Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 11:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಭೋಜನ ಮಾಡುವಲ್ಲಿ ಪ್ರತಿಯೊಬ್ಬನು ತಾನು ತಂದದ್ದನ್ನು ಮತ್ತೊಬ್ಬರಿಗಿಂತ ಮುಂದಾಗಿ ಊಟಮಾಡುತ್ತಾನೆ. ಹೀಗೆ ಒಬ್ಬನು ಹಸಿದಿರುತ್ತಾನೆ ಮತ್ತೊಬ್ಬನು ಕುಡಿದು ಮತ್ತನಾಗಿರುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಏಕೆಂದರೆ, ಭೋಜನ ಸಮಯದಲ್ಲಿ ಒಬ್ಬೊಬ್ಬನೂ ತಾನು ತಂದದ್ದನ್ನು ತಿನ್ನಲು ಇತರರಿಗಿಂತ ಮುಂಚಿತವಾಗಿಯೇ ಕುಳಿತುಕೊಳ್ಳುತ್ತಾನೆ. ಒಬ್ಬನು ಹಸಿದಿರುತ್ತಾನೆ; ಇನ್ನೊಬ್ಬನು ಕುಡಿದು ಮತ್ತನಾಗುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಭೋಜನವಾಗುವಲ್ಲಿ ಪ್ರತಿಯೊಬ್ಬನು ತಾನು ತಂದದ್ದನ್ನು ಮತ್ತೊಬ್ಬರಿಗಿಂತ ಮುಂದಾಗಿ ಊಟಮಾಡುತ್ತಾನೆ; ಹೀಗೆ ಒಬ್ಬನು ಹಸಿದಿರುತ್ತಾನೆ, ಮತ್ತೊಬ್ಬನು ಕುಡಿದು ಮತ್ತನಾಗಿರುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಏಕೆಂದರೆ, ನೀವು ಊಟ ಮಾಡುವಾಗ, ಇತರರಿಗೋಸ್ಕರ ಕಾಯದೆ ಪ್ರತಿಯೊಬ್ಬರು ತಮ್ಮಷ್ಟಕ್ಕೆ ತಾವೇ ಊಟ ಮಾಡುತ್ತಾರೆ. ಕೆಲವು ಜನರಲ್ಲಿ ಊಟಮಾಡಲು ಸಾಕಷ್ಟು ಆಹಾರ ಇರುವುದಿಲ್ಲ. ಇನ್ನು ಕೆಲವರಲ್ಲಿ ತಿಂದು, ಕುಡಿದು ಮತ್ತರಾಗುವಷ್ಟು ಆಹಾರವಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಏಕೆಂದರೆ, ಭೋಜನ ಮಾಡುವಾಗ, ಪ್ರತಿಯೊಬ್ಬನು ಇತರರಿಗಾಗಿ ಕಾಯದೇ, ತನ್ನ ಭೋಜನವನ್ನು ಮುಂಚಿತವಾಗಿ ಆರಂಭಿಸುತ್ತಾನೆ. ಒಬ್ಬನು ಹಸಿದಿರುತ್ತಾನೆ, ಮತ್ತೊಬ್ಬನು ಕುಡಿದಿರುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಕಶ್ಯಾಕ್ ಮಟ್ಲ್ಯಾರ್ ಜೆವಾನ್ ಕರ್‍ತಲ್ಯಾಕ್ಡೆ ಎಕ್ಲೊ ಅನಿಎಕ್ಲ್ಯಾಕ್ ರಾಕಿ ನಸ್ತಾನಾ ಅಪ್ನಿ ಹಾನಲ್ಲೆ ಜೆವಾನ್ ಜವ್ಕ್ ಅವಸರ್ ಕರ್‍ತಾ, ಅಶೆ ಎಕ್ಲೊ ಉಪ್ಪಾಸಿ ರ್‍ಹಾತಾನಾ ಅನಿ ಎಕ್ಲೊ ಫಿವ್ನ್ ನಿಶೆತ್ ರ್‍ಹಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 11:21
7 ತಿಳಿವುಗಳ ಹೋಲಿಕೆ  

ಇವರು ಸಮುದ್ರದೊಳಗಿರುವ ಗುಪ್ತವಾದ ಬಂಡೆಗಳಂತಿದ್ದು, ನಿಮ್ಮ ಸ್ನೇಹಭೋಜನಗಳಲ್ಲಿ ಸೇರಿ ತಿಂದು ಕುಡಿಯುತ್ತಾರೆ. ನಿರ್ಭಯವಾಗಿ ಸ್ವಂತ ಹೊಟ್ಟೆಯನ್ನೇ ಪೋಷಿಸಿಕೊಳ್ಳುತ್ತಾರೆ. ಇವರು ಗಾಳಿಯಿಂದ ಬಡಿಸಿಕೊಂಡು ಹೋಗುವ ನೀರಿಲ್ಲದ ಮೋಡಗಳೂ, ಫಲಗಳನ್ನು ಬಿಡದ, ಸಂಪೂರ್ಣವಾಗಿ ಸತ್ತ, ಬೇರು ಸಹಿತ ಕಿತ್ತು ಬಿದ್ದ ಶರತ್ಕಾಲದ ಮರಗಳು.


ತಮ್ಮ ದುರ್ನೀತಿಗೆ ಸರಿಯಾದ ದುಷ್ಫಲವನ್ನು ಹೊಂದುವರು. ದುಂದುಗಾರಿಕೆಯಲ್ಲಿ ಹಗಲನ್ನು ಕಳೆಯುವುದೇ ಸುಖವೆಂದೆಣಿಸುತ್ತಾರೆ. ಇವರು ನಿಮ್ಮೊಂದಿಗೆ ಔತಣ ಮಾಡುತ್ತಿರುವಾಗ ವಂಚಕರಾಗಿದ್ದು ಉಂಡು ಕುಡಿದು ಕಳಂಕಕ್ಕೂ, ಅವಮಾನಕ್ಕೂ ಕಾರಣರಾಗಿದ್ದಾರೆ.


“ಎಲ್ಲರೂ ಉತ್ತಮವಾದ ದ್ರಾಕ್ಷಾರಸವನ್ನು ಮೊದಲು ಕೊಟ್ಟು ಅಮಲೇರಿದ ಮೇಲೆ ಸಾಧಾರಣವಾದ ದ್ರಾಕ್ಷಾರಸವನ್ನು ಕೊಡುತ್ತಾರೆ. ನೀನಾದರೋ ಉತ್ತಮವಾದ ದ್ರಾಕ್ಷಾರಸವನ್ನು ಇದುವರೆಗೂ ಇಟ್ಟುಕೊಂಡಿರುವೆ” ಎಂದನು.


ನೀವೆಲ್ಲರು ಸೇರಿಬರುವಾಗ ನೀವು ಮಾಡುವ ಭೋಜನವು ಕರ್ತನ ಭೋಜನವಲ್ಲ.


ಒಬ್ಬನು ಹಸಿದರೆ ಅವನು ಮನೆಯಲ್ಲೇ ಊಟಮಾಡಲಿ ನೀವು ಸೇರಿಬಂದದ್ದು ನ್ಯಾಯ ತೀರ್ಪಿಗೊಳಗಾಗುವುದಕ್ಕೆ ಕಾರಣವಾಗಬಾರದು. ಇನ್ನುಳಿದಿರುವ ಸಂಗತಿಗಳನ್ನು ನಾನು ಬಂದ ನಂತರ ಆದೇಶಿಸುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು