Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 1:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ನಾವಾದರೋ ಶಿಲುಬೆಗೆ ಹಾಕಲ್ಪಟ್ಟ ಕ್ರಿಸ್ತನನ್ನು ಸಾರುತ್ತೇವೆ; ಕ್ರಿಸ್ತನ ಸಂದೇಶವು ಯೆಹೂದ್ಯರಿಗೆ ವಿಘ್ನವೂ ಮತ್ತು ಗ್ರೀಕರಿಗೆ ಮೂರ್ಖತನವೂ ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ನಾವಾದರೋ ಶಿಲುಬೆಗೇರಿಸಲಾದ ಕ್ರಿಸ್ತಯೇಸುವನ್ನು ಪ್ರಚುರಪಡಿಸುತ್ತೇವೆ. ಯೆಹೂದ್ಯರಿಗೆ ಇದು ಅಸಹ್ಯವಾಗಿದೆ; ಅನ್ಯಜನರಿಗೆ ಹಾಸ್ಯಾಸ್ಪದವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ನಾವಾದರೋ ಶಿಲುಬೆಗೆ ಹಾಕಲ್ಪಟ್ಟವನಾದ ಕ್ರಿಸ್ತನನ್ನು ಪ್ರಚುರಪಡಿಸುತ್ತೇವೆ. ಇಂಥ ಕ್ರಿಸ್ತನ ಸಂಗತಿಯು ಯೆಹೂದ್ಯರಿಗೆ ವಿಘ್ನವೂ ಅನ್ಯಜನರಿಗೆ ಹುಚ್ಚುಮಾತೂ ಆಗಿದೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ನಾವಾದರೋ, ಶಿಲುಬೆಗೇರಿಸಲ್ಪಟ್ಟ ಕ್ರಿಸ್ತನ ಕುರಿತಾಗಿ ಬೋಧಿಸುತ್ತೇವೆ. ಇದು ಯೆಹೂದ್ಯರಿಗೆ ದೊಡ್ಡ ಸಮಸ್ಯೆಯಾಗಿದೆ; ಯೆಹೂದ್ಯರಲ್ಲದ ಜನರಿಗೆ ಮೂರ್ಖತನದಂತೆ ತೋರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ನಾವಾದರೋ ಶಿಲುಬೆಗೆ ಹಾಕಲಾದ ಕ್ರಿಸ್ತ ಯೇಸುವನ್ನೇ ಪ್ರಸಂಗಿಸುತ್ತಿದ್ದೇವೆ. ಇದು ಯೆಹೂದ್ಯರಿಗೆ ವಿಘ್ನವೂ ಯೆಹೂದ್ಯರಲ್ಲದವರಿಗೆ ಬುದ್ದಿಹೀನತೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ತೆಚೆಸಾಟ್ನಿ ಅಮಿ ಪ್ರಚಾರ್ ಕರುನ್ ಸಾಂಗ್ತಲೆ ಕ್ರಿಸ್ತಾಚೆ ಕುರ್ಸಾರ್ ಮಾರ್ನೆ ಜುದೆವಾಕ್ನಿ ಅಡ್ಕಳ್ ಹೊವ್ನ್ ಹಾಯ್, ಅನಿ ಜುದೆವ್ ನ್ಹಯ್ ಹೊತ್ತ್ಯಾಕ್ನಿ ಎಕ್ ಪಿಶೆಪಾನ್ ಹೊವ್ನ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 1:23
22 ತಿಳಿವುಗಳ ಹೋಲಿಕೆ  

ಪ್ರಾಪಂಚಿಕನಾದವನು ದೇವರಾತ್ಮನ ವಿಷಯಗಳನ್ನು ಬೇಡವೆನ್ನುತ್ತಾನೆ; ಅವು ಅವನಿಗೆ ಹುಚ್ಚುಮಾತನಾಗಿ ತೋರುತ್ತವೆ; ಅವು ಆಧ್ಯಾತ್ಮದ ಮೂಲಕ ತಿಳಿದುಕೊಳ್ಳ ಬೇಕಾಗಿರುವುದರಿಂದ ಅವನು ಅವುಗಳನ್ನು ಗ್ರಹಿಸಲಾರನು.


ಮತ್ತು ಪವಿತ್ರಗ್ರಂಥದಲ್ಲಿ ಇನ್ನೊಂದೆಡೆ ಬರೆದಿರುವುದೇನಂದರೆ, “ಅದು ಜನರು ಎಡವುವ ಕಲ್ಲು ಮುಗ್ಗರಿಸುವ ಬಂಡೆ.” ಅವರು ದೇವರ ವಾಕ್ಯಕ್ಕೆ ಅವಿಧೇಯರಾದ್ದರಿಂದ ಎಡವಿ ಬೀಳುತ್ತಾರೆ. ಅದಕ್ಕಾಗಿಯೇ ಅವರನ್ನು ನೇಮಿಸಲಾಗಿದೆ.


ನಾನು ಶಿಲುಬೆಗೆ ಹಾಕಲ್ಪಟ್ಟ ಯೇಸು ಕ್ರಿಸ್ತನನ್ನೇ ಹೊರತು ಬೇರೆ ಯಾವುದನ್ನೂ ತಿಳಿಯದವನಾಗಿ ನಿಮ್ಮಲ್ಲಿ ಇರುವೆನೆಂದು ತೀರ್ಮಾನಿಸಿಕೊಂಡೆನು.


ಸಹೋದರರೇ, ನಾನಾದರೋ ಸುನ್ನತಿಯಾಗಬೇಕೆಂದು ಇನ್ನೂ ಸಾರುವವನಾಗಿದ್ದರೆ ನನಗೆ ಹಿಂಸೆಯಾಗುವುದಾದರೂ ಯಾಕೆ? ಹಾಗಿದ್ದ ಪಕ್ಷದಲ್ಲಿ ಶಿಲುಬೆಯ ದೆಸೆಯಿಂದ ಉಂಟಾಗುವ ತೊಂದರೆಗಳು ನೀಗಿ ಹೋಯಿತಲ್ಲಾ?


ಶಿಲುಬೆಯ ಸಂದೇಶವು ನಾಶನದ ಮಾರ್ಗದಲ್ಲಿರುವವರಿಗೆ ಹುಚ್ಚುತನವಾಗಿದೆ, ಆದರೆ ರಕ್ಷಣೆಯ ಮಾರ್ಗದಲ್ಲಿರುವ ನಮಗೆ ಇದು ದೇವರ ಶಕ್ತಿಯಾಗಿದೆ.


ಸಿಮೆಯೋನನು ಅವರನ್ನು ಆಶೀರ್ವದಿಸಿ ತಾಯಿಯಾದ ಮರಿಯಳಿಗೆ, “ಇಗೋ, ಈತನು ಇಸ್ರಾಯೇಲ್ ಜನರಲ್ಲಿ ಅನೇಕರು ಬೀಳುವುದಕ್ಕೂ, ಅನೇಕರು ಏಳುವುದಕ್ಕೂ ಕಾರಣನಾಗಿರುವನು ಮತ್ತು ಜನರು ವಿರೋಧಿಸಿ ಮಾತನಾಡುವುದಕ್ಕೂ ಗುರುತಾಗಿರುವನು;


ನನಗಾದರೋ ನಮ್ಮ ಕರ್ತನಾದ ಯೇಸು ಕ್ರಿಸ್ತನ ಶಿಲುಬೆಯ ವಿಷಯದಲ್ಲಿಯೇ ಹೊರತು ಬೇರೆ ಯಾವ ವಿಷಯದಲ್ಲಿಯೂ ಹೆಚ್ಚಳಪಡುವುದು ಬೇಕಾಗಿಲ್ಲ. ಆತನ ಮೂಲಕ ನಾನು ಲೋಕಕ್ಕೂ, ಲೋಕವು ನನಗಾಗಿಯೂ ಶಿಲುಬೆಗೆ ಹಾಕಿಕೊಂಡು ಸತ್ತಿತು.


ಆದರೆ ಯೇಸುವು ಅವರಿಗೆ “ಪ್ರವಾದಿಯು ಬೇರೆ ಎಲ್ಲಿದ್ದರೂ ಅವನಿಗೆ ಗೌರವ ಉಂಟು. ಆದರೆ ಸ್ವದೇಶದಲ್ಲಿಯೂ ಸ್ವಂತ ಮನೆಯಲ್ಲಿಯೂ ಗೌರವ ಇರುವುದಿಲ್ಲ” ಅಂದನು.


ನನ್ನ ವಿಷಯದಲ್ಲಿ ಆಪಾದಿಸದವನೇ ಧನ್ಯನು” ಎಂದು ಹೇಳಿದನು.


ಕ್ರಿಸ್ತನ ಅಗಮ್ಯವಾದ ಐಶ್ವರ್ಯದ ಸುವಾರ್ತೆಯನ್ನು ಅನ್ಯಜನರಿಗೆ ಸಾರುವ ಹಾಗೆಯೂ


ಎಲೈ ಬುದ್ಧಿಹೀನರಾದ ಗಲಾತ್ಯದವರೇ! ನಿಮ್ಮನ್ನು ಮರುಳುಗೊಳಿಸಿದವರು ಯಾರು? ಯೇಸು ಕ್ರಿಸ್ತನು ಶಿಲುಬೆಗೆ ಹಾಕಿಸಿಕೊಂಡವನಾಗಿ ನಿಮ್ಮ ಕಣ್ಣೆದುರಿನಲ್ಲಿಯೇ ವರ್ಣಿಸಲ್ಪಟ್ಟನಲ್ಲವೇ?


ನಮ್ಮನ್ನೇ ನಾವು ಪ್ರಚಾರಮಾಡಿಕೊಳ್ಳದೆ ನಮ್ಮನ್ನು ಯೇಸುವಿನ ನಿಮಿತ್ತ ನಿಮ್ಮ ದಾಸರೆಂತಲೂ ಕ್ರಿಸ್ತೇಸುವನ್ನೇ ಕರ್ತನೆಂತಲೂ ಘೋಷಿಸುತ್ತೇವೆ.


ದೇವರು ಈ ಲೋಕದಲ್ಲಿ ಕೀಳಾದವರನ್ನೂ ಹಾಗೂ ಅಸಡ್ಡೆಯಾದವರನ್ನೂ ಆರಿಸಿಕೊಂಡದ್ದಲ್ಲದೆ ಗಣ್ಯರನ್ನು ಇಲ್ಲದಂತೆ ಮಾಡುವುದಕ್ಕಾಗಿ ಗಣನೆಗೆ ಬಾರದವರನ್ನು, ನಿಂದಿಸಲ್ಪಟ್ಟವರನ್ನು ಆರಿಸಿಕೊಂಡಿದ್ದಾನೆ.


ಲೋಕವು ತನ್ನ ಜ್ಞಾನದಿಂದ ದೇವರನ್ನು ತಿಳಿದುಕೊಳ್ಳದೆ ಹೋದದ್ದರಿಂದ; ಮೂರ್ಖತನವೆನಿಸಿಕೊಂಡಿರುವ ನಮ್ಮ ಬೋಧನೆಯ ಮೂಲಕ ನಂಬುವವರನ್ನು ರಕ್ಷಿಸುವುದು ದೇವರಿಗೆ ಹಿತವೆಂದು ತೋರಿತು.


ನಾವಂತೂ ಕ್ರಿಸ್ತನ ನಿಮಿತ್ತ ಮೂರ್ಖರಾಗಿದ್ದೇವೆ. ನೀವೋ ಕ್ರಿಸ್ತನಲ್ಲಿ ಬುದ್ಧಿವಂತರಾಗಿದ್ದೀರಿ. ನಾವು ಬಲಹೀನರು, ನೀವು ಬಲಿಷ್ಠರು, ನೀವು ಗೌರವವುಳ್ಳವರು, ನಾವು ನಿಂದಿಸಲ್ಪಟ್ಟವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು