1 ಕೊರಿಂಥದವರಿಗೆ 13:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಪ್ರೀತಿಯು ಎಂದಿಗೂ ನಿಂತುಹೋಗುವುದಿಲ್ಲ. ಪ್ರವಾದನೆಗಳಾದರೂ ಇಲ್ಲದಂತಾಗುವವು. ಅನ್ಯಭಾಷೆಗಳೋ ನಿಂತುಹೋಗುವವು. ತಿಳಿವಳಿಕೆಯೋ ಇಲ್ಲದಂತಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8-9 ಅಳಿದುಹೋಗುವುವು ಭವಿಷ್ಯವಾಣಿ ಗತಿಸಿಹೋಗುವುದು ಬಹುಭಾಷಾ ಶಕ್ತಿ ಹೋಗುವುವು ನಶಿಸಿ ಜ್ಞಾನ, ಬುದ್ಧಿ. ಆದರೆ ಅಮರವಾದುದು ಪರಮ ಪ್ರೀತಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಪ್ರೀತಿಯು ಎಂದಿಗೂ ಬಿದ್ದುಹೋಗುವದಿಲ್ಲ; ಪ್ರವಾದನೆಗಳಾದರೋ ಇಲ್ಲದಂತಾಗುವವು; ವಾಣಿಗಳೋ ನಿಂತುಹೋಗುವವು. ವಿದ್ಯೆಯೋ ಇಲ್ಲದಂತಾಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಪ್ರೀತಿಯು ಎಂದಿಗೂ ಕೊನೆಗೊಳ್ಳುವುದಿಲ್ಲ. ಪ್ರವಾದಿಸುವ ವರಗಳಿವೆ, ಆದರೆ ಅವು ಕೊನೆಗೊಳ್ಳುತ್ತವೆ. ವಿವಿಧ ಭಾಷೆಗಳಲ್ಲಿ ಮಾತಾಡುವ ವರಗಳಿವೆ, ಆದರೆ ಆ ವರಗಳು ಕೊನೆಗೊಳ್ಳುತ್ತವೆ. ಜ್ಞಾನವೆಂಬ ವರವೂ ಇದೆ, ಆದರೆ ಅದೂ ಕೊನೆಗೊಳ್ಳುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಪ್ರೀತಿಯು ಎಂದಿಗೂ ಅಳಿದುಹೋಗುವುದಿಲ್ಲ, ಪ್ರವಾದನೆಗಳಾದರೋ ಇಲ್ಲದಂತಾಗುವುವು, ಅನ್ಯ ಭಾಷೆಗಳು ಗತಿಸಿ ಹೋಗುವುವು, ವಿದ್ಯೆಯೋ ಇಲ್ಲದಂತಾಗುವುವು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 ಪ್ರೆಮ್ ಕನ್ನಾಬಿ ಸರಿನಾ, ಪ್ರವಾದ್ಯಾಚೆ ಬೊಲ್ನೆ ಸರುನ್, ಜಾಯ್ಲ್ ವಿಚಿತ್ರ್ ಭಾಶಾ ಬೊಲ್ತಲೆ ವರು ಸರುನ್ ಜಾಯ್ಲ್; ಶಾನ್‍ಪಾನಾಚಿ ವರಾ ನಾ ಪತ್ತೊ ಹೊವ್ನ್ ಜಾತಿಲ್, ಅಧ್ಯಾಯವನ್ನು ನೋಡಿ |