Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 14:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನೀವೆಲ್ಲರೂ ಅನ್ಯಭಾಷೆಗಳನ್ನಾಡಬೇಕೆಂದು ನಾನು ಅಪೇಕ್ಷಿಸಿದರೂ, ಅದಕ್ಕಿಂತಲೂ ನೀವು ಪ್ರವಾದಿಸಬೇಕೆಂಬುದೆ ನನ್ನಿಷ್ಟವಾಗಿದೆ. ಅನ್ಯಭಾಷೆಗಳನ್ನಾಡುವವನು ಸಭೆಯು ಅಭಿವೃದ್ಧಿಯಾಗುವುದಕ್ಕಾಗಿ ಆ ಅನ್ಯಭಾಷೆಯ ಅರ್ಥವನ್ನು ವಿವೇಚಿಸಿ ಹೇಳದೆ ಹೋದರೆ ಅವನಿಗಿಂತ ಪ್ರವಾದಿಸುವವನು ಶ್ರೇಷ್ಠನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನೀವೆಲ್ಲರೂ ಪರವಶಾಭಾಷೆಗಳನ್ನು ಆಡಬಹುದಾದರೂ ದೇವರ ವಾಕ್ಯವನ್ನು ಸಾರುವವರಾಗಬೇಕೆಂಬುದೇ ನನ್ನ ಅಭಿಲಾಷೆ. ಪರವಶಾಭಾಷೆಗಳನ್ನು ಆಡುವಾತನು ಧರ್ಮಸಭೆಯ ಅಭಿವೃದ್ಧಿಗಾಗಿ ತನ್ನ ಮಾತಿನ ಅರ್ಥವನ್ನು ಹೇಳಲಾರನಾದರೆ , ಅವನಿಗಿಂತಲೂ ದೇವರ ವಾಕ್ಯವನ್ನು ಸಾರುವವನೇ ಶ್ರೇಷ್ಠನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನೀವೆಲ್ಲರೂ ವಾಣಿಗಳನ್ನಾಡಬೇಕೆಂದು ನಾನು ಅಪೇಕ್ಷಿಸಿದರೂ ಅದಕ್ಕಿಂತಲೂ ನೀವು ಪ್ರವಾದಿಸಬೇಕೆಂಬದೇ ನನ್ನಿಷ್ಟ. ವಾಣಿಗಳನ್ನಾಡುವವನು ಸಭೆಗೆ ಭಕ್ತಿವೃದ್ಧಿಯಾಗುವದಕ್ಕಾಗಿ ಆ ವಾಣಿಯ ಅರ್ಥವನ್ನು ಹೇಳದೆ ಹೋದರೆ ಅವನಿಗಿಂತ ಪ್ರವಾದಿಸುವವನು ಶ್ರೇಷ್ಠ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ವಿವಿಧ ಭಾಷೆಗಳಲ್ಲಿ ಮಾತಾಡುವ ವರವನ್ನು ನೀವೆಲ್ಲರೂ ಹೊಂದಿರಬೇಕೆಂದು ನನ್ನ ಅಪೇಕ್ಷೆಯಾಗಿದೆ. ಆದರೆ ನೀವು ಪ್ರವಾದಿಸಬೇಕೆಂದು ನಾನು ಇನ್ನೂ ಹೆಚ್ಚಾಗಿ ಅಪೇಕ್ಷಿಸುತ್ತೇನೆ. ಕೇವಲ ವಿವಿಧ ಭಾಷೆಗಳನ್ನು ಮಾತನಾಡುವವನಿಗಿಂತಲೂ ಪ್ರವಾದಿಸುವವನು ಹೆಚ್ಚು ಶ್ರೇಷ್ಠನಾಗಿದ್ದಾನೆ. ಆದರೆ ವಿವಿಧ ಭಾಷೆಗಳಲ್ಲಿ ಮಾತಾಡುವವನು ಆ ಭಾಷೆಗಳನ್ನು ಅನುವಾದಿಸಬಲ್ಲವನಾಗಿದ್ದರೆ, ಅವನು ಪ್ರವಾದಿಸುವವನಷ್ಟೇ ಶ್ರೇಷ್ಠನಾಗುತ್ತಾನೆ. ಆಗ ಅವನು ಹೇಳುವ ಸಂಗತಿಗಳ ಮೂಲಕ ಸಭೆಗೆ ಸಹಾಯವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನೀವೆಲ್ಲರೂ ಅನ್ಯಭಾಷೆಗಳನ್ನಾಡಬೇಕೆಂದು ಈಗ ನಾನು ಅಪೇಕ್ಷಿಸಿದರೂ, ಅದಕ್ಕಿಂತ ಹೆಚ್ಚಾಗಿ ನೀವು ಪ್ರವಾದಿಸಬೇಕೆಂದು ಅಪೇಕ್ಷಿಸುತ್ತೇನೆ. ಅನ್ಯಭಾಷೆಗಳನ್ನಾಡುವವನು ಸಭೆಗೆ ಭಕ್ತಿವೃದ್ಧಿಯಾಗುವಂತೆ ಅದರ ಅರ್ಥವನ್ನು ಹೇಳದೆ ಹೋದರೆ, ಅವನಿಗಿಂತ ಪ್ರವಾದಿಸುವವನೇ ಶ್ರೇಷ್ಠನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ತುಮಿ ಸಗ್ಳ್ಯಾನಿಬಿ ವಿಚಿತ್ರ್ ಬಾಶಾನಿ ಬೊಲ್ಲ್ಯಾರ್‌ಬಿ ಮಾಕಾ ಲೈ ಖುಶಿ; ಜಾಲ್ಯಾರ್ಬಿ ತ್ಯಾ ಲೊಕಾಕ್ನಿ ಜಾಸ್ತಿ ತುಮಿ ಪ್ರವಾದ್ ಕರುನ್ ಬೊಲುಚೆ ಮನ್ತಲಿ ಮಾಜಿ ಆಶಾ. ಕಶ್ಯಾಕ್ ಮಟ್ಲ್ಯಾರ್ ಪ್ರವಾದ್ ಕರುನ್ ಬೊಲ್ತಾ ತೊ ವಿಚಿತ್ರ್ ಬಾಶಾತ್ನಿ ಬೊಲ್ತಲ್ಯಾಚ್ಯಾನ್ಕಿ ಕವ್ಡೆಕಿ ಬರೊ, ಖರೆ ವಿಚಿತ್ರ್ ಬಾಶಾನ್ ಬೊಲ್ತಾ ತೊ ಅಪ್ನಿ ಬೊಲಲ್ಯಾಚೊ ಅರ್ಥ್ ಸಾಂಗುನ್ ಸಗ್ಳ್ಯಾ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಕ್ ಪ್ರಚಾರ್ ಕರ್‍ತಾ ಹೊಲ್ಯಾರ್, ತೊ ಬಿ ಉತ್ತಮ್ ಬರೊ ಮನುನ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 14:5
13 ತಿಳಿವುಗಳ ಹೋಲಿಕೆ  

ಮತ್ತೊಬ್ಬನಿಗೆ ಮಹತ್ಕಾರ್ಯಗಳನ್ನು ಮಾಡುವ ವರವು, ಇನ್ನೊಬ್ಬನಿಗೆ ಪ್ರವಾದನೆಯ ವರವು, ಒಬ್ಬನಿಗೆ ಆತ್ಮವನ್ನು ವಿವೇಚಿಸುವ ವರವು, ಮತ್ತೊಬ್ಬನಿಗೆ ವಿವಿಧ ಭಾಷೆಗಳನ್ನಾಡುವ ವರವು, ಒಬ್ಬನಿಗೆ ಭಾಷೆಗಳ ಅರ್ಥವನ್ನು ಬಿಡಿಸಿ ಹೇಳುವ ವರವು ಕೊಡಲ್ಪಡುತ್ತದೆ.


ನಾನು ಮನುಷ್ಯರ ಭಾಷೆಗಳನ್ನೂ, ದೇವದೂತರ ಭಾಷೆಗಳನ್ನೂ ಮಾತನಾಡುವವನಾದರೂ ಪ್ರೀತಿಯಿಲ್ಲದವನಾಗಿದ್ದರೆ ನಾದಕೊಡುವ ಕಂಚಿನ ಜಾಗಟೆ, ಗಣಗಣಿಸುವ ಘಂಟೆ ಆಗಿದ್ದೇನೆ.


“ಇದಲ್ಲದೆ ನಂಬುವವರಿಂದ ಈ ಸೂಚಕಕಾರ್ಯಗಳು ಉಂಟಾಗುವವು; ಅವರು ನನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸುವರು, ಹೊಸ ಭಾಷೆಗಳಲ್ಲಿ ಮಾತನಾಡುವರು;


ಪ್ರತಿನಿತ್ಯ ಪ್ರೀತಿಯಿಂದ ಜೀವಿಸಲು ಆಶಿಸಿರಿ ಮತ್ತು ಪವಿತ್ರಾತ್ಮನಿಂದುಂಟಾಗುವ ವರಗಳನ್ನು, ಅದರೊಳಗೂ ವಿಶೇಷವಾಗಿ ಪ್ರವಾದನಾ ವರವನ್ನೇ ಆಸಕ್ತಿಯಿಂದ ಅಪೇಕ್ಷಿಸಿರಿ.


ಪ್ರೀತಿಯು ಬಹು ತಾಳ್ಮೆಯುಳ್ಳದ್ದು, ದಯೆಯುಳ್ಳದ್ದು. ಪ್ರೀತಿಯು ಹೊಟ್ಟೆಕಿಚ್ಚುಪಡುವುದಿಲ್ಲ, ಹೊಗಳಿಕೊಳ್ಳುವುದಿಲ್ಲ. ಅದು ಗರ್ವಪಡುವುದಿಲ್ಲ, ಅಸಭ್ಯವಾಗಿ ನಡೆಯುವುದಿಲ್ಲ.


ಆದ್ದರಿಂದ ನಾವು ಸಮಾಧಾನಕ್ಕೂ, ಪರಸ್ಪರ ಭಕ್ತಿವೃದ್ಧಿಗೂ ಅನುಕೂಲವಾಗಿರುವಂಥವುಗಳನ್ನು ಸಾಧಿಸಿಕೊಳ್ಳೋಣ.


ನೀನು ಎಷ್ಟು ಚೆನ್ನಾಗಿ ಕೃತಜ್ಞತಾಸ್ತುತಿ ಮಾಡಿದರೂ, ಆದರಿಂದ ಬೇರೊಬ್ಬನು ಭಕ್ತಿವೃದ್ಧಿಹೊಂದುವುದಿಲ್ಲ.


ಅದಕ್ಕೆ ಲಾಬಾನನು, “ಒಳ್ಳೆಯದು, ನೀನು ಹೇಳಿದಂತೆಯೇ ಆಗಲಿ” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು