Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 14:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನೀನು ಎಷ್ಟು ಚೆನ್ನಾಗಿ ಕೃತಜ್ಞತಾಸ್ತುತಿ ಮಾಡಿದರೂ, ಆದರಿಂದ ಬೇರೊಬ್ಬನು ಭಕ್ತಿವೃದ್ಧಿಹೊಂದುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ನೀನು ಮಾಡುವ ಕೃತಜ್ಞತಾಸ್ತುತಿ ಎಷ್ಟು ಚೆನ್ನಾಗಿದ್ದರೂ ಅವನ ಮಟ್ಟಿಗೆ ಅದು ನಿಷ್ಪ್ರಯೋಜಕವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನೀನಂತೂ ಚೆನ್ನಾಗಿ ಕೃತಜ್ಞತಾಸ್ತುತಿ ಮಾಡುತ್ತೀ ಹೌದು, ಆದರೆ ಬೇರೊಬ್ಬನು ಭಕ್ತಿವೃದ್ಧಿ ಹೊಂದುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಸತ್ಯವಾಗಿ ಹೇಳುವುದಾದರೆ, ದೇವರಿಗೆ ಮಾಡುವ ಕೃತಜ್ಞತಾಸ್ತುತಿಯಿಂದ ಬೇರೊಬ್ಬನಿಗೆ ಸಹಾಯವಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ನೀನು ಚೆನ್ನಾಗಿ ಕೃತಜ್ಞತಾಸ್ತುತಿ ಮಾಡುತ್ತೀ ನಿಜವೇ. ಆದರೆ, ಮತ್ತೊಬ್ಬನಿಗೆ ಭಕ್ತಿವೃದ್ಧಿಯಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ತಿಯಾ ಕರ್‍ತಲೆ ಧನ್ಯವಾದ್ ಸ್ತುತಿಚಿ ಮಾಗ್ನೆ ಥೈ ಬರಿ ಹೊಲೆ ಖರೆ ತಿ ಅನಿ ಎಕಾಮೆಕಾಚ್ಯಾ ಫಾಯ್ದ್ಯಾಕ್ ಪಡಿನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 14:17
5 ತಿಳಿವುಗಳ ಹೋಲಿಕೆ  

ಅನ್ಯಭಾಷೆಗಳನ್ನಾಡುವವನು ತನಗೆ ತಾನೇ ಆತ್ಮೀಕ ವೃದ್ಧಿಯನ್ನುಂಟುಮಾಡಿಕೊಳ್ಳುತ್ತಾನೆ, ಆದರೆ ಪ್ರವಾದಿಸುವವನು ಸಭೆಗೆ ಭಕ್ತಿವೃದ್ಧಿಯನ್ನುಂಟು ಮಾಡುತ್ತಾನೆ.


ಆದರೆ ಸಹೋದರರೇ, ನಾನು ನಿಮ್ಮ ಬಳಿಗೆ ಬಂದು ದೇವರು ತಿಳಿಸಿದ್ದನ್ನು ಪ್ರಕಟಿಸದೆ, ಜ್ಞಾನವಾಕ್ಯಗಳನ್ನಾಡದೆ, ಪ್ರವಾದನೆಯನ್ನು ಹೇಳದೆ, ಉಪದೇಶಮಾಡದೆ, ಅನ್ಯಭಾಷೆಗಳನ್ನು ಮಾತ್ರ ಮಾತನಾಡುವವನಾಗಿದ್ದರೆ ನನ್ನಿಂದ ನಿಮಗೇನು ಪ್ರಯೋಜನವಾದೀತು?


ಆದ್ದರಿಂದ ನಾವು ಸಮಾಧಾನಕ್ಕೂ, ಪರಸ್ಪರ ಭಕ್ತಿವೃದ್ಧಿಗೂ ಅನುಕೂಲವಾಗಿರುವಂಥವುಗಳನ್ನು ಸಾಧಿಸಿಕೊಳ್ಳೋಣ.


ನೀವೆಲ್ಲರೂ ಅನ್ಯಭಾಷೆಗಳನ್ನಾಡಬೇಕೆಂದು ನಾನು ಅಪೇಕ್ಷಿಸಿದರೂ, ಅದಕ್ಕಿಂತಲೂ ನೀವು ಪ್ರವಾದಿಸಬೇಕೆಂಬುದೆ ನನ್ನಿಷ್ಟವಾಗಿದೆ. ಅನ್ಯಭಾಷೆಗಳನ್ನಾಡುವವನು ಸಭೆಯು ಅಭಿವೃದ್ಧಿಯಾಗುವುದಕ್ಕಾಗಿ ಆ ಅನ್ಯಭಾಷೆಯ ಅರ್ಥವನ್ನು ವಿವೇಚಿಸಿ ಹೇಳದೆ ಹೋದರೆ ಅವನಿಗಿಂತ ಪ್ರವಾದಿಸುವವನು ಶ್ರೇಷ್ಠನು.


ನಾನು ನಿಮ್ಮೆಲ್ಲರಿಗಿಂತಲೂ ಹೆಚ್ಚಾಗಿ ಅನ್ಯಭಾಷೆಗಳನ್ನಾಡುತ್ತೇನೆಂದು ದೇವರನ್ನು ಕೊಂಡಾಡುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು