Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 1:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಕ್ರಿಸ್ತನು ನನ್ನನ್ನು ಕಳುಹಿಸಿದ್ದು ದೀಕ್ಷಾಸ್ನಾನಮಾಡಿಸುವುದಕ್ಕಲ್ಲ ಆದರೆ ಸುವಾರ್ತೆಯನ್ನು ಸಾರುವುದಕ್ಕಾಗಿಯೇ. ಅದನ್ನು ಮನುಷ್ಯಜ್ಞಾನದ ಮಾತುಗಳಿಂದ ಸಾರಬೇಕೆಂದು ಕಳುಹಿಸಲಿಲ್ಲ; ಹಾಗೆ ಸಾರಿದರೆ ಕ್ರಿಸ್ತನ ಶಿಲುಬೆಯ ಶಕ್ತಿಯು ಮಾತಿನ ಚತುರತೆಯಿಂದ ನಿರರ್ಥಕವಾಗಿ ಹೋಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಯೇಸುಕ್ರಿಸ್ತರು ನನ್ನನ್ನು ಕಳುಹಿಸಿರುವುದು ದೀಕ್ಷಾಸ್ನಾನವನ್ನು ಕೊಡುವುದಕ್ಕಲ್ಲ. ಶುಭಸಂದೇಶವನ್ನು ಸಾರುವುದಕ್ಕೆ ಅದೂ ವಾಕ್‍ಚಾತುರ್ಯದಿಂದಲ್ಲ. ಹಾಗೆ ಸಾರಿದ್ದೇ ಆದರೆ, ಕ್ರಿಸ್ತಯೇಸುವಿನ ಶಿಲುಬೆಯೇ ನಿರರ್ಥಕವಾದೀತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ದೀಕ್ಷಾಸ್ನಾನ ಮಾಡಿಸುವದಕ್ಕಲ್ಲ, ಸುವಾರ್ತೆಯನ್ನು ಸಾರುವದಕ್ಕೇ ಕ್ರಿಸ್ತನು ನನ್ನನ್ನು ಕಳುಹಿಸಿದನು. ಆದರೆ ವಾಕ್ಚಾತುರ್ಯದಿಂದ ಸಾರಬೇಕೆಂದು ಕಳುಹಿಸಲಿಲ್ಲ; ಹಾಗೆ ಸಾರಿದರೆ ಕ್ರಿಸ್ತನ ಶಿಲುಬೆಯು ನಿರರ್ಥಕವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಕ್ರಿಸ್ತನು ನನ್ನನ್ನು ಕಳುಹಿಸಿರುವುದು ದೀಕ್ಷಾಸ್ನಾನವನ್ನು ಕೊಡುವುದಕ್ಕಲ್ಲ, ಸುವಾರ್ತೆಯನ್ನು ತಿಳಿಸುವುದಕ್ಕಾಗಿಯಷ್ಟೆ. ಆದರೆ ವಾಕ್ಚಾತುರ್ಯದಿಂದ ಸಾರುವುದಕ್ಕಾಗಿ ಕಳುಹಿಸಲಿಲ್ಲ. ನಾನೇನಾದರೂ ಲೋಕಜ್ಞಾನದಿಂದ ಸುವಾರ್ತೆ ಸಾರಿದ್ದೇಯಾದರೆ, ಕ್ರಿಸ್ತನ ಶಿಲುಬೆಯೇ ನಿರರ್ಥಕವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ದೀಕ್ಷಾಸ್ನಾನ ಕೊಡುವುದಕ್ಕಾಗಿ ಕ್ರಿಸ್ತ ಯೇಸು ನನ್ನನ್ನು ಕಳುಹಿಸದೆ ಸುವಾರ್ತೆಯನ್ನು ಸಾರುವುದಕ್ಕಾಗಿ ನನ್ನನ್ನು ಕಳುಹಿಸಿದ್ದಾರೆ. ಸುವಾರ್ತೆ ಸಾರುವಂಥದ್ದು ವಾಕ್ಚಾತುರ್ಯದಿಂದಲ್ಲ. ಹಾಗೆ ಸಾರುತ್ತಿದ್ದರೆ ಕ್ರಿಸ್ತ ಯೇಸುವಿನ ಶಿಲುಬೆಯ ಶಕ್ತಿಯು ಬರಿದಾಗಿಬಿಡುತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಮಾಕಾ ಕಾಯ್ ಕ್ರಿಸ್ತಾನ್ ಬಾಲ್ತಿಮ್ ದಿವ್ಕ್ ಮನುನ್ ಧಾಡುನ್ ದಿವ್ಕ್ ನಾ, ಜೆಜುಚಿ ಬರಿ ಖಬರ್ ಪ್ರಚಾರ್ ಕರುಕ್ ಮಾಕಾ ಧಾಡಲ್ಲೆ ಹೊತ್ತೆ, ತೆಬಿ ಕ್ರಿಸ್ತಾಚ್ಯಾ ಕುರ್ಸಾಚೆ ಬಳ್ ಕಳ್ದುನ್ ಜಾಯ್ನಸಿ ಸಾರ್ಕೆ ಮಾನ್ಸಾಂಚ್ಯಾ ಶಾನ್‍ಪಾನಾಚ್ಯಾ ಗೊಸ್ಟಿಯಾ ವಾಪ್ರಿನಸ್ತಾನಾ; ಕಶೆ ಹಾಯ್ ತೆಸೆಚ್ ಪ್ರಚಾರ್ ಕರುಕ್ ಧಾಡುನ್ ದಿಲ್ಲೆ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 1:17
13 ತಿಳಿವುಗಳ ಹೋಲಿಕೆ  

ಸಹೋದರರೇ, ನಾನು ಗುಪ್ತವಾಗಿದ್ದ ದೇವರ ಸತ್ಯಾರ್ಥಗಳನ್ನು ತಿಳಿಸುವವನಾಗಿ ನಿಮ್ಮ ಬಳಿಗೆ ಬಂದಾಗ ವಾಕ್ಚಾತುರ್ಯದಿಂದಾಗಲಿ, ಜ್ಞಾನದಿಂದಾಗಲಿ ಬರಲಿಲ್ಲ.


ಇವುಗಳನ್ನು ಮನುಷ್ಯ ಜ್ಞಾನವು ಕಲಿಸಿದ ಮಾತುಗಳಿಂದ ಹೇಳದೆ ಪವಿತ್ರಾತ್ಮನೇ ಕಲಿಸಿಕೊಟ್ಟ ಮಾತುಗಳಿಂದ ಹೇಳಿ ಆತ್ಮೀಕವಾದವುಗಳನ್ನು ಆತ್ಮೀಕರಾದವರಿಗೆ ಯುಕ್ತವಾದ ರೀತಿಯಲ್ಲಿ ಸ್ಪಷ್ಟಪಡಿಸುತ್ತೇವೆ.


ನಮ್ಮ ಕರ್ತನಾದ ಯೇಸುಕ್ರಿಸ್ತನ ಶಕ್ತಿಯನ್ನೂ, ಪ್ರತ್ಯಕ್ಷತೆಯನ್ನೂ ನಿಮಗೆ ತಿಳಿಯಪಡಿಸಿದ್ದರಲ್ಲಿ ಚಮತ್ಕಾರದಿಂದ ಕಲ್ಪಿಸಿದ ಕಟ್ಟುಕಥೆಗಳನ್ನು ನಾವು ಅನುಸರಿಸಲಿಲ್ಲ. ಆತನ ಮಹತ್ತನ್ನು ಕಣ್ಣಾರೆ ಕಂಡವರಾಗಿಯೇ ಅದನ್ನು ತಿಳಿಯಪಡಿಸಿದೆವು.


“ಅವನಿಂದ ಬಂದ ಪತ್ರಿಕೆಗಳು ಕಠೋರವಾದವುಗಳೂ, ಪ್ರಬಲವಾದವುಗಳೂ ಆಗಿವೆ. ಆದರೆ ದೈಹಿಕವಾಗಿ ಅವನು ದುರ್ಬಲನು ಅವನ ಮಾತುಗಳು ನಿಂದಾತ್ಮಕವಾದವುಗಳೆಂದು ಕೆಲವರು ಹೇಳುತ್ತಾರಲ್ಲಾ.”


ನಾಚಿಕೆಪಡುವಂತಹ ಗುಪ್ತಕಾರ್ಯಗಳನ್ನು ಬಿಟ್ಟು ಕುತಂತ್ರದಲ್ಲಿ ನಡೆಯದೆ ದೇವರ ವಾಕ್ಯವನ್ನು ಬೆರಕೆ ಮಾಡದೆ, ಸತ್ಯವನ್ನು ಪ್ರಾಮಾಣಿಕವಾಗಿ ಬೋಧಿಸುತ್ತಾ ನಾವು ನೀತಿವಂತರೆಂದು ಪ್ರತಿ ಮನುಷ್ಯನ ಮನಸ್ಸಾಕ್ಷಿಯು ದೇವರ ಮುಂದೆ ಒಪ್ಪಬೇಕಾದ ರೀತಿಯಲ್ಲಿ ನಡೆಯುತ್ತೇವೆ.


(ಆದರೆ ಯೇಸು ತಾನೇ ದೀಕ್ಷಾಸ್ನಾನ ಮಾಡಿಸುತ್ತಿರಲಿಲ್ಲ. ಆತನ ಶಿಷ್ಯರೇ ಮಾಡಿಸುತ್ತಿದ್ದರು),


ನಾನು ವಾಕ್ಚಾತುರ್ಯದಲ್ಲಿ ನಿಪುಣನಲ್ಲದಿದ್ದರೂ ಜ್ಞಾನದಲ್ಲಿ ಅಲ್ಪನಲ್ಲ. ಇದನ್ನು ಎಲ್ಲಾ ಸಮಯಸಂದರ್ಭಗಳಲ್ಲೂ ಸ್ಪಷ್ಟಪಡಿಸಿದ್ದೇನೆ.


ನೀವು ಯೇಸು ಕ್ರಿಸ್ತನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಅಪ್ಪಣೆಕೊಟ್ಟನು. ಆ ಮೇಲೆ ಅವರು ಅವನನ್ನು ಇನ್ನೂ ಕೆಲವು ದಿನ ಅವರೊಂದಿಗೆ ಇರಬೇಕೆಂದು ಬೇಡಿಕೊಂಡರು.


ಯೇಸು ಯೋಹಾನನಿಗಿಂತ ಹೆಚ್ಚು ಶಿಷ್ಯರನ್ನು ಮಾಡಿಕೊಂಡು ಅವರಿಗೆ ದೀಕ್ಷಾಸ್ನಾನ ಮಾಡಿಸುತ್ತಾನೆಂಬ ಸುದ್ದಿಯನ್ನು ಫರಿಸಾಯರು ಕೇಳಿದರೆಂದು ಕರ್ತನಿಗೆ ತಿಳಿದಾಗ,


ನಾವು ಕೇವಲ ಮನುಷ್ಯಜ್ಞಾನವನ್ನು ಬಳಸದೇ ದೇವರ ಕೃಪೆಯನ್ನು ಆಶ್ರಯಿಸಿ ಪರಿಶುದ್ಧರಾಗಿಯೂ, ಪ್ರಾಮಾಣಿಕರಾಗಿಯೂ ಈ ಲೋಕದಲ್ಲಿ ಮುಖ್ಯವಾಗಿ ನಿಮ್ಮ ವಿಷಯದಲ್ಲಿ ನಡೆದುಕೊಂಡೆವೆಂದು ನಮ್ಮ ಮನಸ್ಸಾಕ್ಷಿ ಹೇಳುತ್ತದೆ. ಇದೇ ನಮಗಿರುವ ಹೆಮ್ಮೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು