ಗೆಜೆರನ್ನು ತೆಗೆದುಕೊಂಡು, ಅದನ್ನು ಬೆಂಕಿಯಿಂದ ಸುಟ್ಟುಬಿಟ್ಟು, ಪಟ್ಟಣದಲ್ಲಿ ವಾಸವಾಗಿದ್ದ ಕಾನಾನ್ಯರನ್ನು ಕೊಂದು, ಸೊಲೊಮೋನನ ಹೆಂಡತಿಯಾದ ತನ್ನ ಮಗಳಿಗೆ ಅದನ್ನು ಬಹುಮಾನವಾಗಿ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 9:16
5 ತಿಳಿವುಗಳ ಹೋಲಿಕೆ  

ಸೊಲೊಮೋನನು ಐಗುಪ್ತದ ಅರಸನಾದ ಫರೋಹನ ಅಳಿಯನಾದನು. ಅವನು ಫರೋಹನ ಮಗಳನ್ನು ಮದುವೆಮಾಡಿಕೊಂಡು ತನ್ನ ಅರಮನೆಯನ್ನೂ, ಯೆಹೋವನ ಆಲಯವನ್ನೂ ಮತ್ತು ಯೆರೂಸಲೇಮಿನ ಸುತ್ತಣ ಗೋಡೆಯನ್ನೂ ಕಟ್ಟಿ ಮುಗಿಸುವ ತನಕ ಆಕೆಯನ್ನು ದಾವೀದನಗರದಲ್ಲಿ ಇರಿಸಿದನು.


ಫರೋಹನ ಮಗಳು ದಾವೀದನಗರದಿಂದ ತನಗೋಸ್ಕರ ಕಟ್ಟಿಸಿದ ಅರಮನೆಗೆ ಬಂದಳು. ಅನಂತರ ಸೊಲೊಮೋನನು ಮಿಲ್ಲೋ ಕೋಟೆಯನ್ನು ಕಟ್ಟಿಸಿದನು.


ನ್ಯಾಯಮಂದಿರದ ಹಿಂದಿನ ಪ್ರಾಕಾರದಲ್ಲಿ ತನ್ನ ವಾಸಕ್ಕಾಗಿ ಅರಮನೆಯನ್ನೂ, ತನ್ನ ಹೆಂಡತಿಯಾದ ಫರೋಹನ ಮಗಳಿಗೋಸ್ಕರ ಇನ್ನೊಂದು ಮನೆಯನ್ನು ಕಟ್ಟಿಸಿದನು. ಅದನ್ನು ನ್ಯಾಯಮಂದಿರದ ಹಾಗೆಯೇ ಇವುಗಳನ್ನು ಕಟ್ಟಿಸಿದನು.


ಅವರು ಗೆಜೆರಿನಲ್ಲಿದ್ದ ಕಾನಾನ್ಯರನ್ನು ಹೊರಡಿಸದೆ ಇದ್ದುದರಿಂದ ಅವರು ಇಂದಿನವರೆಗೂ ಎಫ್ರಾಯೀಮ್ಯರ ಮಧ್ಯದಲ್ಲಿ ದಾಸತ್ವದಲ್ಲಿದ್ದುಕೊಂಡು ಅವರಿಗೋಸ್ಕರ ಸೇವೆ ಮಾಡುತ್ತಿದ್ದಾರೆ.


ಇದಲ್ಲದೆ ಯೆಹೋಶುವನು ಲಾಕೀಷಿನವರ ಸಹಾಯಕ್ಕೆ ಬಂದ ಗೆಜೆರಿನ ಅರಸನಾದ ಹೋರಾಮನನ್ನೂ ಅವನ ಪ್ರಜೆಗಳೆಲ್ಲರನ್ನೂ ಸದೆಬಡಿದನು. ಒಬ್ಬನೂ ಉಳಿಯಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು