Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 15:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಾನಂತೂ ಅಪೊಸ್ತಲರಲ್ಲಿ ಕನಿಷ್ಠನು; ನಾನು ದೇವರ ಸಭೆಯನ್ನು ಹಿಂಸೆಪಡಿಸಿದ್ದರಿಂದ ಅಪೊಸ್ತಲೆನಿಸಿಕೊಳ್ಳುವುದಕ್ಕೆ ಯೋಗ್ಯನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನಾನಾದರೋ ಪ್ರೇಷಿತರಲ್ಲಿ ಕನಿಷ್ಠನು, ಪ್ರೇಷಿತನೆಂಬ ಹೆಸರಿಗೂ ಅಪಾತ್ರನು. ಏಕೆಂದರೆ, ನಾನು ದೇವರ ಸಭೆಯನ್ನು ಹಿಂಸಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನಾನಂತೂ ಅಪೊಸ್ತಲರಲ್ಲಿ ಕನಿಷ್ಠನಷ್ಟೆ; ನಾನು ದೇವರ ಸಭೆಯನ್ನು ಹಿಂಸೆಪಡಿಸಿದ್ದರಿಂದ ಅಪೊಸ್ತಲನೆನಿಸಿಕೊಳ್ಳುವದಕ್ಕೆ ಯೋಗ್ಯನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಉಳಿದೆಲ್ಲಾ ಅಪೊಸ್ತಲರು ನನಗಿಂತಲೂ ಶ್ರೇಷ್ಠರಾಗಿದ್ದಾರೆ. ಇದಕ್ಕೆ ಕಾರಣವೇನೆಂದರೆ, ನಾನು ದೇವರ ಸಭೆಯನ್ನು ಹಿಂಸಿಸಿದೆನು. ಆದ್ದರಿಂದ ಅಪೊಸ್ತಲನೆಂದು ಕರೆಸಿಕೊಳ್ಳುವುದಕ್ಕೂ ನಾನು ಯೋಗ್ಯನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನಾನಾದರೋ ಅಪೊಸ್ತಲರಲ್ಲಿ ಕನಿಷ್ಠನು, ಅಪೊಸ್ತಲನೆನಿಸಿಕೊಳ್ಳುವುದಕ್ಕೆ ನಾನು ಯೋಗ್ಯನಲ್ಲ, ಏಕೆಂದರೆ ನಾನು ದೇವರ ಸಭೆಯನ್ನು ಹಿಂಸೆಪಡಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಅಪೊಸ್ತಲಾನಿತ್ನಿ ಎಗ್ದಮ್ ಕನಿಸ್ಟ್ ಅಪೊಸ್ತಲ್ ಮಿಯಾ, ಅಪೊಸ್ತಲ್ ಮನ್ತಲ್ಯಾ ನಾವಾಕ್ ಸೈತ್ ಮಿಯಾ ಯೊಗ್ಯ್ ನ್ಹಯ್. ಕಶ್ಯಾಕ್ ಮಟ್ಲ್ಯಾರ್ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಕ್ ಮಿಯಾ ಸತ್ವುಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 15:9
12 ತಿಳಿವುಗಳ ಹೋಲಿಕೆ  

ನಾನು ಹೀಗೆ ಬರೆದು, ಬುದ್ಧಿಹೀನನಾಗಿದ್ದೇನೆ! ಅದಕ್ಕೆ ನೀವೇ ನನ್ನನ್ನು ಬಲವಂತ ಮಾಡಿದಿರಿ. ನಿಮ್ಮಿಂದ ನನಗೆ ಹೊಗಳಿಕೆಯು ಉಂಟಾಗಬೇಕಾಗಿತ್ತು, ಯಾಕೆಂದರೆ ನಾನು ಕೇವಲ ಅಲ್ಪನಾದರೂ “ಅತಿಶ್ರೇಷ್ಟರಾದ, ಅಪೊಸ್ತಲರು” ಅನ್ನಿಸಿಕೊಳ್ಳುವವರಿಗಿಂತಲೂ ಒಂದರಲ್ಲಿಯಾದರೂ ಕಡಿಮೆಯಾದವನಲ್ಲ.


ಆದರೆ ಸೌಲನು ಮನೆಮನೆಗಳಿಗೆ ನುಗ್ಗಿ ಗಂಡಸರನ್ನೂ ಹೆಂಗಸರನ್ನೂ ಎಳೆದುಕೊಂಡು ಬಂದು ಸೆರೆಮನೆಗೆ ಹಾಕಿಸಿ ಸಭೆಯನ್ನು ನಾಶಮಾಡುತ್ತಿದ್ದನು.


“ಪೂರ್ವದಲ್ಲಿ ನಮ್ಮನ್ನು ಹಿಂಸೆಪಡಿಸಿದವನು, ತಾನು ಹಾಳು ಮಾಡುತ್ತಿದ್ದ ನಂಬಿಕೆಯನ್ನು ಈಗ ಸಾರುತ್ತಿದ್ದಾನೆ” ಎಂಬ ಸುದ್ದಿಯನ್ನು ಅವರು ಕೇಳಿ,


ಮತಾಸಕ್ತಿಯನ್ನು ನೋಡಿದರೆ ನಾನು ಕ್ರೈಸ್ತ ಸಭೆಯ ಹಿಂಸಕನು, ಧರ್ಮಶಾಸ್ತ್ರದಲ್ಲಿ ಹೇಳಿರುವ ನೀತಿಯನ್ನು ನೋಡಿದರೆ ನಾನು ನಿರ್ದೋಷಿ.


ಹಿಂದೆ ನಾನು ಯೆಹೂದ್ಯ ಮತದಲ್ಲಿದ್ದಾಗ ನನ್ನ ನಡತೆ ಎಂಥದ್ದೆಂದು ನೀವು ಕೇಳಿದ್ದೀರಿ. ನಾನು ದೇವರ ಸಭೆಯನ್ನು ಬಹಳವಾಗಿ ಹಿಂಸೆಪಡಿಸಿ ಹಾಳುಮಾಡುತ್ತಿದ್ದೆನು.


“ಅತಿಶ್ರೇಷ್ಟರಾದ ಅಪೊಸ್ತಲರು” ಅನ್ನಿಸಿಕೊಳ್ಳುವ ಅವರಿಗಿಂತ ನಾನು ಒಂದರಲ್ಲಾದರೂ ಕಡಿಮೆಯಾದವನಲ್ಲವೆಂದು ಎಣಿಸುತ್ತೇನೆ


ಯೆಹೂದ್ಯರಿಗಾಗಲಿ ಗ್ರೀಕರಿಗಾಗಲಿ ದೇವರ ಸಭೆಗಾಗಲಿ ವಿಘ್ನವಾಗಬೇಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು