Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 10:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವರೆಲ್ಲರೂ ಆತ್ಮೀಕವಾದ ಒಂದೇ ಆಹಾರವನ್ನು ತಿಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಎಲ್ಲರೂ ಒಂದೇ ದೈವಿಕ ಪಾನೀಯವನ್ನು ಕುಡಿದರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅವರೆಲ್ಲರೂ ದೈವಿಕವಾದ ಒಂದೇ ಆಹಾರವನ್ನು ತಿಂದರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಒಂದೇ ಆತ್ಮಿಕ ಆಹಾರವನ್ನು ಊಟ ಮಾಡಿದರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅವರೆಲ್ಲರೂ ಒಂದೇ ಆತ್ಮಿಕವಾದ ಆಹಾರವನ್ನು ಉಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ತೆನಿ ಸಗ್ಳ್ಯಾನಿ ಎಕುಚ್ ಆತ್ಮಿಕ್ ಖಾನ್ ಖಾಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 10:3
9 ತಿಳಿವುಗಳ ಹೋಲಿಕೆ  

ಮನುಷ್ಯರು ಆಹಾರದಿಂದ ಮಾತ್ರವಲ್ಲ, ಯೆಹೋವನ ಬಾಯಿಂದ ಹೊರಡುವ ಪ್ರತಿಯೊಂದು ನುಡಿಯಿಂದಲೂ ಬದುಕುತ್ತಾರೆ ಎಂಬುದು ನಿಮಗೆ ತಿಳಿಯುವಂತೆ ಆತನು ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ, ಹಸಿವೆಯಿಂದ ಬಳಲಿಸಿ, ನಿಮಗೂ, ನಿಮ್ಮ ಪೂರ್ವಿಕರಿಗೂ ಗೊತ್ತಿಲ್ಲದ ಮನ್ನವನ್ನು ಕೊಟ್ಟು ಪೋಷಿಸಿದನು.


ಅವರಿಗೆ ಹಸಿವಾದಾಗ ಪರಲೋಕದಿಂದ ಆಹಾರವನ್ನು ಕೊಟ್ಟು, ಬಾಯಾರಿದಾಗ ಬಂಡೆಯೊಳಗಿಂದ ನೀರನ್ನು ಬರಮಾಡಿ, ಪ್ರಮಾಣಪೂರ್ವಕವಾಗಿ ವಾಗ್ದಾನಮಾಡಿದ ದೇಶದಲ್ಲಿ ನೀವು ಸೇರಿ ಅದನ್ನು ಸ್ವಾಧೀನಮಾಡಿಕೊಳ್ಳಿರಿ ಎಂದು ಅವರಿಗೆ ಆಜ್ಞಾಪಿಸಿದೆ.


ಅವರನ್ನು ಉಪದೇಶಿಸಲು ನೀನು ನಿನ್ನ ಒಳ್ಳೆಯ ಆತ್ಮನನ್ನು ಕೊಟ್ಟೆ. ಅವರ ಬಾಯಿಂದ ಮನ್ನವನ್ನು ಹಿಂದೆಗೆಯಲಿಲ್ಲ. ಬಾಯಾರಿದಾಗ ಅವರಿಗೆ ನೀರನ್ನು ಕೊಟ್ಟೆ.


ಇಸ್ರಾಯೇಲರು ತಾವು ವಾಸಮಾಡಲಿರುವ ಪ್ರದೇಶಕ್ಕೆ ಬರುವವರೆಗೆ ಅಂದರೆ ಕಾನಾನ್ ದೇಶವನ್ನು ಬಂದು ಸೇರುವವರೆಗೆ ನಲ್ವತ್ತು ವರ್ಷ ಮನ್ನವನ್ನೇ ಊಟಮಾಡಿದರು.


ಆಗ ಯೆಹೋವನು ಮೋಶೆಗೆ, “ನಾನು ಆಕಾಶದಿಂದ ನಿಮಗಾಗಿ ಆಹಾರವನ್ನು ಸುರಿಸುತ್ತೇನೆ. ಜನರು ಪ್ರತಿದಿನವೂ ಹೊರಗೆ ಹೋಗಿ ಆ ದಿನಕ್ಕೆ ಬೇಕಾಗುವಷ್ಟನ್ನು ಮಾತ್ರ ಕೂಡಿಸಿಕೊಳ್ಳಬೇಕು. ಇದರಿಂದ ಅವರು ನನ್ನ ಆಜ್ಞೆಗಳನ್ನು ಅನುಸರಿಸಿ ನಡೆಯುವರೋ ಇಲ್ಲವೋ ಎಂದು ಪರೀಕ್ಷಿಸುತ್ತೇನೆ.


ಅವರು ಬೇಡಿಕೊಳ್ಳಲು ಲಾವಕ್ಕಿಗಳನ್ನು ಬರಮಾಡಿದನು; ದಿವ್ಯ ಆಹಾರದಿಂದ ಅವರನ್ನು ತೃಪ್ತಿಗೊಳಿಸಿದನು.


ಇಸ್ರಾಯೇಲರು ಅದನ್ನು ಕಂಡು ಒಬ್ಬರಿಗೊಬ್ಬರು, “ಇದೇನಿರಬಹುದು?” ಎಂದು ಅಂದುಕೊಂಡರು. ಅದು ಏನೆಂದು ಅವರಿಗೆ ತಿಳಿಯಲಿಲ್ಲ. ಮೋಶೆ ಅವರಿಗೆ, “ಇದು ಯೆಹೋವನು ನಿಮಗಾಗಿ ತಿನ್ನುವುದಕ್ಕೆ ಕೊಟ್ಟಿರುವ ರೊಟ್ಟಿಯಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು