Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 1:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಶಿಲುಬೆಯ ಸಂದೇಶವು ನಾಶನದ ಮಾರ್ಗದಲ್ಲಿರುವವರಿಗೆ ಹುಚ್ಚುತನವಾಗಿದೆ, ಆದರೆ ರಕ್ಷಣೆಯ ಮಾರ್ಗದಲ್ಲಿರುವ ನಮಗೆ ಇದು ದೇವರ ಶಕ್ತಿಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ವಿನಾಶಮಾರ್ಗದಲ್ಲಿರುವವರಿಗೆ ಶಿಲುಬೆಯ ಸಂದೇಶ ಹುಚ್ಚು ಸಂಗತಿಯಾಗಿದೆ. ಮುಕ್ತಿಮಾರ್ಗದಲ್ಲಿರುವ ನಮಗಾದರೋ ಅದು ದೈವಶಕ್ತಿಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಶಿಲುಬೆಯ ವಿಷಯವಾದ ಮಾತು ನಾಶನದ ಮಾರ್ಗದಲ್ಲಿರುವವರಿಗೆ ಹುಚ್ಚುಮಾತಾಗಿದೆ, ರಕ್ಷಣೆಯ ಮಾರ್ಗದಲ್ಲಿರುವ ನಮಗಾದರೋ ದೇವರ ಶಕ್ತಿಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನಾಶನ ಮಾರ್ಗದಲ್ಲಿರುವ ಜನರಿಗೆ ಶಿಲುಬೆಯ ಉಪದೇಶವು ಮೂರ್ಖತನವಾಗಿದೆ. ಆದರೆ ರಕ್ಷಣೆಯ ಮಾರ್ಗದಲ್ಲಿರುವ ನಮಗಾದರೋ ಅದು ದೇವರ ಶಕ್ತಿಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಶಿಲುಬೆಯ ಸಂದೇಶವು ವಿನಾಶದ ಮಾರ್ಗದಲ್ಲಿರುವವರಿಗೆ ಬುದ್ದಿಹೀನವಾಗಿದೆ. ರಕ್ಷಣೆ ಹೊಂದುತ್ತಿರುವ ನಮಗಾದರೋ, ಅದು ದೇವರ ಶಕ್ತಿಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ನಾಸಾಕ್ ಘೆವ್ನ್ ಜಾತಲ್ಯಾ ವಾಟೆನ್ ಚಲ್ತಲ್ಯಾಕ್ನಿ ಕುರ್ಸಾಚಿ ಖಬರ್ ಎಕ್ ಪಿಶೆಪಾನ್‍ ಸಾರ್ಕೆ ದಿಸ್ತಾ, ಖರೆ ರಾಕನ್ ಹೊಲ್ಲ್ಯಾ ಅಮ್ಕಾ ತಿ ಖಬರ್ ದೆವಾಚೆ ಬಳ್ ಹೊವ್ನ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 1:18
21 ತಿಳಿವುಗಳ ಹೋಲಿಕೆ  

ಪ್ರಾಪಂಚಿಕನಾದವನು ದೇವರಾತ್ಮನ ವಿಷಯಗಳನ್ನು ಬೇಡವೆನ್ನುತ್ತಾನೆ; ಅವು ಅವನಿಗೆ ಹುಚ್ಚುಮಾತನಾಗಿ ತೋರುತ್ತವೆ; ಅವು ಆಧ್ಯಾತ್ಮದ ಮೂಲಕ ತಿಳಿದುಕೊಳ್ಳ ಬೇಕಾಗಿರುವುದರಿಂದ ಅವನು ಅವುಗಳನ್ನು ಗ್ರಹಿಸಲಾರನು.


ಸುವಾರ್ತೆಯ ವಿಷಯದಲ್ಲಿ ನಾನು ನಾಚಿಕೊಳ್ಳುವವನಲ್ಲ. ಆ ಸುವಾರ್ತೆಯು ಮೊದಲು ಯೆಹೂದ್ಯರಿಗೆ ಆ ಮೇಲೆ ಗ್ರೀಕರಿಗೆ ಅಂತೂ ನಂಬುವವರೆಲ್ಲರಿಗೂ ರಕ್ಷಣೆ ಉಂಟುಮಾಡುವ ದೇವರ ಬಲಸ್ವರೂಪವಾಗಿದೆ.


ದುರ್ನೀತಿಯ ಎಲ್ಲಾ ವಂಚನೆಯಿಂದಲೂ ಕೂಡಿ ನಾಶದ ಮಾರ್ಗದಲ್ಲಿರುವವರಿಗೋಸ್ಕರವಾಗಿ ಬರುವನು. ಯಾಕೆಂದರೆ ಅವರು ಸತ್ಯವನ್ನು ಪ್ರೀತಿಸದೆ ನಿರಾಕರಿಸಿದ್ದರಿಂದ ರಕ್ಷಣೆಯನ್ನು ಹೊಂದದೆ ನಾಶವಾಗುತ್ತಾರೆ.


ನಾವು ಸಾರುವ ಸುವಾರ್ತೆಯು ಕೆಲವರಿಗೆ ಮರೆಯಾಗಿರುವುದಾದರೆ ನಾಶಮಾರ್ಗದಲ್ಲಿರುವವರಿಗೇ ಅದು ಮರೆಯಾಗಿರುವುದು.


ಲೋಕವು ತನ್ನ ಜ್ಞಾನದಿಂದ ದೇವರನ್ನು ತಿಳಿದುಕೊಳ್ಳದೆ ಹೋದದ್ದರಿಂದ; ಮೂರ್ಖತನವೆನಿಸಿಕೊಂಡಿರುವ ನಮ್ಮ ಬೋಧನೆಯ ಮೂಲಕ ನಂಬುವವರನ್ನು ರಕ್ಷಿಸುವುದು ದೇವರಿಗೆ ಹಿತವೆಂದು ತೋರಿತು.


ಯಾಕೆಂದರೆ ಇಹಲೋಕದ ಜ್ಞಾನವು ದೇವರ ಮುಂದೆ ಮೂರ್ಖತನವಾಗಿದೆ. “ಆತನು ಜ್ಞಾನಿಗಳನ್ನು ಅವರ ತಂತ್ರಗಳಲ್ಲಿಯೆ ಹಿಡಿದುಕೊಳ್ಳುತ್ತಾನೆಂತಲೂ,”


ಯಾಕೆಂದರೆ ನಾವು ನಿಮ್ಮಲ್ಲಿ ಸಾರಿದ ಸುವಾರ್ತೆಯು ಬರೀ ಮಾತಾಗಿ ಬಾರದೆ ಶಕ್ತಿಯೊಡನೆಯೂ ಪವಿತ್ರಾತ್ಮದೊಡನೆಯೂ ಮತ್ತು ಬಹು ನಿಶ್ಚಯದೊಡನೆಯೂ ಬಂತೆಂಬುದನ್ನು ನೀವೂ ಬಲ್ಲಿರಿ. ಯಾಕೆಂದರೆ ನಾವು ನಿಮ್ಮಲ್ಲಿದ್ದುಕೊಂಡು ನಿಮಗೋಸ್ಕರ ಹೇಗೆ ವರ್ತಿಸಿದ್ದೇವೆಂಬುದನ್ನು ನೀವು ಗಮನಿಸಿದ್ದೀರಿ.


ನಾನು ಶಿಲುಬೆಗೆ ಹಾಕಲ್ಪಟ್ಟ ಯೇಸು ಕ್ರಿಸ್ತನನ್ನೇ ಹೊರತು ಬೇರೆ ಯಾವುದನ್ನೂ ತಿಳಿಯದವನಾಗಿ ನಿಮ್ಮಲ್ಲಿ ಇರುವೆನೆಂದು ತೀರ್ಮಾನಿಸಿಕೊಂಡೆನು.


“‘ಎಲೈ, ತಿರಸ್ಕಾರ ಮಾಡುವವರೇ, ಆಶ್ಚರ್ಯಪಡಿರಿ, ನಾಶವಾಗಿಹೋಗಿರಿ. ನಿಮ್ಮ ಕಾಲದಲ್ಲಿ ನಾನು ಒಂದು ಕಾರ್ಯವನ್ನು ಮಾಡುವೆನು; ಆ ಕಾರ್ಯವನ್ನು ಒಬ್ಬನು ನಿಮಗೆ ವಿವರಿಸಿದರೂ ನೀವು ಅದನ್ನು ಸ್ವಲ್ಪವೂ ನಂಬುವುದಿಲ್ಲ’” ಎಂಬುದೇ ಎಂದು ಹೇಳಿದನು.


ಏಕೆಂದರೆ ದೇವರ ವಾಕ್ಯವು ಸಜೀವವಾದದ್ದು, ಸಕ್ರಿಯವಾದದ್ದು ಮತ್ತು ಯಾವ ಇಬ್ಬಾಯಿ ಕತ್ತಿಗಿಂತಲೂ ಹರಿತವಾದದ್ದು ಆಗಿದ್ದು, ಪ್ರಾಣ ಆತ್ಮಗಳನ್ನೂ ಕೀಲುಮಜ್ಜೆಗಳನ್ನೂ ವಿಭಾಗಿಸುವಷ್ಟು ಮಟ್ಟಿಗೂ ತೂರಿಹೋಗುವಂಥದಾಗಿದ್ದು, ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸುವಂಥದ್ದೂ ಆಗಿದೆ.


ನಾವು ಉಪಯೋಗಿಸುವ ಆಯುಧಗಳು ಲೋಕದ ಆಯುಧಗಳಲ್ಲ. ಅವು ದೇವರ ಎಣಿಕೆಯಲ್ಲಿ ಬಲವಾಗಿದ್ದು ಕೋಟೆಗಳನ್ನು ಕೆಡವಿಹಾಕುವಂಥವುಗಳಾಗಿವೆ.


ನಾನು ನಿಮಗೆ ಸಾರಿದ ಸುವಾರ್ತೆಯನ್ನು ನೀವು ದೃಢವಾಗಿ ಹಿಡಿದುಕೊಂಡರೆ ನಿಮಗೆ ರಕ್ಷಣೆಯಾಗುತ್ತದೆ. ಇಲ್ಲದಿದ್ದರೆ ನಿಮ್ಮ ನಂಬಿಕೆಯು ನಿರರ್ಥಕವಾಗುತ್ತದೆ.


ಸತ್ತವರು ಎದ್ದುಬರುವ ವಿಷಯವನ್ನು ಕೇಳಿದಾಗ ಕೆಲವರು ಪೌಲನನ್ನು ಅಪಹಾಸ್ಯಮಾಡಿದರು, ಬೇರೆ ಕೆಲವರು; “ನೀನು ಈ ವಿಷಯದಲ್ಲಿ ಹೇಳುವುದನ್ನು ನಾವು ಇನ್ನೊಂದು ಸಾರಿ ಕೇಳುತ್ತೇವೆ” ಅಂದರು.


ಇದಲ್ಲದೆ ಎಪಿಕೂರಿಯನ್ನರು, ಸ್ತೋಯಿಕರು ಎಂಬ ತತ್ವವಿಚಾರಕರಲ್ಲಿ ಕೆಲವರು ಅವನ ಸಂಗಡ ಚರ್ಚೆಮಾಡಿದರು. ಅವರಲ್ಲಿ ಕೆಲವರು; “ಈ ವಾಚಾಳಿ ಏನು ಹೇಳ ಬೇಕೆಂದಿದ್ದಾನೆ?” ಅಂದರು. ಅವನು ಯೇಸುವಿನ ವಿಷಯವಾಗಿ ಮತ್ತು ಸತ್ತವರು ಎದ್ದು ಬರುವರೆಂಬುದರ ಕುರಿತು ಸಾರುತ್ತಿದ್ದುದರಿಂದ; “ಇವನು ಅನ್ಯದೇಶದ ದೇವರುಗಳನ್ನು ಪ್ರಚಾರಮಾಡುವವನಾಗಿ ಕಂಡುಬರುತ್ತಾನೆಂದು” ಬೇರೆ ಕೆಲವರು ಹೇಳಿದರು.


ಅವರೆಲ್ಲರೂ ದೇವರನ್ನು ಕೊಂಡಾಡುವವರಾಗಿಯೂ, ಜನರೆಲ್ಲರ ದಯವನ್ನು ಹೊಂದುವವರಾಗಿಯೂ ಇದ್ದರು. ಕರ್ತನು ರಕ್ಷಣೆಯ ಮಾರ್ಗದಲ್ಲಿರುವವರನ್ನು ಪ್ರತಿದಿನ ಅವರೊಂದಿಗೆ ಸಭೆಗೆ ಸೇರಿಸುತ್ತಿದ್ದನು.


ನಾವಂತೂ ಕ್ರಿಸ್ತನ ನಿಮಿತ್ತ ಮೂರ್ಖರಾಗಿದ್ದೇವೆ. ನೀವೋ ಕ್ರಿಸ್ತನಲ್ಲಿ ಬುದ್ಧಿವಂತರಾಗಿದ್ದೀರಿ. ನಾವು ಬಲಹೀನರು, ನೀವು ಬಲಿಷ್ಠರು, ನೀವು ಗೌರವವುಳ್ಳವರು, ನಾವು ನಿಂದಿಸಲ್ಪಟ್ಟವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು