Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 16:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆಸ್ಯಸೀಮೆಯ ಸಭೆಗಳವರು ನಿಮ್ಮನ್ನು ವಂದಿಸುತ್ತಾರೆ. ಅಕ್ವಿಲನೂ ಮತ್ತು ಪ್ರಿಸ್ಕಿಲ್ಲಳೂ ತಮ್ಮ ಮನೆಯಲ್ಲಿ ಕೂಡಿ ಬರುವ ಸಭೆಯವರೊಂದಿಗೆ ಕರ್ತನ ಹೆಸರಿನಲ್ಲಿ ಬಹಳವಾಗಿ ನಿಮ್ಮನ್ನು ವಂದಿಸುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಏಷ್ಯ ಸೀಮೆಯಲ್ಲಿರುವ ಧರ್ಮಸಭೆಗಳ ಸಹೋದರರು ನಿಮಗೆ ವಂದನೆಗಳನ್ನು ತಿಳಿಸಿರುತ್ತಾರೆ. ಅಕ್ವಿಲನು ಮತ್ತು ಪ್ರಿಸಿಲ್ಲಳು ಹಾಗೂ ಅವರ ಮನೆಯಲ್ಲಿ ಸಭೆ ಸೇರುವ ಎಲ್ಲರೂ ಪ್ರಭುವಿನ ಹೆಸರಿನಲ್ಲಿ ನಿಮಗೆ ಹಾರ್ದಿಕ ಶುಭಾಶಯಗಳನ್ನು ಕೋರಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಆಸ್ಯಸೀಮೆಯ ಸಭೆಗಳವರು ನಿಮಗೆ ವಂದನೆ ಹೇಳುತ್ತಾರೆ. ಅಕ್ವಿಲನೂ ಪ್ರಿಸ್ಕಳೂ ತಮ್ಮ ಮನೆಯಲ್ಲಿ ಕೂಡುವ ಸಭೆಯವರೊಂದಿಗೆ ಕರ್ತನ ಹೆಸರಿನಲ್ಲಿ ಅನೇಕ ವಂದನೆಗಳನ್ನು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಏಷ್ಯಾದ ಸಭೆಗಳವರು ನಿಮಗೆ ವಂದನೆಗಳನ್ನು ತಿಳಿಸಿದ್ದಾರೆ. ಅಕ್ವಿಲನು ಮತ್ತು ಪ್ರಿಸ್ಕಿಲ್ಲಳು ಪ್ರಭುವಿನ ಹೆಸರಿನಲ್ಲಿ ನಿಮಗೆ ಬಹಳ ವಂದನೆಗಳನ್ನು ತಿಳಿಸಿದ್ದಾರೆ. ಅವರ ಮನೆಯಲ್ಲಿ ಸೇರಿಬರುವ ಸಭೆಯವರು ಸಹ ನಿಮಗೆ ವಂದನೆ ತಿಳಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಏಷ್ಯಾದ ಸೀಮೆಯ ಸಭೆಗಳವರು ನಿಮ್ಮನ್ನು ವಂದಿಸುತ್ತಾರೆ. ಅಕ್ವಿಲನೂ ಮತ್ತು ಪ್ರಿಸ್ಕಳೂ ತಮ್ಮ ಮನೆಯಲ್ಲಿ ಕೂಡುವ ಸಭೆಯವರೊಂದಿಗೆ ಕರ್ತನ ಹೆಸರಿನಲ್ಲಿ ನಿಮ್ಮನ್ನು ಹೃದಯಪೂರ್ವಕವಾಗಿ ವಂದಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಅಸಿಯಾ ಪ್ರಾಂತ್ಯಾತ್ಲೆ ದೆವಾಚ್ಯಾ ಲೊಕಾಂಚೆ ತಾಂಡೆ ತುಮ್ಕಾ ನಮಸ್ಕಾರ್ ಕರ್ತಾತ್. ಅಕ್ವಿಲಾ, ಪ್ರಿಸ್ಕಾ ಅನಿ ತೆಂಚ್ಯಾ ಘರಾತ್ ಜಮ್ತಲೊ ದೆವಾಚ್ಯಾ ಲೊಕಾಂಚೊ ತಾಂಡೊ ಧನಿಯಾಚ್ಯಾ ಎಕ್ವಟ್ಟಾನ್ ತುಮ್ಕಾ ನಮಸ್ಕಾರ್ ಕರ್ತಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 16:19
13 ತಿಳಿವುಗಳ ಹೋಲಿಕೆ  

ಪೊಂತದಲ್ಲಿ ಹುಟ್ಟಿದ ಅಕ್ವಿಲನೆಂಬ ಒಬ್ಬ ಯೆಹೂದ್ಯನನ್ನು ಅಲ್ಲಿ ಕಂಡನು. ಯೆಹೂದ್ಯರೆಲ್ಲರೂ ರೋಮಾಪುರವನ್ನು ಬಿಟ್ಟುಹೋಗಬೇಕೆಂದು ಕ್ಲೌದಿಯ ಚಕ್ರವರ್ತಿಯು ಆಜ್ಞೆ ವಿಧಿಸಿದ ಕಾರಣ ಅಕ್ವಿಲನೂ ಅವನ ಹೆಂಡತಿಯಾದ ಪ್ರಿಸ್ಕಿಲ್ಲಳೂ ಕೆಲವು ದಿನಗಳ ಮೊದಲೇ ಇತಾಲ್ಯ ದೇಶದಿಂದ ಅಲ್ಲಿಗೆ ಬಂದಿದ್ದರು.


ಅದು, “ನೀನು ನೋಡುವುದನ್ನು ಒಂದು ಪುಸ್ತಕದಲ್ಲಿ ಬರೆದು ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್, ಫಿಲದೆಲ್ಫಿಯ, ಲವೊದಿಕೀಯ, ಎಂಬೀ ಏಳು ಸಭೆಗಳಿಗೆ ಕಳುಹಿಸಬೇಕು” ಎಂದು ನುಡಿಯಿತು.


ಯೇಸು ಕ್ರಿಸ್ತನ ಅಪೊಸ್ತಲನಾದ ಪೇತ್ರನು ಪೊಂತ, ಗಲಾತ್ಯ, ಕಪ್ಪದೋಕ್ಯ, ಆಸ್ಯ, ಬಿಥೂನ್ಯ ಎಂಬ ಸೀಮೆಗಳಲ್ಲಿ ಚದುರಿಹೋಗಿರುವಂಥ ಪರದೇಶಸ್ಥರಾದ ದೇವಜನರಿಗೆ ಅಂದರೆ,


ಮತ್ತು ಸಹೋದರಿಯಾದ ಅಪ್ಫಿಯಳಿಗೂ, ನಮ್ಮ ಸಹ ಹೋರಾಟಗಾರನಾದ ಅರ್ಖಿಪ್ಪನಿಗೂ ನಿನ್ನ ಮನೆಯಲ್ಲಿ ಸೇರಿಬರುವ ಸಭೆಯವರಿಗೂ ಬರೆಯುವುದೇನಂದರೆ:


ಪ್ರಿಸ್ಕಿಲ್ಲಳಿಗೂ, ಅಕ್ವಿಲ್ಲನಿಗೂ, ಒನೇಸಿಪೊರನ ಮನೆಯವರಿಗೂ ವಂದನೆಹೇಳು.


ಲವೊದಿಕೀಯದಲ್ಲಿರುವ ಸಹೋದರರಿಗೂ ಮತ್ತು ನುಂಫಳಿಗೂ ಹಾಗೂ ಆಕೆಯ ಮನೆಯಲ್ಲಿ ಸೇರಿಬರುವ ಸಭೆಯವರಿಗೂ ವಂದನೆ ಹೇಳಿರಿ.


ಫಿಲೊಲೊಗನಿಗೂ, ಯೂಲ್ಯಳಿಗೂ, ನೇರ್ಯನಿಗೂ, ಅವನ ತಂಗಿಗೂ, ಒಲುಂಪನಿಗೂ, ಇವರೊಂದಿಗಿರುವ ದೇವಜನರೆಲ್ಲರಿಗೂ ವಂದನೆಗಳು.


ಇದು ಎರಡು ವರ್ಷಗಳ ವರೆಗೂ ನಡೆದಿದ್ದರಿಂದ ಅಸ್ಯಸೀಮೆಯಲ್ಲಿ ವಾಸವಾಗಿದ್ದ ಎಲ್ಲಾ ಯೆಹೂದ್ಯರೂ, ಗ್ರೀಕರೂ, ಕರ್ತನ ವಾಕ್ಯವನ್ನು ಕೇಳಿದರು.


ಅವನು ಸಭಾಮಂದಿರದಲ್ಲಿ ಧೈರ್ಯದಿಂದ ಮಾತನಾಡುವುದಕ್ಕೆ ಪ್ರಾರಂಭಿಸಿದನು. ಅವನ ಮಾತುಗಳನ್ನು ಪ್ರಿಸ್ಕಿಲ್ಲಳೂ ಮತ್ತು ಅಕ್ವಿಲನೂ ಕೇಳಿ ಅವನನ್ನು ತಮ್ಮ ಮನೆಗೆ ಕರೆದುಕೊಂಡು ಹೋಗಿ ದೇವರ ಮಾರ್ಗವನ್ನು ಅವನಿಗೆ ಇನ್ನೂ ಸೂಕ್ಷ್ಮವಾಗಿ ವಿವರಿಸಿದರು.


ಪೌಲನು ಇನ್ನು ಅನೇಕ ದಿನಗಳ ಕಾಲ ಅಲ್ಲಿದ್ದ ಅನಂತರ ಸಹೋದರರಿಂದ ಅಪ್ಪಣೆತೆಗೆದುಕೊಂಡು ತನಗೆ ದೀಕ್ಷೆ ಇದ್ದುದರಿಂದ ಕೆಂಖ್ರೆಯ ಪಟ್ಟಣದಲ್ಲಿ ಕ್ಷೌರಮಾಡಿಸಿಕೊಂಡು ಹಡಗನ್ನು ಹತ್ತಿ ಸಿರಿಯಕ್ಕೆ ಹೊರಟನು. ಪ್ರಿಸ್ಕಿಲ್ಲಳೂ ಮತ್ತು ಅಕ್ವಿಲನೂ ಅವನ ಸಂಗಡ ಹೊರಟರು.


ಪಾರ್ಥ್ಯರೂ, ಮೇದ್ಯರೂ, ಏಲಾಮ್ಯರೂ, ಮೆಸೊಪೊತಾಮ್ಯ, ಯೂದಾಯ, ಕಪ್ಪದೋಕ್ಯ, ಪೊಂತ, ಆಸ್ಯ,


ಆಸ್ಯಸೀಮೆಯಲ್ಲಿ ವಾಕ್ಯವನ್ನು ಹೇಳಬಾರದೆಂದು ಪವಿತ್ರಾತ್ಮನು ತಡೆದ್ದುದರಿಂದ ಅವರು ಫ್ರುಗ್ಯ, ಗಲಾತ್ಯ ಸೀಮೆಯನ್ನು ಹಾದುಹೋಗಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು