Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 10:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಹೀಗಿರಲಾಗಿ ನೀವು ತಿಂದರೂ, ಕುಡಿದರೂ, ಇನ್ನೇನು ಮಾಡಿದರೂ ಎಲ್ಲವನ್ನೂ ದೇವರ ಮಹಿಮೆಗಾಗಿ ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಅದಕ್ಕೆ ನನ್ನ ಉತ್ತರ ಇದು: ನೀವು ಉಂಡರೂ ಕುಡಿದರೂ ಏನು ಮಾಡಿದರೂ ಎಲ್ಲವನ್ನೂ ದೇವರ ಮಹಿಮೆಗಾಗಿ ಮಾಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಹೀಗಿರಲಾಗಿ ನೀವು ಉಂಡರೂ ಕುಡಿದರೂ ಇನ್ನೇನು ಮಾಡಿದರೂ ಎಲ್ಲವನ್ನೂ ದೇವರ ಘನತೆಗಾಗಿ ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಆದ್ದರಿಂದ ನೀವು ತಿಂದರೂ ಕುಡಿದರೂ ಏನೇ ಮಾಡಿದರೂ ದೇವರ ಮಹಿಮೆಗಾಗಿ ಅದನ್ನು ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಆದ್ದರಿಂದ ನೀವು ಊಟಮಾಡಿದರೂ ಪಾನೀಯ ಸೇವಿಸಿದರೂ ಯಾವುದನ್ನೇ ಮಾಡಿದರೂ ಎಲ್ಲವನ್ನೂ ದೇವರ ಮಹಿಮೆಗಾಗಿ ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 ಅತ್ತಾ ಮಾಜೊ ಜವಾಬ್ ಎವ್ಡೊಚ್: ತುಮಿ ಖಾತ್ಯಾಶಿ, ನಾ ಹೊಲ್ಯಾರ್ ಫಿತ್ಯಾಶಿ, ನಾ ಹೊಲ್ಯಾರ್ ಕಾಯ್ಬಿ ಕರ್ತ್ಯಾಶಿ ತೆ ಸಗ್ಳೆ ದೆವಾಚ್ಯಾ ಮಹಿಮೆಸಾಟ್ನಿ ಕರಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 10:31
11 ತಿಳಿವುಗಳ ಹೋಲಿಕೆ  

ನೀವು ನುಡಿಯಿಂದಾಗಲಿ ನಡೆಯಿಂದಾಗಲಿ ಏನೇ ಮಾಡಿದರೂ ಅದೆಲ್ಲವನ್ನೂ ಕರ್ತನಾದ ಯೇಸುವಿನ ಹೆಸರಿನಲ್ಲಿಯೇ ಮಾಡಿರಿ ಮತ್ತು ತಂದೆಯಾದ ದೇವರಿಗೆ ಆತನ ಮೂಲಕ ಕೃತಜ್ಞತಾಸ್ತುತ್ತಿಯನ್ನು ಸಲ್ಲಿಸಿರಿ.


ನೀವು ಯಾವ ಕೆಲಸವನ್ನು ಮಾಡಿದರೋ ಅದನ್ನು ಮನುಷ್ಯರಿಗೋಸ್ಕರವೆಂದು ಮಾಡದೇ ಕರ್ತನಿಗೋಸ್ಕರವೇ ಎಂದು ಮನಃಪೂರ್ವಕವಾಗಿ ಮಾಡಿರಿ.


ಒಬ್ಬನು ಬೋಧಿಸುವವನಾದರೆ ದೈವೋಕ್ತಿಗಳನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸೇವೆ ಮಾಡುವವನಾದರೆ ದೇವರು ಕೊಡುವ ಶಕ್ತಿಗನುಗುಣವಾಗಿ ಮಾಡಲಿ. ಇವೆಲ್ಲವುಗಳಿಂದ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಉಂಟಾಗುವುದು. ಯೇಸು ಕ್ರಿಸ್ತನಿಗೆ ಅಧಿಪತ್ಯವೂ ಮತ್ತು ಘನವೂ ಯುಗಯುಗಾಂತರಗಳಲ್ಲಿಯೂ ಇರುವವು ಆಮೆನ್.


ನಿಮ್ಮ ದೇವರಾದ ಯೆಹೋವನು ಆಯ್ದುಕೊಳ್ಳುವ ಸ್ಥಳದಲ್ಲೇ ಆತನ ಸನ್ನಿಧಿಯಲ್ಲಿ ಅವುಗಳನ್ನು ಊಟಮಾಡಬೇಕು. ನಿಮ್ಮ ಎಲ್ಲಾ ಪ್ರಯತ್ನಗಳು ಕೈಗೂಡಿದ್ದಕ್ಕಾಗಿ ನೀವು ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸಂತೋಷದಿಂದಿದ್ದು, ನೀವೂ, ನಿಮ್ಮ ಗಂಡು ಹೆಣ್ಣು ಮಕ್ಕಳೂ, ಆಳುಗಳೂ ಮತ್ತು ನಿಮ್ಮ ಊರಿನಲ್ಲಿರುವ ಲೇವಿಯರೂ ಇಂಥವುಗಳನ್ನು ಊಟಮಾಡಬೇಕು.


ಅಲ್ಲಿಯೇ ಆತನ ಸನ್ನಿಧಿಯಲ್ಲಿ ಊಟಮಾಡಿ, ನಿಮ್ಮ ದೇವರಾದ ಯೆಹೋವನು ನಿಮ್ಮ ಪ್ರಯತ್ನಗಳನ್ನು ಕೈಗೂಡುವಂತೆ ಮಾಡಿದ್ದಕ್ಕಾಗಿ ನೀವೂ ಮತ್ತು ನಿಮ್ಮ ಮನೆಗಳವರೂ ಸಂತೋಷದಿಂದಿರಬೇಕು.


ಅಲ್ಲಿ ನೀವೂ, ನಿಮ್ಮ ಗಂಡು ಹೆಣ್ಣು ಮಕ್ಕಳೂ, ದಾಸ ದಾಸಿಯರೂ ಮತ್ತು ನಿಮ್ಮೊಡನೆ ಸ್ವತ್ತನ್ನು ಹೊಂದದೆ ಇರುವ ನಿಮ್ಮ ಊರಿನ ಲೇವಿಯರೂ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸಂತೋಷವಾಗಿರಬೇಕು.


ಹೇಗೂ ಒಳಗಿರುವಂಥದನ್ನು ದಾನಕೊಡಿರಿ, ಆಗ ಸಕಲವೂ ನಿಮಗೆ ಶುದ್ಧವಾಗಿರುವುದು.


ಅದರಂತೆ ಮುತೈದೆಗೂ, ಕನ್ನಿಕೆಗೂ ವ್ಯತ್ಯಾಸವುಂಟು. ಮದುವೆಯಾಗದವಳು ತಾನು ದೇಹಾತ್ಮಗಳಲ್ಲಿ ಹೇಗೆ ಪವಿತ್ರಳಾಗಿರಬೇಕೆಂದು ಕರ್ತನ ವಿಷಯಗಳನ್ನು ಕುರಿತು ಚಿಂತಿಸುತ್ತಾಳೆ. ಆದರೆ ಮದುವೆಯಾದವಳು ತನ್ನ ಗಂಡನನ್ನು ಹೇಗೆ ಮೆಚ್ಚಿಸಬೇಕೆಂದು ಪ್ರಪಂಚದ ವಿಷಯಗಳನ್ನು ಕುರಿತು ಚಿಂತಿಸುತ್ತಾಳೆ.


ಅಲ್ಲದೆ ಯೆರೂಸಲೇಮಿನಲ್ಲಿಯೂ, ಯೆಹೂದದಲ್ಲಿಯೂ ಇರುವ ಸಕಲ ಪಾತ್ರೆಗಳು ಸೇನಾಧೀಶ್ವರ ಯೆಹೋವನಿಗೆ ಮೀಸಲಾಗಿರುವವು; ಯಜ್ಞಮಾಡುವವರೆಲ್ಲರು ಬಂದು ಅವುಗಳನ್ನು ತೆಗೆದುಕೊಂಡು ಆ ಪಾತ್ರೆಗಳಲ್ಲಿ ಬೇಯಿಸುವರು; ಆ ದಿನದಲ್ಲಿ ಸೇನಾಧೀಶ್ವರ ಯೆಹೋವನ ಆಲಯದೊಳಗೆ ಯಾವ ವ್ಯಾಪಾರಿಯೂ ಇರುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು