Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 15:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಕ್ರಿಸ್ತನಲ್ಲಿ ನಮಗಿರುವ ನಿರೀಕ್ಷೆಯು ಕೇವಲ ಈ ಬದುಕಿಗೆ ಮಾತ್ರ ಸೀಮಿತವಾಗಿದ್ದರೆ ನಾವು ಎಲ್ಲಾ ಮನುಷ್ಯರಿಗಿಂತಲೂ ಹೀನರಾಗುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಕ್ರಿಸ್ತಯೇಸುವಿನಲ್ಲಿ ನಮಗಿರುವ ನಂಬಿಕೆ ಕೇವಲ ಬದುಕಿಗೆ ಸೀಮಿತವಾಗಿದ್ದರೆ ಜಗತ್ತಿನಲ್ಲಿ ನಮಗಿಂತ ನಿರ್ಭಾಗ್ಯರು ಬೇರೆ ಯಾರೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಈ ಜೀವಮಾನಕಾಲದ ಪೂರ್ತಿಗೆ ನಾವು ಕ್ರಿಸ್ತನಲ್ಲಿ ನಿರೀಕ್ಷೆಯಿಟ್ಟುಕೊಂಡದ್ದೇ ಹೊರತು ಮತ್ತೇನೂ ಇಲ್ಲದಿದ್ದರೆ ಎಲ್ಲಾ ಮನುಷ್ಯರಲ್ಲಿಯೂ ನಿರ್ಭಾಗ್ಯರೇ ಸರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ನಮಗೆ ಕ್ರಿಸ್ತನಲ್ಲಿರುವ ನಿರೀಕ್ಷೆಯು ಈ ಲೋಕಕ್ಕೆ ಮಾತ್ರ ಸೀಮಿತವಾಗಿದ್ದರೆ, ನಾವು ಬೇರೆಲ್ಲ ಜನರಿಗಿಂತಲೂ ದುಃಖಕ್ಕೆ ಪಾತ್ರರಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ನಾವು ಈ ಜೀವನದಲ್ಲಿ ಮಾತ್ರ ಕ್ರಿಸ್ತ ಯೇಸುವಿನಲ್ಲಿ ನಿರೀಕ್ಷೆಯಿಟ್ಟು ಕೊಂಡಿರುವವರಾಗಿದ್ದರೆ, ನಾವು ಎಲ್ಲಾ ಮನುಷ್ಯರಲ್ಲಿಯೂ ಕನಿಕರಪಡತಕ್ಕವರೇ ಆಗುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಖಾಲಿ ಹ್ಯಾ ಜಲ್ಮಾಚ್ಯಾ ಸಾಟ್ನಿ ಎವ್ಡೆಚ್ ಕ್ರಿಸ್ತಾಚ್ಯಾ ವರ್‍ತಿ ಅಮಿ ಬರೊಸೊ ಥವ್ತಾವ್ ಹೊಲ್ಯಾರ್, ಅಮ್ಚಿ ಗತ್ ಹುರಲ್ಲ್ಯಾ ಸಗ್ಳ್ಯಾ ಲೊಕಾಂಚ್ಯಾನ್ಬಿ ಬುರ್ಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 15:19
19 ತಿಳಿವುಗಳ ಹೋಲಿಕೆ  

ಪರಲೋಕದಿಂದ ಒಂದು ಧ್ವನಿಯು ನನಗೆ ಕೇಳಿಸಿತು. ಅದು, “ಇಂದಿನಿಂದ ಕರ್ತನ ಭಕ್ತರಾಗಿ ಸಾಯುವವರು ಧನ್ಯರು ಎಂಬುದಾಗಿ ಬರೆ” ಎಂದು ನನಗೆ ಹೇಳಿತು. ಅದಕ್ಕೆ ಆತ್ಮನು, “ಹೌದು, ಅವರು ಧನ್ಯರೇ. ಅವರು ತಮ್ಮ ಶ್ರಮೆಗಳಿಂದ ಮುಕ್ತರಾಗಿ ವಿಶ್ರಮಿಸಿಕೊಳ್ಳುತ್ತಾರೆ ಮತ್ತು ಅವರ ಸುಕೃತ್ಯಗಳು ಅವರನ್ನು ಹಿಂಬಾಲಿಸುತ್ತವೆ” ಎಂದು ಹೇಳುತ್ತಾನೆ.


ಆತನನ್ನು ಸತ್ತವರೊಳಗಿಂದ ಎಬ್ಬಿಸಿ ಆತನಿಗೆ ಮಹಿಮೆಯನ್ನು ಕೊಟ್ಟ ದೇವರಲ್ಲಿ ನೀವು ಆತನ ಮೂಲಕ ನಂಬಿಕೆಯಿಟ್ಟವರಾಗಿದ್ದೀರಷ್ಟೆ. ಹೀಗಿರಲಾಗಿ ನಿಮ್ಮ ನಂಬಿಕೆಯೂ ನಿರೀಕ್ಷೆಯೂ ದೇವರಲ್ಲಿಯೇ ನೆಲೆಗೊಂಡಿವೆ.


ಅದರ ನಿಮಿತ್ತದಿಂದಲೇ ಈ ಕಷ್ಟಗಳನ್ನು ಅನುಭವಿಸುತ್ತಾ ಇದ್ದೇನೆ. ಆದರೂ ನಾನು ನಾಚಿಕೆಪಡುವುದಿಲ್ಲ. ನಾನು ನಂಬಿರುವಾತನನ್ನು ಬಲ್ಲೆನು. ಆತನು ನನಗೆ ಒಪ್ಪಿಸಿಕೊಟ್ಟಿರುವುದನ್ನು ಆತನು ಆ ದಿನದವರೆಗೆ ಕಾಪಾಡುವುದಕ್ಕೆ ಶಕ್ತನಾಗಿದ್ದಾನೆಂದು ದೃಢವಾಗಿ ನಂಬಿದ್ದೇನೆ.


ಅಲ್ಲಿ ಶಿಷ್ಯರ ಮನಸ್ಸುಗಳನ್ನು ದೃಢಪಡಿಸಿ ಕ್ರಿಸ್ತ ನಂಬಿಕೆಯಲ್ಲಿ ಸ್ಥಿರವಾಗಿ ನಿಲ್ಲಿರಿ ಎಂದು ಪ್ರೋತ್ಸಾಹಿಸಿದರು. ನಾವು ಬಹು ಸಂಕಟಗಳನ್ನು ತಾಳಿ ದೇವರ ರಾಜ್ಯದೊಳಗೆ ಸೇರಬೇಕಾಗಿದೆ ಎಂದು ಬೋಧಿಸಿದರು.


ಕ್ರಿಸ್ತ ಯೇಸುವಿನಲ್ಲಿ ಸದ್ಭಕ್ತರಾಗಿ ಜೀವಿಸುವುದಕ್ಕೆ ಮನಸ್ಸು ಮಾಡುವವರೆಲ್ಲರೂ ಹಿಂಸೆಗೊಳಗಾಗುವರು.


ನೀವು ನನ್ನಲ್ಲಿದ್ದು ಸಮಾಧಾನವನ್ನು ಹೊಂದಿದವರಾಗಿರಬೇಕೆಂದು ಇದನ್ನೆಲ್ಲಾ ನಿಮ್ಮೊಂದಿಗೆ ಹೇಳಿದ್ದೇನೆ. ಲೋಕದಲ್ಲಿ ನಿಮಗೆ ಸಂಕಟಗಳುಂಟು. ಆದರೆ ಧೈರ್ಯವಾಗಿರಿ, ನಾನು ಲೋಕವನ್ನು ಜಯಿಸಿದ್ದೇನೆ” ಎಂದು ಹೇಳಿದನು.


“ನಿಮ್ಮ ವಿಷಯದಲ್ಲಿ ಜಾಗರೂಕರಾಗಿರಿ. ಅತಿ ಭೋಜನದ ಮದದಿಂದಲೂ, ಅಮಲಿನಿಂದಲೂ, ಪ್ರಾಪಂಚಿಕವಾದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗಿರಲಾಗಿ ಆ ದಿನವು ನಿಮ್ಮ ಮೇಲೆ ಉರುಲಿನಂತೆ ಫಕ್ಕನೆ ಬಂದೀತು.


ಇನ್ನು ಕೆಲವರು ವಾಕ್ಯವನ್ನು ಕೇಳಿದ ಮೇಲೆ ಬರಬರುತ್ತಾ ಈ ಜೀವನದಲ್ಲಿ ಆಗುವ ಚಿಂತೆ, ಐಶ್ವರ್ಯ ಭೋಗಗಳಿಂದ ಅಡಗಿಸಲ್ಪಟ್ಟು ಫಲವನ್ನು ಕೊಡಲಾರದವರು, ಮುಳ್ಳುಗಿಡಗಳಲ್ಲಿ ಬಿದ್ದ ಬೀಜವಾಗಿರುವವರು.


“ಆಗ ನಿಮ್ಮನ್ನು ಕಷ್ಟಸಂಕಟಗಳಿಗೆ ಗುರಿಮಾಡಿ ಕೊಲ್ಲುವರು; ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ಎಲ್ಲಾ ಜನಾಂಗಗಳವರು ದ್ವೇಷಿಸುವರು.


ಮಾತು ಹೆಚ್ಚಿದಷ್ಟು ಪರಿಣಾಮ ಕಡಿಮೆ, ಅವುಗಳಿಂದ ಮನುಷ್ಯನಿಗೆ ಏನು ಪ್ರಯೋಜನ?


ಯುದ್ಧಕ್ಕೆ ಹೋಗುವ ಸೈನಿಕನು ಲೋಕವ್ಯವಹಾರದಲ್ಲಿ ಸಿಕ್ಕಿಕೊಳ್ಳದೆ, ತನ್ನನ್ನು ಸೈನ್ಯದಲ್ಲಿ ಸೇರಿಸಿಕೊಂಡವನನ್ನು ಮೆಚ್ಚಿಸುವುದಕ್ಕಾಗಿ ಪ್ರಯಾಸ ಪಡುತ್ತಿರುವನಲ್ಲವೇ.


ಅವರು ನಿಮ್ಮನ್ನು ಸಭಾಮಂದಿರದಿಂದ ಹೊರಗೆ ಹಾಕುವರು; ಅದಲ್ಲದೆ ನಿಮ್ಮನ್ನು ಕೊಲ್ಲುವವನು ತಾನು ದೇವರಿಗೆ ಬಲಿಕೊಟ್ಟೆನೆಂದು ಭಾವಿಸುವ ಕಾಲವು ಬರಲಿದೆ.


ಯೆಹೋವನೇ, ಇಹಲೋಕವೇ ತಮ್ಮ ಪಾಲೆಂದು ನಂಬಿದ ನರರಿಗೆ ಸಿಕ್ಕದಂತೆ ನಿನ್ನ ಕೈಯಿಂದ ನನ್ನನ್ನು ತಪ್ಪಿಸು; ನಿನ್ನ ಐಶ್ವರ್ಯದಿಂದ ಅವರ ಹೊಟ್ಟೆಯನ್ನು ತುಂಬಿಸಿದ್ದೀಯಲ್ಲಾ. ಅವರು ಸಂತಾನವೃದ್ಧಿಹೊಂದಿ ಉಳಿದ ಆಸ್ತಿಯನ್ನು ತಮ್ಮ ಮಕ್ಕಳಿಗೆ ಬಿಡುತ್ತಾರೆ.


ಲೋಕದೊಳಗೆ ದೇವರು ನಿನಗೆ ನೇಮಿಸಿರುವ ವ್ಯರ್ಥ ಜೀವಮಾನದ ವ್ಯರ್ಥ ದಿನಗಳೆಲ್ಲಾ ನಿನ್ನ ಪ್ರಿಯಪತ್ನಿಯೊಡನೆ ಸುಖದಿಂದ ಬದುಕು. ನಿನ್ನ ಬಾಳಿನಲ್ಲಿಯೂ, ನೀನು ಲೋಕದೊಳಗೆ ಪಡುವ ಪ್ರಯಾಸದಲ್ಲಿಯೂ ಇದೇ ನಿನ್ನ ಪಾಲಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು