Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 9:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಅವರು ಓಫೀರಿಗೆ ಪ್ರಯಾಣಮಾಡಿ ಅಲ್ಲಿಂದ ಅರಸನಾದ ಸೊಲೊಮೋನನಿಗೆ ನಾನೂರಿಪ್ಪತ್ತು ತಲಾಂತು ಬಂಗಾರವನ್ನು ತೆಗೆದುಕೊಂಡು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಅವರು ಓಫೀರಿಗೆ ಪ್ರಯಾಣಮಾಡಿ ಅಲ್ಲಿಂದ ಅರಸನಾದ ಸೊಲೊಮೋನನಿಗೆ ಹದಿನಾಲ್ಕು ಸಾವಿರ ಕಿಲೋಗ್ರಾಂಗೂ ಹೆಚ್ಚಿನ ಬಂಗಾರವನ್ನು ತೆಗೆದುಕೊಂಡು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಅವರು ಓಫೀರಿಗೆ ಪ್ರಯಾಣಮಾಡಿ ಅಲ್ಲಿಂದ ಅರಸನಾದ ಸೊಲೊಮೋನನಿಗೆ ನಾನೂರಿಪ್ಪತ್ತು ತಲಾಂತು ಬಂಗಾರವನ್ನು ತೆಗೆದುಕೊಂಡು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಸೊಲೊಮೋನನ ಹಡಗುಗಳು ಓಫೀರಿಗೆ ಹೋದವು. ಆ ಹಡಗುಗಳು ರಾಜನಾದ ಸೊಲೊಮೋನನಿಗೆ ಹದಿನಾಲ್ಕು ಸಾವಿರದ ಇನ್ನೂರ ಎಂಭತ್ತು ಕಿಲೋಗ್ರಾಂ ಬಂಗಾರವನ್ನು ಓಫೀರಿನಿಂದ ತೆಗೆದುಕೊಂಡು ಬಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಅವರು ಓಫೀರಿಗೆ ಹೋಗಿ, ಅಲ್ಲಿಂದ ಹದಿನಾಲ್ಕು ಸಾವಿರ ಕಿಲೋಗ್ರಾಂ ಬಂಗಾರವನ್ನು ಅರಸನಾದ ಸೊಲೊಮೋನನಿಗೆ ತೆಗೆದುಕೊಂಡು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 9:28
15 ತಿಳಿವುಗಳ ಹೋಲಿಕೆ  

ಹೂರಾಮನು ಅವನಿಗೆ ತನ್ನ ಆಳುಗಳ ಮುಖಾಂತರ ಹಡುಗುಗಳನ್ನು ಕಳುಹಿಸಿದ್ದಲ್ಲದೆ, ಸಮುದ್ರ ಪ್ರಯಾಣದಲ್ಲಿ ನಿಪುಣರಾದ ನಾವಿಕರನ್ನು ಕಳುಹಿಸಿದನು. ಅವರು ಸೊಲೊಮೋನನ ಸೇವಕರೊಡನೆ ಓಫೀರಿಗೆ ಪ್ರಯಾಣಮಾಡಿ ಅಲ್ಲಿಂದ ಅರಸನಾದ ಸೊಲೊಮೋನನಿಗೆ ನಾನೂರೈವತ್ತು ತಲಾಂತು ಬಂಗಾರವನ್ನು ತಂದುಕೊಟ್ಟರು.


ಮೂರು ಸಾವಿರ ತಲಾಂತು ಓಫೀರ್ ದೇಶದ ಬಂಗಾರವನ್ನೂ, ಏಳು ಸಾವಿರ ತಲಾಂತು ಚೊಕ್ಕ ಬೆಳ್ಳಿಯನ್ನೂ ಕೊಡುತ್ತೇನೆ. ಈ ಬೆಳ್ಳಿ ಬಂಗಾರದಿಂದ ಆಲಯದ ಗೋಡೆಗಳನ್ನು ಹೊದಿಸಬೇಕು.


ಮನುಷ್ಯರನ್ನು ಚೊಕ್ಕ ಬಂಗಾರಕ್ಕಿಂತಲೂ ಮತ್ತು ಓಫೀರಿನ ಬಂಗಾರಕ್ಕಿಂತಲೂ ವಿರಳವಾಗುವಂತೆ ಮಾಡುವೆನು.


ನಿನ್ನ ಸ್ತ್ರೀಪರಿವಾರದಲ್ಲಿ ರಾಜಕುಮಾರಿಯರೂ ಇದ್ದಾರೆ; ಪಟ್ಟದ ರಾಣಿಯು ಓಫೀರ್ ದೇಶದ ಬಂಗಾರದ ಆಭರಣಗಳಿಂದ ಅಲಂಕೃತಳಾಗಿ, ನಿನ್ನ ಬಲಭಾಗದಲ್ಲಿ ನಿಂತಿರುವಳು.


ಓಫೀರ್ ದೇಶದ ಅಪರಂಜಿ, ಅಮೂಲ್ಯ ಗೋಮೇಧಿಕ, ಇಂದ್ರನೀಲ, ಇವುಗಳಿಂದ ಜ್ಞಾನದ ಬೆಲೆ ಇಷ್ಟೆಂದು ಗೊತ್ತು ಮಾಡುವುದಕ್ಕೆ ಆಗದು.


ನಿನ್ನ ಚಿನ್ನವನ್ನು ಧೂಳಿನಲ್ಲಿ ಹಾಕು, ಓಫೀರ್ ದೇಶದ ಅಪರಂಜಿಯನ್ನು ಹೊಳೆಗಳ ಬಂಡೆಗಳಿಗೆ ಎಸೆದುಬಿಡು.


ಹೀರಾಮನ ಹಡಗುಗಳು ಓಫೀರ್ ದೇಶದಿಂದ ಬಂಗಾರದ ಹೊರತಾಗಿ ಸುಗಂಧದ ಮರವನ್ನೂ ಮತ್ತು ರತ್ನಗಳನ್ನೂ ರಾಶಿ ರಾಶಿಯಾಗಿ ತಂದವು.


ಹೂರಾಮನ ಮತ್ತು ಸೊಲೊಮೋನನ ಆಳುಗಳು ಓಫೀರ್ ದೇಶದ ಬಂಗಾರವನ್ನಲ್ಲದೆ ಸುಗಂಧದ ಮರಗಳ ಅಮೂಲ್ಯರತ್ನಗಳನ್ನೂ ತಂದರು.


ಹದೋರಾಮ್, ಊಜಾಲ್, ದಿಕ್ಲಾ, ಓಬಾಲ್, ಅಬೀಮಯೇಲ್, ಶೆಬಾ, ಓಫೀರ್, ಹವೀಲ, ಯೋಬಾಬ್ ಈ ಕುಲಗಳೆಲ್ಲಾ ಯೊಕ್ತಾನನಿಂದ ಹುಟ್ಟಿದವು.


ಇದಲ್ಲದೆ ಯೆಹೋಷಾಫಾಟನು ಓಫೀರಿನಿಂದ ಬಂಗಾರ ತರುವುದಕ್ಕಾಗಿ ತಾರ್ಷಿಷ್ ಹಡಗುಗಳನ್ನು ಮಾಡಿಸಿದನು.


ನಾನು ಬೆಳ್ಳಿಬಂಗಾರಗಳನ್ನೂ ಅರಸರ ಮತ್ತು ಪ್ರಾಂತ್ಯಗಳ ಕಪ್ಪವನ್ನೂ ಸಂಗ್ರಹಿಸಿಕೊಂಡೆನು. ಗಾಯಕ, ಗಾಯಕಿಯರನ್ನು ಮತ್ತು ಮನುಷ್ಯರಿಗೆ ಭೋಗ್ಯರಾದ ಅನೇಕ ಸ್ತ್ರೀಯರನ್ನು ಸಂಪಾದಿಸಿಕೊಂಡೆನು.


ಸೊಲೊಮೋನನಿಗೆ ಒಂದು ವರ್ಷದಲ್ಲಿ ಆರುನೂರ ಅರುವತ್ತಾರು ತಲಾಂತು ಬಂಗಾರ ದೊರಕುತ್ತಿತ್ತು.


ಆಗ ಅಹಾಬನ ಮಗನಾದ ಅಹಜ್ಯನು ಅವನನ್ನು, “ನಿನ್ನ ಜನರ ಜೊತೆಯಲ್ಲಿ ನನ್ನ ಜನರೂ ಸಮುದ್ರ ಪ್ರಯಾಣ ಮಾಡುವುದಕ್ಕೆ ಅಪ್ಪಣೆಯಾಗಲಿ” ಎಂದು ಬೇಡಿಕೊಂಡನು. ಅವನು ಅದಕ್ಕೆ ಒಪ್ಪಲಿಲ್ಲ. ಆದರೆ ಆ ಹಡಗುಗಳು ಎಚ್ಯೋನ್ಗೆಬೆರಿನಲ್ಲಿ ಒಡೆದುಹೋದುದರಿಂದ ಓಫೀರನ್ನು ಮುಟ್ಟಲಿಲ್ಲ.


ಓಫೀರ್, ಹವೀಲಾ ಮತ್ತು ಯೋಬಾಬ್ ಎಂಬುವರು.


ಎಲೌ ರಾಜಕುಮಾರಿಯೇ, ನನ್ನ ಮಾತನ್ನು ಕೇಳಿ ಆಲೋಚಿಸು; ಸ್ವಜನರನ್ನೂ ತೌರಮನೆಯನ್ನೂ ಮರೆತುಬಿಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು