Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 15:57 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

57 ಆದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನಮಗೆ ಜಯವನ್ನು ಕೊಡುವ ದೇವರಿಗೆ ಸದಾಕಾಲ ಮಹಿಮೆಯುಂಟಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

57 ಆದರೆ ನಮ್ಮ ಪ್ರಭುವಾದ ಯೇಸುಕ್ರಿಸ್ತರ ಮುಖಾಂತರ ನಮಗೆ ಜಯವನ್ನು ದೊರಕಿಸಿಕೊಟ್ಟಿರುವ ದೇವರಿಗೆ ಸ್ತೋತ್ರ ಸಲ್ಲಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

57 ಆದರೆ ದೇವರು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನಮಗೆ ಜಯವನ್ನು ಕೊಟ್ಟಿದ್ದಾನೆ; ಆತನಿಗೆ ಸ್ತೋತ್ರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

57 ಆದರೆ ನಾವು ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇವೆ. ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಮೂಲಕ ಆತನು ನಮಗೆ ಜಯವನ್ನು ಕೊಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

57 ಆದರೆ ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಮೂಲಕ ನಮಗೆ ಜಯವನ್ನು ಕೊಡುವ ದೇವರಿಗೆ ಸ್ತೋತ್ರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

57 ಖರೆ ಅಮ್ಚ್ಯಾ ಧನಿಯಾ ಜೆಜು ಕ್ರಿಸ್ತಾಚ್ಯಾ ವೈನಾ ಅಮ್ಕಾ ಜಿಕ್ ದಿತಲ್ಯಾ ದೆವಾಕ್ ಧನ್ಯವಾದ್ ಸ್ತುತಿ ಹೊಂವ್ದಿತ್!

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 15:57
18 ತಿಳಿವುಗಳ ಹೋಲಿಕೆ  

ಕ್ರಿಸ್ತನ ಮುಖಾಂತರ ನಮ್ಮನ್ನು ವಿಜಯೋತ್ಸವದತ್ತ ನಡೆಸುವ ಹಾಗೂ ನಮ್ಮ ಮೂಲಕವಾಗಿ ತನ್ನ ಜ್ಞಾನವೆಂಬ ಸುವಾಸನೆಯನ್ನು ಎಲ್ಲಾ ಸ್ಥಳಗಳಲ್ಲಿ ಹರಡಿಸಿದ ದೇವರಿಗೆ ಸ್ತೋತ್ರವಾಗಲಿ.


ಆದರೆ ನಮ್ಮನ್ನು ಪ್ರೀತಿಸಿದಾತನ ಮೂಲಕವಾಗಿ ನಾವು ಎಲ್ಲಾ ವಿಷಯಗಳಲ್ಲಿಯೂ ಪೂರ್ಣ ಜಯಶಾಲಿಗಳಾಗಿದ್ದೇವೆ.


ಅಶ್ವಬಲವು ಯುದ್ಧದಿನಕ್ಕಾಗಿ ಸನ್ನದ್ಧವಾಗಿದ್ದರೂ ಜಯವು ಯೆಹೋವನಿಂದಲೇ.


ಅವರು ಮರಣದವರೆಗೆ ತಮ್ಮ ಪ್ರಾಣವನ್ನು ಪ್ರೀತಿಸದೆ, ಯಜ್ಞದ ಕುರಿಮರಿಯಾದಾತನ ರಕ್ತದಿಂದಲೂ ತಮ್ಮ ಸಾಕ್ಷಿಯ ವಾಕ್ಯದಿಂದಲೂ ಅವನನ್ನು ಜಯಿಸಿದರು.


ನೀವು ನನ್ನಲ್ಲಿದ್ದು ಸಮಾಧಾನವನ್ನು ಹೊಂದಿದವರಾಗಿರಬೇಕೆಂದು ಇದನ್ನೆಲ್ಲಾ ನಿಮ್ಮೊಂದಿಗೆ ಹೇಳಿದ್ದೇನೆ. ಲೋಕದಲ್ಲಿ ನಿಮಗೆ ಸಂಕಟಗಳುಂಟು. ಆದರೆ ಧೈರ್ಯವಾಗಿರಿ, ನಾನು ಲೋಕವನ್ನು ಜಯಿಸಿದ್ದೇನೆ” ಎಂದು ಹೇಳಿದನು.


ವರ್ಣಿಸಲಸಾಧ್ಯವಾದ ದಾನಗಳ ನಿಮಿತ್ತ ದೇವರಿಗೆ ಸ್ತೋತ್ರವಾಗಲಿ.


ಯೆಹೋವನಿಗೆ ಹೊಸ ಕೀರ್ತನೆಯನ್ನು ಹಾಡಿರಿ; ಆತನು ಅದ್ಭುತಕೃತ್ಯಗಳನ್ನು ನಡೆಸಿದ್ದಾನೆ. ಆತನ ಬಲಗೈಯೂ, ಪರಿಶುದ್ಧಬಾಹುವೂ ಜಯವನ್ನು ಉಂಟುಮಾಡಿವೆ.


ಯಾವಾಗಲೂ ಎಲ್ಲಾ ಕಾರ್ಯಗಳಿಗಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ತಂದೆಯಾದ ದೇವರಿಗೆ ಸ್ತೋತ್ರವನ್ನು ಮಾಡಿರಿ.


ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಮಾಡುತ್ತೇನೆ. ಹೀಗಿರಲಾಗಿ, ನಾನು ಬುದ್ಧಿಯಿಂದ ದೇವರ ನಿಯಮಕ್ಕೆ ದಾಸನಾಗಿಯೂ, ಮತ್ತೊಂದು ಕಡೆ ಶರೀರದಿಂದ ಪಾಪದ ನಿಯಮಕ್ಕೆ ಆಳಾಗಿಯೂ ನಡೆದುಕೊಳ್ಳುವವನಾಗಿದ್ದೇನೆ.


ನನ್ನ ಮಗನೇ, ನೀನು ಸಫಲನಾಗಿರುವಂತೆಯೂ, ನಿನ್ನ ದೇವರಾದ ಯೆಹೋವನು ನಿನ್ನ ವಿಷಯದಲ್ಲಿ ಮಾಡಿದ ವಾಗ್ದಾನದ ಪ್ರಕಾರ ನೀನು ದೇವಾಲಯವನ್ನು ಕಟ್ಟುವಂತೆಯೂ ಆತನು ನಿನ್ನ ಸಂಗಡ ಇರಲಿ.


ನೋಡಿರಿ! ಇದುವರೆಗೆ ಗುಪ್ತವಾಗಿದ್ದ ಸಂಗತಿಯನ್ನು ನಾನು ನಿಮಗೆ ತಿಳಿಸುತ್ತೇನೆ, ನಾವೆಲ್ಲರೂ ಸಾಯುವುದಿಲ್ಲ, ಮಾರ್ಪಡುವೆವು.


ಅರಾಮ್ಯರ ಅರಸನಿಗೆ ನಾಮಾನನೆಂಬ ಒಬ್ಬ ಸೇನಾಧಿಪತಿಯಿದ್ದನು. ಯೆಹೋವನು ಇವನ ಮುಖಾಂತರವಾಗಿ ಅರಾಮ್ಯರಿಗೆ ಜಯವನ್ನು ಅನುಗ್ರಹಿಸಿದ್ದದರಿಂದ ಅರಸನು ಇವನನ್ನು ಮಹಾ ಪುರುಷನೆಂದೂ ಸನ್ಮಾನಯೋಗ್ಯನೆಂದೂ ಗೌರವಿಸುತ್ತಿದ್ದನು. ಆದರೆ ಪರಾಕ್ರಮಶಾಲಿಯಾದ ಇವನು ಕುಷ್ಠರೋಗಿಯಾಗಿದ್ದನು.


ರೊಟ್ಟಿಯನ್ನು ತೆಗೆದುಕೊಂಡು, ಎಲ್ಲರ ಮುಂದೆ ದೇವರ ಸ್ತೋತ್ರಮಾಡಿ ಅದನ್ನು ಮುರಿದು ತಿನ್ನುವುದಕ್ಕೆ ಪ್ರಾರಂಭಿಸಿದನು.


ಇದಲ್ಲದೆ ಮಕ್ಕಳು ರಕ್ತ ಮಾಂಸಧಾರಿಗಳು ಆಗಿರುವುದರಿಂದ ಯೇಸು ಸಹ ಅವರಂತೆಯೇ ಆದನು. ತನ್ನ ಮರಣದಿಂದಲೇ ಮರಣಾಧಿಕಾರಿಯನ್ನು ಅಂದರೆ ಸೈತಾನನನ್ನು ನಾಶಮಾಡುವುದಕ್ಕೂ,


ಅವರ ಕಣ್ಣೀರನ್ನೆಲ್ಲಾ ಆತನೇ ಒರಸಿಬಿಡುವನು. ಇನ್ನು ಮರಣವಿರುವುದಿಲ್ಲ. ಇನ್ನು ದುಃಖವಾಗಲಿ, ಗೋಳಾಟವಾಗಲಿ, ಕಷ್ಟವಾಗಲಿ ಇರುವುದಿಲ್ಲ. ಮೊದಲಿದ್ದದ್ದೆಲ್ಲಾ ಇಲ್ಲದಂತಾಯಿತು” ಎಂದು ಹೇಳಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು