1 ಕೊರಿಂಥದವರಿಗೆ 16:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ನಾನು ನಿಮ್ಮಲ್ಲಿ ಬೇಡುವುದೇನಂದರೆ, ಸೇವೆಯಲ್ಲಿ ನಮಗೆ ಸಹಾಯಮಾಡುವ ಹಾಗೂ ಪ್ರಯಾಸಪಡುವವರೆಲ್ಲರಿಗೂ ನೀವು ಅಧೀನರಾಗಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಇಂಥವರನ್ನು ಮತ್ತು ಅವರೊಡನೆ ದುಡಿದು ಸೇವೆಮಾಡುವವರನ್ನು ಮುಂದಾಳುಗಳೆಂದು ಸನ್ಮಾನಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಸಹೋದರರೇ, ನೀವು ಇಂಥವರಿಗೂ ಕೆಲಸದಲ್ಲಿ ಸಹಾಯಮಾಡುತ್ತಾ ಪ್ರಯಾಸಪಡುತ್ತಾ ಇರುವವರೆಲ್ಲರಿಗೂ ಒಳಗಾಗಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಈ ರೀತಿಯ ಮುಂದಾಳುಗಳನ್ನು ಮತ್ತು ಅವರೊಂದಿಗೆ ಕೆಲಸ ಮಾಡುವವರನ್ನು ಹಾಗೂ ಸೇವೆ ಮಾಡುವವರನ್ನು ಹಿಂಬಾಲಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಪ್ರಿಯರೇ, ನೀವು ಇಂಥವರಿಗೂ ಈ ಸೇವೆಯಲ್ಲಿ ಅವರೊಂದಿಗೆ ಪ್ರಯಾಸಪಡುವವರಿಗೂ ವಿಧೇಯರಾಗಿರಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್16 ತಸ್ಲ್ಯಾಕ್ನಿ ಅನಿ ತೆಂಕಾ ಮಜತ್ ದಿವ್ನ್ ಕಾಮ್ ಕರ್‍ತಲ್ಯಾ ಸಗ್ಳ್ಯಾಕ್ನಿ ತುಮಿ ಖಾಲ್ತಿ ಹೊವ್ನ್ ಚಲಾ. ಅಧ್ಯಾಯವನ್ನು ನೋಡಿ |
ದೇವರು ತನ್ನ ಸಭೆಯಲ್ಲಿ ಮೊದಲನೆಯದಾಗಿ ಅಪೊಸ್ತಲರನ್ನು, ಎರಡನೆಯದಾಗಿ ಪ್ರವಾದಿಗಳನ್ನು, ಮೂರನೆಯದಾಗಿ ಬೋಧಕರನ್ನು ಇಟ್ಟಿದ್ದಾನೆ. ಆ ಮೇಲೆ ಮಹತ್ಕಾರ್ಯ ಮಾಡುವ ಶಕ್ತಿಯನ್ನು, ನಾನಾ ರೋಗಗಳನ್ನು ವಾಸಿಮಾಡುವ ವರವನ್ನೂ, ಪರಸಹಾಯ ಮಾಡುವ ಗುಣವನ್ನೂ, ಕಾರ್ಯಗಳನ್ನು ನಿರ್ವಹಿಸುವ ಜ್ಞಾನವನ್ನು ಮತ್ತು ವಿವಿಧ ಭಾಷೆಗಳನ್ನಾಡುವ ವರವನ್ನೂ ಅವರವರಿಗೆ ಬೇರೆ ಬೇರೆಯಾಗಿ ಕೊಟ್ಟಿದ್ದಾನೆ.
ಆಗ ಮೂವತ್ತು ಜನರಲ್ಲಿ ಮುಖ್ಯಸ್ಥನಾದ ಅಮಾಸೈಯು ಆತ್ಮಾವೇಶವುಳ್ಳವನಾಗಿ, “ದಾವೀದನೇ, ನಾವು ನಿನ್ನವರು; ಶುಭವಾಗಲಿ! ಇಷಯನ ಮಗನೇ, ನಾವು ನಿನ್ನ ಪಕ್ಷದವರು; ಶುಭವಾಗಲಿ! ನಿನಗೂ ನಿನ್ನ ಸಹಾಯಕರಿಗೂ ಶುಭವಾಗಲಿ! ನಿನ್ನ ದೇವರು ನಿನಗೆ ಜಯವನ್ನು ಕೊಡುವವನಾಗಿದ್ದಾನೆ” ಎಂದು ಹೇಳಿದನು. ಆಗ ದಾವೀದನು ಅವರನ್ನು ತನ್ನ ಜೊತೆಯಲ್ಲಿ ಸೇರಿಸಿಕೊಂಡು ಸೈನ್ಯಾಧಿಪತಿಗಳನ್ನಾಗಿ ನೇಮಿಸಿದನು.