Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 16:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅಥವಾ ನಿಮ್ಮಲ್ಲಿ ಹಿಮಕಾಲವನ್ನಾದರೂ ಕಳೆಯುವೆನು; ಹಾಗೆಯೇ ನಾನು ಹೋಗಬೇಕಾದ ಸ್ಥಳಕ್ಕೆ ನೀವು ನನ್ನನ್ನು ಸಾಗಕಳುಹಿಸಲು ಸಹಾಯಮಾಡಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಬಹುಶಃ ನಾನು ನಿಮ್ಮೊಡನೆ ತಂಗಬಹುದು. ಚಳಿಗಾಲವನ್ನು ಪೂರ್ತಿಯಾಗಿ ನಿಮ್ಮಲ್ಲಿ ಕಳೆಯಬೇಕಾಗಬಹುದು. ಆಮೇಲೆ ನಾನು ಹೋಗಬೇಕಾದ ಸ್ಥಳಕ್ಕೆ ನೀವು ನನ್ನನ್ನು ಕಳುಹಿಸಿಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನಿಮ್ಮಲ್ಲಿ ಹಿಮಕಾಲವನ್ನಾದರೂ ಕಳೆದೇನು; ಮತ್ತು ನಾನು ಹೋಗಬೇಕಾದ ಸ್ಥಳಕ್ಕೆ ನೀವು ನನ್ನನ್ನು ಸಾಗಕಳುಹಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನಾನು ನಿಮ್ಮೊಂದಿಗೆ ಸ್ವಲ್ಪಕಾಲ ಇಳಿದುಕೊಳ್ಳಬಹುದು. ಒಂದುವೇಳೆ ಚಳಿಗಾಲವನ್ನು ಪೂರ್ತಿಯಾಗಿ ನಿಮ್ಮಲ್ಲಿ ಕಳೆಯಬೇಕಾಗಬಹುದು. ಬಳಿಕ ನಾನು ಹೋಗಬೇಕಾದ ಸ್ಥಳಕ್ಕೆ ನೀವು ನನ್ನನ್ನು ಕಳುಹಿಸಿಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಬಹುಶಃ ನಾನು ಸ್ವಲ್ಪ ಸಮಯ ನಿಮ್ಮೊಂದಿಗೆ ಇದ್ದ ಮೇಲೆ ಅಥವಾ ಚಳಿಗಾಲವನ್ನು ಪೂರ್ತಿಯಾಗಿ ನಿಮ್ಮೊಂದಿಗೆ ಕಳೆಯಲು ಬಯಸುತ್ತೇನೆ. ಹೀಗೆ ನಾನು ಹೋಗಬೇಕಾದ ಸ್ಥಳಗಳಲ್ಲಿ ನೀವು ನನಗೆ ಸಹಾಯ ಮಾಡಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಸಾದ್ಯ್ ಹೊಲ್ಯಾರ್ ಮಿಯಾ ಉಲ್ಲೆ ದಿಸ್ ತುಮ್ಚ್ಯಾ ವಾಂಗ್ಡಾ ರ್‍ಹಾತಾ, ಅಶೆ ಥಂಡಿಚಿ ದಿಸಾ ಪತರ್ ತುಮ್ಚ್ಯಾ ವಾಂಗ್ಡಾಚ್ ರ್‍ಹಾಲ್ಯಾರ್‍ಬಿ ರ್‍ಹಾಲೊ, ಖರೆ ಮಿಯಾ ಥೈತ್ನಾ ಖೈ ಜಾತಲೆ ರ್‍ಹಾಲ್ಯಾರ್‍ಬಿ ತುಮಿಚ್ ಮಾಕಾ ಫಿಡೆ ಜಾವ್ಕ್ ಮಜತ್ ಕರ್‍ತಲೆ ಪಡ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 16:6
11 ತಿಳಿವುಗಳ ಹೋಲಿಕೆ  

ಆದುದರಿಂದ ಸಭೆಯವರು ಅವರನ್ನು ಸಾಗ ಕಳುಹಿಸಲು, ಅವರು ಫೊಯಿನಿಕೆ ಮತ್ತು ಸಮಾರ್ಯ ಸೀಮೆಗಳನ್ನು ಹಾದು ಹೋಗುತ್ತಿರುವಾಗ ಅನ್ಯಜನರು ಕರ್ತನ ಕಡೆಗೆ ತಿರುಗಿಕೊಂಡ ಸಂಗತಿಯನ್ನು ಅಲ್ಲಿದ್ದ ಸಹೋದರರಿಗೆ ವಿವರವಾಗಿ ಹೇಳಿ ಅವರೆಲ್ಲರನ್ನು ಬಹಳವಾಗಿ ಸಂತೋಷಪಡಿಸಿದರು.


ನಾನು ಸ್ಪೇನ್ ದೇಶಕ್ಕೆ ಹೋಗುವಾಗ ನನ್ನ ಮಾರ್ಗದಲ್ಲಿ ನಿಮ್ಮ ದರ್ಶನವನ್ನು ಮಾಡಬೇಕೆಂದು ಬಯಸಿದ್ದೇನೆ. ತರುವಾಯ ನಿಮ್ಮ ಜೊತೆಯಲ್ಲಿ ಸ್ವಲ್ಪ ಮಟ್ಟಿಗೆ ಸಂತೋಷವಾಗಿ ಸಮಯಕಳೆದ ನಂತರ ನೀವು ಆ ದೇಶಕ್ಕೆ ನನ್ನನ್ನು ಕಳುಹಿಸಿಕೊಡುವಿರೆಂದು ನಂಬುತ್ತೇನೆ.


ನಾನು ನಿಕೊಪೊಲಿಯಲ್ಲಿ ಚಳಿಗಾಲವನ್ನು ಕಳೆಯಬೇಕೆಂದು ನಿಶ್ಚಯಿಸಿಕೊಂಡಿದ್ದರಿಂದ ಅರ್ತೆಮನನ್ನಾಗಲಿ ತುಖಿಕನನ್ನಾಗಲಿ ನಿನ್ನ ಬಳಿಗೆ ಕಳುಹಿಸಿದ ಕೂಡಲೆ ಅಲ್ಲಿಗೆ ನನ್ನ ಹತ್ತಿರ ಬರುವುದಕ್ಕೆ ಪ್ರಯತ್ನಿಸು.


ಮೊದಲು ನಿಮ್ಮ ಬಳಿಗೆ ಬಂದು ನಿಮ್ಮ ಮಾರ್ಗವಾಗಿ ಮಕೆದೋನ್ಯಕ್ಕೆ ಹೋಗಿ ಅನಂತರ ಮಕೆದೋನ್ಯವನ್ನು ಬಿಟ್ಟು ತಿರುಗಿ ನಿಮ್ಮ ಬಳಿಗೆ ಬಂದು ನೀವು ನನ್ನನ್ನು ಯೂದಾಯಕ್ಕೆ ಕಳುಹಿಸಿ ಕೊಡಬೇಕೆಂದು ಯೋಚಿಸಿದ್ದೆನು.


ಆದ್ದರಿಂದ ಯಾರೂ ಅವನನ್ನು ತಿರಸ್ಕರಿಸಬಾರದು. ಅವನು ನನ್ನ ಬಳಿಗೆ ಬರುವಂತೆ ಅವನನ್ನು ಸಮಾಧಾನದಿಂದ ಕಳುಹಿಸಿರಿ; ಅವನು ಸಹೋದರರೊಂದಿಗೆ ಬರುವುದನ್ನು ಎದುರುನೋಡುತ್ತಾ ಇದ್ದೇನೆ.


ಮೂರು ತಿಂಗಳಾದ ಮೇಲೆ ಅಲೆಕ್ಸಾಂದ್ರಿಯದಿಂದ ಬಂದು, ಆ ದ್ವೀಪದಲ್ಲಿ ಹಿಮಕಾಲವನ್ನು ಕಳೆಯಲು ತಂಗಿದ್ದ ಒಂದು ಹಡಗನ್ನು ಹತ್ತಿ ಹೊರಟೆವು. ಆ ಹಡಗಿಗೆ ಅಶ್ವಿನೀದೇವತೆಗಳೆಂಬ ಚಿಹ್ನೆ ಇತ್ತು.


ಆ ಬಂದರು ಪ್ರದೇಶ; ಚಳಿಗಾಲವನ್ನು ಕಳೆಯುವುದಕ್ಕೆ ಅನುಕೂಲವಲ್ಲವಾದುದರಿಂದ, ಅಲ್ಲಿಂದ ಹೊರಟು ಸಾಧ್ಯವಾದರೆ ಹೇಗೂ ಫೊಯಿನಿಕ್ಸ ಊರನ್ನು ಸೇರಿ, ಅಲ್ಲೇ ಆ ಚಳಿಗಾಲವನ್ನು ಕಳೆಯಬೇಕೆಂದು ಹೆಚ್ಚು ಜನರು ತಮ್ಮ ಅಭಿಪ್ರಾಯಗಳನ್ನು ಹೇಳಿದರು. ಫೊಯಿನಿಕ್ಸವು ಕ್ರೇತ ದ್ವೀಪದ ಒಂದು ಬಂದರು ಪ್ರದೇಶ, ಈಶಾನ್ಯ ದಿಕ್ಕಿಗೂ, ಆಗ್ನೇಯ ದಿಕ್ಕಿಗೂ ಅಭಿಮುಖವಾಗಿದೆ.


ಆ ದಿನಗಳನ್ನು ಮುಗಿಸಿಕೊಂಡು ನಾವು ಹೊರಡುವಾಗ ಅವರೆಲ್ಲರೂ ತಮ್ಮ ಮಡದಿ ಮಕ್ಕಳು ಸಹಿತವಾಗಿ ಬಂದು ನಮ್ಮನ್ನು ಊರ ಹೊರಕ್ಕೆ ಬೀಳ್ಕೊಟ್ಟರು. ನಾವು ಸಮುದ್ರತೀರದಲ್ಲಿ ಮೊಣಕಾಲೂರಿಕೊಂಡು ಪ್ರಾರ್ಥನೆ ಮಾಡಿ,


ತರುವಾಯ ಅವರು ಹಡಗಿನವರೆಗೆ ಅವನ ಸಂಗಡ ಹೋಗಿ ಅವನನ್ನು ಬೀಳ್ಕೊಟ್ಟರು.


ಪೌಲನನ್ನು ಕಳುಹಿಸಿದವರು ಅವನನ್ನು ಅಥೇನೆಯವರೆಗೂ ಕರೆದುಕೊಂಡು ಹೋದರು, ಸೀಲನನ್ನೂ, ತಿಮೊಥೆಯನನ್ನೂ ಭೇಟಿಯಾದ ಕೂಡಲೆ ಬೇಗ ತನ್ನ ಬಳಿಗೆ ಬರಬೇಕೆಂಬ ಅಪ್ಪಣೆಯನ್ನು ಪೌಲನಿಂದ ಹೊಂದಿ ಹೊರಟುಬಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು