1 ಕೊರಿಂಥದವರಿಗೆ 14:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ನೀನು ಆತ್ಮನಿಂದ ಮಾತ್ರ ದೇವರ ಸ್ತೋತ್ರ ಮಾಡಿದರೆ ನೀನು ಹೇಳಿದ್ದು ತಿಳಿಯದೆ ಇರುವ ಇನ್ನೊಬ್ಬನು ನೀನು ಮಾಡುವ ಕೃತಜ್ಞತಾಸ್ತುತಿಗೆ ಅವನು “ಆಮೆನ್” ಎಂದು ಹೇಗೆ ಹೇಳಬಲ್ಲನು? ನೀನು ಮಾತನಾಡಿದು ಅವನಿಗೆ ತಿಳಿಯುವುದಿಲ್ಲವಲ್ಲಾ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಸಭೆಯಲ್ಲಿ ನೀನು ಆತ್ಮದಿಂದ ಮಾತ್ರ ದೇವರ ಸ್ತುತಿಮಾಡಿದರೆ ನಿನ್ನ ಹಾಗೆ ಪರವಶನಲ್ಲದವನು ನಿನ್ನ ಕೃತಜ್ಞತಾ ಸ್ತುತಿಗೆ ‘ಆಮೆನ್’ ಎಂದು ಹೇಗೆ ತಾನೇ ಹೇಳಬಲ್ಲನು? ನೀನು ಹೇಳುವುದೇ ಅವನಿಗೆ ತಿಳಿಯುವುದಿಲ್ಲವಲ್ಲಾ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ನೀನು ಆತ್ಮದಿಂದ ಮಾತ್ರ ದೇವರ ಸ್ತೋತ್ರಮಾಡಿದರೆ ಆ ವರವನ್ನು ಹೊಂದದಿರುವ ಸಭೆಯವನಿಗೆ ನೀನು ಹೇಳಿದ್ದು ತಿಳಿಯದೆ ಇರುವದರಿಂದ ನೀನು ಮಾಡುವ ಕೃತಜ್ಞತಾಸ್ತುತಿಗೆ ಅವನು ಆಮೆನ್ ಎಂದು ಹೇಗೆ ಹೇಳಾನು? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ನೀನು ನಿನ್ನ ಜೀವಾತ್ಮದಿಂದ ಸುತ್ತಿಸಬಹದು. ಆದರೆ ಅಲ್ಲಿರುವ ಒಬ್ಬನು ನಿನ್ನ ಕೃತಜ್ಞತಾಸ್ತುತಿಯನ್ನು ಅರ್ಥಮಾಡಿಕೊಳ್ಳದ ಹೊರತು “ಆಮೆನ್” ಎಂದು ಹೇಳಲಾರನು. ಏಕೆಂದರೆ ನೀನು ಹೇಳುತ್ತಿರುವುದು ಅವನಿಗೆ ತಿಳಿಯುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ನೀನು ಆತ್ಮದಲ್ಲಿ ಮಾತ್ರ ಸ್ತೋತ್ರ ಮಾಡಿದರೆ, ತಿಳುವಳಿಕೆ ಇಲ್ಲದೆ ಕುಳಿತಿರುವವನು ನಿನ್ನ ಕೃತಜ್ಞತಾಸ್ತುತಿಗೆ, “ಆಮೆನ್” ಎಂದು ಹೇಳುವುದು ಹೇಗೆ? ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್16 ದೆವಾಚಿ ಧನ್ಯವಾದ್ ಸುತ್ತಿ ಆತ್ಮ್ಯಾನ್ ಎವ್ಡೆಚ್ ಕರ್ತೆಯ್ ಹೊಲ್ಯಾರ್ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾತ್ ಹೊತ್ತ್ಯಾ ವರು ನಸ್ತಾನಾ ಹೊತ್ತ್ಯಾ ಮಾನ್ಸಾನ್ ತುಜ್ಯಾ ಧನ್ಯವಾದ್ ಸುತ್ತಿಕ್ ಆಮೆನ್ ಮನುನ್ ಕಶೆ ಮನ್ತಲೆ? ಕಶ್ಯಾಕ್ ಮಟ್ಲ್ಯಾರ್ ತಿಯಾ ಬೊಲ್ತಲೆ ತೆಕಾ ಕಾಯ್ಬಿ ಕಳಿನಾ, ಅಧ್ಯಾಯವನ್ನು ನೋಡಿ |