Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 10:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅವರಿಗೆ ಸಂಭವಿಸಿದ ಈ ಸಂಗತಿಗಳು ನಿದರ್ಶನರೂಪವಾಗಿವೆ. ಮತ್ತು ಯುಗಾಂತ್ಯಕ್ಕೆ ಬಂದಿರುವವರಾದ ನಮಗೆ ಇದು ಎಚ್ಚರಿಕೆಯ ಮಾತುಗಳಾಗಿ ಬರೆದಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಇದೆಲ್ಲ ಅವರಿಗೆ ಸಂಭವಿಸಿದುದು ಇತರರಿಗೆ ನಿದರ್ಶನವಾಗಿರಲೆಂದು. ಇವುಗಳನ್ನು ಬರೆದಿಟ್ಟಿರುವುದು, ಯುಗಾಂತ್ಯಕ್ಕೆ ಬಂದಿರುವ ನಮಗೆ ಮುನ್ನೆಚ್ಚರಿಕೆಯಾಗಿರಲೆಂದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅವರಿಗೆ ಸಂಭವಿಸಿದ ಈ ಸಂಗತಿಗಳು ನಿದರ್ಶನರೂಪವಾಗಿವೆ; ಮತ್ತು ಯುಗಾಂತ್ಯಕ್ಕೆ ಬಂದಿರುವವರಾದ ನಮಗೆ ಬುದ್ಧಿವಾದಗಳಾಗಿ ಬರೆದವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆ ಜನರಿಗೆ ಸಂಭವಿಸಿದ ಸಂಗತಿಗಳು ನಮಗೆ ನಿದರ್ಶನಗಳಾಗಿವೆ. ನಮ್ಮನ್ನು ಎಚ್ಚರಿಸುವುದಕ್ಕಾಗಿ ಆ ಸಂಗತಿಗಳನ್ನು ಬರೆದಿಡಲಾಗಿದೆ. ಈಗ ನಾವು ಯುಗದ ಅಂತಿಮ ಕಾಲದಲ್ಲಿ ಜೀವಿಸುತ್ತಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆ ಮನುಷ್ಯರಿಗೆ ಸಂಭವಿಸಿದ ಈ ಸಂಗತಿಗಳು ನಿದರ್ಶನಗಳಾಗಿವೆ, ಯುಗಾಂತ್ಯಕ್ಕೆ ಬಂದಿರುವ ನಮಗೆ ಎಚ್ಚರಿಕೆಯ ಮಾತುಗಳಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ದುಸ್ರ್ಯಾಕ್ನಿ ಎಕ್ ಉದಾರನ್ ಹೊವ್ಕ್ ಸಾಟ್ನಿ ಹೆ ಸಗ್ಳೆ ತೆಂಕಾ ಘಡ್ಲೆ; ಜಗಾಚ್ಯಾ ಕಾಲಾಚ್ಯಾ ಆಕ್ರಿಕ್ ಪಾವಲ್ಲ್ಯಾ ಅಮ್ಕಾ ಉಶ್ಯಾರ್ಕಿ ಸಾಂಗುಸಾಟ್ನಿ ಹೆ ಸಗ್ಳೆ ಲಿವಲ್ಲೆ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 10:11
17 ತಿಳಿವುಗಳ ಹೋಲಿಕೆ  

ಈ ಮೊದಲು ಬರೆದದ್ದೆಲ್ಲಾ ನಮ್ಮನ್ನು ಉಪದೇಶಿಸುವುದಕ್ಕಾಗಿ ಬರೆಯಲ್ಪಟ್ಟಿತು. ನಾವು ಓದಿ ಸ್ಥಿರಚಿತ್ತವನ್ನೂ, ಆದರಣೆಯನ್ನೂ ಹೊಂದಿ ರಕ್ಷಣೆಯ ನಿರೀಕ್ಷೆಯುಳ್ಳವರಾಗಿರುವಂತೆ ಆ ಶಾಸ್ತ್ರಗಳು ಬರೆಯಲ್ಪಟ್ಟವು.


ಈಗಿನ ಕಾಲವು ನಿದ್ದೆಯಿಂದ ಎಚ್ಚರವಾಗಿರತಕ್ಕ ಕಾಲವೆಂದು ಅರಿತು ಇದನ್ನೆಲ್ಲಾ ಮಾಡಿರಿ. ನಾವು ಕ್ರಿಸ್ತನನ್ನು ಮೊದಲು ನಂಬಿದ ಕಾಲದಲ್ಲಿ ಇದ್ದುದಕ್ಕಿಂತ ಈಗ ನಮ್ಮ ವಿಮೋಚನೆಯ ಕಾಲವು ಹತ್ತಿರವಾಗಿದೆ.


ಪ್ರಿಯ ಮಕ್ಕಳೇ, ಇದು ಅಂತ್ಯ ಕಾಲವಾಗಿದೆ. ಕ್ರಿಸ್ತವಿರೋಧಿಯು ಬರುತ್ತಾನೆಂದು ನೀವು ಕೇಳಿದ್ದೀರಿ. ಈಗಾಗಲೇ ಕ್ರಿಸ್ತವಿರೋಧಿಗಳು ಅನೇಕರಿದ್ದಾರೆ. ಆದ್ದರಿಂದ ಇದು ಅಂತ್ಯ ಕಾಲವಾಗಿದೆ ಎಂದು ನಾವು ಬಲ್ಲವರಾಗಿದ್ದೇವೆ.


ಖಂಡಿತವಾಗಿ ನಮಗೋಸ್ಕರವಾಗಿಯೇ ಆತನು ಹೇಳುತ್ತಾನಲ್ಲವೇ? ಹೌದು, ನಮಗೋಸ್ಕರ ಬರೆಯಲ್ಪಟ್ಟಿದೆ. ಉಳುವವನು ಬೆಳೆಯಲ್ಲಿ ತನಗೆ ಪಾಲು ದೊರಕುವ ನಿರೀಕ್ಷೆಯಿಂದ ಉಳಬೇಕು, ಹಾಗೂ ಒಕ್ಕುವವನು ತನಗೆ ಸುಗ್ಗಿಯಲ್ಲಿ ಪಾಲು ದೊರಕುವುದೆಂದು ನಿರೀಕ್ಷೆಯಲ್ಲಿ ಒಕ್ಕಬೇಕು.


ನಿಮ್ಮ ಸೈರಣೆಯು ಎಲ್ಲಾ ಮನುಷ್ಯರಿಗೆ ಗೊತ್ತಾಗಲಿ, ಕರ್ತನು ಹತ್ತಿರವಾಗಿದ್ದಾನೆ.


ಆದರೆ ಅದು ಅವನ ಲೆಕ್ಕಕ್ಕೆ ನೀತಿಯೆಂದು ಎಣಿಸಲ್ಪಟ್ಟಿತೆಂಬುದು ಅವನಿಗೋಸ್ಕರ ಮಾತ್ರವಲ್ಲದೆ ನಮಗೋಸ್ಕರವೂ ಬರೆದಿರುವುದು.


ಸಭೆಯಾಗಿ ಸೇರುವ ರೂಢಿಯನ್ನು ಕೆಲವರು ಬಿಟ್ಟಂತೆ ನಾವು ಬಿಟ್ಟು ಬಿಡದೆ, ಆ ದಿನವು ಸಮೀಪಿಸುತ್ತಾ ಬರುತ್ತದೆಂದು ನೀವು ತಿಳಿದುಕೊಂಡಿರುವುದರಿಂದ ಒಬ್ಬರನ್ನೊಬ್ಬರು ಮತ್ತಷ್ಟು ಹೆಚ್ಚಾಗಿಯೇ ಪ್ರೋತ್ಸಾಹಿಸುತ್ತಿರೋಣ.


“ಬರುವಾತನು ಇನ್ನು ಸ್ವಲ್ಪ ಕಾಲದಲ್ಲಿ ಬರುವನು ತಡಮಾಡುವುದಿಲ್ಲ.


ಸಹೋದರರೇ, ನಾನು ಹೇಳುವುದೇನಂದರೆ, ಸಮಯವು ಅತಿಕಡಿಮೆಯಿರುವುದ್ದರಿಂದ ಇನ್ನು ಮೇಲೆ ಹೆಂಡತಿಯುಳ್ಳವರು ಹೆಂಡತಿಯಿಲ್ಲದವರಂತೆಯೂ,


ಇದು ಮುಂದಣ ಸಂತಾನದವರಿಗೋಸ್ಕರ ಶಾಸನವಾಗಿರಲಿ, ಮುಂದೆ ಹುಟ್ಟುವ ಪ್ರಜೆಯು ಯೆಹೋವನನ್ನು ಕೊಂಡಾಡುತ್ತಾ,


“ನಾನು ಕೋಪದಿಂದಲೂ, ರೋಷದಿಂದಲೂ, ಕಠಿಣವಾದ ಖಂಡನೆಯಿಂದಲೂ, ನಿನಗೆ ಮಾಡುವ ದಂಡನೆಗಳು ಸುತ್ತಲಿನ ಜನಾಂಗಗಳ ದೂಷಣೆಗೂ, ಪರಿಹಾಸ್ಯಗಳಿಗೂ, ಬುದ್ಧಿವಾದಗಳಿಗೂ ಆಸ್ಪದವಾಗುವವು; ಇದು ಯೆಹೋವನಾದ ನನ್ನ ನುಡಿ.


ಕಳೆಯೆಂದರೆ ದುಷ್ಟನ ಮಕ್ಕಳು. ಅದನ್ನು ಬಿತ್ತುವ ವೈರಿ ಎಂದರೆ ಸೈತಾನನು. ಸುಗ್ಗಿಯ ಕಾಲವೆಂದರೆ ಯುಗದ ಸಮಾಪ್ತಿ. ಕೊಯ್ಯುವವರು ಅಂದರೆ ದೇವದೂತರು.


ಹೀಗಿರಲಾಗಿ ಹೇಗೆ ಕಳೆಯನ್ನು ಆರಿಸಿ ತೆಗೆದು ಸುಟ್ಟುಬಿಡುತ್ತಾರೋ ಹಾಗೆಯೇ ಯುಗದ ಸಮಾಪ್ತಿಯಲ್ಲಿ ಸಂಭವಿಸುವುದು.


ಇರುಳು ಬಹಳ ಮಟ್ಟಿಗೆ ಕಳೆಯಿತು; ಹಗಲು ಸಮೀಪವಾಯಿತು. ಕತ್ತಲೆಗೆ ಅನುಗುಣವಾದ ಕೃತ್ಯಗಳನ್ನು ಬಿಟ್ಟು ಬೆಳಕಿಗೆ ಅನುಗುಣವಾದ ರಕ್ಷಣೆಯ ಆಯುಧಗಳನ್ನು ಧರಿಸಿಕೊಳ್ಳೋಣ.


ಅವರು ಕೆಟ್ಟ ವಿಷಯಗಳನ್ನು ಮೋಹಿಸದಂತೆ ನಾವು ಮೋಹಿಸುವವರಾಗಬಾರದೆಂಬುದಕ್ಕಾಗಿ ಈ ಸಂಗತಿಗಳು ನಮಗೆ ನಿದರ್ಶನಗಳಾಗಿವೆ.


ಈ ಸಂಗತಿಗಳು ಹೋಲಿಕೆಗಳಾಗಿವೆ. ಹೇಗೆಂದರೆ ಆ ಇಬ್ಬರು ಸ್ತ್ರೀಯರು ಎರಡು ಒಡಂಬಡಿಕೆಗಳೇ, ಒಂದು ಒಡಂಬಡಿಕೆಯು ಸೀನಾಯಿ ಪರ್ವತದಿಂದ ಉಂಟಾಗಿ ದಾಸತ್ವದಲ್ಲಿರಬೇಕಾದ ಮಕ್ಕಳನ್ನು ಹೆರುವಂಥದು, ಅದೇ ಹಾಗರಳು.


ಆ ರಾತ್ರಿಯೂ ಅವರು ತಂದೆಗೆ ದ್ರಾಕ್ಷಾರಸವನ್ನು ಕುಡಿಸಿದ ಮೇಲೆ ಕಿರಿಯ ಮಗಳು ಅವನ ಸಂಗಡ ಮಲಗಿಕೊಂಡಳು; ಅವಳು ಯಾವಾಗ ಮಲಗಿದಳೋ ಯಾವಾಗ ಎದ್ದು ಹೋದಳೋ ಅವನಿಗೇನೂ ತಿಳಿಯಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು