Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 12:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಇವುಗಳಲ್ಲಿ ಶ್ರೇಷ್ಠ ವರಗಳನ್ನು ಆಸಕ್ತಿಯಿಂದ ಅಪೇಕ್ಷಿಸಿರಿ. ಇನ್ನೂ ಸರ್ವೋತ್ತಮವಾದ ಮಾರ್ಗವೊಂದನ್ನು ನಿಮಗೆ ತೋರಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಶ್ರೇಷ್ಠವಾದ ವರಗಳನ್ನು ನೀವು ಶ್ರದ್ಧಾಪೂರ್ವಕವಾಗಿ ಅಪೇಕ್ಷಿಸಿರಿ. ನಾನು ನಿಮಗೆ ಇನ್ನೂ ಸರ್ವೋತ್ತಮವಾದ ಮಾರ್ಗವನ್ನು ತೋರಿಸುತ್ತೇನೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಇವುಗಳಲ್ಲಿ ಶ್ರೇಷ್ಠ ವರಗಳನ್ನು ಆಸಕ್ತಿಯಿಂದ ಅಪೇಕ್ಷಿಸಿರಿ. ಇನ್ನೂ ಉತ್ಕೃಷ್ಟವಾದ ಮಾರ್ಗವನ್ನು ನಿಮಗೆ ತೋರಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಆದರೆ ನೀವು ಪವಿತ್ರಾತ್ಮನ ಇನ್ನೂ ಶ್ರೇಷ್ಠವಾದ ವರಗಳನ್ನು ಯಥಾರ್ಥವಾಗಿ ಅಪೇಕ್ಷಿಸತಕ್ಕದ್ದು. ಈಗ ನಾನು ನಿಮಗೆ ಎಲ್ಲಕ್ಕಿಂತಲೂ ಉತ್ತಮವಾದ ಮಾರ್ಗವನ್ನು ತೋರಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಆದರೆ ನೀವು ಆಸಕ್ತಿಯಿಂದ ಶ್ರೇಷ್ಠ ವರಗಳನ್ನು ಅಪೇಕ್ಷಿಸಿರಿ. ನಾನು ನಿಮಗೆ ಇನ್ನೂ ಸರ್ವೋತ್ತಮವಾದ ಮಾರ್ಗವನ್ನು ತೋರಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 ಜಾಲ್ಯಾರ್ಬಿ ಹ್ಯಾ ಸಗ್ಳ್ಯಾ ವರಾಂಚ್ಯಾನ್ಕಿ ಮೊಟೆ ವರು ಘೆವ್ಕ್ ತುಮಿ ರಾಕುನ್ ರ್‍ಹಾವಾ. ಸಗ್ಳ್ಯಾಂಚ್ಯಾನ್ಕಿ ಬರಿ ವಾಟ್ ಮಿಯಾ ತುಮ್ಕಾ ದಾಕ್ವುತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 12:31
8 ತಿಳಿವುಗಳ ಹೋಲಿಕೆ  

ನಾನು ಮನುಷ್ಯರ ಭಾಷೆಗಳನ್ನೂ, ದೇವದೂತರ ಭಾಷೆಗಳನ್ನೂ ಮಾತನಾಡುವವನಾದರೂ ಪ್ರೀತಿಯಿಲ್ಲದವನಾಗಿದ್ದರೆ ನಾದಕೊಡುವ ಕಂಚಿನ ಜಾಗಟೆ, ಗಣಗಣಿಸುವ ಘಂಟೆ ಆಗಿದ್ದೇನೆ.


ಆದಕಾರಣ ನನ್ನ ಸಹೋದರರೇ, ಪ್ರವಾದನಾವರವನ್ನು ಆಸಕ್ತಿಯಿಂದ ಅಪೇಕ್ಷಿಸಿರಿ, ಮತ್ತು ಅನ್ಯಭಾಷೆಗಳನ್ನಾಡುವವರಿಗೆ ಅಡ್ಡಿಮಾಡಬೇಡಿರಿ.


ನೀತಿಗೆ ಹಸಿದು ಬಾಯಾರಿದವರು ಧನ್ಯರು; ಅವರು ತೃಪ್ತರಾಗುವರು.


ಇಷ್ಟೇ ಅಲ್ಲದೆ, ನನ್ನ ಕರ್ತನಾದ ಕ್ರಿಸ್ತಯೇಸುವನ್ನರಿಯುವುದೇ ಅತಿ ಶ್ರೇಷ್ಠವಾದದ್ದೆಂದು ತಿಳಿದು ನಾನು ಎಲ್ಲವನ್ನು ನಷ್ಟವೆಂದೆಣಿಸುತ್ತೇನೆ. ಆತನ ನಿಮಿತ್ತ ನಾನು ಎಲ್ಲವನ್ನೂ ಕಳೆದುಕೊಂಡು ಅವುಗಳನ್ನು ಕಸವೆಂದೆಣಿಸುತ್ತೇನೆ.


ವಿಗ್ರಹಕ್ಕೆ ಅರ್ಪಿಸಿದ ಆಹಾರಪದಾರ್ಥಗಳ ವಿಷಯವನ್ನು ಕುರಿತಾದರೋ. “ನಮ್ಮೆಲ್ಲರಿಗೆ ಜ್ಞಾನವುಂಟೆಂದು” ನಾವು ಬಲ್ಲೆವು. ತಿಳಿವಳಿಕೆಯು ಉಬ್ಬಿಸುತ್ತದೆ, ಆದರೆ ಪ್ರೀತಿಯು ಭಕ್ತಿಯನ್ನು ಬೆಳೆಸುತ್ತದೆ.


ನಂಬಿಕೆಯಿಂದಲೇ ಹೇಬೆಲನು ಕಾಯಿನನ ಯಜ್ಞಕ್ಕಿಂತ ಶ್ರೇಷ್ಠ ಯಜ್ಞವನ್ನು ದೇವರಿಗೆ ಸಮರ್ಪಿಸಿದನು. ಇದರ ಮೂಲಕ ಅವನು ನೀತಿವಂತನೆಂದು ಸಾಕ್ಷಿ ಹೊಂದಿದನು. ದೇವರು ಅವನ ಕಾಣಿಕೆಗಳನ್ನು ಕುರಿತು ಪ್ರಶಂಸಿಸಿದನು. ಅವನು ಸತ್ತುಹೋಗಿದ್ದರೂ, ಅವನ ನಂಬಿಕೆಯ ಮೂಲಕ ಇನ್ನೂ ಮಾತನಾಡುವವನಾಗಿದ್ದಾನೆ.


ಆದರೆ ಅಗತ್ಯವಾದದ್ದು ಒಂದೇ, ಮರಿಯಳು ಆ ಉತ್ತಮ ಭಾಗವನ್ನು ಆರಿಸಿಕೊಂಡಿದ್ದಾಳೆ, ಅದು ಆಕೆಯಿಂದ ತೆಗೆಯಲ್ಪಡುವುದಿಲ್ಲ” ಎಂದು ಉತ್ತರಕೊಟ್ಟನು.


ಪ್ರತಿನಿತ್ಯ ಪ್ರೀತಿಯಿಂದ ಜೀವಿಸಲು ಆಶಿಸಿರಿ ಮತ್ತು ಪವಿತ್ರಾತ್ಮನಿಂದುಂಟಾಗುವ ವರಗಳನ್ನು, ಅದರೊಳಗೂ ವಿಶೇಷವಾಗಿ ಪ್ರವಾದನಾ ವರವನ್ನೇ ಆಸಕ್ತಿಯಿಂದ ಅಪೇಕ್ಷಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು