Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 15:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಕ್ರಿಸ್ತನು ಎದ್ದುಬರಲಿಲ್ಲವಾದರೆ ನಿಮ್ಮ ನಂಬಿಕೆಯು ನಿರರ್ಥಕವಾಗಿದೆ, ಹಾಗೂ ನೀವು ಇನ್ನೂ ನಿಮ್ಮ ಪಾಪಗಳಲ್ಲಿಯೇ ಇದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಕ್ರಿಸ್ತಯೇಸುವೇ ಪುನರುತ್ಥಾನ ಹೊಂದಿಲ್ಲ ಎಂದಮೇಲೆ ನಿಮ್ಮ ವಿಶ್ವಾಸವೇ ನಿರರ್ಥಕ; ಮತ್ತು ನೀವಿನ್ನೂ ನಿಮ್ಮ ಪಾಪಗಳಲ್ಲಿಯೇ ಮುಳುಗಿದ್ದೀರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಕ್ರಿಸ್ತನು ಎದ್ದು ಬರಲಿಲ್ಲವಾದರೆ ನಿಮ್ಮ ನಂಬಿಕೆಯು ನಿಷ್ಪ್ರಯೋಜನವಾಗಿದೆ, ನೀವು ಇನ್ನೂ ನಿಮ್ಮ ಪಾಪಗಳಲ್ಲಿಯೇ ಇದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಕ್ರಿಸ್ತನು ಜೀವಂತವಾಗಿ ಎಬ್ಬಿಸಲ್ಪಟ್ಟಿಲ್ಲದಿದ್ದರೆ, ನಿಮ್ಮ ನಂಬಿಕೆಯು ನಿಷ್ಪ್ರಯೋಜಕವಾಗಿದೆ ಮತ್ತು ನೀವು ನಿಮ್ಮ ಪಾಪಗಳಿಂದ ಇನ್ನೂ ಅಪರಾಧಿಗಳಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಕ್ರಿಸ್ತ ಯೇಸುವು ಎದ್ದುಬಂದಿಲ್ಲವಾದರೆ, ನಿಮ್ಮ ವಿಶ್ವಾಸವೂ ವ್ಯರ್ಥವಾಗಿದೆ, ನೀವು ಇನ್ನೂ ನಿಮ್ಮ ಪಾಪಗಳಲ್ಲಿಯೇ ಇದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಕ್ರಿಸ್ತ್ ಮರ್‍ನಾತ್ನಾ ಝಿತ್ತೊ ಹೊವ್ನ್ ಉಟುಕ್ನಾ ಹೊಲ್ಯಾರ್, ತುಮ್ಚೊ ವಿಶ್ವಾಸ್ ಕಾಯ್ಬಿ ಫಾಯ್ದ್ಯಾಚೊ ನ್ಹಯ್, ತುಮಿ ಅಜುನ್‍ಬಿ ತುಮ್ಚ್ಯಾ ಪಾಪಾತ್ನಿಚ್ ಹಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 15:17
15 ತಿಳಿವುಗಳ ಹೋಲಿಕೆ  

ದೇವರು ಯೇಸುವನ್ನು ನಮ್ಮ ಅಪರಾಧಗಳ ನಿಮಿತ್ತ ಮರಣಕ್ಕೆ ಒಪ್ಪಿಸಿಕೊಟ್ಟು ನಮಗೆ ನೀತಿವಂತರೆಂಬ ನಿರ್ಣಯವು ಉಂಟಾಗುವುದಕ್ಕಾಗಿಯೇ ಜೀವದಿಂದ ಎಬ್ಬಿಸಲ್ಪಟ್ಟನು.


ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಯೇಸು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ, ತನ್ನ ಮಹಾ ಕರುಣಾನುಸಾರವಾಗಿ ನಮ್ಮನ್ನು ತಿರುಗಿ ಜೀವಿಸುವಂತೆ ಮಾಡಿ ಜೀವಕರವಾದ ನಿರೀಕ್ಷೆಯನ್ನು ನಮ್ಮಲ್ಲಿ ಹುಟ್ಟಿಸಿ,


ಕ್ರಿಸ್ತನೂ ಎದ್ದುಬರಲಿಲ್ಲವಾದರೆ ನಮ್ಮ ಬೋಧನೆಯು ವ್ಯರ್ಥ ಮತ್ತು ನಿಮ್ಮ ನಂಬಿಕೆಯು ಸಹ ವ್ಯರ್ಥವಾದದ್ದು.


ಆತನನ್ನು ಸತ್ತವರೊಳಗಿಂದ ಎಬ್ಬಿಸಿ ಆತನಿಗೆ ಮಹಿಮೆಯನ್ನು ಕೊಟ್ಟ ದೇವರಲ್ಲಿ ನೀವು ಆತನ ಮೂಲಕ ನಂಬಿಕೆಯಿಟ್ಟವರಾಗಿದ್ದೀರಷ್ಟೆ. ಹೀಗಿರಲಾಗಿ ನಿಮ್ಮ ನಂಬಿಕೆಯೂ ನಿರೀಕ್ಷೆಯೂ ದೇವರಲ್ಲಿಯೇ ನೆಲೆಗೊಂಡಿವೆ.


ನಾವು ದೇವರಿಗೆ ಶತ್ರುಗಳಾಗಿದ್ದಾಗಲೇ ನಮಗೆ ಆತನ ಮಗನ ಮರಣದ ಮೂಲಕ ಆತನೊಂದಿಗೆ ಸಂಧಾನವಾಯಿತು ಆತನ ಕೂಡ ಸಂಧಾನವಾದ ನಮಗೆ ಮಗನ ಜೀವದಿಂದ ರಕ್ಷಣೆಯಾಗುವುದು ಅಷ್ಟೇ ನಿಶ್ಚಯವಲ್ಲವೇ?


ನಾನು ನಿಮಗೆ ಸಾರಿದ ಸುವಾರ್ತೆಯನ್ನು ನೀವು ದೃಢವಾಗಿ ಹಿಡಿದುಕೊಂಡರೆ ನಿಮಗೆ ರಕ್ಷಣೆಯಾಗುತ್ತದೆ. ಇಲ್ಲದಿದ್ದರೆ ನಿಮ್ಮ ನಂಬಿಕೆಯು ನಿರರ್ಥಕವಾಗುತ್ತದೆ.


ದೇವರು ಆತನನ್ನೇ ಇಸ್ರಾಯೇಲ್ ಜನರಿಗೆ ಮಾನಸಾಂತರವನ್ನೂ, ಪಾಪಕ್ಷಮಾಪಣೆಯನ್ನೂ ದಯಪಾಲಿಸುವುದಕ್ಕಾಗಿ ಅವನನ್ನು ಪ್ರಭುವನ್ನಾಗಿಯೂ, ರಕ್ಷಕನಾಗಿಯೂ ತನ್ನ ಬಲಗೈಯಿಂದ ಉನ್ನತಸ್ಥಾನಕ್ಕೆ ಏರಿಸಿದನು.


“ನರಪುತ್ರನೇ, ಇಸ್ರಾಯೇಲ್ ವಂಶದವರಿಗೆ ಹೀಗೆ ನುಡಿ, ‘ಅಯ್ಯೋ, ನಮ್ಮ ದ್ರೋಹಗಳ ಮತ್ತು ಪಾಪಗಳ ಭಾರವು ನಮ್ಮ ಮೇಲೆ ಬಿದ್ದಿದೆ; ಅವುಗಳಿಂದ ಕ್ಷೀಣವಾಗಿ ಹೋಗುತ್ತಿದ್ದೇವೆ; ನಾವು ಹೇಗೆ ಬದುಕುವೆವು? ಅಂದುಕೊಳ್ಳುತ್ತೀರಲ್ಲಾ.


ಸತ್ತವರು ಎದ್ದು ಬರುವುದಿಲ್ಲವಾದರೆ ಕ್ರಿಸ್ತನೂ ಎದ್ದು ಬರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು