Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 13:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅಪೂರ್ಣವಾಗಿ ತಿಳಿದುಕೊಳ್ಳುತ್ತೇವೆ; ಅಪೂರ್ಣವಾಗಿ ಪ್ರವಾದಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅಪೂರ್ಣವಾಗಿ ತಿಳುಕೊಳ್ಳುತ್ತೇವೆ, ಅಪೂರ್ಣವಾಗಿ ಪ್ರವಾದಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಏಕೆಂದರೆ ನಮಗಿರುವ ಈ ಜ್ಞಾನವು ಮತ್ತು ಈ ಪ್ರವಾದನೆಗಳು ಸಂಪೂರ್ಣವಾದುವುಗಳಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನಾವು ಅಪೂರ್ಣವಾಗಿ ತಿಳಿದುಕೊಂಡಿದ್ದೇವೆ, ಅಪೂರ್ಣವಾಗಿ ಪ್ರವಾದಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಕಶ್ಯಾಕ್ ಮಟ್ಲ್ಯಾರ್ ಅಮ್ಚೆ ಶಾನ್‍ಪಾನ್ ಸಂಪುರ್ನ್ ನ್ಹಯ್, ಅನಿ ಅಮ್ಚೊ ಪ್ರವಾದ್‍ ಬಾರಿಕ್ ಭಾಗ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 13:9
16 ತಿಳಿವುಗಳ ಹೋಲಿಕೆ  

ಈಗ ಕನ್ನಡಿಯಲ್ಲಿ ಕಾಣಿಸುವಂತೆ ದೇವರ ಮುಖವು ನಮಗೆ ಮೊಬ್ಬಾಗಿ ಕಾಣಿಸುತ್ತದೆ, ಆದರೆ ಆಗ ನೇರವಾಗಿ ಮುಖಾಮುಖಿಯಾಗಿ ಆತನನ್ನು ನೋಡುವೆವು. ಈಗ ಅಪೂರ್ಣವಾಗಿ ನನಗೆ ತಿಳಿದಿದೆ. ಆದರೆ ಆಗ ದೇವರು ನನ್ನನ್ನು ಸಂಪೂರ್ಣವಾಗಿ ತಿಳಿದುಕೊಂಡಂತೆ ನಾನು ಸಂಪೂರ್ಣವಾಗಿ ತಿಳಿದುಕೊಳ್ಳುವೆನು.


ಒಬ್ಬನು ತಾನು ಏನಾದರೂ ತಿಳಿದುಕೊಂಡಿದ್ದೇನೆಂದು ಭಾವಿಸುವುದಾದರೆ ಅವನು ತಿಳಿಯಬೇಕಾದ ರೀತಿಯಿಂದ ಇನ್ನೂ ತಿಳಿದುಕೊಂಡಿರುವುದಿಲ್ಲ.


ಆದರೆ ದೇವರ ವಾಕ್ಯಗಳಲ್ಲಿ ಬರೆದಿರುವ ಪ್ರಕಾರ, “ದೇವರು ತನ್ನನ್ನು ಪ್ರೀತಿಸುವವರಿಗಾಗಿ ಸಿದ್ಧಮಾಡಿರುವಂಥದೆಲ್ಲವನ್ನು ಕಣ್ಣು ಕಾಣಲಿಲ್ಲ, ಕಿವಿ ಕೇಳಲಿಲ್ಲ, ಅದರ ಭಾವನೆಯು ಮನುಷ್ಯನ ಹೃದಯದಲ್ಲಿ ಹುಟ್ಟಲಿಲ್ಲ.”


ಇಂಥ ಜ್ಞಾನವು ನನಗೆ ಬಹು ಆಶ್ಚರ್ಯವಾಗಿದೆ; ಅದು ಉನ್ನತವಾದದ್ದು, ನನಗೆ ನಿಲುಕುವುದಿಲ್ಲ.


ನನ್ನ ತಂದೆಯು ಎಲ್ಲವನ್ನು ನನಗೆ ಒಪ್ಪಿಸಿದ್ದಾನೆ. ತಂದೆಯ ಹೊರತು ಇನ್ನಾವನೂ ಮಗನನ್ನು ತಿಳಿದವನಲ್ಲ. ಮಗನ ಹೊರತು ಇನ್ನಾವನೂ ತಂದೆಯನ್ನು ತಿಳಿದವನಲ್ಲ. ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಪಡಿಸುವುದಕ್ಕೆ ಇಚ್ಛಿಸುತ್ತಾನೋ ಅವನು ಆತನನ್ನು ತಿಳಿದವನಾಗಿದ್ದಾನೆ.


ಆಕಾಶಕ್ಕೆ ಏರಿ ಇಳಿದಿರುವವನಾರು? ಮುಷ್ಠಿಯಲ್ಲಿ ಗಾಳಿಯನ್ನು ಕೂಡಿಸಿರುವವರು ಯಾರು? ತನ್ನ ಬಟ್ಟೆಯಲ್ಲಿ ನೀರನ್ನು ಮೂಟೆಕಟ್ಟಿರುವವರು ಯಾರು? ಭೂಮಿಯ ಎಲ್ಲೆಗಳನ್ನೆಲ್ಲಾ ಸ್ಥಾಪಿಸಿರುವವರು ಯಾರು? ಅವನ ಹೆಸರೇನು? ಅವನ ಮಗನ ಹೆಸರೇನು? ನೀನೇ ಬಲ್ಲವನು.


ಯೆಹೋವನೇ, ನನ್ನ ದೇವರೇ, ನಿನಗೆ ಸಮಾನನಾದ ದೇವರು ಯಾರು? ನಮ್ಮ ಹಿತಕ್ಕಾಗಿ ನೀನು ಮಾಡಿದ ಆಲೋಚನೆಗಳೂ, ಅದ್ಭುತಕಾರ್ಯಗಳೂ ಎಷ್ಟೋ ವಿಶೇಷವಾಗಿವೆ; ಅವುಗಳನ್ನು ವಿವರಿಸಿ ಹೇಳೋಣವೆಂದರೆ ಅಸಾಧ್ಯ; ಅವು ಅಸಂಖ್ಯಾತವಾಗಿವೆ.


ಪ್ರಿಯರೇ, ನಾವು ಈಗ ದೇವರ ಮಕ್ಕಳಾಗಿದ್ದೇವೆ. ಮುಂದೆ ನಾವು ಎಂಥವರಾಗಿರುತ್ತೆವೋ ಎಂಬುದು ಇನ್ನೂ ತಿಳಿದಿಲ್ಲ. ಆದರೆ ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಾವು ಆತನ ಹಾಗಿರುವೆವೆಂದು ಬಲ್ಲೆವು. ಏಕೆಂದರೆ ಆತನಿರುವ ಪ್ರಕಾರವೇ ಆತನನ್ನು ನೋಡುವೆವು.


ಕ್ರಿಸ್ತನ ಅಗಮ್ಯವಾದ ಐಶ್ವರ್ಯದ ಸುವಾರ್ತೆಯನ್ನು ಅನ್ಯಜನರಿಗೆ ಸಾರುವ ಹಾಗೆಯೂ


“ಕರ್ತನ ಮನಸ್ಸನ್ನು ತಿಳಿದುಕೊಂಡವರಾರು? ಆತನಿಗೆ ಆಲೋಚನಾಕರ್ತನಾಗಿದ್ದವನು ಯಾರು?


ಆಹಾ, ಈ ಅದ್ಭುತಗಳು ಆತನ ಮಾರ್ಗಗಳ ಕಟ್ಟಕಡೆಯಾಗಿವೆ. ಆತನ ವಿಷಯವಾಗಿ ಸೂಕ್ಷ್ಮ ಶಬ್ದವನ್ನು ಮಾತ್ರ ಕೇಳಿದ್ದೇವೆ, ಆತನ ಪ್ರಾಬಲ್ಯದ ಘನಗರ್ಜನೆಯನ್ನು ಯಾರು ಗ್ರಹಿಸಬಲ್ಲರು?”


ಆದರೆ ಸಂಪೂರ್ಣವಾದದ್ದು ಬಂದಾಗ ಅಪೂರ್ಣವಾದದ್ದು ಇಲ್ಲದಂತಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು