Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 15:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಸಹೋದರರೇ, ನಾನು ನಿಮಗೆ ತಿಳಿಸಿದ ಸುವಾರ್ತೆಯನ್ನು ನಿಮ್ಮ ನೆನಪಿಗೆ ತರುತ್ತೇನೆ; ನೀವು ಅದನ್ನು ಸ್ವೀಕರಿಸಿ, ಅದರಲ್ಲಿ ನಿಂತಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಪ್ರಿಯ ಸಹೋದರರೇ, ನಾನು ನಿಮಗೆ ಬೋಧಿಸಿದ ಶುಭಸಂದೇಶವನ್ನು ನೆನಪಿಗೆ ತಂದುಕೊಳ್ಳಿರಿ. ನೀವು ಅದನ್ನು ಸ್ವೀಕರಿಸಿದ್ದೀರಿ. ಅದರಲ್ಲಿ ನೆಲೆಯಾಗಿ ನಿಂತಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಸಹೋದರರೇ, ನಾನು ನಿಮಗೆ ತಿಳಿಸಿದ ಸುವಾರ್ತೆಯನ್ನು ನಿಮ್ಮ ನೆನಪಿಗೆ ತರುತ್ತೇನೆ; ನೀವು ಅದನ್ನು ಸ್ವೀಕರಿಸಿದಿರಿ, ಅದರಲ್ಲಿ ನಿಂತಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಸಹೋದರ ಸಹೋದರಿಯರೇ, ನಾನು ನಿಮಗೆ ತಿಳಿಸಿದ ಸುವಾರ್ತೆಯನ್ನು ನೀವು ಜ್ಞಾಪಿಸಿಕೊಳ್ಳಿರಿ. ನೀವು ಅದನ್ನು ಸ್ವೀಕರಿಸಿಕೊಂಡಿರಿ ಮತ್ತು ಅದರಲ್ಲಿ ದೃಢವಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಪ್ರಿಯರೇ, ನಾನು ನಿಮಗೆ ಸಾರಿದ ಸುವಾರ್ತೆಯನ್ನೂ, ನೀವು ಅದನ್ನು ಸ್ವೀಕರಿಸಿದ್ದನ್ನೂ, ಅದರಲ್ಲಿ ನಿಂತಿರುವುದನ್ನೂ, ಈಗ ನಿಮಗೆ ನೆನಪಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಭಾವಾನು ಅನಿ ಭೆನಿಯಾನು, ಮಿಯಾ ತುಮ್ಕಾ ಪರ್ಗಟ್ ಕರಲ್ಲಿ ಬರಿ ಖಬರ್ ಅತ್ತಾ ಅನಿ ತುಮ್ಕಾ ಯಾದ್ ಕರುನ್ ದಿತಾ, ತಿ ಖಬರ್ ತುಮಿ ಮಾನುನ್ ಘೆಟ್ಲ್ಯಾಶಿ ಅನಿ ಅಜುನ್‍ಬಿ ತುಮಿ ತ್ಯಾ ಖಬ್ರೆತ್ ಘಟ್ ಹೊವ್ನ್ ಹಾಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 15:1
22 ತಿಳಿವುಗಳ ಹೋಲಿಕೆ  

ನಿಮ್ಮನ್ನು ಪ್ರೋತ್ಸಾಹಿಸುವುದಕ್ಕೂ ಇದೇ ದೇವರ ನಿಜವಾದ ಕೃಪೆ ಎಂದು ಸಾಕ್ಷಿ ಹೇಳುವುದಕ್ಕೂ ನಾನು ಸಂಕ್ಷೇಪವಾಗಿ ಬರೆದು, ನಂಬಿಗಸ್ತನಾದ ಸಹೋದರನೆಂದು ನಾನು ಎಣಿಸುವ ಸಿಲ್ವಾನನ ಕೈಯಲ್ಲಿ ಇದನ್ನು ಕಳುಹಿಸಿದ್ದೇನೆ. ಈ ನಿಜವಾದ ಕೃಪೆಯಲ್ಲಿ ನಿಲ್ಲಿರಿ.


ಇದಲ್ಲದೆ ನೀವು ಬಹಳ ಹಿಂಸೆಯನ್ನು ಅನುಭವಿಸಬೇಕಾಗಿ ಬಂದಿದ್ದರೂ ಪವಿತ್ರಾತ್ಮನಿಂದುಂಟಾದ ಆನಂದದೊಡನೆ ದೇವರ ವಾಕ್ಯವನ್ನು ಅಂಗೀಕರಿಸಿ, ನಮ್ಮನ್ನು ಮತ್ತು ಕರ್ತನಾದ ಯೇಸುವನ್ನು ಅನುಸರಿಸುವವರಾದಿರಿ.


ನಿಮ್ಮ ನಂಬಿಕೆಯ ವಿಷಯದಲ್ಲಿಯೂ ನಾವು ನಿಮ್ಮ ಮೇಲೆ ದೊರೆತನಮಾಡುವವರೆಂಬುದಾಗಿ ಅಲ್ಲ. ನೀವು ನಂಬಿಕೆಯಲ್ಲಿ ದೃಢವಾಗಿರುವಂತೆ ನಿಮ್ಮ ಸಂತೋಷಕ್ಕೆ ನಾವು ಸಹಾಭಾಗಿಗಳಾಗಿದೇವಷ್ಟೇ.


ಸಹೋದರರೇ, ನಾವು ಬೋಧಿಸಿದ ಸಂಪ್ರದಾಯವನ್ನು ಅನುಸರಿಸದೆ ಸೋಮಾರಿಯಾಗಿ ಜೀವಿಸುವ ಪ್ರತಿಯೊಬ್ಬ ಸಹೋದರನಿಂದ ನೀವು ದೂರವಾಗಿರಬೇಕೆಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಿಮಗೆ ಆಜ್ಞಾಪಿಸುತ್ತೇವೆ.


ಕಡೆಯದಾಗಿ, ಸಹೋದರರೇ, ನಾವು ಕರ್ತನಾದ ಯೇಸುವಿನ ಮುಖಾಂತರ ನಿಮಗೆ ಕೊಟ್ಟಿರುವ ಆಜ್ಞೆಗಳನ್ನು ತಿಳಿದಿದ್ದೀರಷ್ಟೆ.


ಹೀಗಿರಲಾಗಿ ನೀವು ದೇವರ ವಾಕ್ಯವನ್ನು ನಮ್ಮಿಂದ ಕೇಳಿದಾಗ ಅದನ್ನು ಮನುಷ್ಯರ ವಾಕ್ಯವೆಂದೆಣಿಸದೆ ದೇವರ ವಾಕ್ಯವೆಂದೇ ತಿಳಿದು ಅಂಗೀಕರಿಸಿದ್ದಕ್ಕಾಗಿ ನಾವಂತೂ ಎಡೆಬಿಡದೆ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇವೆ. ಅದು ಸತ್ಯವಾಗಿ ದೇವರ ವಾಕ್ಯವೇ. ಆ ವಾಕ್ಯವು, ನಂಬುವವರಾದ ನಿಮ್ಮೊಳಗೆ ಕೆಲಸ ಮಾಡುತ್ತದೆ.


ನಾನು ಸಾರುವ ಸುವಾರ್ತೆಯಲ್ಲಿ ಬೋಧಿಸಿರುವ ಪ್ರಕಾರ ದೇವರು ಯೇಸು ಕ್ರಿಸ್ತನ ಮೂಲಕವಾಗಿ ಮನುಷ್ಯರ ಗುಟ್ಟುಗಳನ್ನು ಹಿಡಿದು ವಿಚಾರಿಸುವ ದಿನದಂದು ಸೂಚಿಸುತ್ತದೆ. ಆ ದಿನದಲ್ಲಿ ಇದೆಲ್ಲಾ ತಿಳಿದು ಬರುವುದು.


ಅನ್ಯಜನರು ಸಹ ದೇವರ ವಾಕ್ಯವನ್ನು ಅಂಗೀಕರಿಸಿದರೆಂಬ ಸಮಾಚಾರವನ್ನು ಅಪೊಸ್ತಲರೂ ಯೂದಾಯದಲ್ಲಿದ್ದ ಸಹೋದರರೂ ಕೇಳಿದರು.


ನನ್ನನ್ನು ತಿರಸ್ಕರಿಸಿ ನನ್ನ ಮಾತುಗಳನ್ನು ಸ್ವೀಕರಿಸದೆ ಇರುವವನಿಗೆ ತೀರ್ಪುಮಾಡುವಂಥದ್ದು ಒಂದು ಇದೆ. ಅದು ನಾನು ಆಡುವ ಮಾತೇ, ಕಡೆಯ ದಿನದಲ್ಲಿ ಅದೇ ಅವನಿಗೆ ತೀರ್ಪುಮಾಡುವುದು.


ನಾನು ಸಸಿಯನ್ನು ನೆಟ್ಟೆನು. ಅಪೊಲ್ಲೋಸನು ನೀರನ್ನು ಹೊಯ್ಯಿದನು. ಆದರೆ ಅದನ್ನು ಬೆಳೆಸಿದವನು ದೇವರೇ.


ಈಗ ನಾವು ನೆಲೆಗೊಂಡಿರುವ ದೇವರ ಕೃಪಾಶ್ರಯಕ್ಕೆ ಆತನ ಮುಖಾಂತರವೇ ನಂಬಿಕೆಯಿಂದ ಸೇರಿದವರಾಗಿದ್ದೇವೆ ಮತ್ತು ದೇವರ ಮಹಿಮೆಯ ನಿರೀಕ್ಷೆಯಲ್ಲಿ ಉಲ್ಲಾಸಪಡುತ್ತೇವೆ.


ಅವನ ಬೋಧನೆಯನ್ನು ಅಂಗೀಕರಿಸಿದ ಅನೇಕರು ದೀಕ್ಷಾಸ್ನಾನಮಾಡಿಸಿ ಕೊಂಡರು. ಆ ದಿನ ಸುಮಾರು ಮೂರು ಸಾವಿರ ಜನರು ಅವರೊಂದಿಗೆ ಸೇರಿಕೊಂಡರು.


ನೀನು ಹೇಳುವುದು ನಿಜ. ಅವರು ನಂಬದೇ ಹೋದ್ದದರಿಂದ ಮುರಿದುಹಾಕಲ್ಪಟ್ಟರು. ನೀನು ನಿಂತಿರುವುದು ನಂಬಿಕೆಯಿಂದಲೇ.


ನಿಮಗೆ ಕ್ರಿಸ್ತನಲ್ಲಿ ಬೋಧಕರು ಸಾವಿರಾರು ಮಂದಿ ಇದ್ದರೂ ತಂದೆಗಳು ಬಹು ಮಂದಿ ಇಲ್ಲ ನಾನೇ ನಿಮ್ಮನ್ನು ಸುವಾರ್ತೆಯ ಮೂಲಕ ಕ್ರಿಸ್ತ ಯೇಸುವಿನಲ್ಲಿ ಪಡೆದ ತಂದೆಯಾಗಿದ್ದೇನೆ.


ಎಚ್ಚರವಾಗಿರಿ, ಕ್ರಿಸ್ತ ನಂಬಿಕೆಯಲ್ಲಿ ದೃಢವಾಗಿ ನಿಲ್ಲಿರಿ. ಧೈರ್ಯವಂತರಾಗಿರಿ, ಬಲಗೊಳ್ಳಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು