1 ಕೊರಿಂಥದವರಿಗೆ 11:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಊಟವಾದ ಮೇಲೆ ಆತನು ಅದೇ ರೀತಿಯಲ್ಲಿ ಪಾನಪಾತ್ರೆಯನ್ನು ತೆಗೆದುಕೊಂಡು, “ಈ ಪಾನಪಾತ್ರೆಯು ನನ್ನ ರಕ್ತದಿಂದ ಸ್ಥಾಪಿತವಾಗುವ ಹೊಸ ಒಡಂಬಡಿಕೆಯನ್ನು ಸೂಚಿಸುತ್ತದೆ. ನೀವು ಇದರಲ್ಲಿ ಪಾನಮಾಡುವಾಗೆಲೆಲ್ಲಾ ನನ್ನನ್ನು ನೆನಪುಮಾಡಿಕೊಳ್ಳುವುದಕ್ಕೋಸ್ಕರ ಇದನ್ನು ಪಾನಮಾಡಿರಿ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಅಂತೆಯೇ ಭೋಜನದ ಕೊನೆಯಲ್ಲಿ ಪಾನಪಾತ್ರೆಯನ್ನು ತೆಗೆದುಕೊಂಡು, “ಈ ಪಾತ್ರೆ ನನ್ನ ರಕ್ತದಿಂದ ಮುದ್ರಿತವಾದ ಹೊಸ ಒಡಂಬಡಿಕೆ; ಇದನ್ನು ನೀವು ಪಾನಮಾಡುವಾಗಲೆಲ್ಲಾ ನನ್ನ ಸ್ಮರಣೆಗಾಗಿ ಮಾಡಿರಿ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಊಟವಾದ ಮೇಲೆ ಆತನು ಅದೇ ರೀತಿಯಾಗಿ ಪಾತ್ರೆಯನ್ನು ತೆಗೆದುಕೊಂಡು - ಈ ಪಾತ್ರೆಯು ನನ್ನ ರಕ್ತದಿಂದ ಸ್ಥಾಪಿತವಾಗುವ ಹೊಸ ಒಡಂಬಡಿಕೆಯನ್ನು ಸೂಚಿಸುತ್ತದೆ; ನೀವು ಇದರಲ್ಲಿ ಪಾನಮಾಡುವಾಗೆಲ್ಲಾ ನನ್ನನ್ನು ನೆನಸಿಕೊಳ್ಳುವದಕ್ಕೋಸ್ಕರ ಪಾನಮಾಡಿರಿ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಅದೇ ರೀತಿಯಲ್ಲಿ ಅವರು ಊಟಮಾಡಿದ ಮೇಲೆ ಯೇಸು ದ್ರಾಕ್ಷಾರಸದ ಪಾತ್ರೆಯನ್ನು ತೆಗೆದುಕೊಂಡು, “ದೇವರು ತನ್ನ ಜನರೊಂದಿಗೆ ಮಾಡಿಕೊಂಡ ಹೊಸ ಒಡಂಬಡಿಕೆಯನ್ನು ಈ ದ್ರಾಕ್ಷಾರಸ ಸೂಚಿಸುತ್ತದೆ. ಈ ಹೊಸ ಒಡಂಬಡಿಕೆ ನನ್ನ ರಕ್ತದಿಂದ ಆರಂಭವಾಗುತ್ತದೆ. ನೀವು ಇದನ್ನು ಕುಡಿಯುವಾಗಲೆಲ್ಲಾ ನನ್ನನ್ನು ನೆನಸಿಕೊಳ್ಳವವರಾಗಿದ್ದೀರಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಅದೇ ಪ್ರಕಾರ, ಭೋಜನವಾದ ಮೇಲೆ ಪಾನಪಾತ್ರೆಯನ್ನು ತೆಗೆದುಕೊಂಡು, “ಈ ಪಾತ್ರೆಯು ನಿಮಗೋಸ್ಕರ ಸುರಿಸಲಾಗುವ, ನನ್ನ ರಕ್ತದಿಂದಾದ ಹೊಸ ಒಡಂಬಡಿಕೆಯಾಗಿದೆ. ನೀವು ಇದರಲ್ಲಿ ಪಾನಮಾಡುವಾಗೆಲ್ಲಾ ನನ್ನನ್ನು ಜ್ಞಾಪಿಸಿಕೊಳ್ಳುವದಕ್ಕೋಸ್ಕರ ಪಾನಮಾಡಿರಿ,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್25 ತಸೆಚ್ ಜೆವಾನ್ ಹೊವ್ನಗೆತ್ ರ್‍ಹಾತಾನಾ, ತೆನಿ ಆಯ್ದಾನ್ ಘೆಟ್ಲ್ಯಾನ್ ಅನಿ ಅಸೆ ಮಟ್ಲ್ಯಾನ್, “ಹೆ ಆಯ್ದಾನ್ ಮಾಜ್ಯಾ ರಗ್ತಾನ್ ಘಟ್ಟ್ ಕರಲ್ಲೊ ನ್ಹವೊ ಕರಾರ್, ಕವ್ಡೆಂದಾ ತಿ ತುಮಿ ಫಿತ್ಯಾಶಿ ತವ್ಡೆಂದಾ ತೆ ಮಾಜ್ಯಾ ಯಾದಿಸಾಟ್ನಿ ಕರಾ”. ಅಧ್ಯಾಯವನ್ನು ನೋಡಿ |
ನಿತ್ಯವಾದ ಒಡಂಬಡಿಕೆಯನ್ನು, ರಕ್ತದಿಂದ ನಿಶ್ಚಯಪಡಿಸುವುದಕ್ಕಾಗಿ, ಸಭೆಯೆಂಬ ಹಿಂಡಿಗೆ ಮಹಾಪಾಲಕನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರಮಾಡಿದ, ಶಾಂತಿದಾಯಕನಾದ ದೇವರು, ನೀವು ಆತನ ಚಿತ್ತವನ್ನು ನೆರವೇರಿಸುವ ಹಾಗೆ ಸಕಲ ಸತ್ಕಾರ್ಯಗಳಿಗೆ ಬೇಕಾದ ಅನುಕೂಲತೆಗಳನ್ನು ನಿಮಗೆ ದಯಪಾಲಿಸಿ, ಆತನು ಯೇಸು ಕ್ರಿಸ್ತನ ಮೂಲಕ ತನಗೆ ಮೆಚ್ಚಿಕೆಯಾದದ್ದನ್ನು ನಮ್ಮಲ್ಲಿ ನೆರವೇರಿಸಲಿ. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ ಉಂಟಾಗಲಿ. ಆಮೆನ್.