Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 15:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಇದಲ್ಲದೆ ಸತ್ತವರು ಎದ್ದುಬರುವುದಿಲ್ಲವೆಂಬುದು ನಿಜವಾಗಿದ್ದ ಪಕ್ಷದಲ್ಲಿ ದೇವರು ಕ್ರಿಸ್ತನನ್ನು ಎಬ್ಬಿಸಲೇ ಇಲ್ಲ; ಎಬ್ಬಿಸಿದನೆಂದು ಸಾಕ್ಷಿಕೊಟ್ಟ ನಾವು ದೇವರ ವಿಷಯವಾಗಿ ಸುಳ್ಳುಸಾಕ್ಷಿ ಹೇಳಿದವರಾಗಿ ಕಂಡುಬಂದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಸತ್ತವರು ಪುನರುತ್ಥಾನ ಹೊಂದುವುದಿಲ್ಲ ಎಂಬುದು ನಿಜವಾದರೆ ದೇವರು ಕ್ರಿಸ್ತಯೇಸುವನ್ನು ಪುನರುತ್ಥಾನಗೊಳಿಸಿಲ್ಲ ಎಂದಂತಾಯಿತು. ದೇವರು ಕ್ರಿಸ್ತಯೇಸುವನ್ನು ಸಾವಿನಿಂದ ಪುನರುತ್ಥಾನಗೊಳಿಸಿದ್ದಾರೆ ಎಂದು ಸಾಕ್ಷಿ ಹೇಳಿದ ನಾವು ಆಗ ದೇವರ ಬಗ್ಗೆಯೇ ಸುಳ್ಳುಸಾಕ್ಷಿ ಹೇಳಿದಂತಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಇದಲ್ಲದೆ ಸತ್ತವರು ಎದ್ದು ಬರುವದಿಲ್ಲವೆಂಬದು ನಿಜವಾಗಿದ್ದ ಪಕ್ಷದಲ್ಲಿ ದೇವರು ಕ್ರಿಸ್ತನನ್ನು ಎಬ್ಬಿಸಲೇ ಇಲ್ಲ; ಎಬ್ಬಿಸಿದನೆಂದು ಸಾಕ್ಷಿಕೊಟ್ಟ ನಾವು ದೇವರ ವಿಷಯವಾಗಿ ಸುಳ್ಳುಸಾಕ್ಷಿ ಹೇಳಿದವರಾಗಿ ಕಂಡುಬಂದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಅಲ್ಲದೆ, ದೇವರ ಬಗ್ಗೆ ನಾವು ಸುಳ್ಳುಸಾಕ್ಷಿ ಹೇಳಿದಂತಾಗುವುದು. ಏಕೆಂದರೆ, ದೇವರು ಕ್ರಿಸ್ತನನ್ನು ಜೀವಂತವಾಗಿ ಎಬ್ಬಿಸಿದನೆಂದು ನಾವು ದೇವರ ಬಗ್ಗೆ ಬೋಧಿಸಿದೆವು. ಜನರು ಜೀವಂತವಾಗಿ ಎದ್ದುಬರದಿದ್ದರೆ, ದೇವರು ಕ್ರಿಸ್ತನನ್ನು ಜೀವಂತವಾಗಿ ಎಬ್ಬಿಸಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಅದು ಮಾತ್ರವಲ್ಲ, ದೇವರು ಕ್ರಿಸ್ತ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದರೆಂದು ದೇವರ ಬಗ್ಗೆ ಸಾಕ್ಷಿಕೊಟ್ಟ ನಾವೂ ಸುಳ್ಳುಸಾಕ್ಷಿಗಳಾಗಿ ಕಂಡುಬರುವೆವು. ದೇವರು ಕ್ರಿಸ್ತನನ್ನು ಎಬ್ಬಿಸದಿದ್ದರೆ ಸತ್ತವರನ್ನೂ ದೇವರು ಎಬ್ಬಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ತವ್ಡೆಚ್ ನ್ಹಯ್ ಅಮಿ ದೆವಾಚೆ ಝುಟೆ ಸಾಕ್ಷಿ ಹೊತಾಂವ್, ಕಶ್ಯಾಕ್ ಮಟ್ಲ್ಯಾರ್ ದೆವಾನ್ ಕ್ರಿಸ್ತಾಕ್ ಝಿತ್ತೊ ಕರುನ್ ಉಟ್ವುಲ್ಯಾನ್ ಮನುನ್ ಅಮಿ ಸಾಕ್ಷಿ ಸಾಂಗ್ಲಾಂವ್. ಕಶ್ಯಾಕ್ ಮಟ್ಲ್ಯಾರ್ ಮರಲ್ಲಿ ಲೊಕಾ ಝಿತ್ತಿ ಹೊಯ್ನಾತ್ ಮನ್ತಲೆ ಖರೆ ಹೊಯ್ ಹೊಲ್ಯಾರ್, ದೆವಾನ್ ಕ್ರಿಸ್ತಾಕ್ಬಿ ಝಿತ್ತೊ ಕರುನ್ ಉಟ್ವುಕ್ ನಾ ಮನುನ್ ಹೊಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 15:15
13 ತಿಳಿವುಗಳ ಹೋಲಿಕೆ  

ಆತನನ್ನು ದೇವರು ಮರಣದ ವೇದನೆಗಳಿಂದ ಬಿಡಿಸಿ ಎಬ್ಬಿಸಿದನು; ಏಕೆಂದರೆ ಮರಣವು ಆತನನ್ನು ಹಿಡಿದುಕೊಂಡಿರುವುದು ಅಸಾಧ್ಯವಾಗಿತ್ತು.


ಸತ್ತವರಿಗೆ ಪುನರುತ್ಥಾನವಿಲ್ಲವೆಂಬುದು ನಿಜವಾಗಿದ್ದರೆ ಕ್ರಿಸ್ತನು ಸಹ ಎದ್ದುಬರಲಿಲ್ಲ.


ಆದರೆ ಕ್ರಿಸ್ತನು ಸತ್ತವರೊಳಗಿಂದ ಎದ್ದು ಬಂದನು. ಸತ್ತುಹೋದವರಲ್ಲಿ ಪ್ರಥಮಫಲವಾದನು.


ಮತ್ತು ಕರ್ತನಾದ ಯೇಸುವಿನ ಪುನರುತ್ಥಾನಕ್ಕೆ ಅಪೊಸ್ತಲರು ಬಹು ಬಲವಾಗಿ ಸಾಕ್ಷಿ ಹೇಳುತ್ತಿದ್ದರು; ದೇವರ ದಯವು ಅವರೆಲ್ಲರ ಮೇಲೆ ಪೂರ್ಣವಾಗಿತ್ತು.


ನೀವು ಶಿಲುಬೆಗೆ ಹಾಕಿಸಿದಂತಹ ಮತ್ತು ದೇವರು ಸತ್ತವರೊಳಗಿಂದ ಎಬ್ಬಿಸಿದಂತಹ ನಜರೇತಿನ ಯೇಸು ಕ್ರಿಸ್ತನ ಹೆಸರಿನಿಂದಲೇ ಈ ಮನುಷ್ಯನು ಸೌಖ್ಯಹೊಂದಿದದವನಾಗಿ ನಿಮ್ಮೆದುರಿನಲ್ಲಿ ನಿಂತಿದ್ದಾನೆ ಎಂಬುದನ್ನು ನೀವು ಮತ್ತು ಇಸ್ರಾಯೇಲ್ ಜನರೆಲ್ಲರಿಗೂ ಈ ಸಂಗತಿ ತಿಳಿದಿರಲಿ.


ಈ ಯೇಸುವನ್ನೇ ದೇವರು ಎಬ್ಬಿಸಿದನು; ಇದಕ್ಕೆ ನಾವೆಲ್ಲರು ಸಾಕ್ಷಿಗಳಾಗಿದ್ದೇವೆ.


ಇದಲ್ಲದೆ ಬಡವನ ಮೇಲಿನ ಕರುಣೆಯಿಂದ ಪಕ್ಷಪಾತದ ತೀರ್ಮಾನವನ್ನು ಮಾಡಬಾರದು.


ಯೆಹೂದ್ಯರಿಗೂ, ಗ್ರೀಕರಿಗೂ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಬೇಕೆಂತಲೂ, ನಮ್ಮ ಕರ್ತನಾದ ಯೇಸುವಿನ ಮೇಲೆ ನಂಬಿಕೆಯಿಡಬೇಕೆಂತಲೂ ದೃಢವಾಗಿ ಬೋಧಿಸುವವನಾಗಿದ್ದೆನು, ಇದೆಲ್ಲಾ ನಿಮಗೇ ತಿಳಿದಿದೆ.


ಸತ್ತವರು ಎದ್ದು ಬರುವುದಿಲ್ಲವಾದರೆ ಕ್ರಿಸ್ತನೂ ಎದ್ದು ಬರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು