1 ಕೊರಿಂಥದವರಿಗೆ 11:32 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಆದರೆ ನಾವು ಕರ್ತನಿಂದ ನ್ಯಾಯವಿಚಾರಣೆಗೆ ಒಳಗಾಗಿರಲಾಗಿ ಆತನು, ನಮಗೆ ಲೋಕದವರ ಸಂಗಡ ಅಪರಾಧಿಗಳೆಂಬ ನಿರ್ಣಯವಾಗಬಾರದೆಂದು ನಮ್ಮನ್ನು ದಂಡನೆಗೆ ಗುರಿಪಡಿಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಹಾಗೇನಾದರೂ ಪ್ರಭುವಿನ ವಿಚಾರಣೆಗೆ ನಾವು ಒಳಪಟ್ಟರೆ ಅವರು ನಮ್ಮನ್ನು ದಂಡಿಸಿ ತಿದ್ದುತ್ತಾರೆ. ಪ್ರಪಂಚದೊಂದಿಗೆ ನಾವು ತಪ್ಪಿತಸ್ಥರಾಗದಂತೆ ಮಾಡುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ಆದರೆ ನಾವು ಕರ್ತನ ನ್ಯಾಯವಿಚಾರಣೆಗೆ ಒಳಗಾಗಿರಲಾಗಿ ಆತನು - ಇವರಿಗೆ ಲೋಕದವರ ಸಂಗಡ ಅಪರಾಧಿಗಳೆಂಬ ನಿರ್ಣಯವಾಗಬಾರದೆಂದು ನಮ್ಮನ್ನು ಶಿಕ್ಷಿಸುತ್ತಾನೆ. ಆದಕಾರಣ ನನ್ನ ಸಹೋದರರೇ, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ಆದರೆ ಪ್ರಭುವು ನಮಗೆ ತೀರ್ಪು ಮಾಡುವಾಗ, ನಮಗೆ ಸರಿಯಾದ ಮಾರ್ಗವನ್ನು ತೋರಿಸುವುದಕ್ಕಾಗಿಯೂ ಈ ಲೋಕದ ಇತರ ಜನರೊಂದಿಗೆ ನಮಗೆ ಅಪರಾಧಿಗಳೆಂಬ ತೀರ್ಪಾಗದಂತೆಯೂ ಆತನು ನಮ್ಮನ್ನು ಶಿಕ್ಷಿಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ನಾವು ಲೋಕದವರ ಸಂಗಡ ದಂಡನೆಗೆ ಗುರಿಯಾಗಬಾರದೆಂದು, ದೇವರು ನಮ್ಮನ್ನು ಈಗ ಈ ರೀತಿಯಾಗಿ ಶಿಸ್ತಿನ ನ್ಯಾಯವಿಚಾರಣೆಗೆ ಒಳಪಡಿಸುತ್ತಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್32 ಖರೆ ಜಾಗಾಚ್ಯಾ ವಾಂಗ್ಡಾ ಅಮ್ಕಾ ಝಡ್ತಿ ಹೊತಲೆ ನಕ್ಕೊ ಮನುನ್ ಧನಿಯಾನುಚ್ ಅಮ್ಕಾ ಝಡ್ತಿ ಕರುನ್ ಶಿಕ್ಷಾ ಲಾವುನ್ ಹೊಲ್ಲಿ ಹಾಯ್. ಅಧ್ಯಾಯವನ್ನು ನೋಡಿ |