Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 1:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನಮ್ಮ ಕರ್ತನಾದ ಯೇಸು ಕ್ರಿಸ್ತನ ದಿನದಲ್ಲಿ ನೀವು ನಿರಪರಾಧಿಗಳಾಗಿರುವಂತೆ ಆತನು ನಿಮ್ಮನ್ನು ಕಡೆಯವರೆಗೂ ದೃಢಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ನಮ್ಮ ಪ್ರಭು ಯೇಸುಕ್ರಿಸ್ತರ ದಿನದಂದು ನೀವು ನಿರ್ದೋಷಿಗಳಾಗಿರುವಂತೆ ಆ ದೇವರೇ, ನಿಮ್ಮನ್ನು ಕಡೆಯವರೆಗೂ ಸ್ಥಿರವಾಗಿ ಕಾಪಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನಮ್ಮ ಕರ್ತನಾದ ಯೇಸು ಕ್ರಿಸ್ತನ ದಿನದಲ್ಲಿ ಯಾರೂ ನಿಮ್ಮ ಮೇಲೆ ತಪ್ಪು ಹೊರಿಸಲಾಗದಂತೆ ಆತನು ನಿಮ್ಮನ್ನು ಕಡೇವರೆಗೂ ದೃಢಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಯೇಸುವು ನಿಮ್ಮನ್ನು ಕೊನೆಯವರೆಗೂ ದೃಢಪಡಿಸಿ ಕಾಪಾಡುವನು. ನಮ್ಮ ಪ್ರಭುವಾದ ಯೇಸು ಕ್ರಿಸ್ತನು ಮತ್ತೆ ಬಂದಾಗ ನೀವು ನಿರ್ದೋಷಿಗಳಾಗಿರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ದಿನದಲ್ಲಿ ನೀವು ನಿರ್ದೋಷಿಗಳಾಗಿರುವಂತೆ ಅವರು ಕೊನೆಯತನಕವೂ ನಿಮ್ಮನ್ನು ಬಲಪಡಿಸಿ ಕಾಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ತೊ ತುಮ್ಕಾ ಆಕ್ರಿ ಪತರ್ ಘಟ್ ಸಂಬಾಳ್ತಾ, ಅಶೆ ತುಮಿ ಅಮ್ಚ್ಯಾ ಧನಿಯಾ ಜೆಜು ಕ್ರಿಸ್ತಾಚ್ಯಾ ದಿಸಾ ದಿಸಿ ಕಸ್ಲ್ಯಾಬಿ ಚುಕೆತ್ ರ್‍ಹಾಯ್ನ್ಯಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 1:8
29 ತಿಳಿವುಗಳ ಹೋಲಿಕೆ  

ನಮ್ಮ ಕರ್ತನಾದ ಯೇಸು ತನ್ನ ಪರಿಶುದ್ಧ ಪರಿವಾರ ಸಮೇತ ಪುನರಾಗಮಿಸುವಾಗ ತಂದೆಯಾದ ದೇವರ ಸಮಕ್ಷಮದಲ್ಲಿ ನೀವು ಪರಿಶುದ್ಧರೂ, ನಿರ್ದೋಷಿಗಳೂ ಆಗಿರುವಂತೆ ನಿಮ್ಮ ಹೃದಯಗಳನ್ನು ದೃಢಪಡಿಸಲಿ.


ಈಗಲಾದರೋ ದೇವರು ನಿಮ್ಮನ್ನು ಯೇಸುಕ್ರಿಸ್ತನ ಶಾರೀರಿಕ ಮರಣದ ಮೂಲಕವಾಗಿ ಸಂಧಾನಪಡಿಸಿಕೊಂಡಿದ್ದಾನೆ. ದೇವರು ತನ್ನ ಸನ್ನಿಧಿಯಲ್ಲಿ ನಿಮ್ಮನ್ನು ಪರಿಶುದ್ಧರನ್ನಾಗಿಯೂ, ನಿರ್ದೋಷಿಗಳನ್ನಾಗಿಯೂ, ನಿರಪರಾಧಿಗಳನ್ನಾಗಿಯೂ ನಿಲ್ಲಿಸಬೇಕೆಂದು ಹೀಗೆ ಮಾಡಿದ್ದಾನೆ.


ಈ ಒಳ್ಳೆಯ ಕೆಲಸವನ್ನು ನಿಮ್ಮಲ್ಲಿ ಪ್ರಾರಂಭಿಸಿದಾತನು ಅದನ್ನು ನಡಿಸಿಕೊಂಡು ಯೇಸು ಕ್ರಿಸ್ತನು ಬರುವ ದಿನದೊಳಗಾಗಿ ಪೂರ್ಣತೆಗೆ ತರುವನೆಂದು ನನಗೆ ಭರವಸವುಂಟು.


ಆದರೆ ಕರ್ತನು ನಂಬಿಗಸ್ತನು, ಆತನು ನಿಮ್ಮನ್ನು ದೃಢಪಡಿಸಿ ನೀವು ಕೆಡುಕನ ಕೈಗೆ ಸಿಕ್ಕದಂತೆ ಕಾಪಾಡುವನು.


ಅದನ್ನು ಕಳಂಕ ಸುಕ್ಕು ಮುಂತಾದದ್ದೊಂದೂ ಇಲ್ಲದಂತೆ ಪರಿಶುದ್ಧವೂ, ನಿರ್ದೋಷವೂ, ಮಹಿಮೆಯುಳ್ಳದ್ದೂ ಆಗಿರುವ ಸಭೆಯನ್ನಾಗಿ ತನ್ನೆದುರಿನಲ್ಲಿ ನಿಲ್ಲಿಸಿಕೊಳ್ಳಬೇಕೆಂದು ವಾಕ್ಯೋಪದೇಶ ಸಹಿತವಾದ ಜಲಸ್ನಾನವನ್ನು ಮಾಡಿಸಿ ಶುದ್ಧಿಮಾಡಿದನು.


ಅನಾದಿಯಿಂದ ಗುಪ್ತವಾಗಿದ್ದ ಮರ್ಮವು ಈಗ ಪ್ರಕಾಶಕ್ಕೆ ಬಂದು ನಿತ್ಯನಾದ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಗಳ ಶಾಸ್ತ್ರಗಳ ಮೂಲಕ ಅನ್ಯಜನರೆಲ್ಲರಿಗೂ ನಂಬಿಕೆಯೆಂಬ ವಿಧೇಯತ್ವವನ್ನು ಉಂಟುಮಾಡುವುದಕ್ಕೋಸ್ಕರ ತಿಳಿಸಲ್ಪಟ್ಟಿದೆ. ಪೂರ್ವಕಾಲಗಳಲ್ಲಿ ಮರೆಯಾಗಿದ್ದು ಈಗ ಬೆಳಕಿಗೆ ಬಂದಿರುವಂತಹದ್ದೂ, ಈ ಮರ್ಮಕ್ಕೆ ಅನುಸಾರ ಎಂದರೆ ಯೇಸು ಕ್ರಿಸ್ತನ ವಿಷಯವಾದಂಥ ಹಾಗೂ ನಾನು ಸಾರುವಂಥ ಸುವಾರ್ತೆಗನುಸಾರವಾಗಿ ನಿಮ್ಮನ್ನು ಸ್ಥಿರಪಡಿಸುವುದಕ್ಕೆ ಶಕ್ತನಾಗಿರುವ,


ಕ್ರಿಸ್ತನಲ್ಲಿ ನಿಮ್ಮನ್ನು ತನ್ನ ನಿತ್ಯ ಮಹಿಮೆಗೆ ಕರೆದ ಕೃಪಾಪೂರ್ಣನಾದ ದೇವರು ತಾನೇ, ನೀವು ಸ್ವಲ್ಪ ಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಯಥಾಸ್ಥಿತಿಗೆ ತಂದು ಸ್ಥಿರಪಡಿಸಿ ಬಲಪಡಿಸುವನು.


ಹೀಗೆ ಉತ್ತಮ ಕಾರ್ಯಗಳು ಯಾವವೆಂಬುದನ್ನು ನೀವು ವಿವೇಚಿಸುವವರಾಗಬೇಕೆಂತಲೂ ಹಾಗೂ ಕ್ರಿಸ್ತನು ಬರುವ ದಿನದಲ್ಲಿ ನೀವು ಸರಳರಾಗಿಯೂ, ನಿರ್ಮಲರಾಗಿಯೂ,


ಆದಕಾರಣ ಪ್ರಿಯರೇ, ನೀವು ಇವುಗಳನ್ನು ಎದುರುನೋಡುವವರಾಗಿರುವುದರಿಂದ ಆತನೊಂದಿಗೆ ಸಮಾಧಾನದಲ್ಲಿದ್ದು ನಿರ್ಮಲರಾಗಿಯೂ ನಿರ್ದೋಷಿಗಳಾಗಿಯೂ ಆತನಿಗೆ ಕಾಣಿಸಿಕೊಳ್ಳುವಂತೆ ಪ್ರಯತ್ನಿಸಿರಿ.


ಮತ್ತೊಬ್ಬನ ಸೇವಕನ ವಿಷಯವಾಗಿ ತೀರ್ಪುಮಾಡುವುದಕ್ಕೆ ನೀನು ಯಾರು? ಅವನು ನಿರ್ದೋಷಿಯಾಗಿ ನಿಂತರೂ, ದೋಷಿಯಾಗಿ ಬಿದ್ದರೂ ಅದು ಅವನ ಯಜಮಾನನಿಗೇ ಸೇರಿದ್ದು. ಅವನು ನಿರ್ದೊಷಿಯಾಗಿ ನಿಲ್ಲಿಸಲ್ಪಡುವನು; ಅವನನ್ನು ನಿಲ್ಲಿಸುವುದಕ್ಕೆ ಕರ್ತನು ಶಕ್ತನಾಗಿದ್ದಾನೆ.


ಯೆಹೋವನು ನ್ಯಾಯವನ್ನು ಮೆಚ್ಚುವವನು; ತನ್ನ ಭಕ್ತರನ್ನು ಎಂದಿಗೂ ಕೈಬಿಡುವವನಲ್ಲ. ಅವರು ಸದಾಕಾಲವೂ ಸುರಕ್ಷಿತರಾಗಿರುವರು. ದುಷ್ಟರ ಸಂತತಿ ತೆಗೆದುಹಾಕಲ್ಪಡುವುದು.


ಆದರೂ ಕರ್ತನ ದಿನವು ಕಳ್ಳನು ಬರುವಂತೆ ಬರುತ್ತದೆ. ಆ ದಿನದಲ್ಲಿ ಆಕಾಶ ಮಂಡಲವು ಮಹಾಘೋಷದಿಂದ ಇಲ್ಲದೆ ಹೋಗುವವು. ಮೂಲಧಾತುಗಳು ಉರಿದು ಲಯವಾಗಿ ಹೋಗುವವು. ಭೂಮಿಯೂ ಅದರಲ್ಲಿರುವ ಕೆಲಸಗಳೂ ಸುಟ್ಟು ಹೋಗುವವು.


ನಮ್ಮನ್ನು ಅಭಿಷೇಕಿಸಿ ಕ್ರಿಸ್ತನ ಅನ್ಯೋನ್ಯತೆಯಲ್ಲಿ ಸೇರಿಸಿ ನಮ್ಮನ್ನು ನಿಮ್ಮೊಂದಿಗೆ ಸ್ಥಿರಪಡಿಸುವವನು ದೇವರೇ.


ದುಷ್ಟರ ತೋಳುಗಳು ಮುರಿದುಹೋಗುವವು; ನೀತಿವಂತರನ್ನು ಯೆಹೋವನೇ ಉದ್ಧರಿಸುವನು.


ನೀವು ನಮ್ಮನ್ನು ಸ್ವಲ್ಪಮಟ್ಟಿಗೆ ಅರ್ಥಮಾಡಿಕೊಂಡಿದ್ದೀರಿ ಕಡೆ ವರೆಗೂ ಒಪ್ಪಿಕೊಳ್ಳುವಿರಿ ಎಂಬುದಾಗಿಯೂ, ನಮ್ಮ ಕರ್ತನಾದ ಯೇಸುವಿನ ಪ್ರತ್ಯಕ್ಷತೆಯ ದಿನದಲ್ಲಿ ನೀವು ನಮ್ಮ ಅಭಿಮಾನಕ್ಕೆ ಕಾರಣವಾದಂತೆ ನಾವು ನಿಮ್ಮ ಅಭಿಮಾನಕ್ಕೆ ಕಾರಣರಾಗಿರುವೆವು ಎಂದು ನೀವು ಒಪ್ಪಿಕೊಳ್ಳುತ್ತೀರಿ.


ಅವನನ್ನು ಸೈತಾನನಿಗೆ ಒಪ್ಪಿಸಿರಿ ಯಾಕೆಂದರೆ ಕರ್ತನಾದ ಯೇಸುವಿನ ಪ್ರತ್ಯಕ್ಷತೆಯ ದಿನದಲ್ಲಿ ಅಂಥವನ ಆತ್ಮವು ರಕ್ಷಣೆ ಹೊಂದುವುದಕ್ಕಾಗಿ ಅವನ ಶರೀರಭಾವವು ನಾಶವಾಗುವಂತೆ ಕರ್ತನಾದ ಯೇಸುವಿನ ಶಕ್ತಿಯಿಂದ ತೀರ್ಪು ಮಾಡಿದ್ದೇನೆ.


ಏಕೆಂದರೆ ಮಿಂಚು ಮಿಂಚುತ್ತಾ ಆಕಾಶದಲ್ಲಿ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೆ ಹೇಗೆ ಹೊಳೆಯುವುದೋ ಹಾಗೆಯೇ ಮನುಷ್ಯಕುಮಾರನು ತನ್ನ ದಿನದಲ್ಲಿರುವನು.


ಮನುಷ್ಯಕುಮಾರನು ಪ್ರತ್ಯಕ್ಷವಾಗುವ ದಿನದಲ್ಲಿ ಅದೇ ರೀತಿಯಾಗಿ ಇರುವುದು.


ದೇವರ ಮಕ್ಕಳ ಮಹಿಮೆಯು ಯಾವಾಗ ಪ್ರತ್ಯಕ್ಷವಾದೀತೆಂದು ಸೃಷ್ಟಿಯು ಬಹು ಕಾತುರದಿಂದ ಎದುರು ನೋಡುತ್ತಿದೆ.


ಅವನವನ ಕೆಲಸವು ಪ್ರಕಟವಾಗುವುದು. ಕ್ರಿಸ್ತನು ಬರುವ ದಿನವು ಬೆಂಕಿಯೊಡನೆ ಉದಯವಾಗಿ ಆ ಕೆಲಸವನ್ನು ಸ್ಪಷ್ಟವಾಗಿ ತೋರಿಸುವುದು. ಅವನವನ ಕೆಲಸವೆಂಥದೆಂಬುದನ್ನು ಆ ಬೆಂಕಿ ಶೋಧಿಸುವುದು.


ನೀವು ನಮ್ಮ ಪತ್ರಿಕೆಗಳಲ್ಲಿ ಓದಿ ಅರ್ಥಮಾಡಿಕೊಂಡ ಸಂಗತಿಗಳನ್ನೇ ಹೊರತು ಬೇರೆ ಯಾವುದನ್ನು ನಾವು ನಿಮಗೆ ಬರೆಯಲಿಲ್ಲ.


ಆತನಲ್ಲಿ ಬೇರೂರಿಕೊಂಡು, ಆತನಲ್ಲಿ ಕಟ್ಟಲ್ಪಟ್ಟು ಮತ್ತು ನಿಮಗೆ ಬೋಧಿಸಲ್ಪಟ್ಟ ಉಪದೇಶದ ಪ್ರಕಾರವೇ ಕ್ರಿಸ್ತ ನಂಬಿಕೆಯಲ್ಲಿ ನೆಲೆಗೊಂಡು ದೇವರಿಗೆ ಹೆಚ್ಚೆಚ್ಚಾಗಿ ಸ್ತೋತ್ರ ಸಲ್ಲಿಸುವವರಾಗಿರಿ.


ರಾತ್ರಿ ಕಳ್ಳನು ಹೇಗೆ ಬರುತ್ತಾನೋ ಹಾಗೆಯೇ ಕರ್ತನ ದಿನವು ಬರುವುದೆಂದು ನೀವೇ ಚೆನ್ನಾಗಿ ತಿಳಿದಿದ್ದೀರಲ್ಲಾ.


ಕರ್ತನ ಆಗಮನದ ದಿನವು ಈಗಾಗಲೇ ಬಂದಿದೆಯೆಂಬುದಾಗಿ ಆತ್ಮದಿಂದಾಗಲಿ ಮಾತಿನಿಂದಾಗಲಿ ಅಥವಾ ನಮ್ಮ ಪತ್ರದಿಂದಾಗಲಿ ನೀವು ಬೇಗನೆ ಮನದಲ್ಲಿ ಚಂಚಲರಾಗಿ ಕಳವಳಪಡಬೇಡಿರಿ.


ಅದರ ನಿಮಿತ್ತದಿಂದಲೇ ಈ ಕಷ್ಟಗಳನ್ನು ಅನುಭವಿಸುತ್ತಾ ಇದ್ದೇನೆ. ಆದರೂ ನಾನು ನಾಚಿಕೆಪಡುವುದಿಲ್ಲ. ನಾನು ನಂಬಿರುವಾತನನ್ನು ಬಲ್ಲೆನು. ಆತನು ನನಗೆ ಒಪ್ಪಿಸಿಕೊಟ್ಟಿರುವುದನ್ನು ಆತನು ಆ ದಿನದವರೆಗೆ ಕಾಪಾಡುವುದಕ್ಕೆ ಶಕ್ತನಾಗಿದ್ದಾನೆಂದು ದೃಢವಾಗಿ ನಂಬಿದ್ದೇನೆ.


ಅವನು ಆ ದಿನದಲ್ಲಿ ಕರ್ತನಿಂದ ಕರುಣೆಯನ್ನು ಹೊಂದುವಂತೆ ಕರ್ತನು ಅವನಿಗೆ ಅನುಗ್ರಹಿಸಲಿ. ಎಫೆಸದಲ್ಲಿ ಅವನು ನನಗೆ ಎಷ್ಟೋ ಉಪಚಾರಮಾಡಿದನೆಂಬದು ನಿನಗೆ ಚೆನ್ನಾಗಿ ಗೊತ್ತಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು