1 ಕೊರಿಂಥದವರಿಗೆ 1:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಸಹೋದರರೇ, ದೇವರು ನಿಮ್ಮನ್ನು ಕರೆದಾಗ ನೀವು ಹೇಗಿದ್ದೀರೆಂದು ಆಲೋಚಿಸಿರಿ. ಮನುಷ್ಯರ ದೃಷ್ಟಿಯಲ್ಲಿ ನಿಮ್ಮೊಳಗೆ ಜ್ಞಾನಿಗಳೂ ಹೆಚ್ಚಿನ ಸಂಖ್ಯೆಯಲ್ಲಿಲ್ಲ, ಪ್ರಬಲರೂ ಅನೇಕರಿರಲಿಲ್ಲ, ಕುಲೀನರೂ ಅನೇಕರಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಸಹೋದರರೇ, ನಿಮ್ಮನ್ನು ದೇವರು ಕರೆದಾಗ ನೀವು ಹೇಗಿದ್ದಿರಿ ಎಂದು ಜ್ಞಾಪಿಸಿಕೊಳ್ಳಿ. ಲೋಕದ ಎಣಿಕೆಯಲ್ಲಿ ನಿಮ್ಮೊಳಗೆ ಜ್ಞಾನಿಗಳು ಅನೇಕರಿಲ್ಲ. ಪರಾಕ್ರಮಿಗಳು ಅನೇಕರಿಲ್ಲ, ಕುಲೀನರು ಅನೇಕರಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಸಹೋದರರೇ, ದೇವರು ನಿಮ್ಮನ್ನು ಕರೆದಾಗ ಎಂಥವರನ್ನು ಕರೆದನೆಂದು ಆಲೋಚಿಸಿರಿ. ನಿಮ್ಮೊಳಗೆ ಲೌಕಿಕ ದೃಷ್ಟಿಯಲ್ಲಿ ಜ್ಞಾನಿಗಳೂ ಅನೇಕರಿಲ್ಲ, ಅಧಿಕಾರಿಗಳೂ ಅನೇಕರಿಲ್ಲ, ಕುಲೀನರೂ ಅನೇಕರಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಸಹೋದರ ಸಹೋದರಿಯರೇ, ದೇವರು ನಿಮ್ಮನ್ನು ಕರೆದಾಗ ನೀವು ಹೇಗಿದ್ದಿರಿ ಎಂದು ಜ್ಞಾಪಿಸಿಕೊಳ್ಳಿರಿ. ಲೋಕದ ಎಣಿಕೆಯಲ್ಲಿ ನಿಮ್ಮಲ್ಲಿ ಅನೇಕರು ಜ್ಞಾನಿಗಳಾಗಿರಲಿಲ್ಲ; ಅಧಿಕಾರಿಗಳಾಗಿರಲಿಲ್ಲ; ಪ್ರಾಮುಖ್ಯವಾದ ಕುಟುಂಬಗಳಿಗೆ ಸೇರಿದವರಾಗಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಪ್ರಿಯರೇ, ನೀವು ದೇವರ ಕರೆಯನ್ನು ಹೊಂದಿದಾಗ ಏನಾಗಿದ್ದಿರೆಂಬುದನ್ನು ಆಲೋಚಿಸಿರಿ. ನಿಮ್ಮೊಳಗೆ ಲೋಕಾನುಸಾರವಾಗಿ ಜ್ಞಾನಿಗಳೂ ಅನೇಕರಿಲ್ಲ, ಪ್ರಭಾವಿಗಳೂ ಅನೇಕರಿಲ್ಲ, ಕುಲೀನರೂ ಅನೇಕರಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್26 ಅತ್ತಾ ಮಾಜ್ಯಾ ಭಾವಾನು ಅನಿ ಭೆನಿಯಾನು ದೆವಾನ್ ತುಮ್ಕಾ ಬಲ್ವುತಾನಾ ತುಮಿ ಖೈ ಹೊತ್ತ್ಯಾಶಿ ಮನ್ತಲೆ ಯಾದ್ ಕರಾ, ಮಾನ್ಸಾಚ್ಯಾ ನದ್ರೆ ಪರ್‍ಕಾರ್ ತುಮ್ಚ್ಯಾತ್ಲಿ ಉಲ್ಲಿ ಲೊಕಾ ಲೈ ಶಾನೆ, ನಾಹೊಲ್ಯಾರ್ ಘಟ್ಮುಟ್, ನಾಹೊಲ್ಯಾರ್, ಸಮಾಜಾತ್ ಮೊಟ್ಯಾ ಮೊಟ್ಯಾ ಜಾಗ್ಯಾ ವೈನಿ ಹೊತ್ತ್ಯಾಶಿ. ಅಧ್ಯಾಯವನ್ನು ನೋಡಿ |
ಅದೇ ಗಳಿಗೆಯಲ್ಲಿ ಆತನು ಪವಿತ್ರಾತ್ಮನನಿಂದ ಉಲ್ಲಾಸಗೊಂಡು ಹೇಳಿದ್ದೇನಂದರೆ, “ತಂದೆಯೇ, ಪರಲೋಕ ಮತ್ತು ಭೂಲೋಕಗಳ ಒಡೆಯನೇ, ನೀನು ಜ್ಞಾನಿಗಳಿಗೂ ಮತ್ತು ವಿವೇಕಿಗಳಿಗೂ ಈ ವಿಷಯಗಳನ್ನು ಮರೆಮಾಡಿ, ಮಕ್ಕಳಿಗೆ ಪ್ರಕಟಮಾಡಿರುವುದರಿಂದ ನಿನ್ನನ್ನು ಕೊಂಡಾಡುತ್ತೇನೆ. ಹೌದು, ತಂದೆಯೇ, ಹೀಗೆ ಮಾಡುವುದೇ ಒಳ್ಳೆಯದೆಂದು ನಿನ್ನ ದೃಷ್ಟಿಗೆ ತೋರಿದ್ದರಿಂದ ನಿನ್ನನ್ನು ಕೊಂಡಾಡುತ್ತೇನೆ.