Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 14:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಭಾಷೆಯ ಅರ್ಥವು ನನಗೆ ತಿಳಿಯದಿದ್ದರೆ ಮಾತನಾಡುವವನಿಗೆ ನಾನು ಪರದೇಶದವನಂತಿರುವೆನು; ಮಾತನಾಡುವವನು ನನಗೆ ಪರದೇಶಿಯವನಂತಿರುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಭಾಷೆಯ ಅರ್ಥವು ನನಗಾಗದಿದ್ದರೆ ಮಾತನಾಡುವವನಿಗೆ ನಾನು ಪರಕೀಯನಂತಾಗುತ್ತೇನೆ; ನನಗೆ ಅವನು ಪರಕೀಯನಂತಾಗುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಭಾಷೆಯ ಅರ್ಥವು ನನಗೆ ತಿಳಿಯದಿದ್ದರೆ ಮಾತಾಡುವವನಿಗೆ ನಾನು ಅನ್ಯದೇಶದವನಂತಿರುವೆನು; ಮಾತಾಡುವವನು ನನಗೆ ಅನ್ಯದೇಶದವನಂತಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆದ್ದರಿಂದ, ಒಬ್ಬ ವ್ಯಕ್ತಿಯು ಮಾತಾಡುವ ಭಾಷೆಯನ್ನು ನಾನು ಅರ್ಥಮಾಡಿಕೊಳ್ಳದಿದ್ದರೆ ಅವನು ನನಗೆ ವಿದೇಶಿಯನಂತಿರುವನು; ನಾನೂ ಅವನಿಗೆ ವಿದೇಶಿಯನಂತಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನಾನು ಭಾಷೆಯ ಅರ್ಥವನ್ನು ಗ್ರಹಿಸದಿದ್ದರೆ, ಮಾತಾಡುವವನಿಗೆ ನಾನು ಅನ್ಯದೇಶದವನಂತಿರುವೆನು, ಮಾತನಾಡುವವನು ನನಗೆ ಅನ್ಯದೇಶದವನಂತಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಖರೆ ಬಾಶೆಚೊ ಅರ್ತ್ ಮಾಕಾ ಗೊತ್ತ್ ನಸ್ಲ್ಯಾರ್, ಮಾಜೆಕ್ಡೆ ಬೊಲ್ತಲ್ಯಾಕ್ ಮಿಯಾ ಎಕ್ ವಳಕ್ ನಸಲ್ಲೊ ಸಾರ್ಕೆ ಹೊತಾ, ಅನಿ ತೊ ಬಿ ಮಾಕಾ ವಳಕ್ ನಸಲ್ಲೊ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 14:11
6 ತಿಳಿವುಗಳ ಹೋಲಿಕೆ  

ಅನ್ಯಭಾಷೆಯವರಾದ ಆ ದ್ವೀಪದವರು ನಮಗೆ ವಿಶೇಷ ಸಹಾನುಭೂತಿಯನ್ನು ತೋರಿದರು. ಮಳೆಯು ಆಗಲೇ ಹೊಯ್ದು ಚಳಿಯಾಗುತ್ತಿದ್ದುದರಿಂದ, ಅವರು ಬೆಂಕಿಯನ್ನು ಹೊತ್ತಿಸಿ ನಮ್ಮೆಲ್ಲರನ್ನು ಸೇರಿಸಿಕೊಂಡರು.


ಈ ಜ್ಞಾನದಲ್ಲಿ ಗ್ರೀಕನು ಮತ್ತು ಯೆಹೂದ್ಯನು ಎಂಬ ಭೇದವಿಲ್ಲ, ಸುನ್ನತಿಮಾಡಿಸಿಕೊಂಡವರು ಮತ್ತು ಸುನ್ನತಿ ಮಾಡಿಸಿಕೊಳ್ಳದವರು ಎಂಬ ಭೇದವಿಲ್ಲ, ನಾಗರಿಕ, ಅನಾಗರಿಕನು ಎಂಬ ಭೇದವಿಲ್ಲ, ದಾಸನು, ಸ್ವತಂತ್ರನು ಎಂಬ ಭೇದವಿಲ್ಲ, ಆದರ ಬದಲಾಗಿ ಕ್ರಿಸ್ತನೇ ಸಮಸ್ತವೂ ಹಾಗೂ ಸಮಸ್ತರಲ್ಲಿಯೂ ಇರುವಾತನಾಗಿದ್ದಾನೆ.


“ಅನ್ಯಭಾಷೆಯವರ ಮೂಲಕವಾಗಿಯೂ ಅನ್ಯದೇಶಸ್ಥರ ಬಾಯಿಂದಲೂ ನಾನು ಈ ಜನರ ಸಂಗಡ ಮಾತನಾಡುವೆನು; ಆದರೂ ಅವರು ನನ್ನ ಮಾತಿಗೆ ಕಿವಿಗೊಡುವುದಿಲ್ಲವೆಂದು ಕರ್ತನು ಹೇಳುತ್ತಾನೆಂಬುದಾಗಿ” ಧರ್ಮಶಾಸ್ತ್ರದಲ್ಲಿ ಬರೆದಿದೆ.


ಗ್ರೀಕರಿಗೂ ಇತರ ಜನಗಳಿಗೂ, ಜ್ಞಾನಿಗಳಿಗೂ, ಮೂಢರಿಗೂ ತೀರಿಸಬೇಕಾದ ಒಂದು ಋಣ ನನ್ನ ಮೇಲಿದೆ.


ಆ ಸರ್ಪವು ಅವನ ಕೈಯಿಂದ ಜೋತಾಡುವುದನ್ನು ದ್ವೀಪದವರು ನೋಡಿ; “ಈ ಮನುಷ್ಯನು ಕೊಲೆಪಾತಕನೇ ಸರಿ; ಸಮುದ್ರದಿಂದ ತಪ್ಪಿಸಿಕೊಂಡು ಬಂದರೂ ನ್ಯಾಯದೇವತೆಯು ಇವನನ್ನು ಬದುಕಗೊಡಿಸುವುದಿಲ್ಲವೆಂದು” ತಮ್ಮತಮ್ಮೊಳಗೆ ಮಾತನಾಡಿಕೊಂಡರು.


ಲೋಕದಲ್ಲಿ ಅನೇಕ ಭಾಷೆಗಳಿವೆ, ಅವುಗಳಲ್ಲಿ ಒಂದಾದರೂ ಅರ್ಥರಹಿತವಾದವುಗಳಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು