Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 12:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ನೀವು ಕ್ರಿಸ್ತನ ದೇಹವು ಮತ್ತು ಒಬ್ಬೊಬ್ಬರಾಗಿ ಅದಕ್ಕೆ ಅಂಗಗಳಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ನೀವೆಲ್ಲರೂ ಕ್ರಿಸ್ತಯೇಸುವಿನ ದೇಹ ಆಗಿದ್ದೀರಿ; ಪ್ರತಿಯೊಬ್ಬನೂ ಈ ದೇಹದ ಅಂಗವಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ನೀವು ಕ್ರಿಸ್ತನ ದೇಹವು, ಮತ್ತು ಒಬ್ಬೊಬ್ಬರಾಗಿ ಅದಕ್ಕೆ ಅಂಗಗಳಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ನೀವೆಲ್ಲರೂ ಒಂದುಗೂಡಿ ಕ್ರಿಸ್ತನ ದೇಹವಾಗಿದ್ದೀರಿ. ನಿಮ್ಮಲ್ಲಿ ಪ್ರತಿಯೊಬ್ಬರೂ ಅದರ ಅಂಗವಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಈಗ ನೀವು ಕ್ರಿಸ್ತನ ದೇಹವಾಗಿದ್ದೀರಿ. ನಿಮ್ಮಲ್ಲಿ ಪ್ರತಿಯೊಬ್ಬರೂ ಆ ದೇಹದ ಅಂಗಗಳಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ತುಮಿ ತರ್ ಕ್ರಿಸ್ತಾಚೆ ಆಂಗ್ ಅನಿ ಹರ್ ಎಕ್ಲೊಬಿ ತೆಚೊ ಭಾಗ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 12:27
14 ತಿಳಿವುಗಳ ಹೋಲಿಕೆ  

ನಾವೆಲ್ಲರೂ ನಂಬಿಕೆಯಿಂದಲೂ ದೇವಕುಮಾರನ ವಿಷಯವಾದ ಜ್ಞಾನದಿಂದಲೂ ಉಂಟಾಗುವ ಐಕ್ಯತೆಯನ್ನು ಹೊಂದಿ, ಪರಿಪಕ್ವತೆಯನ್ನು ಪಡೆದು, ಕ್ರಿಸ್ತನ ಪರಿಪೂರ್ಣತೆಯ ಮಟ್ಟವನ್ನು ತಲುಪುವ ತನಕ,


ನಾನು ಈಗ ನಿಮಗೋಸ್ಕರ ಅನುಭವಿಸುತ್ತಿರುವ ಬಾಧೆಗಳಲ್ಲಿ ನನಗೆ ಸಂತೋಷವಿದೆ. ಕ್ರಿಸ್ತನ ಯಾತನೆಗಳಲ್ಲಿ ಕೊರತೆಯಾಗಿರುವುದನ್ನು ಆತನ ಸಭೆಯೆಂಬ ದೇಹಕೋಸ್ಕರ ನಾನು ನನ್ನ ದೇಹದಲ್ಲಿ ಅನುಭವಿಸಿ ತೀರಿಸುತ್ತೇನೆ.


ಸಭೆಯೆಂಬ ದೇಹಕ್ಕೆ ನಾವು ಅಂಗಗಳಾಗಿದ್ದೇವೆ ಸಭೆಯೆಂಬ ಈ ದೇಹವನ್ನು ಕ್ರಿಸ್ತನು ಹಾಗೆಯೇ ಪೋಷಿಸಿ ಪಾಲನೆ ಮಾಡುತ್ತಾ ಬಂದಿದ್ದಾನೆ.


ಹಾಗೆಯೇ ನಾವೆಲ್ಲರೂ ಒಟ್ಟಾಗಿ ಕ್ರಿಸ್ತನಲ್ಲಿ ಒಂದೇ ದೇಹವಾಗಿದ್ದು ಒಬ್ಬೊಬ್ಬರಾಗಿ ವಿವಿಧ ಅಂಗಗಳಾಗಿದ್ದೇವೆ.


ಹೇಗೆ ದೇಹವು ಒಂದಾಗಿದ್ದರೂ ಅದಕ್ಕಿರುವ ಅಂಗಗಳು ಅನೇಕವಾಗಿವೆಯೋ, ಹೇಗೆ ದೇಹದ ಅಂಗಗಳೆಲ್ಲವೂ ಅನೇಕವಾಗಿದ್ದು ಒಂದೇ ದೇಹವಾಗಿದೆಯೋ, ಹಾಗೆಯೇ ಕ್ರಿಸ್ತನು ಇದ್ದಾನೆ.


ಸಭೆಯು ಕ್ರಿಸ್ತನ ದೇಹವಾಗಿದೆ, ಎಲ್ಲವನ್ನೂ ಎಲ್ಲಾ ವಿಧದಲ್ಲೂ ಪೂರೈಸುವಾತನಿಂದ ಅದು ಸಂಪೂರ್ಣತೆಯುಳ್ಳದ್ದಾಗಿದೆ.


ಸಭೆಯೆಂಬ ದೇಹಕ್ಕೆ ಆತನು ತಲೆಯಾಗಿದ್ದಾನೆ, ಆತನೇ ಆದಿಸಂಭೂತನು, ಎಲ್ಲಾದರಲ್ಲಿ ಆತನು ಮೊದಲಿಗನಾಗುವುದಕ್ಕಾಗಿ ಸತ್ತವರೊಳಗಿಂದ ಮೊದಲು ಎದ್ದು ಬಂದವನು ಆತನೇ.


ಕ್ರಿಸ್ತನು ಸಭೆಗೆ ತಲೆಯಾಗಿರುವ ಪ್ರಕಾರವೇ ಗಂಡನು ಹೆಂಡತಿಗೆ ತಲೆಯಾಗಿದ್ದಾನೆ. ಕ್ರಿಸ್ತನು ತಾನೇ ಸಭೆಯೆಂಬ ದೇಹಕ್ಕೆ ರಕ್ಷಕನಾಗಿದ್ದಾನೆ.


ಕೊರಿಂಥದಲ್ಲಿನ ದೇವರ ಸಭೆಗೆ ಅಂದರೆ ಕ್ರಿಸ್ತ ಯೇಸುವಿನಲ್ಲಿ ಪ್ರತಿಷ್ಠಿತರಾದವರಿಗೂ, ಪರಿಶುದ್ಧರಾಗಿರಲು ಕರೆಯಲ್ಪಟ್ಟವರಿಗೂ, ನಮ್ಮ ಮತ್ತು ಅವರ ಕರ್ತನಾಗಿರುವ ಯೇಸು ಕ್ರಿಸ್ತನ ನಾಮಸ್ಮರಣೆಯನ್ನು ಮಾಡುವವರೆಲ್ಲಿದ್ದರೂ ಅವರೆಲ್ಲರಿಗೂ ಬರೆಯುವುದು ಏನೆಂದರೆ,


ನಿಮ್ಮ ದೇಹಗಳು ಕ್ರಿಸ್ತನ ಅಂಗಗಳಾಗಿವೆ ಎಂಬುದು ನಿಮಗೆ ತಿಳಿಯದೋ? ಹೀಗಿರಲಾಗಿ ಕ್ರಿಸ್ತನ ಅಂಗಗಳಾಗಿರುವಂಥವುಗಳನ್ನು ತೆಗೆದು ವೇಶ್ಯೆಯ ಅಂಗಗಳೊಡನೆ ಸೇರಿಸುವುದು ಸರಿಯೋ? ಎಂದಿಗೂ ಹಾಗೆ ಮಾಡಬಾರದು


ರೊಟ್ಟಿ ಒಂದೇ ಆಗಿರುವ ಹಾಗೆ ಅನೇಕರಾಗಿರುವ ನಾವೆಲ್ಲರು ಒಂದೇ ದೇಹದಂತಿದ್ದೇವೆ. ಯಾಕೆಂದರೆ ನಾವೆಲ್ಲರೂ ಆ ಒಂದೇ ರೊಟ್ಟಿಯಲ್ಲಿ ಪಾಲು ತೆಗೆದುಕೊಂಡು ತಿನ್ನುತ್ತೇವೆ.


ಒಂದು ಅಂಗಕ್ಕೆ ನೋವಾದರೆ ಎಲ್ಲಾ ಅಂಗಗಳಿಗೂ ನೋವಾಗುತ್ತದೆ. ಒಂದು ಅಂಗ ಗೌರವಿಸಲ್ಪಟ್ಟರೆ ಎಲ್ಲಾ ಅಂಗಗಳಿಗೂ ಸಂತೋಷವಾಗುತ್ತದೆ.


ಇಂಥವನು ಕ್ರಿಸ್ತನೆಂಬ ತಲೆಯೊಂದಿಗೆ ಸಂಬಂಧ ಕಳೆದುಕೊಂಡವನಾಗಿದ್ದಾನೆ, ತಲೆಯಿಂದಲೇ ದೇಹವೆಲ್ಲಾ ಕೀಲುನರಗಳ ಮೂಲಕ ಬೇಕಾದ ಪೋಷಣೆಯನ್ನು ಹೊಂದಿ, ಒಂದಾಗಿ ಜೋಡಿಸಲ್ಪಟ್ಟ ದೇಹವಾಗಿ, ದೇವರು ಕೊಡುವ ಅಭಿವೃದ್ಧಿಯಿಂದ ಬೆಳೆಯುತ್ತಾ ಬರುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು