21 ಲೋಕವು ತನ್ನ ಸ್ವಂತ ಜ್ಞಾನದಿಂದ ದೇವರನ್ನು ಅರಿಯಲಾರದೆ ಹೋಯಿತು. ಇದು ದೈವಸಂಕಲ್ಪವೇ ಸರಿ. ಆದ್ದರಿಂದಲೇ ನಾವು ಸಾರುವ ‘ಹುಚ್ಚುತನ’ವೆಂಬ ಸಂದೇಶದ ಮೂಲಕ ವಿಶ್ವಾಸವುಳ್ಳವರನ್ನು ಉದ್ಧರಿಸುವುದು ದೇವರಿಗೆ ಉಚಿತವೆನಿಸಿತು
21 ಇದು ದೇವರ ಜ್ಞಾನದ ಸಂಕಲ್ಪವಾಗಿತ್ತು. ಲೋಕವು ತನ್ನ ಸ್ವಂತ ಜ್ಞಾನದ ಮೂಲಕವಾಗಿ ದೇವರನ್ನು ತಿಳಿದುಕೊಂಡಿರಲಿಲ್ಲ. ಆದ್ದರಿಂದ ಮೂರ್ಖತನದಂತೆ ತೋರುವ ಸಂದೇಶದ ಮೂಲಕ ನಂಬುವವರನ್ನು ರಕ್ಷಿಸುವುದು ದೇವರಿಗೆ ಒಳ್ಳೆಯದೆನಿಸಿತು.
21 ಈ ಪ್ರಪಂಚವು ತನ್ನ ಜ್ಞಾನದ ಮೂಲಕ ದೇವರನ್ನು ಅರಿತುಕೊಳ್ಳಲಿಲ್ಲ; ಆದ್ದರಿಂದ ದೇವರ ಜ್ಞಾನದಿಂದ, ನಂಬಿದವರನ್ನು ಪ್ರಸಂಗದ ಬುದ್ದಿಹೀನತೆಯಿಂದ ರಕ್ಷಿಸುವುದು ದೇವರಿಗೆ ಮೆಚ್ಚುಗೆಯಾಯಿತು.
ಅದೇ ಗಳಿಗೆಯಲ್ಲಿ ಆತನು ಪವಿತ್ರಾತ್ಮನನಿಂದ ಉಲ್ಲಾಸಗೊಂಡು ಹೇಳಿದ್ದೇನಂದರೆ, “ತಂದೆಯೇ, ಪರಲೋಕ ಮತ್ತು ಭೂಲೋಕಗಳ ಒಡೆಯನೇ, ನೀನು ಜ್ಞಾನಿಗಳಿಗೂ ಮತ್ತು ವಿವೇಕಿಗಳಿಗೂ ಈ ವಿಷಯಗಳನ್ನು ಮರೆಮಾಡಿ, ಮಕ್ಕಳಿಗೆ ಪ್ರಕಟಮಾಡಿರುವುದರಿಂದ ನಿನ್ನನ್ನು ಕೊಂಡಾಡುತ್ತೇನೆ. ಹೌದು, ತಂದೆಯೇ, ಹೀಗೆ ಮಾಡುವುದೇ ಒಳ್ಳೆಯದೆಂದು ನಿನ್ನ ದೃಷ್ಟಿಗೆ ತೋರಿದ್ದರಿಂದ ನಿನ್ನನ್ನು ಕೊಂಡಾಡುತ್ತೇನೆ.
ಅದೇ ಸಮಯದಲ್ಲಿ ಯೇಸು ಹೇಳಿದ್ದೇನೆಂದರೆ, “ತಂದೆಯೇ! ಪರಲೋಕದ ಭೂಲೋಕದ ಒಡೆಯನೇ, ನೀನು ಜ್ಞಾನಿಗಳಿಗೂ ಬುದ್ಧಿವಂತರಿಗೂ ಈ ವಿಷಯಗಳನ್ನು ಮರೆಮಾಡಿ ಚಿಕ್ಕ ಮಕ್ಕಳಿಗೆ ಅದನ್ನು ಪ್ರಕಟಪಡಿಸಿರುವಿ ಎಂದು ನಿನ್ನನ್ನು ಕೊಂಡಾಡುತ್ತೇನೆ.
ದೇವರು ನಮ್ಮ ಕರ್ತನಾದ ಕ್ರಿಸ್ತಯೇಸುವಿನಲ್ಲಿ ಮಾಡಿದ ನಿತ್ಯಸಂಕಲ್ಪದ ಮೇರೆಗೆ ತನ್ನ ನಾನಾ ವಿಧವಾದ ಜ್ಞಾನವು, ಪರಲೋಕದಲ್ಲಿ ರಾಜತ್ವಗಳಿಗೂ, ಅಧಿಕಾರಗಳಿಗೂ ಈಗ ಸಭೆಯ ಮೂಲಕ ಗೊತ್ತಾಗಬೇಕೆಂದು ಉದ್ದೇಶಿಸಿದನು.
ದೇವರು ಜ್ಞಾನಿಗಳನ್ನು ನಾಚಿಕೆಪಡಿಸುವುದಕ್ಕಾಗಿ ಈ ಲೋಕದ ಬುದ್ಧಿಹೀನರನ್ನು ಆರಿಸಿಕೊಂಡನು; ದೇವರು ಬಲಿಷ್ಠರನ್ನು ನಾಚಿಕೆಪಡಿಸುವುದಕ್ಕಾಗಿ ಈ ಲೋಕದ ಅಶಕ್ತರನ್ನು, ಬಲಹೀನರನ್ನು ಆರಿಸಿಕೊಂಡನು.
ಪ್ರಾಪಂಚಿಕನಾದವನು ದೇವರಾತ್ಮನ ವಿಷಯಗಳನ್ನು ಬೇಡವೆನ್ನುತ್ತಾನೆ; ಅವು ಅವನಿಗೆ ಹುಚ್ಚುಮಾತನಾಗಿ ತೋರುತ್ತವೆ; ಅವು ಆಧ್ಯಾತ್ಮದ ಮೂಲಕ ತಿಳಿದುಕೊಳ್ಳ ಬೇಕಾಗಿರುವುದರಿಂದ ಅವನು ಅವುಗಳನ್ನು ಗ್ರಹಿಸಲಾರನು.
ದೇವಜನರು ಲೋಕಕ್ಕೆ ತೀರ್ಪುಮಾಡುವರೆಂಬುದು ನಿಮಗೆ ತಿಳಿಯದೋ? ಲೋಕವು ನಿಮ್ಮಿಂದ ತೀರ್ಪನ್ನು ಹೊಂದಬೇಕಾಗಿರುವಲ್ಲಿ ಅತ್ಯಲ್ಪವಾದ ಸಂಗತಿಗಳನ್ನು ಕುರಿತು ತೀರ್ಪುಮಾಡುವುದಕ್ಕೆ ನೀವು ಅನರ್ಹರಾಗಿದ್ದೀರೋ?
ನಮ್ಮ ಮುಂದಿಟ್ಟಿರುವ ಈ ಅತ್ಯಂತ ಶ್ರೇಷ್ಠವಾದ ರಕ್ಷಣೆಯನ್ನು ನಾವು ಅಲಕ್ಷ್ಯ ಮಾಡಿದರೆ ತಪ್ಪಿಸಿಕೊಳ್ಳುವುದಾದರೂ ಹೇಗೆ? ಇದು ಕರ್ತನಿಂದ ಮೊದಲು ಹೇಳಲ್ಪಟ್ಟಿತು ಮತ್ತು ಆತನಿಂದ ಕೇಳಿದವರು ಇದನ್ನು ನಮಗೆ ದೃಢಪಡಿಸಿಕೊಟ್ಟರು.
ಆದಕಾರಣ ಆತನು ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವುದಕ್ಕೆ ಶಕ್ತನಾಗಿದ್ದಾನೆ. ಯಾಕೆಂದರೆ ಅವರಿಗೋಸ್ಕರ ವಿಜ್ಞಾಪನೆ ಮಾಡುವುದಕ್ಕೆ ಯಾವಾಗಲೂ ಬದುಕುವವನಾಗಿದ್ದಾನೆ.
ವ್ಯಭಿಚಾರಿಗಳೇ, ಇಹಲೋಕದ ಗೆಳೆತನವು ದೇವರಿಗೆ ಹಗೆತನವೆಂದು ನಿಮಗೆ ತಿಳಿಯದೋ? ಆದ್ದರಿಂದ ಲೋಕಕ್ಕೆ ಸ್ನೇಹಿತನಾಗಿರಬೇಕೆಂದಿರುವವನು ತನ್ನನ್ನು ದೇವರಿಗೆ ವಿರೋಧಿಯನ್ನಾಗಿ ಮಾಡಿಕೊಳ್ಳುತ್ತಾನೆ.