Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 9:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಸೊಲೊಮೋನನು ಯೆಹೋವನ ಆಲಯದ ಮುಂದೆ ತಾನು ಯೆಹೋವನಿಗೋಸ್ಕರ ಕಟ್ಟಿಸಿದ ಯಜ್ಞವೇದಿಯ ಮೇಲೆ ವರ್ಷಕ್ಕೆ ಮೂರು ಸಾರಿ ಸರ್ವಾಂಗಹೋಮ, ಸಮಾಧಾನಯಜ್ಞ ಇವುಗಳನ್ನು ಸಮರ್ಪಿಸಿ ಧೂಪಹಾಕುತ್ತಿದ್ದನು. ಹೀಗೆ ಅವನು ದೇವಾಲಯವನ್ನು ಕಟ್ಟಿ ಸಂಪೂರ್ಣಗೊಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಸೊಲೊಮೋನನು ಸರ್ವೇಶ್ವರನ ಆಲಯದ ಮುಂದೆ ಸರ್ವೇಶ್ವರನಿಗಾಗಿ ತಾನು ಕಟ್ಟಿಸಿದ ಬಲಿಪೀಠದ ಮೇಲೆ ವರ್ಷಕ್ಕೆ ಮೂರು ಸಾರಿ ದಹನಬಲಿ ಹಾಗು ಶಾಂತಿಸಮಾಧಾನಬಲಿಗಳನ್ನು ಸಮರ್ಪಿಸಿ ಧೂಪಾರತಿ ಎತ್ತುತ್ತಿದ್ದನು. ಹೀಗೆ ಅವನು ಮಹಾದೇವಾಲಯವನ್ನು ಕಟ್ಟಿಸಿಮುಗಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಅನಂತರ ಸೊಲೊಮೋನನು ವಿುಲ್ಲೋಕೋಟೆಯನ್ನು ಕಟ್ಟಿಸಿದನು. ಸೊಲೊಮೋನನು ಯೆಹೋವನ ಆಲಯದ ಮುಂದೆ ತಾನು ಯೆಹೋವನಿಗೋಸ್ಕರ ಕಟ್ಟಿಸಿದ ಯಜ್ಞವೇದಿಯ ಮೇಲೆ ವರುಷಕ್ಕೆ ಮೂರು ಸಾರಿ ಸರ್ವಾಂಗಹೋಮ, ಸಮಾಧಾನಯಜ್ಞ ಇವುಗಳನ್ನು ಸಮರ್ಪಿಸಿ ಧೂಪಸುಡುತ್ತಿದ್ದನು. ದೇವಾಲಯವನ್ನು ಕಟ್ಟಿಸಿ ತೀರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಸೊಲೊಮೋನನು ಪ್ರತಿವರ್ಷದಲ್ಲೂ ಮೂರು ಸಲ ಸರ್ವಾಂಗಹೋಮಗಳನ್ನು, ಸಮಾಧಾನಯಜ್ಞಗಳನ್ನು ಯಜ್ಞವೇದಿಕೆಯ ಮೇಲೆ ಅರ್ಪಿಸುತ್ತಿದ್ದನು. ಈ ಯಜ್ಞವೇದಿಕೆಯನ್ನು ಸೊಲೊಮೋನನು ಯೆಹೋವನಿಗಾಗಿ ನಿರ್ಮಿಸಿದನು. ರಾಜನಾದ ಸೊಲೊಮೋನನು ಯೆಹೋವನ ಮುಂದೆ ಸುಗಂಧ ಧೂಪವನ್ನು ಸುಡುತ್ತಿದ್ದನು. ಅವನು ಆಲಯಕ್ಕೆ ಬೇಕಾದ ವಸ್ತುಗಳನ್ನು ಕೊಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ವರುಷಕ್ಕೆ ಮೂರು ಸಾರಿ ಸೊಲೊಮೋನನು ಯೆಹೋವ ದೇವರಿಗೆ ತಾನು ಕಟ್ಟಿಸಿದ ಬಲಿಪೀಠದ ಮೇಲೆ ದಹನಬಲಿಗಳನ್ನೂ, ಸಮಾಧಾನದ ಬಲಿಗಳನ್ನೂ ಅರ್ಪಿಸಿ, ಯೆಹೋವ ದೇವರ ಮುಂದಿರುವ ಪೀಠದ ಮೇಲೆ ಧೂಪವನ್ನು ಸುಡುತ್ತಿದ್ದನು. ಹೀಗೆ ಆಲಯದ ಅರ್ಪಣೆಗಳನ್ನು ಪೂರೈಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 9:25
14 ತಿಳಿವುಗಳ ಹೋಲಿಕೆ  

ಈ ಪ್ರಕಾರ ಆಸ್ತಿವಾರ ಮೊದಲುಗೊಂಡು ಸಮಾಪ್ತಿಯವರೆಗೂ ಸೊಲೊಮೋನನ ಎಲ್ಲಾ ಕೆಲಸ ಕಾರ್ಯಗಳೂ ಮುಗಿದು ಯೆಹೋವನ ಆಲಯವು ಪೂರ್ಣಗೊಂಡಿತ್ತು.


ಹುಳಿಯಿಲ್ಲದ ರೊಟ್ಟಿಗಳ ಹಬ್ಬದಲ್ಲಿಯೂ, ಪಂಚಾಶತ್ತಮ ದಿನದ ಹಬ್ಬದಲ್ಲಿಯೂ ಮತ್ತು ಪರ್ಣಶಾಲೆಗಳ ಹಬ್ಬದಲ್ಲಿಯೂ ಅಂತು ವರ್ಷಕ್ಕೆ ಮೂರಾವರ್ತಿ ನಿಮ್ಮಲ್ಲಿರುವ ಗಂಡಸರೆಲ್ಲರೂ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಆತನು ಆರಿಸಿಕೊಳ್ಳುವ ಸ್ಥಳದಲ್ಲಿ ಕಾಣಿಸಿಕೊಳ್ಳಬೇಕು. ಒಬ್ಬರೂ ಕೈಯಲ್ಲಿ ಕಾಣಿಕೆಯಿಲ್ಲದೆ ಆತನ ಸನ್ನಿಧಿಗೆ ಬರಬಾರದು.


ಅವರು ನನ್ನನ್ನು ಬಿಟ್ಟು ಅನ್ಯ ದೇವತೆಗಳಿಗೆ ಧೂಪಹಾಕಿ ತಮ್ಮ ದುಷ್ಕೃತ್ಯಗಳಿಂದ ನನ್ನನ್ನು ರೇಗಿಸಿದ್ದರಿಂದ ಈ ದೇಶದ ಮೇಲೆ ಉರಿಯುತ್ತಿರುವ ನನ್ನ ಕೋಪಾಗ್ನಿಯು ಆರಿಹೋಗುವುದಿಲ್ಲ” ಎನ್ನುತ್ತಾನೆ.


ಹೀಗಿರಲಾಗಿ ನನ್ನ ಮಕ್ಕಳೇ, ಉದಾಸೀನರಾಗಿರಬೇಡಿ; ಯೆಹೋವನು ತನ್ನನ್ನು ಆರಾಧಿಸುವುದಕ್ಕೂ ಧೂಪಹಾಕುವುದಕ್ಕೂ ನಿಮ್ಮನ್ನು ತನ್ನ ಸಾನ್ನಿಧ್ಯ ಸೇವಕರನ್ನಾಗಿ ಆರಿಸಿಕೊಂಡನಲ್ಲಾ” ಎಂದು ಹೇಳಿದನು.


ಅಮ್ರಾಮನ ಮಕ್ಕಳು ಆರೋನ್ ಮತ್ತು ಮೋಶೆ ಎಂಬುವವರು. ಆರೋನನು ಅವನ ಸಂತಾನದವರು ಮಹಾ ಪರಿಶುದ್ಧವಾದ ವಸ್ತುಗಳನ್ನು ಪ್ರತಿಷ್ಠಿಸುವುದಕ್ಕೆ ಪ್ರತ್ಯೇಕಿಸಲ್ಪಟ್ಟರು. ಇವರು ಯೆಹೋವನ ಸನ್ನಿಧಿಯಲ್ಲಿ ಸದಾಕಾಲ ಧೂಪಹಾಕುವವರೂ, ಆತನ ಸೇವೆ ಮಾಡುವವರೂ, ಆತನ ಹೆಸರಿನಿಂದ ಜನರನ್ನು ಆಶೀರ್ವದಿಸುವವರೂ ಆಗಿದ್ದರು.


ಹನ್ನೊಂದನೆಯ ವರ್ಷದ ಎಂಟನೆಯ ತಿಂಗಳಾದ ಕಾರ್ತಿಕ ಮಾಸದಲ್ಲಿ ದೇವಾಲಯವೂ ಮತ್ತು ಅದರ ಎಲ್ಲಾ ಕಟ್ಟಡಗಳೂ ನೇಮದ ಪ್ರಕಾರ ಸಿದ್ಧವಾದವು. ದೇವಾಲಯವನ್ನು ಕಟ್ಟುವುದಕ್ಕೆ ಏಳು ವರ್ಷ ಹಿಡಿಯಿತು.


ವರ್ಷಕ್ಕೆ ಮೂರಾವರ್ತಿ ನಿಮ್ಮಲ್ಲಿರುವ ಗಂಡಸರೆಲ್ಲರೂ ಇಸ್ರಾಯೇಲರ ದೇವರಾಗಿರುವ ಕರ್ತನಾದ ಯೆಹೋವನ ಸನ್ನಿಧಿಯಲ್ಲಿ ಬರಬೇಕು.


“ಆರೋನನು ಪ್ರತಿನಿತ್ಯ ಹೊತ್ತಾರೆಯಲ್ಲಿ ದೀಪಗಳನ್ನು ಸರಿಪಡಿಸುವಾಗಲೂ


ಇಸ್ರಾಯೇಲ್ಯರ ಹೆಣ್ಣುಮಕ್ಕಳು ಪ್ರತಿವರ್ಷದಲ್ಲಿಯೂ ನಾಲ್ಕು ದಿನ ಗಿಲ್ಯಾದ್ಯನಾದ ಯೆಪ್ತಾಹನ ಮಗಳನ್ನು ವರ್ಣಿಸುತ್ತಾರೆ. ಇದು ಅವರಲ್ಲಿ ಒಂದು ಪದ್ಧತಿ.


ಈ ಪ್ರಕಾರ ಅವನು ಮನೆಯನ್ನು ಕಟ್ಟಿಸಿ, ದೇವದಾರಿನ ತೊಲೆ ಮತ್ತು ಹಲಿಗೆಗಳಿಂದ ಮಾಳಿಗೆಯನ್ನು ಮಾಡಿಸಿ ಕೆಲಸ ಮುಗಿಸಿದನು.


ಸೊಲೊಮೋನನು ದೇವಾಲಯವನ್ನು ಕಟ್ಟಿಸಿ ಮುಗಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು