Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 9:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಮೊದಲಾದ ಅನ್ಯಜನಾಂಗಗಳ ಸಂತಾನದವರೆಲ್ಲರನ್ನು ತನ್ನ ಕೆಲಸಕ್ಕಾಗಿ ಬಿಟ್ಟೀಹಿಡಿದನು. ಇಂದಿನ ವರೆಗೂ ಅವರು ಬಿಟ್ಟೀಕೆಲಸದವರಾಗಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಯೆಬೂಸಿಯ ಮೊದಲಾದ ಇತರ ಜನಾಂಗಗಳ ಸಂತಾನದವರೆಲ್ಲರನ್ನು ಬಿಟ್ಟೀ ಕೆಲಸಕ್ಕಾಗಿ ಇಟ್ಟಿದ್ದನು. ಇಂದಿನವರೆಗೂ ಅವರು ಬಿಟ್ಟೀ ಕೆಲಸದವರಾಗಿಯೇ ಇರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಪೆರಿಜ್ಜೀಯ, ಹಿವ್ವೀಯ, ಯೆಬೂಸಿಯ ಮೊದಲಾದ ಅನ್ಯಜನಾಂಗಗಳ ಸಂತಾನದವರೆಲ್ಲರನ್ನು ತನ್ನ ಕೆಲಸಕ್ಕಾಗಿ ಬಿಟ್ಟಿಹಿಡಿದನು. ಇಂದಿನವರೆಗೂ ಅವರು ಬಿಟ್ಟೀ ಕೆಲಸದವರಾಗಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಇಸ್ರೇಲರು ಈ ಜನರನ್ನು ನಾಶಪಡಿಸಲು ಸಮರ್ಥರಾಗಿರಲಿಲ್ಲ. ಆದರೆ ಸೊಲೊಮೋನನು ಅವರನ್ನು ತನ್ನ ಕೆಲಸ ಮಾಡಲು ಗುಲಾಮರನ್ನಾಗಿ ಇಟ್ಟುಕೊಂಡನು; ಅವರು ಇಂದಿಗೂ ಗುಲಾಮರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಇಸ್ರಾಯೇಲರು ಸಂಹರಿಸದೆ ಉಳಿಸಿದ್ದ ಅವರ ಮಕ್ಕಳನ್ನೂ ಸೊಲೊಮೋನನು ಇಂದಿನವರೆಗೂ ದಾಸತ್ವಕ್ಕಾಗಿ ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 9:21
23 ತಿಳಿವುಗಳ ಹೋಲಿಕೆ  

ಯೆರೂಸಲೇಮಿನಲ್ಲಿದ್ದ ಯೆಬೂಸಿಯರನ್ನು ಬೆನ್ಯಾಮೀನ್ಯರು ಹೊರಡಿಸಿಬಿಡಲಿಲ್ಲ. ಅವರು ಇಂದಿನವರೆಗೂ ಬೆನ್ಯಾಮೀನ್ಯರ ಸಂಗಡ ಯೆರೂಸಲೇಮಿನಲ್ಲಿಯೇ ವಾಸವಾಗಿದ್ದಾರೆ.


ಆದರೆ ಮನಸ್ಸೆಯವರು ಆ ಪಟ್ಟಣಗಳ ನಿವಾಸಿಗಳನ್ನು ಹೊರದೂಡಲಿಲ್ಲ. ಕಾನಾನ್ಯರಿಗೆ ಅಲ್ಲಿ ವಾಸಿಸುವುದಕ್ಕೆ ಅನುಕೂಲವಾಯಿತು.


ಯೆರೂಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಹೊರಡಿಸಲು ಯೆಹೂದ ಕುಲದವರಿಂದ ಆಗದೆ ಹೋಯಿತು. ಆದುದರಿಂದ ಅವರು ಇಂದಿನವರೆಗೂ ಯೆಹೂದ ಕುಲದವರೊಡನೆ ಯೆರೂಸಲೇಮಿನಲ್ಲೇ ವಾಸವಾಗಿದ್ದಾರೆ.


ಯೆರೂಸಲೇಮಿನಲ್ಲಿ ವಾಸಿಸುತ್ತಿದ್ದ ಯೆಹೂದ ಸಂಸ್ಥಾನ ಪ್ರಧಾನರು ಯಾರಾರೆಂದರೆ: ಇಸ್ರಾಯೇಲರೂ, ಯಾಜಕರೂ, ಲೇವಿಯರೂ, ದೇವಾಲಯದ ಸೇವಕರು, ಸೊಲೊಮೋನನ ಸೇವಕರ ವಂಶದವರೂ ತಮ್ಮ ತಮ್ಮ ಸ್ವತ್ತುಗಳಿರುವ ಯೆಹೂದ ದೇಶದ ಪಟ್ಟಣಗಳಲ್ಲಿ ವಾಸಿಸುತ್ತಿದ್ದರು.


ಸೊಲೊಮೋನನ ಸೇವಕರಲ್ಲಿ - ಸೋಟೈ, ಸೋಫೆರೆತ್, ಪೆರೀದನ ಸಂತಾನದವರು,


ಸೊಲೊಮೋನನ ಬಿಟ್ಟೀ ಕೆಲಸದವರು ಕಟ್ಟಿದವುಗಳು ಯಾವುವೆಂದರೆ, ಯೆಹೋವನ ಆಲಯ, ಅರಮನೆ, ಮಿಲ್ಲೋ ಕೋಟೆ, ಯೆರೂಸಲೇಮಿನ ಪೌಳಿಗೋಡೆ, ಹಾಚೋರ್ ಮೆಗಿದ್ದೋ ಮತ್ತು ಗೆಜೆರ್ ಇವುಗಳೇ.


ಅರಸನಾದ ಸೊಲೊಮೋನನು ಎಲ್ಲಾ ಇಸ್ರಾಯೇಲರಲ್ಲಿ ಮೂವತ್ತು ಸಾವಿರ ಜನರನ್ನು ಬಲವಂತವಾಗಿ ಕರೆತಂದನು.


ಆದ್ದರಿಂದ ಯೆಹೋವನ ಕೋಪವು ಇಸ್ರಾಯೇಲರ ಮೇಲೆ ಹೆಚ್ಚಾಯಿತು. ಆತನು, “ಈ ಜನರ ಪೂರ್ವಿಕರಿಗೆ ನಾನು ಕೊಟ್ಟ ಒಡಂಬಡಿಕೆಯನ್ನು ಇವರು ಕೈಕೊಳ್ಳಲಿಲ್ಲ; ನನ್ನ ಮಾತಿಗೆ ಕಿವಿಗೊಡಲಿಲ್ಲ.


ಅದರಲ್ಲಿರುವವರು ಒಪ್ಪಿ ಬಾಗಿಲನ್ನು ನಿಮಗೆ ತೆರೆದುಕೊಟ್ಟರೆ ಅವರೆಲ್ಲರೂ ನಿಮಗೆ ಬಿಟ್ಟೀಕೆಲಸವನ್ನು ಮಾಡುವ ದಾಸರಾಗಬೇಕು.


ಇಸ್ರಾಯೇಲ್ಯರು ಬಲಗೊಂಡ ಮೇಲೆ ಕಾನಾನ್ಯರನ್ನು ಹೊರಡಿಸದೇ ಅವರನ್ನು ದಾಸತ್ವಕ್ಕೆ ಹಚ್ಚಿದರು.


ಕಾನಾನ್ಯರೊಡನೆ ನಡೆದ ಯುದ್ಧಗಳಲ್ಲಿ ಒಂದನ್ನೂ ಅರಿಯದೆ ಇದ್ದ ಇಸ್ರಾಯೇಲ್ಯರನ್ನು ಪರೀಕ್ಷಿಸುವುದಕ್ಕೂ,


ಇದಲ್ಲದೆ ಅವನು ಇಸ್ರಾಯೇಲರಿಂದ ಸಂಹೃತರಾದ ಅನ್ಯ ಜನರನ್ನೂ, ಕಾನಾನ್ ದೇಶದಲ್ಲಿ ಉಳಿದ ಅಮೋರಿಯ, ಹಿತ್ತಿಯ, ಪೆರಿಜ್ಜೀಯ, ಹಿವ್ವಿಯ, ಯೆಬೂಸಿಯ,


ಅನಂತರ ದಾವೀದನು ಇಸ್ರಾಯೇಲ್ ದೇಶದಲ್ಲಿದ್ದ ಅನ್ಯಜನಗಳನ್ನು ಒಟ್ಟುಗೂಡಿಸುವುದಕ್ಕೆ ಆಜ್ಞಾಪಿಸಿ, ಅವರಲ್ಲಿದ್ದ ಕಲ್ಲುಕುಟಿಗರನ್ನು ದೇವಾಲಯದ ಕಟ್ಟಡಕ್ಕಾಗಿ ಕಲ್ಲುಗಳನ್ನು ಕೆತ್ತುವುದಕ್ಕೆ ನೇಮಿಸಿದನು.


ಮೊದಲಾದ ಅನ್ಯ ಜನಾಂಗಗಳನ್ನು, ಇಸ್ರಾಯೇಲ್ಯರು ನಾಶಮಾಡದೆ ಉಳಿಸಿದ ಸಂತಾನದವರೆಲ್ಲರನ್ನೂ ಸೊಲೊಮೋನನು ಬಿಟ್ಟಿ ಕೆಲಸಕ್ಕಾಗಿ ನೇಮಿಸಿದನು. ಅವರು ಇಂದಿನವರೆಗೂ ಬಿಟ್ಟಿ ಕೆಲಸ ಮಾಡುವವರಾಗಿದ್ದಾರೆ.


ಚುರುಕುಗೈಯವನಿಗೆ ರಾಜ್ಯಾಧಿಕಾರ, ಮೈಗಳ್ಳನಿಗೆ ದಾಸತ್ವದ ಬದುಕು.


ಅವರು ಗೆಜೆರಿನಲ್ಲಿದ್ದ ಕಾನಾನ್ಯರನ್ನು ಹೊರಡಿಸದೆ ಇದ್ದುದರಿಂದ ಅವರು ಇಂದಿನವರೆಗೂ ಎಫ್ರಾಯೀಮ್ಯರ ಮಧ್ಯದಲ್ಲಿ ದಾಸತ್ವದಲ್ಲಿದ್ದುಕೊಂಡು ಅವರಿಗೋಸ್ಕರ ಸೇವೆ ಮಾಡುತ್ತಿದ್ದಾರೆ.


ಅಮೋರಿಯರ ಮೇರೆಯು ಅಕ್ರಬ್ಬೀಮ್ ಮೇಲುದಿಣ್ಣೆಯಿಂದ ಸೇಲಾ ಊರಿನಿಂದ ಮೇಲಕ್ಕೆ ವಿಸ್ತರಿಸಿಕೊಂಡಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು