1 ಅರಸುಗಳು 9:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆತನು ಅವನಿಗೆ, “ನೀನು ನನಗೆ ಮಾಡಿದ ಪ್ರಾರ್ಥನೆಯನ್ನೂ ಮತ್ತು ವಿಜ್ಞಾಪನೆಯನ್ನೂ ಕೇಳಿದ್ದೇನೆ. ನನ್ನ ನಾಮಮಹತ್ತು ನೀನು ಕಟ್ಟಿಸಿದ ಆಲಯದಲ್ಲಿ ಸದಾ ಇರುವಂತೆ ಅದನ್ನು ನನಗೋಸ್ಕರ ಪ್ರತಿಷ್ಠಿಸಿಕೊಂಡಿದ್ದೇನೆ. ನನ್ನ ದೃಷ್ಟಿಯೂ, ಮನಸ್ಸೂ ಪ್ರತಿದಿನವೂ ಅದರ ಮೇಲಿರುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಅವನಿಗೆ, “ನೀನು ನನಗೆ ಮಾಡಿದ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಕೇಳಿದ್ದೇನೆ. ನನ್ನ ನಾಮಮಹತ್ತು ನೀನು ಕಟ್ಟಿಸಿದ ಆಲಯದಲ್ಲಿ ಸದಾ ಇರುವಂತೆ ಅದನ್ನು ನನಗೋಸ್ಕರ ಪ್ರತಿಷ್ಠಿಸಿಕೊಂಡಿದ್ದೇನೆ; ನನ್ನ ದೃಷ್ಟಿಯೂ ಮನಸ್ಸೂ ಪ್ರತಿದಿನ ಅದರ ಮೇಲಿರುವುವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಆತನು ಅವನಿಗೆ - ನೀನು ನನಗೆ ಮಾಡಿದ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಕೇಳಿದ್ದೇನೆ. ನನ್ನ ನಾಮಮಹತ್ತು ನೀನು ಕಟ್ಟಿಸಿದ ಆಲಯದಲ್ಲಿ ಸದಾ ಇರುವಂತೆ ಅದನ್ನು ನನಗೋಸ್ಕರ ಪ್ರತಿಷ್ಠಿಸಿಕೊಂಡಿದ್ದೇನೆ; ನನ್ನ ದೃಷ್ಟಿಯೂ ಮನಸ್ಸೂ ಪ್ರತಿದಿನವೂ ಅದರ ಮೇಲಿರುವವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಯೆಹೋವನು ಅವನಿಗೆ ಹೀಗೆ ಹೇಳಿದನು: “ನಿನ್ನ ಪ್ರಾರ್ಥನೆಯು ನನಗೆ ಕೇಳಿಸಿತು. ನಿನ್ನ ಬಿನ್ನಹಗಳನ್ನು ಆಲಿಸಿದೆನು. ಈ ಆಲಯವನ್ನು ನೀನು ಕಟ್ಟಿಸಿದೆ. ನಾನು ಅದನ್ನು ಪವಿತ್ರಸ್ಥಳವನ್ನಾಗಿ ಮಾಡಿದೆ. ಆದ್ದರಿಂದ ನಾನಿಲ್ಲಿ ಸದಾಕಾಲ ಸನ್ಮಾನಿಸಲ್ಪಡುವೆನು. ನನ್ನ ದೃಷ್ಟಿಯೂ ಮನಸ್ಸೂ ಸದಾ ಅದರ ಮೇಲಿರುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಯೆಹೋವ ದೇವರು ಅವನಿಗೆ, “ನೀನು ನನ್ನ ಮುಂದೆ ಮಾಡಿದ ನಿನ್ನ ಪ್ರಾರ್ಥನೆಯನ್ನೂ ನಿನ್ನ ವಿಜ್ಞಾಪನೆಯನ್ನೂ ಕೇಳಿ ನನ್ನ ನಾಮವು ಯುಗಯುಗಾಂತರಕ್ಕೂ ಅಲ್ಲಿರುವ ಹಾಗೆ ನೀನು ಕಟ್ಟಿಸಿದ ಈ ಆಲಯವನ್ನು ಪರಿಶುದ್ಧ ಮಾಡಿದ್ದೇನೆ. ನನ್ನ ಕಣ್ಣುಗಳೂ, ನನ್ನ ಹೃದಯವೂ ನಿತ್ಯವಾಗಿ ಅಲ್ಲಿರುವುವು. ಅಧ್ಯಾಯವನ್ನು ನೋಡಿ |
ತಾನು ಮಾಡಿಸಿದ ವಿಗ್ರಹ ಸ್ತಂಭವನ್ನು ದೇವಾಲಯದಲ್ಲಿಡಿಸಿದನು. ಯೆಹೋವನು ಆ ಆಲಯದ ವಿಷಯದಲ್ಲಿ ದಾವೀದನಿಗೂ ಅವನ ಮಗನಾದ ಸೊಲೊಮೋನನಿಗೂ, “ಇಸ್ರಾಯೇಲರು ಮೋಶೆಯ ಮುಖಾಂತರ ತಮಗೆ ಕೊಡಲ್ಪಟ್ಟ ನನ್ನ ಎಲ್ಲಾ ಧರ್ಮಶಾಸ್ತ್ರದ ವಿಧಿವಿಧಾನಗಳನ್ನು ಅನುಸರಿಸಿ ನಡೆಯುವುದಾದರೆ ನನ್ನ ನಾಮಮಹತ್ತು ಈ ದೇವಾಲಯದಲ್ಲಿಯೂ ಇಸ್ರಾಯೇಲರ ಎಲ್ಲಾ ಊರುಗಳಲ್ಲಿಯೂ ನನಗೆ ಇಷ್ಟವಾಗಿರುವ ಯೆರೂಸಲೇಮಿನಲ್ಲಿಯೂ ಸದಾಕಾಲವಿರುವುದು.
ಮತ್ತು ತನ್ನ ಹೆಸರನ್ನು ಸ್ಥಾಪಿಸುವುದಕ್ಕೋಸ್ಕರ ಆ ಸ್ಥಳವನ್ನು ಆರಿಸಿಕೊಂಡ ದೇವರು ಈ ಆಜ್ಞೆಯನ್ನು ಬದಲಿಸುವುದಕ್ಕೂ, ಯೆರೂಸಲೇಮಿನ ದೇವಾಲಯವನ್ನು ನಾಶಮಾಡುವುದಕ್ಕೂ ಕೈಯೆತ್ತುವ ಪ್ರತಿಯೊಬ್ಬ ರಾಜನನ್ನೂ ಮತ್ತು ಪ್ರತಿಯೊಂದು ಜನಾಂಗವನ್ನೂ ಕೆಡವಿ ಹಾಕಲಿ. ದಾರ್ಯಾವೆಷನಾದ ನಾನು ಆಜ್ಞೆಯನ್ನು ಕೊಟ್ಟಿದ್ದೇನೆ, ಅದನ್ನು ಉದಾಸೀನತೆಯಿಂದ ಅಲಕ್ಷಿಸದೆ ಕೈಕೊಳ್ಳಬೇಕು” ಎಂದು ತಿಳಿಸಿದನು.