1 ಕೊರಿಂಥದವರಿಗೆ 13:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ನನಗೆ ಪ್ರವಾದನ ವರವಿದ್ದರೂ, ಎಲ್ಲಾ ರಹಸ್ಯಗಳೂ, ಸಕಲ ವಿಧವಾದ ವಿದ್ಯೆಗಳನ್ನು ತಿಳಿದ್ದರೂ, ಬೆಟ್ಟಗಳನ್ನೂ ತೆಗೆದಿಡುವುಷ್ಟು ನಂಬಿಕೆಯಿದ್ದರೂ, ಪ್ರೀತಿಯಿಲ್ಲದವನಾಗಿದ್ದರೆ ನಾನು ಏನೂ ಅಲ್ಲದವನಾಗಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಪ್ರವಾದನೆಯ ವರವೆನಗಿರಬಹುದು ಇರಬಹುದು ನಿಗೂಢ ರಹಸ್ಯಗಳರಿವು ಎಲ್ಲದರ ಪರಿಜ್ಞಾನ, ಪರ್ವತವನೇ ಕದಲಿಪ ವಿಶ್ವಾಸ ಪ್ರೀತಿಯೊಂದಿಲ್ಲದಿರೆ ನಾ ಶೂನ್ಯಸಮಾನ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ನನಗೆ ಪ್ರವಾದನವರವಿದ್ದರೂ ಎಲ್ಲಾ ರಹಸ್ಯಗಳೂ ಸಕಲ ವಿಧವಾದ ವಿದ್ಯೆಯೂ ತಿಳಿದರೂ, ಬೆಟ್ಟಗಳನ್ನು ತೆಗೆದಿಡುವದಕ್ಕೆ ಬೇಕಾದಷ್ಟು ನಂಬಿಕೆಯಿದ್ದರೂ ನಾನು ಪ್ರೀತಿಯಿಲ್ಲದವನಾಗಿದ್ದರೆ ಏನೂ ಅಲ್ಲದವನಾಗಿದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಪ್ರವಾದಿಸುವ ವರ ನನಗಿರಬಹುದು; ದೇವರ ರಹಸ್ಯ ಸಂಗತಿಗಳನ್ನೆಲ್ಲಾ ಮತ್ತು ಜ್ಞಾನವನ್ನೆಲ್ಲಾ ನಾನು ಅರ್ಥಮಾಡಿಕೊಂಡಿರಬಹುದು ಮತ್ತು ಬೆಟ್ಟಗಳನ್ನು ಚಲಿಸಬಲ್ಲಂಥ ಮಹಾನಂಬಿಕೆ ನನಗಿರಬಹುದು. ಇವುಗಳೆಲ್ಲಾ ನನ್ನಲ್ಲಿ ಇದ್ದರೂ ಪ್ರೀತಿಯು ಇಲ್ಲದಿದ್ದರೆ, ನಾನು ನಿಷ್ಪ್ರಯೋಜಕನಾಗಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ನನಗೆ ಪ್ರವಾದನ ವರವಿದ್ದರೂ ನಾನು ಎಲ್ಲಾ ರಹಸ್ಯಗಳನ್ನೂ, ಸಕಲ ವಿದ್ಯೆಯನ್ನು ತಿಳಿದಿದ್ದರೂ ಬೆಟ್ಟಗಳನ್ನು ಕದಲಿಸುವಷ್ಟು ನಂಬಿಕೆಯಿದ್ದರೂ ನನಗೆ ಪ್ರೀತಿಯಿಲ್ಲದಿದ್ದರೆ, ಶೂನ್ಯನಾಗಿದ್ದೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 ಪ್ರವಾದ್ ಕರ್‍ತಲೆ ವರು ಮಾಕಾ ಅಸಿಲ್ ಅನಿ ಘುಟಾನ್ ಹೊತ್ತ್ಯಾ ಸಂಗ್ತಿಯಾಂಚೆ ಸಗ್ಳೆ ಶಾನ್‍ಪಾನ್ ಮಾಕಾ ಅಸಿಲ್, ನಾ ಹೊಲ್ಯಾರ್ ಎಕಾಕ್ಲಿ ಮಡ್ಡಿ ಅನಿ ಎಕಾಕ್ಡೆ ಜಾಯ್ ಸಾರ್ಕೆ ಕರುಕ್ ಹೊತಾ ತಸ್ಲೊ ವಿಶ್ವಾಸ್ ಮಾಕಾ ಅಸಿಲ್, ಜಾಲ್ಯಾರ್ಬಿ ಮಾಜ್ಯಾ ಭುತ್ತುರ್ ಪ್ರೆಮ್ ನಾ ಹೊಲ್ಯಾರ್ ಮಿಯಾ ಕಾಯ್ಬಿ ನ್ಹಯ್. ಅಧ್ಯಾಯವನ್ನು ನೋಡಿ |
ದೇವರು ತನ್ನ ಸಭೆಯಲ್ಲಿ ಮೊದಲನೆಯದಾಗಿ ಅಪೊಸ್ತಲರನ್ನು, ಎರಡನೆಯದಾಗಿ ಪ್ರವಾದಿಗಳನ್ನು, ಮೂರನೆಯದಾಗಿ ಬೋಧಕರನ್ನು ಇಟ್ಟಿದ್ದಾನೆ. ಆ ಮೇಲೆ ಮಹತ್ಕಾರ್ಯ ಮಾಡುವ ಶಕ್ತಿಯನ್ನು, ನಾನಾ ರೋಗಗಳನ್ನು ವಾಸಿಮಾಡುವ ವರವನ್ನೂ, ಪರಸಹಾಯ ಮಾಡುವ ಗುಣವನ್ನೂ, ಕಾರ್ಯಗಳನ್ನು ನಿರ್ವಹಿಸುವ ಜ್ಞಾನವನ್ನು ಮತ್ತು ವಿವಿಧ ಭಾಷೆಗಳನ್ನಾಡುವ ವರವನ್ನೂ ಅವರವರಿಗೆ ಬೇರೆ ಬೇರೆಯಾಗಿ ಕೊಟ್ಟಿದ್ದಾನೆ.
ದೇವಭಕ್ತಿಗೆ ಆಧಾರವಾಗಿರುವ ಸತ್ಯಾರ್ಥದ ರಹಸ್ಯವು ಗಂಭೀರವಾದದ್ದೆಂಬುದನ್ನು ನಾವೆಲ್ಲರೂ ಒಪ್ಪಿಕೊಳ್ಳುತ್ತೇವೆ, ಅದೇನಂದರೆ, ಕ್ರಿಸ್ತನು ಶರೀರಧಾರಿಯಾಗಿ ಪ್ರತ್ಯಕ್ಷನಾದನು, ಆತ್ಮಸಂಬಂಧವಾಗಿ ಕ್ರಿಸ್ತನೇ ನೀತಿವಂತನೆಂದು ಪರಿಗಣಿಸಲ್ಪಟ್ಟನು, ದೇವದೂತರಿಗೆ ಕಾಣಿಸಿಕೊಂಡನು, ಅನ್ಯಜನರ ಮಧ್ಯದಲ್ಲಿ ಸಾರಲ್ಪಟ್ಟನು, ಲೋಕದಲ್ಲಿ ನಂಬಲ್ಪಟ್ಟನು, ಮಹಿಮೆಯೊಂದಿಗೆ ಪರಲೋಕಕ್ಕೆ ಎತ್ತಲ್ಪಟ್ಟನು.
ಅನಾದಿಯಿಂದ ಗುಪ್ತವಾಗಿದ್ದ ಮರ್ಮವು ಈಗ ಪ್ರಕಾಶಕ್ಕೆ ಬಂದು ನಿತ್ಯನಾದ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಗಳ ಶಾಸ್ತ್ರಗಳ ಮೂಲಕ ಅನ್ಯಜನರೆಲ್ಲರಿಗೂ ನಂಬಿಕೆಯೆಂಬ ವಿಧೇಯತ್ವವನ್ನು ಉಂಟುಮಾಡುವುದಕ್ಕೋಸ್ಕರ ತಿಳಿಸಲ್ಪಟ್ಟಿದೆ. ಪೂರ್ವಕಾಲಗಳಲ್ಲಿ ಮರೆಯಾಗಿದ್ದು ಈಗ ಬೆಳಕಿಗೆ ಬಂದಿರುವಂತಹದ್ದೂ, ಈ ಮರ್ಮಕ್ಕೆ ಅನುಸಾರ ಎಂದರೆ ಯೇಸು ಕ್ರಿಸ್ತನ ವಿಷಯವಾದಂಥ ಹಾಗೂ ನಾನು ಸಾರುವಂಥ ಸುವಾರ್ತೆಗನುಸಾರವಾಗಿ ನಿಮ್ಮನ್ನು ಸ್ಥಿರಪಡಿಸುವುದಕ್ಕೆ ಶಕ್ತನಾಗಿರುವ,