18-19 ದೇಹದ ಪ್ರತಿಯೊಂದು ಅಂಗವು ಒಂದೇ ರೀತಿಯ ಅಂಗವಾಗಿದ್ದರೆ, ಆಗ ದೇಹವೇ ಇರುತ್ತಿರಲಿಲ್ಲ. ಆದರೆ ದೇವರು ತನ್ನ ಇಚ್ಛೆಗನುಸಾರವಾಗಿ ದೇಹದಲ್ಲಿ ಅಂಗಾಂಗಗಳನ್ನು ಇಟ್ಟಿದ್ದಾನೆ. ಆತನು ಅವುಗಳಲ್ಲಿ ಪ್ರತಿಯೊಂದಕ್ಕೂ ಸ್ಥಳವನ್ನು ಗೊತ್ತುಪಡಿಸಿದ್ದಾನೆ.
ದೇವರು ತನ್ನ ಸಭೆಯಲ್ಲಿ ಮೊದಲನೆಯದಾಗಿ ಅಪೊಸ್ತಲರನ್ನು, ಎರಡನೆಯದಾಗಿ ಪ್ರವಾದಿಗಳನ್ನು, ಮೂರನೆಯದಾಗಿ ಬೋಧಕರನ್ನು ಇಟ್ಟಿದ್ದಾನೆ. ಆ ಮೇಲೆ ಮಹತ್ಕಾರ್ಯ ಮಾಡುವ ಶಕ್ತಿಯನ್ನು, ನಾನಾ ರೋಗಗಳನ್ನು ವಾಸಿಮಾಡುವ ವರವನ್ನೂ, ಪರಸಹಾಯ ಮಾಡುವ ಗುಣವನ್ನೂ, ಕಾರ್ಯಗಳನ್ನು ನಿರ್ವಹಿಸುವ ಜ್ಞಾನವನ್ನು ಮತ್ತು ವಿವಿಧ ಭಾಷೆಗಳನ್ನಾಡುವ ವರವನ್ನೂ ಅವರವರಿಗೆ ಬೇರೆ ಬೇರೆಯಾಗಿ ಕೊಟ್ಟಿದ್ದಾನೆ.
ದೇವರು ನನಗೆ ಕೃಪೆಮಾಡಿದ ಸೇವೆಯನ್ನು ಮಾಡುತ್ತಾ ನಿಮ್ಮಲ್ಲಿ ಒಬ್ಬೊಬ್ಬನಿಗೂ ಹೇಳುವುದೇನಂದರೆ ಯಾರೂ ತನ್ನ ಯೋಗ್ಯತೆಗೆ ಮೀರಿ ತನ್ನನ್ನು ಭಾವಿಸಿಕೊಳ್ಳದೆ ದೇವರು ಒಬ್ಬೊಬ್ಬನಿಗೆ ಎಂಥೆಂಥ ನಂಬಿಕೆಯ ಬಲವನ್ನು ಕೊಟ್ಟಿರುವನೋ, ಅದಕ್ಕೆ ತಕ್ಕ ಹಾಗೆ ನ್ಯಾಯವಾದ ಅಭಿಪ್ರಾಯದಿಂದ ತನ್ನನ್ನು ತಾನು ಭಾವಿಸಿಕೊಳ್ಳಬೇಕು.
ಹಾಗಾದರೆ ಅಪೊಲ್ಲೋಸನು ಯಾರು? ಪೌಲನು ಯಾರು? ಅವರ ಸೇವೆಯ ಮುಖಾಂತರ ನೀವು ಕ್ರಿಸ್ತನನ್ನು ನಂಬುವವರಾದಿರಿ ಕರ್ತನು ಪ್ರತಿಯೊಬ್ಬನಿಗೆ ದಯಪಾಲಿಸಿದ ಪ್ರಕಾರ ಅವರು ಸೇವೆಮಾಡುವವರಾಗಿದ್ದಾರೆ.
ಮಾನವುಳ್ಳ ಅಂಗಗಳಿಗೆ ಏನೂ ಅವಶ್ಯವಿಲ್ಲ. ದೇಹದಲ್ಲಿ ಭೇದವೇನೂ ಇರದೇ ಅಂಗಗಳು ಒಂದಕ್ಕೊಂದರ ಹಿತವನ್ನು ಚಿಂತಿಸುವ ಹಾಗೆ ದೇವರು ಕೊರತೆಯುಳ್ಳದ್ದಕ್ಕೆ ಹೆಚ್ಚಾದ ಮಾನವನ್ನು ಕೊಟ್ಟು ದೇಹವನ್ನು ಹದವಾಗಿ ಜೋಡಿಸಿದ್ದಾನೆ.
ಅದೇ ಗಳಿಗೆಯಲ್ಲಿ ಆತನು ಪವಿತ್ರಾತ್ಮನನಿಂದ ಉಲ್ಲಾಸಗೊಂಡು ಹೇಳಿದ್ದೇನಂದರೆ, “ತಂದೆಯೇ, ಪರಲೋಕ ಮತ್ತು ಭೂಲೋಕಗಳ ಒಡೆಯನೇ, ನೀನು ಜ್ಞಾನಿಗಳಿಗೂ ಮತ್ತು ವಿವೇಕಿಗಳಿಗೂ ಈ ವಿಷಯಗಳನ್ನು ಮರೆಮಾಡಿ, ಮಕ್ಕಳಿಗೆ ಪ್ರಕಟಮಾಡಿರುವುದರಿಂದ ನಿನ್ನನ್ನು ಕೊಂಡಾಡುತ್ತೇನೆ. ಹೌದು, ತಂದೆಯೇ, ಹೀಗೆ ಮಾಡುವುದೇ ಒಳ್ಳೆಯದೆಂದು ನಿನ್ನ ದೃಷ್ಟಿಗೆ ತೋರಿದ್ದರಿಂದ ನಿನ್ನನ್ನು ಕೊಂಡಾಡುತ್ತೇನೆ.
ಹೀಗಿರಲು, ಅವರು ಸಹ ಯೆಹೋವನಿಗೆ ಮೊರೆಯಿಟ್ಟು, “ಯೆಹೋವನೇ, ಈ ಮನುಷ್ಯನ ಪ್ರಾಣನಷ್ಟದಿಂದ ಆಗುವ ಕೇಡು ನಮ್ಮ ಮೇಲೆ ಬಾರದಿರಲಿ; ನಿರಪರಾಧಿಯನ್ನು ಕೊಂದ ದೋಷಕ್ಕೆ ನಮ್ಮನ್ನು ಗುರಿಮಾಡಬೇಡ; ಯೆಹೋವನೇ, ನೀನೇ ನಿನ್ನ ಚಿತ್ತಾನುಸಾರವಾಗಿ ಇದನ್ನು ಮಾಡಿದ್ದಿಯಲ್ಲಾ” ಎಂದು ಬಿನ್ನವಿಸಿದರು.
ಆರಂಭದಲ್ಲಿಯೇ ಅಂತ್ಯವನ್ನು ತಿಳಿಸಿದ್ದೇನೆ. ‘ನನ್ನ ಸಂಕಲ್ಪವು ನಿಲ್ಲುವುದು, ನನ್ನ ಇಷ್ಟಾರ್ಥವನ್ನೆಲ್ಲಾ ನೆರವೇರಿಸುವೆನು’ ಎಂದು ಹೇಳಿ ಇನ್ನೂ ನಡೆಯದಿರುವ ಕಾರ್ಯಗಳನ್ನು ಪುರಾತನಕಾಲದಲ್ಲಿಯೇ ಅರುಹಿದ್ದೇನೆ.