Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 14:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆದರೆ ಸಹೋದರರೇ, ನಾನು ನಿಮ್ಮ ಬಳಿಗೆ ಬಂದು ದೇವರು ತಿಳಿಸಿದ್ದನ್ನು ಪ್ರಕಟಿಸದೆ, ಜ್ಞಾನವಾಕ್ಯಗಳನ್ನಾಡದೆ, ಪ್ರವಾದನೆಯನ್ನು ಹೇಳದೆ, ಉಪದೇಶಮಾಡದೆ, ಅನ್ಯಭಾಷೆಗಳನ್ನು ಮಾತ್ರ ಮಾತನಾಡುವವನಾಗಿದ್ದರೆ ನನ್ನಿಂದ ನಿಮಗೇನು ಪ್ರಯೋಜನವಾದೀತು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಸಹೋದರರೇ, ನಾನು ನಿಮ್ಮ ಬಳಿಗೆ ಬಂದು ದೇವರ ಶ್ರುತಿಯನ್ನು, ನೈಜ ಜ್ಞಾನವನ್ನು, ದೇವರ ವಾಕ್ಯವನ್ನು, ದಿವ್ಯಬೋಧೆಯನ್ನು ನೀಡದೆ ಪರವಶಾಭಾಷೆಗಳಲ್ಲಿಯೇ ಮಾತನಾಡಿದರೆ ನಿಮಗೆ ಸಿಗುವ ಲಾಭವಾದರೂ ಏನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಹೀಗಿರುವದರಿಂದ ಸಹೋದರರೇ, ನಾನು ನಿಮ್ಮ ಬಳಿಗೆ ಬಂದು ದೇವರು ತಿಳಿಸಿದ್ದನ್ನು ಪ್ರಕಟಿಸದೆ ಜ್ಞಾನವಾಕ್ಯವನ್ನಾಡದೆ ಪ್ರವಾದನೆಯನ್ನು ಹೇಳದೆ ಉಪದೇಶಮಾಡದೆ ವಾಣಿಗಳನ್ನು ಮಾತ್ರ ಆಡುವವನಾಗಿದ್ದರೆ ನನ್ನಿಂದ ನಿಮಗೇನು ಪ್ರಯೋಜನವಾದೀತು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಸಹೋದರ ಸಹೋದರಿಯರೇ, ನಾನು ವಿವಿಧ ಭಾಷೆಗಳನ್ನು ಮಾತಾಡುವವನಾಗಿ ನಿಮ್ಮ ಬಳಿಗೆ ಬಂದರೆ ಅದರಿಂದ ನಿಮಗೆ ಸಹಾಯವಾಗುವುದೇ? ಇಲ್ಲ! ನಾನು ನಿಮಗೆ ಹೊಸ ಸತ್ಯವನ್ನು, ಜ್ಞಾನವನ್ನು, ಪ್ರವಾದನೆಯನ್ನು ಮತ್ತು ಉಪದೇಶವನ್ನು ತಂದರೆ ಮಾತ್ರ ನಿಮಗೆ ಸಹಾಯವಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಹೀಗಿರುವುದರಿಂದ ಪ್ರಿಯರೇ, ನಾನು ನಿಮ್ಮ ಬಳಿಗೆ ಬಂದು ಪ್ರಕಟನೆಯಿಂದಾಗಲಿ, ವಿದ್ಯೆಯಿಂದಾಗಲಿ, ಪ್ರವಾದನೆಯಿಂದಾಗಲಿ, ಉಪದೇಶದಿಂದಾಗಲಿ ಮಾತನಾಡದೆ, ಅನ್ಯಭಾಷೆಗಳಿಂದ ಮಾತನಾಡುವವನಾಗಿದ್ದರೆ, ನನ್ನಿಂದ ನಿಮಗೇನು ಪ್ರಯೋಜನ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಅಶೆ ರ್‍ಹಾತಾನಾ ಭಾವಾನು ಅನಿ ಭೆನಿಯಾನು, ಮಿಯಾ ದೆವಾಕ್ನಾ ಯೆಲ್ಲಿ ದಾಕ್ವನ್ ನಾಹೊಲ್ಯಾರ್ ಉಲ್ಲೆ ಶಾನೆಪಾನ್ ನಾಹೊಲ್ಯಾರ್ ಪ್ರೆರನಾನ್ ಭರಲ್ಲಿ ಬಾತ್ಮಿ, ನಾಹೊಲ್ಯಾರ್ ಉಲ್ಲಿ ಶಿಕಾಪಾ ಹಾನ್ತಲೆ ಸೊಡುನ್, ವಿಚಿತ್ರ್ ಬಾಶಾತ್ನಿ ಬೊಲುನ್ಗೆತ್ ತುಮ್ಚೆ ಮದ್ದಿ ಯೆಲ್ಯಾರ್, ಮಾಜ್ಯಾನ್ ತುಮ್ಕಾ ಕಾಯ್ ಫಾಯ್ದೊ ಹೊಯ್ ಹೊತ್ತೊ?

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 14:6
32 ತಿಳಿವುಗಳ ಹೋಲಿಕೆ  

ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ಮಹಿಮಾಸ್ವರೂಪನಾದ ತಂದೆಯೂ ಆಗಿರುವಾತನು ತನ್ನ ವಿಷಯವಾಗಿ ಪೂರ್ಣವಾದ ತಿಳಿವಳಿಕೆಯನ್ನು ಕೊಟ್ಟು, ಜ್ಞಾನ ಮತ್ತು ಪ್ರಕಟಣೆಗಳ ಆತ್ಮವನ್ನು ನಿಮಗೆ ದಯಪಾಲಿಸಬೇಕೆಂದು ಪ್ರಾರ್ಥಿಸುತ್ತೇನೆ.


ದೈವ ಪ್ರೇರಿತವಾದ ಪ್ರತಿಯೊಂದು ಶಾಸ್ತ್ರವು ಉಪದೇಶಕ್ಕೂ, ಖಂಡನೆಗೂ, ತಿದ್ದುಪಡಿಗೂ, ನೀತಿಶಿಕ್ಷೆಗೂ ಉಪಯುಕ್ತವಾಗಿದೆ.


ಆದರೆ ನೀವು ಮೊದಲು ಪಾಪಕ್ಕೆ ದಾಸರಾಗಿದ್ದರೂ ನಿಮಗೆ ಕಲಿಸಿಕೊಟ್ಟ ಬೋಧನೆಗೆ ನೀವು ಮನಃಪೂರ್ವಕವಾಗಿ ಅಧೀನರಾದ್ದರಿಂದಲೂ,


ಪ್ರತಿನಿತ್ಯ ಪ್ರೀತಿಯಿಂದ ಜೀವಿಸಲು ಆಶಿಸಿರಿ ಮತ್ತು ಪವಿತ್ರಾತ್ಮನಿಂದುಂಟಾಗುವ ವರಗಳನ್ನು, ಅದರೊಳಗೂ ವಿಶೇಷವಾಗಿ ಪ್ರವಾದನಾ ವರವನ್ನೇ ಆಸಕ್ತಿಯಿಂದ ಅಪೇಕ್ಷಿಸಿರಿ.


ಕ್ರಿಸ್ತನ ಉಪದೇಶದಲ್ಲಿ ನೆಲೆಗೊಳ್ಳದೆ ಅದನ್ನು ಮೀರಿ ಹೋಗುವವನಲ್ಲಿ ದೇವರಿಲ್ಲ. ಆ ಉಪದೇಶದಲ್ಲಿ ನೆಲೆಗೊಂಡಿರುವವನಿಗೆ ತಂದೆಯ ಮತ್ತು ಮಗನ ಅನ್ಯೋನ್ಯತೆ ಇರುತ್ತದೆ.


ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ಕುರಿತಾದ ಕೃಪೆಯಲ್ಲಿಯೂ ಜ್ಞಾನದಲ್ಲಿಯೂ ನೀವು ಅಭಿವೃದ್ಧಿ ಹೊಂದಿರಿ. ಆತನಿಗೆ ಈಗಲೂ ಸದಾಕಾಲವೂ ಮಹಿಮೆಯುಂಟಾಗಲಿ. ಆಮೆನ್.


ಈ ಕಾರಣದಿಂದಲೇ ನೀವು ಪೂರ್ಣಾಸಕ್ತಿಯುಳ್ಳವರಾಗಿ ನಿಮಗಿರುವ ನಂಬಿಕೆಗೆ ಸದ್ಗುಣವನ್ನೂ, ಸದ್ಗುಣಕ್ಕೆ ಜ್ಞಾನವನ್ನೂ,


ನಾನಾ ವಿಧವಾದ ಅನ್ಯೋಪದೇಶಗಳ ಸೆಳವಿಗೆ ಸಿಕ್ಕಿಕೊಳ್ಳಬೇಡಿರಿ. ಏಕೆಂದರೆ ದೇವರ ಕೃಪೆಯಿಂದ ಹೃದಯವನ್ನು ದೃಢಪಡಿಸಿಕೊಳ್ಳುವುದು ಒಳ್ಳೆಯದು. ಭೋಜನ ಪದಾರ್ಥಗಳ ಕುರಿತಾದ ನಿಯಮಗಳನ್ನು ಅನುಸರಿಸುವವರಿಗೆ ಏನೂ ಪ್ರಯೋಜನವಾಗುವುದಿಲ್ಲ.


ಇದು ನಂಬತಕ್ಕ ಮಾತಾಗಿದೆ; ದೇವರಲ್ಲಿ ನಂಬಿಕೆ ಇಟ್ಟಿರುವವರು ಸತ್ಕ್ರಿಯೆಗಳನ್ನು ಮಾಡುವುದರಲ್ಲಿ ಜಾಗರೂಕರಾಗಿರುವಂತೆ ನೀನು ಈ ಎಲ್ಲಾ ಮಾತುಗಳನ್ನು ದೃಢವಾಗಿ ಹೇಳಬೇಕೆಂದು ಅಪೇಕ್ಷಿಸುತ್ತೇನೆ. ಅದು ಉತ್ತಮವೂ, ಮನುಷ್ಯರಿಗೆ ಪ್ರಯೋಜನಕಾರಿಯೂ ಆಗಿವೆ.


ದೇವರ ವಾಕ್ಯವನ್ನು ಸಾರು, ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಅದರಲ್ಲಿ ಆಸಕ್ತನಾಗಿರು. ಪೂರ್ಣ ದೀರ್ಘಶಾಂತಿಯಿಂದ ಉಪದೇಶಿಸುತ್ತಾ ಖಂಡಿಸು, ಗದರಿಸು, ಎಚ್ಚರಿಸು.


ನೀನಾದರೋ ನನ್ನನ್ನು ಅನುಸರಿಸುವವನಾಗಿದ್ದು, ನನ್ನ ಬೋಧನೆ, ನಡತೆ, ಉದ್ದೇಶ, ನಂಬಿಕೆ, ದೀರ್ಘಶಾಂತಿ, ಪ್ರೀತಿ, ಸೈರಣೆ ಇವುಗಳನ್ನೂ,


ಈ ಸಂಗತಿಗಳನ್ನು ಸಭೆಯವರ ಜ್ಞಾಪಕಕ್ಕೆ ತರಬೇಕು. ಕೇಳುವವರಿಗೆ ಕೇಡನ್ನುಂಟುಮಾಡುವುದಲ್ಲದೇ, ಯಾವ ಪ್ರಯೋಜನಕ್ಕೂ ಬಾರದ ತರ್ಕ ವಾಗ್ವಾದಗಳನ್ನು ಮಾಡಬಾರದೆಂದು, ಅವರಿಗೆ ದೇವರ ಸನ್ನಿಧಿಯಲ್ಲಿ ಖಂಡಿತವಾಗಿ ಹೇಳು.


ನಮ್ಮಲ್ಲಿ ಪ್ರವೀಣರಾದವರೆಲ್ಲರೂ ಈ ವಿಷಯದಲ್ಲಿ ಇದೇ ಅಭಿಪ್ರಾಯವುಳ್ಳವರಾಗಿರಿ. ಮತ್ತು ಯಾವುದಾದರೂ ಒಂದು ವಿಷಯದಲ್ಲಿ ನೀವು ಬೇರೆ ಅಭಿಪ್ರಾಯವುಳ್ಳವರಾಗಿದ್ದರೆ ಅದನ್ನು ದೇವರು ನಿಮಗೆ ತೋರಿಸಿಕೊಡುವನು.


ಬರೆದದ್ದನ್ನು ನೀವು ಓದಿ ನೋಡಿದರೆ ಕ್ರಿಸ್ತನ ವಿಷಯವಾದ ಮರ್ಮವನ್ನು ಕುರಿತು ನನಗಿರುವ ಗ್ರಹಿಕೆಯನ್ನು ನೀವು ತಿಳಿದುಕೊಳ್ಳಬಹುದು.


ಈ ಕಾರಣದಿಂದಲೂ ಮತ್ತು ನನಗೆ ತಿಳಿಸಲ್ಪಟ್ಟ ರಹಸ್ಯಗಳು ಬಹು ವಿಶೇಷವಾಗಿರುವುದರಿಂದಲೂ ನಾನು ಹೊಗಳಿಕೊಳ್ಳದೇ ಸುಮ್ಮನಿರುತ್ತೇನೆ. ನಾನು ನನ್ನನ್ನು ಅತಿಶಯವಾಗಿ ಹೆಚ್ಚಿಸಿಕೊಳ್ಳಬಾರದೆಂದು ಒಂದು ಶೂಲವು ನನ್ನನ್ನು ತಿವಿಯುವುದಕ್ಕಾಗಿ ನನ್ನ ದೇಹದೊಳಗೆ ಇರಿಸಲಾಗಿದೆ. ನಾನು ಅಹಂಕಾರಪಡದ ಹಾಗೆ ಇದು ನನ್ನನ್ನು ತಿವಿತಿವಿದು ಸೈತಾನನ ದೂತನಂತೆ ಕಾಡಿಸುತ್ತಿತ್ತು.


ಹೊಗಳಿಕೊಳ್ಳುವುದು ಹಿತಕರವಲ್ಲ. ಆದರೂ ಹೊಗಳಿಕೊಳ್ಳುವುದು ನನಗೆ ಅನಿವಾರ್ಯವಾಗಿದೆ. ಆದ್ದರಿಂದ ಕರ್ತನು ನನಗೆ ದಯಪಾಲಿಸಿದ ದರ್ಶನಗಳನ್ನೂ ಮತ್ತು ತಿಳಿಯಪಡಿಸಿದ ರಹಸ್ಯಗಳನ್ನೂ ಕುರಿತು ಹೇಳುತ್ತೇನೆ.


ನಾನು ವಾಕ್ಚಾತುರ್ಯದಲ್ಲಿ ನಿಪುಣನಲ್ಲದಿದ್ದರೂ ಜ್ಞಾನದಲ್ಲಿ ಅಲ್ಪನಲ್ಲ. ಇದನ್ನು ಎಲ್ಲಾ ಸಮಯಸಂದರ್ಭಗಳಲ್ಲೂ ಸ್ಪಷ್ಟಪಡಿಸಿದ್ದೇನೆ.


ನಾನಂತೂ ಸ್ವಪ್ರಯೋಜನಕ್ಕಾಗಿ ಚಿಂತಿಸದೇ ಮನುಷ್ಯರೆಲ್ಲರು ರಕ್ಷಣೆ ಹೊಂದಬೇಕೆಂದು ಅವರ ಪ್ರಯೋಜನಕ್ಕಾಗಿ ಚಿಂತಿಸಿ, ಎಲ್ಲರನ್ನು ಎಲ್ಲಾ ವಿಷಯಗಳಲ್ಲಿ ಮೆಚ್ಚಿಸುವವನಾಗಿದ್ದೇನೆ.


ಪ್ರಿಯರೇ, ನೀವು ಹೊಂದಿದ ಉಪದೇಶಕ್ಕೆ ವಿರುದ್ಧವಾಗಿ ಭೇದಗಳನ್ನೂ, ವಿಘ್ನಗಳನ್ನೂ ನಿಮ್ಮಲ್ಲಿ ಉಂಟುಮಾಡುವವರನ್ನು ಗುರುತಿಸಿ ಅವರನ್ನು ಬಿಟ್ಟು ದೂರ ಹೋಗಿರಿ ಎಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.


ನನ್ನ ಸಹೋದರರೇ, ನೀವಂತೂ ಒಳ್ಳೆತನದಿಂದ ತುಂಬಿದವರಾಗಿದ್ದು, ಸಕಲ ಜ್ಞಾನದಿಂದ ತುಂಬಿದವರಾಗಿಯೂ ಒಬ್ಬರಿಗೊಬ್ಬರು ಬುದ್ಧಿಹೇಳುವುದಕ್ಕೆ ಶಕ್ತರಾಗಿಯೂ ಇದ್ದೀರೆಂದು ನಿಮ್ಮ ವಿಷಯದಲ್ಲಿ ದೃಢವಾಗಿ ನಂಬಿದ್ದೇನೆ.


ಅವರು ಅಪೊಸ್ತಲರ ಬೋಧನೆಯಲ್ಲಿಯೂ, ಸಹೋದರರೊಂದಿಗೆ ಅನ್ಯೋನ್ಯತೆಯಲ್ಲಿಯೂ, ರೊಟ್ಟಿಮುರಿಯುವುದರಲ್ಲಿಯೂ, ಪ್ರಾರ್ಥನೆಗಳಲ್ಲಿಯೂ ನಿರತರಾಗಿದ್ದರು.


ಒಬ್ಬ ಮನುಷ್ಯನು ಭೂಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ಅವನ ಪ್ರಾಣವನ್ನು ಕಳೆದುಕೊಂಡರೆ ಅವನಿಗೆ ಪ್ರಯೋಜನವೇನು? ಅಥವಾ ಒಬ್ಬನು ತನ್ನ ಪ್ರಾಣಕ್ಕೆ ಬದಲಿಗೆ ಏನು ಕೊಟ್ಟಾನು?


ಅದಕ್ಕೆ ಯೇಸು, “ಯೋನನ ಮಗನಾದ ಸೀಮೋನನೇ, ನೀನು ಧನ್ಯನು. ಏಕೆಂದರೆ ಇದು ಮನುಷ್ಯನಿಂದ ನಿನಗೆ ಪ್ರಕಟವಾಗಿಲ್ಲ, ಪರಲೋಕದಲ್ಲಿರುವ ನನ್ನ ತಂದೆಯೇ ಇದನ್ನೂ ನಿನಗೆ ಪ್ರಕಟಪಡಿಸಿರುವನು” ಎಂದು ಹೇಳಿದನು.


ಅದೇ ಸಮಯದಲ್ಲಿ ಯೇಸು ಹೇಳಿದ್ದೇನೆಂದರೆ, “ತಂದೆಯೇ! ಪರಲೋಕದ ಭೂಲೋಕದ ಒಡೆಯನೇ, ನೀನು ಜ್ಞಾನಿಗಳಿಗೂ ಬುದ್ಧಿವಂತರಿಗೂ ಈ ವಿಷಯಗಳನ್ನು ಮರೆಮಾಡಿ ಚಿಕ್ಕ ಮಕ್ಕಳಿಗೆ ಅದನ್ನು ಪ್ರಕಟಪಡಿಸಿರುವಿ ಎಂದು ನಿನ್ನನ್ನು ಕೊಂಡಾಡುತ್ತೇನೆ.


ಆಹಾ, ಸುಳ್ಳು ಕನಸುಗಳನ್ನು ಪ್ರಕಟಿಸಿ, ವಿವರಿಸಿ ತಮ್ಮ ಸುಳ್ಳು ಮಾತುಗಳಿಂದಲೂ, ನಿರ್ಲಕ್ಷದಿಂದಲೂ ನನ್ನ ಜನರಿಗೆ ದಾರಿತಪ್ಪಿಸುವ ಪ್ರವಾದಿಗಳನ್ನು ಎದುರಿಸುವವನಾಗಿದ್ದೇನೆ; ನಾನು ಅವರನ್ನು ಕಳುಹಿಸಲಿಲ್ಲ, ಆಜ್ಞಾಪಿಸಲಿಲ್ಲ. ಅವರಿಂದ ಈ ಜನರಿಗೆ ಯಾವ ಪ್ರಯೋಜನವೂ ಆಗುವುದಿಲ್ಲ. ಇದು ಯೆಹೋವನ ನುಡಿ.


ಯೆಹೋವನೇ, ನನ್ನ ಬಲವೇ, ಬಲವಾದ ನನ್ನ ದುರ್ಗವೇ, ಇಕ್ಕಟ್ಟಿನ ದಿನದಲ್ಲಿ ನನ್ನ ಆಶ್ರಯವೇ, ಲೋಕದ ಕಟ್ಟಕಡೆಯಿಂದ ಜನಾಂಗಗಳು ನಿನ್ನ ಬಳಿಗೆ ಸೇರಿ, “ನಮ್ಮ ಪೂರ್ವಿಕರು ಶುದ್ಧ ಸುಳ್ಳನ್ನು, ಮಾಯವನ್ನು, ಪ್ರಯೋಜನವಿಲ್ಲದವುಗಳನ್ನು ಪಾರಂಪರ್ಯವಾಗಿ ಹೊಂದಿದ್ದಾರೆ” ಎಂದು ಅರಿಕೆ ಮಾಡುವರು.


ದೇವರಿಗೆ ಇಷ್ಟವಿಲ್ಲದ ವಿಷಯಗಳನ್ನು ಹಿಂಬಾಲಿಸಬೇಡಿರಿ; ಅವುಗಳಿಂದ ನಿಮಗೆ ಲಾಭವೂ, ರಕ್ಷಣೆಯೂ ಸಿಕ್ಕುವುದಿಲ್ಲ. ಅವು ವ್ಯರ್ಥವಾದವುಗಳೇ.


ಕೊಳಲು, ವೀಣೆ ಮೊದಲಾದ ನಿರ್ಜೀವವಾದ್ಯಗಳು ನಾದಗಳಲ್ಲಿ ಯಾವ ವ್ಯತ್ಯಾಸವನ್ನೂ ತೋರಿಸದಿದ್ದರೆ; ನುಡಿಸಿದ ವಾದ್ಯ ಇಂಥದ್ದೇ ಎಂದು ಹೇಗೆ ತಿಳಿಯುವುದು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು