Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 15:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಸತ್ತವರಿಗೆ ಪುನರುತ್ಥಾನವಿಲ್ಲವೆಂಬುದು ನಿಜವಾಗಿದ್ದರೆ ಕ್ರಿಸ್ತನು ಸಹ ಎದ್ದುಬರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಸತ್ತವರಿಗೆ ಪುನರುತ್ಥಾನ ಇಲ್ಲವೆಂಬುದು ನಿಜವಾದರೆ ಕ್ರಿಸ್ತಯೇಸು ಪುನರುತ್ಥಾನ ಹೊಂದಲಿಲ್ಲ ಎಂದ ಹಾಗಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಸತ್ತವರಿಗೆ ಪುನರುತ್ಥಾನವಿಲ್ಲವೆಂಬದು ನಿಜವಾಗಿದ್ದರೆ ಕ್ರಿಸ್ತನಾದರೂ ಎದ್ದು ಬರಲಿಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಜನರಿಗೆ ಪುನರುತ್ಥಾನವಿಲ್ಲದಿದ್ದರೆ ಕ್ರಿಸ್ತನು ಸಹ ಸತ್ತವರೊಳಗಿಂದ ಎದ್ದೇಬಂದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಈಗ ಸತ್ತವರಿಗೆ ಪುನರುತ್ಥಾನವಿಲ್ಲವಾದರೆ, ಕ್ರಿಸ್ತಯೇಸುವಾದರೂ ಎದ್ದು ಬರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಮರಲ್ಲ್ಯಾಂಚೆ ಝಿತ್ತೆ ಹೊವ್ನ್ ಉಟ್ನೆ ನಾ ಮಟ್ಲ್ಯಾರ್ ಕ್ರಿಸ್ತಾಕ್ಬಿ ಝಿತ್ತೊ ಕರುನ್ ಉಟ್ವುನ್ ಹೊವ್ಕ್ ನಾ;

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 15:13
16 ತಿಳಿವುಗಳ ಹೋಲಿಕೆ  

ಯೇಸುವನ್ನು ಸತ್ತವರೊಳಗಿಂದ ಜೀವಿತನಾಗಿ ಎಬ್ಬಿಸಿದಾತನ ಆತ್ಮನು ನಿಮ್ಮಲ್ಲಿ ವಾಸವಾಗಿದ್ದರೆ, ಕ್ರಿಸ್ತ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದಾತನು ನಿಮ್ಮಲ್ಲಿ ವಾಸವಾಗಿರುವ ತನ್ನ ಆತ್ಮನ ಮೂಲಕ ನಿಮ್ಮ ಮರ್ತ್ಯದೇಹಗಳನ್ನು ಸಹ ಬದುಕಿಸುವನು.


ಯೇಸು ಸತ್ತು ಜೀವಿತನಾಗಿ ಎದ್ದನೆಂದು ನಾವು ನಂಬುತ್ತೇವೆ ಹಾಗೆಯೇ ಯೇಸುವಿನಲ್ಲಿದ್ದು ನಿದ್ರೆಹೋದವರನ್ನು ಸಹ ದೇವರು ಆತನೊಡನೆ ಎಬ್ಬಿಸಿ ಕರೆದುಕೊಂಡು ಬರುವನೆಂದು ನಂಬಬೇಕಲ್ಲವೇ.


ಸದಾ ಜೀವಿಸುವವನೂ ಆಗಿದ್ದೇನೆ. ಸತ್ತವನಾಗಿದ್ದೆನು, ಆದರೆ ಇಗೋ ಯುಗಯುಗಾಂತರಕ್ಕೂ ಜೀವಿಸುವವನಾಗಿದ್ದೇನೆ. ಮೃತ್ಯುವಿನ ಮತ್ತು ಪಾತಾಳದ ಬೀಗದ ಕೈಗಳು ನನ್ನಲ್ಲಿ ಇವೆ.


ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಯೇಸು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ, ತನ್ನ ಮಹಾ ಕರುಣಾನುಸಾರವಾಗಿ ನಮ್ಮನ್ನು ತಿರುಗಿ ಜೀವಿಸುವಂತೆ ಮಾಡಿ ಜೀವಕರವಾದ ನಿರೀಕ್ಷೆಯನ್ನು ನಮ್ಮಲ್ಲಿ ಹುಟ್ಟಿಸಿ,


ನಿತ್ಯವಾದ ಒಡಂಬಡಿಕೆಯನ್ನು, ರಕ್ತದಿಂದ ನಿಶ್ಚಯಪಡಿಸುವುದಕ್ಕಾಗಿ, ಸಭೆಯೆಂಬ ಹಿಂಡಿಗೆ ಮಹಾಪಾಲಕನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರಮಾಡಿದ, ಶಾಂತಿದಾಯಕನಾದ ದೇವರು, ನೀವು ಆತನ ಚಿತ್ತವನ್ನು ನೆರವೇರಿಸುವ ಹಾಗೆ ಸಕಲ ಸತ್ಕಾರ್ಯಗಳಿಗೆ ಬೇಕಾದ ಅನುಕೂಲತೆಗಳನ್ನು ನಿಮಗೆ ದಯಪಾಲಿಸಿ, ಆತನು ಯೇಸು ಕ್ರಿಸ್ತನ ಮೂಲಕ ತನಗೆ ಮೆಚ್ಚಿಕೆಯಾದದ್ದನ್ನು ನಮ್ಮಲ್ಲಿ ನೆರವೇರಿಸಲಿ. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ ಉಂಟಾಗಲಿ. ಆಮೆನ್.


ಇದಲ್ಲದೆ ಮಕ್ಕಳು ರಕ್ತ ಮಾಂಸಧಾರಿಗಳು ಆಗಿರುವುದರಿಂದ ಯೇಸು ಸಹ ಅವರಂತೆಯೇ ಆದನು. ತನ್ನ ಮರಣದಿಂದಲೇ ಮರಣಾಧಿಕಾರಿಯನ್ನು ಅಂದರೆ ಸೈತಾನನನ್ನು ನಾಶಮಾಡುವುದಕ್ಕೂ,


ನೀತಿವಂತರಿಗೆ ದೊರಕುವ ಜಯಮಾಲೆಯು ಮುಂದೆ ನನಗಾಗಿ ಸಿದ್ಧವಾಗಿದೆ, ಅದನ್ನು ನೀತಿವಂತನಾದ ನ್ಯಾಯಾಧಿಪತಿಯಾಗಿರುವ ಕರ್ತನು ಆ ದಿನದಲ್ಲಿ ನನಗೆ ಕೊಡುವನು, ನನಗೆ ಮಾತ್ರವಲ್ಲದೆ ತನ್ನ ಪ್ರತ್ಯಕ್ಷತೆಯನ್ನು ಪ್ರೀತಿಸುವವರೆಲ್ಲರಿಗೂ ಕೊಡುವನು.


ಆದರೆ ಕ್ರಿಸ್ತನು ಸತ್ತವರೊಳಗಿಂದ ಎದ್ದು ಬಂದನು. ಸತ್ತುಹೋದವರಲ್ಲಿ ಪ್ರಥಮಫಲವಾದನು.


ಪ್ರಥಮ ಫಲವಾಗಿರುವ ಹಾಗೂ ಪವಿತ್ರಾತ್ಮವರವನ್ನು ಹೊಂದಿದ ನಾವೂ ಸಹ ದೇವರ ಮಕ್ಕಳ ಪದವಿಯನ್ನು ಅಂದರೆ ದೇಹಕ್ಕೆ ಬರಬೇಕಾದ ವಿಮೋಚನೆಯನ್ನು ಎದುರುನೋಡುತ್ತಾ ನಮ್ಮೊಳಗೆ ನರಳುತ್ತಿದ್ದೇ.


ಏಕೆಂದರೆ, ಪುನರುತ್ಥಾನವಾಗಲಿ, ದೇವದೂತನಾಗಲಿ, ದೇಹವಿಲ್ಲದ ಆತ್ಮವಾಗಲಿ ಇಲ್ಲವೆಂದು ಸದ್ದುಕಾಯರು ಹೇಳುವರು. ಆದರೆ ಇವೆರಡೂ ಉಂಟೆಂದು ಫರಿಸಾಯರು ಒಪ್ಪಿಕೊಳ್ಳುವರು.


ಕ್ರಿಸ್ತನು ಸತ್ತವರೊಳಗಿಂದ ಎಬ್ಬಿಸಲ್ಪಟ್ಟನೆಂದು ಸಾರುತ್ತಿರುವಲ್ಲಿ, ನಿಮ್ಮೊಳಗೆ ಕೆಲವರು ಸತ್ತವರಿಗೆ ಪುನರುತ್ಥಾನವೇ ಇಲ್ಲವೆಂದು ಹೇಳುವುದಾದರೂ ಹೇಗೆ?


ಕ್ರಿಸ್ತನೂ ಎದ್ದುಬರಲಿಲ್ಲವಾದರೆ ನಮ್ಮ ಬೋಧನೆಯು ವ್ಯರ್ಥ ಮತ್ತು ನಿಮ್ಮ ನಂಬಿಕೆಯು ಸಹ ವ್ಯರ್ಥವಾದದ್ದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು