Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 14:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಕೊಳಲು, ವೀಣೆ ಮೊದಲಾದ ನಿರ್ಜೀವವಾದ್ಯಗಳು ನಾದಗಳಲ್ಲಿ ಯಾವ ವ್ಯತ್ಯಾಸವನ್ನೂ ತೋರಿಸದಿದ್ದರೆ; ನುಡಿಸಿದ ವಾದ್ಯ ಇಂಥದ್ದೇ ಎಂದು ಹೇಗೆ ತಿಳಿಯುವುದು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಕೊಳಲು, ವೀಣೆ ಮೊದಲಾದ ನಿರ್ಜೀವವಾದ್ಯಗಳು ನಾದವನ್ನು ಹೊಮ್ಮಿಸುತ್ತವೆ; ಅವುಗಳ ಸ್ವರಗಳಲ್ಲಿ ಯಾವ ವ್ಯತ್ಯಾಸವೂ ಕಂಡುಬರದಿದ್ದರೆ, ನುಡಿಸಿದ್ದು, ಬಾಜಿಸಿದ್ದು ಇಂತಹುದೇ ರಾಗವೆಂದು ತಿಳಿಯುವುದು ಹೇಗೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಕೊಳಲು ವೀಣೆ ಮೊದಲಾದ ಅಚೇತನ ವಾದ್ಯಗಳು ಸ್ವರಗಳಲ್ಲಿ ಯಾವ ಭೇದವನ್ನೂ ತೋರಿಸದಿದ್ದರೆ ಊದಿದ್ದು ಅಥವಾ ಬಾರಿಸಿದ್ದು ಇಂಥದೇ ಎಂದು ಹೇಗೆ ತಿಳಿಯುವದು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನಾದವನ್ನು ಹೊರಹೊಮ್ಮಿಸುವ ಕೊಳಲು ಅಥವಾ ವೀಣೆ ಮುಂತಾದ ನಿರ್ಜೀವ ವಸ್ತುಗಳಿಗೆ ಇದು ಸರಿಹೋಲುತ್ತದೆ. ವಿವಿಧ ಧ್ವನಿಗಳು ಸ್ಪಷ್ಟವಾಗಿಲ್ಲದಿದ್ದರೆ ಯಾವ ಹಾಡನ್ನು ನುಡಿಸಲಾಗುತ್ತಿದೆ ಎಂಬುದನ್ನು ನೀವು ಅರ್ಥಮಾಡಿಕೊಳ್ಳಲಾರಿರಿ. ಪ್ರತಿಯೊಂದು ಧ್ವನಿಯನ್ನು ಸ್ಪಷ್ಟವಾಗಿ ನುಡಿಸಿದಾಗ ಮಾತ್ರ ನೀವು ಸ್ವರವನ್ನು ಅರ್ಥಮಾಡಿಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಕೊಳಲು, ವೀಣೆ ಮೊದಲಾದ ನಿರ್ಜೀವ ವಾದ್ಯಗಳ ಸ್ವರಗಳ ಹಾಗೆ, ವಿವಿಧ ಶೃತಿಗಳು ಕಂಡುಬರದಿದ್ದರೆ, ಊದಿದ್ದು ಕೊಳಲೋ ಅಥವಾ ಬಾರಿಸಿದ್ದು ವೀಣೆಯೋ ಎಂದು ತಿಳಿಯುವುದು ಹೇಗೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಪೊಂವೊ ನಾ ಹೊಲ್ಯಾರ್ ತಂತಿಚೆ ಎಕ್ ವಾಜಾಪ್ ಅಸ್ಲ್ಯಾ ಜಿವ್ ನಸಲ್ಲ್ಯಾ ವಾಜ್ಪಾನಿ ನಾದ್ ದಿ ನಸ್ಲ್ಯಾರ್, ವಾಜ್ತಲೆ ಕಾಯ್ ಮನುನ್ ಕೊನಾಕ್ಬಿ ಕಶೆ ಕಳ್ತಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 14:7
7 ತಿಳಿವುಗಳ ಹೋಲಿಕೆ  

ತುತ್ತೂರಿಯು ಅಸ್ಪಷ್ಟ ಶಬ್ದವನ್ನು ಮೊಳಗಿಸಿದರೆ ಯಾರು ಯುದ್ಧಕ್ಕೆ ಸಿದ್ಧಮಾಡಿಕೊಳ್ಳುವರು?


ನಾನು ಮನುಷ್ಯರ ಭಾಷೆಗಳನ್ನೂ, ದೇವದೂತರ ಭಾಷೆಗಳನ್ನೂ ಮಾತನಾಡುವವನಾದರೂ ಪ್ರೀತಿಯಿಲ್ಲದವನಾಗಿದ್ದರೆ ನಾದಕೊಡುವ ಕಂಚಿನ ಜಾಗಟೆ, ಗಣಗಣಿಸುವ ಘಂಟೆ ಆಗಿದ್ದೇನೆ.


ಪೇಟೆಯಲ್ಲಿ ಕುಳಿತುಕೊಂಡು, ‘ನಾವು ನಿಮಗೋಸ್ಕರ ಕೊಳಲೂದಿದೆವು, ನೀವು ಕುಣಿಯಲಿಲ್ಲ; ಗೋಳಾಡಿದೆವು, ನೀವು ಅಳಲಿಲ್ಲ’ ಎಂದು ಒಬ್ಬರಿಗೊಬ್ಬರು ಕೂಗಿ ಹೇಳುವಂಥ ಮಕ್ಕಳನ್ನು ಹೋಲುತ್ತಾರೆ.


‘ನಿಮಗೋಸ್ಕರ ಕೊಳಲೂದಿದೆವು ನೀವು ಕುಣಿಯಲಿಲ್ಲ. ಶೋಕಿಸಿದೆವು ನೀವು ಗೋಳಾಡಲಿಲ್ಲ’ ಎಂದು ಕೂಗಿ ಹೇಳುವಂಥ ಮಕ್ಕಳಿಗೆ ಸಮಾನವಾಗಿದೆ.


ಅಲ್ಲಿಂದ ಫಿಲಿಷ್ಟಿಯರ ದಂಡು ಇರುವ ದೇವಗಿರಿಯನ್ನು ಮುಟ್ಟಿದಾಗ ಮುಂಭಾಗದಲ್ಲಿ ಸ್ವರಮಂಡಲ, ದಮ್ಮಡಿ, ಕೊಳಲು, ಕಿನ್ನರಿ ಈ ವಾದ್ಯಗಾರರೊಡನೆ ಗುಡ್ಡದಿಂದ ಇಳಿದು ಬರುತ್ತಿರುವ ಪ್ರವಾದಿಗಳ ಸಮೂಹವನ್ನು ಕಾಣುವಿ. ಅವರು ಪರವಶರಾಗಿ ಪ್ರವಾದಿಸುವರು.


ಆದರೆ ಸಹೋದರರೇ, ನಾನು ನಿಮ್ಮ ಬಳಿಗೆ ಬಂದು ದೇವರು ತಿಳಿಸಿದ್ದನ್ನು ಪ್ರಕಟಿಸದೆ, ಜ್ಞಾನವಾಕ್ಯಗಳನ್ನಾಡದೆ, ಪ್ರವಾದನೆಯನ್ನು ಹೇಳದೆ, ಉಪದೇಶಮಾಡದೆ, ಅನ್ಯಭಾಷೆಗಳನ್ನು ಮಾತ್ರ ಮಾತನಾಡುವವನಾಗಿದ್ದರೆ ನನ್ನಿಂದ ನಿಮಗೇನು ಪ್ರಯೋಜನವಾದೀತು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು