Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 11:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಸ್ತ್ರೀಯು ಮುಸುಕು ಹಾಕಿಕೊಳ್ಳದಿದ್ದರೆ ಆಕೆಯು ಕೂದಲನ್ನು ತೆಗೆಯಿಸಿಬಿಡಬೇಕಷ್ಟೆ. ಆದರೆ ಕೂದಲನ್ನು ಕತ್ತರಿಸಿಕೊಳ್ಳುವುದಾಗಲಿ ತಲೆಬೋಳಿಸಿಕೊಳ್ಳುವುದಾಗಲಿ ಸ್ತ್ರೀಗೆ ಅವಮಾನಕರವಾಗಿದ್ದರೆ ಆಕೆಯು ಮುಸುಕನ್ನು ಹಾಕಿಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಹಾಗೆ ಮುಸುಕು ಹಾಕದ ಸ್ತ್ರೀ ತನ್ನ ತಲೆಗೂದಲನ್ನು ತೆಗೆದುಬಿಡಲಿ. ಸ್ತ್ರೀಗೆ ತಲೆಗೂದಲನ್ನು ಕತ್ತರಿಸುವುದಾಗಲಿ, ಬೋಳಿಸುವುದಾಗಲಿ ಲಜ್ಜಾಸ್ಪದವಾಗಿದ್ದರೆ, ಆಕೆ ತಲೆಗೆ ಮುಸುಕು ಹಾಕಿಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಸ್ತ್ರೀಯು ಮುಸುಕುಹಾಕಿಕೊಳ್ಳದಿದ್ದರೆ ಆಕೆಯು ಕೂದಲನ್ನು ತೆಗಿಸಿಬಿಡಬೇಕಷ್ಟೆ. ಆದರೆ ಕೂದಲನ್ನು ಕತ್ತರಿಸಿಕೊಳ್ಳುವದಾಗಲಿ ತಲೆಬೋಳಿಸಿಕೊಳ್ಳುವದಾಗಲಿ ಸ್ತ್ರೀಗೆ ಅವಮಾನಕರವಾಗಿದ್ದರೆ ಆಕೆಯು ಮುಸುಕನ್ನು ಹಾಕಿಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಸ್ತ್ರೀಯು ತನ್ನ ತಲೆಗೆ ಮುಸುಕು ಹಾಕಿಕೊಳ್ಳದಿದ್ದರೆ, ಆಕೆಯು ತನ್ನ ತಲೆಯನ್ನು ಬೋಳಿಸಿಕೊಳ್ಳಲಿ. ತಲೆಕೂದಲನ್ನು ಕತ್ತರಿಸಿಕೊಳ್ಳುವುದಾಗಲಿ ತಲೆಯನ್ನು ಬೋಳಿಸಿಕೊಳ್ಳುವುದಾಗಲಿ ಸ್ತ್ರೀಗೆ ಅಪಮಾನಕರವಾಗಿದೆ. ಆದ್ದರಿಂದ ಆಕೆ ತನ್ನ ತಲೆಗೆ ಮುಸುಕು ಹಾಕಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಸ್ತ್ರೀಯು ಮುಸುಕು ಹಾಕಿಕೊಳ್ಳದೆ ಇದ್ದರೆ, ಆಕೆಯು ಕೂದಲನ್ನು ಕತ್ತರಿಸಿಕೊಳ್ಳಲಿ. ಕೂದಲನ್ನು ಕತ್ತರಿಸಿಕೊಳ್ಳುವುದಾಗಲಿ, ತಲೆ ಬೋಳಿಸಿಕೊಳ್ಳವುದಾಗಲಿ ಸ್ತ್ರೀಗೆ ಅವಮಾನಕರವಾಗಿದ್ದರೆ, ಆಕೆಯು ಮುಸುಕನ್ನು ಹಾಕಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಎಕ್ ಬಾಯ್ಕೊಮಾನುಸ್ ಅಪ್ನಾಚೆ ಟಕ್ಲೆ ಧಾಪುನ್ ಘೆಯ್ನಾ ಹೊಲ್ಯಾರ್ ತೆನಿ ಅಪ್ಲಿ ಕೆಸಾ ತಾಸುನ್ ಘೆವ್ಚೆ: ಖರೆ ಕೆಸಾ ಕಾತರ್‍ತಲೆ ನಾ ಹೊಲ್ಯಾ ಟಕ್ಲೆ ತಾಸ್ತಲೆ ಎಕ್ ಬಾಯ್ಕೊಮಾನ್ಸಿಕ್ ಅವ್ಮಾನಾಚೆ ಹೊಲ್ಯಾರ್ ತಿ ಅಪ್ನಾಚೆ ಟಕ್ಲೆ ಧಾಪುಂದಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 11:6
5 ತಿಳಿವುಗಳ ಹೋಲಿಕೆ  

ಸ್ತ್ರೀಯು ಪುರುಷವೇಷವನ್ನಾಗಲಿ ಅಥವಾ ಪುರುಷನು ಸ್ತ್ರೀವೇಷವನ್ನಾಗಲಿ ಹಾಕಿಕೊಳ್ಳಬಾರದು; ಹಾಗೆ ಮಾಡುವವರು ನಿಮ್ಮ ದೇವರಾದ ಯೆಹೋವನಿಗೆ ಅಸಹ್ಯರು.


ಯಾಜಕನು ಆ ಸ್ತ್ರೀಯನ್ನು ಯೆಹೋವನ ಸಮ್ಮುಖದಲ್ಲಿ ನಿಲ್ಲಿಸಿ, ಅವಳ ತಲೆಯ ಮೇಲಿರುವ ಮುಸುಕನ್ನು ತೆಗೆದು, ಕೂದಲನ್ನು ಕೆದರಿಸಿ ವ್ಯಭಿಚಾರದ ಸಂಶಯವನ್ನು ಸೂಚಿಸುವ ಆ ನೈವೇದ್ಯದ ಹಿಟ್ಟನ್ನು ಅವಳ ಕೈಯಲ್ಲಿ ಇಟ್ಟು, ಶಾಪವನ್ನುಂಟುಮಾಡುವ ವಿಷಕರವಾದ ಆ ನೀರನ್ನು ಯಾಜಕನು ತನ್ನ ಕೈಯಲ್ಲಿ ಹಿಡಿದುಕೊಳ್ಳಬೇಕು.


ಪೌಲನು ಇನ್ನು ಅನೇಕ ದಿನಗಳ ಕಾಲ ಅಲ್ಲಿದ್ದ ಅನಂತರ ಸಹೋದರರಿಂದ ಅಪ್ಪಣೆತೆಗೆದುಕೊಂಡು ತನಗೆ ದೀಕ್ಷೆ ಇದ್ದುದರಿಂದ ಕೆಂಖ್ರೆಯ ಪಟ್ಟಣದಲ್ಲಿ ಕ್ಷೌರಮಾಡಿಸಿಕೊಂಡು ಹಡಗನ್ನು ಹತ್ತಿ ಸಿರಿಯಕ್ಕೆ ಹೊರಟನು. ಪ್ರಿಸ್ಕಿಲ್ಲಳೂ ಮತ್ತು ಅಕ್ವಿಲನೂ ಅವನ ಸಂಗಡ ಹೊರಟರು.


ತಲೆಯ ಮೇಲೆ ಮುಸುಕು ಹಾಕಿಕೊಳ್ಳದೆ ಪ್ರಾರ್ಥನೆಯನ್ನಾಗಲಿ ಪ್ರವಾದನೆಯನ್ನಾಗಲಿ ಮಾಡುವ ಸ್ತ್ರೀಯು ತನ್ನ ತಲೆಯನ್ನು ಅವಮಾನಪಡಿಸುತ್ತಾಳೆ. ಸ್ತ್ರೀಯು ಮುಸುಕಿಲ್ಲದೆ ಇರುವುದೂ ತಲೆಬೋಳಿಸಿಕೊಂಡಿರುವುದೂ ಒಂದೇ.


ಪುರುಷನು ದೇವರ ಪ್ರತಿರೂಪವೂ ಮತ್ತು ಪ್ರಭಾವವೂ ಆಗಿರುವುದರಿಂದ ತಲೆಯನ್ನು ಮುಚ್ಚಿಕೊಳ್ಳಬಾರದು. ಸ್ತ್ರೀಯಾದರೋ ಪುರುಷನ ಪ್ರಭಾವವಾಗಿದ್ದಾಳೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು