Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 2:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನಾವು ಇಹಲೋಕದ ಆತ್ಮವನ್ನು ಹೊಂದದೆ ದೇವರು ನಮಗೆ ಉಚಿತವಾಗಿ ದಯಪಾಲಿಸಿರುವ ವರಗಳನ್ನು ತಿಳಿದುಕೊಳ್ಳುವುದಕ್ಕಾಗಿ ದೇವರಿಂದ ಬಂದ ಆತ್ಮವನ್ನೇ ಹೊಂದಿದವರಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ನಾವಾದರೋ ಪ್ರಾಪಂಚಿಕ ಆತ್ಮವನ್ನು ಹೊಂದಿದವರಲ್ಲ. ದೇವರು ನಮಗೆ ದಯಪಾಲಿಸಿರುವ ವರಪ್ರಸಾದಗಳನ್ನು ಅರಿತುಕೊಳ್ಳುವಂತೆ ಮಾಡುವ ಪಾರಮಾರ್ಥಿಕ ಆತ್ಮವನ್ನು ಪಡೆದಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನಾವು ಪ್ರಾಪಂಚಿಕ ಆತ್ಮವನ್ನು ಹೊಂದದೆ ದೇವರು ನಮಗೆ ದಯಪಾಲಿಸಿರುವ ಕೃಪಾವರಗಳನ್ನು ತಿಳುಕೊಳ್ಳುವದಕ್ಕಾಗಿ ದೇವರಿಂದ ಬಂದ ಆತ್ಮವನ್ನೇ ಹೊಂದಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನಾವು ಹೊಂದಿಕೊಂಡದ್ದು ದೇವರಿಂದ ಬಂದ ಪವಿತ್ರಾತ್ಮನನ್ನೇ ಹೊರತು ಪ್ರಾಪಂಚಿಕವಾದ ಆತ್ಮವನ್ನಲ್ಲ. ದೇವರು ನಮಗೆ ಉಚಿತವಾಗಿ ಕೊಟ್ಟಿರುವಂಥವುಗಳನ್ನು ತಿಳಿದುಕೊಳ್ಳುವುದಕ್ಕಾಗಿ ನಾವು ಆತನನ್ನು ಹೊಂದಿಕೊಂಡೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನಾವು ಪ್ರಾಪಂಚಿಕ ಆತ್ಮವನ್ನು ಹೊಂದದೆ ದೇವರು ನಮಗೆ ಉಚಿತವಾಗಿ ದಯಪಾಲಿಸಿರುವಂಥವುಗಳನ್ನು ತಿಳಿದುಕೊಳ್ಳುವುದಕ್ಕಾಗಿ ದೇವರಿಂದ ಬಂದ ಆತ್ಮರನ್ನು ಹೊಂದಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಅಮಿ ಹ್ಯಾ ಜಗಾಚೊ ಆತ್ಮೊ ಘೆವ್ಕ್‌ನಾವ್, ಹೆಚ್ಯಾ ಬದ್ಲಾಕ್, ದೆವಾಕ್ನಾ ಯೆಲ್ಲೊ ಆತ್ಮೊ ಘೆಟ್ಲಾಂವ್, ತೆಚೆಸಾಟ್ನಿ ದೆವಾನ್ ಅಮ್ಕಾ ಫುಕೊಟ್ ಕಾಯ್ ದಿಲಾ ಮನ್ತಲೆ ಅಮಿ ಕಳ್ವುನ್ ಘೆವ್ಕ್ ಪಾಜೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 2:12
17 ತಿಳಿವುಗಳ ಹೋಲಿಕೆ  

ಆದರೆ ಆತನಿಂದ ನೀವು ಹೊಂದಿದ ಅಭಿಷೇಕವು ನಿಮ್ಮಲ್ಲಿ ನೆಲೆಗೊಂಡಿರುವುದರಿಂದ ಯಾರೂ ನಿಮಗೆ ಬೋಧನೆ ಮಾಡುವುದು ಅಗತ್ಯವಿಲ್ಲ. ಆತನು ನಿಮಗೆ ಮಾಡಿರುವ ಅಭಿಷೇಕವೇ ನಿಮ್ಮನ್ನು ಎಲ್ಲಾ ವಿಷಯಗಳಲ್ಲಿ ಬೋಧನೆ ಮಾಡುವಂಥದ್ದಾಗಿದೆ ಅದು ಸುಳ್ಳಲ್ಲ ಸತ್ಯವಾಗಿದೆ. ಅದು ನಿಮಗೆ ಬೋಧನೆ ಮಾಡಿದ ಪ್ರಕಾರವೇ ಆತನಲ್ಲಿ ನೆಲೆಗೊಂಡಿರುವಿರಿ.


ಆದರೆ ನೀವು ಪವಿತ್ರನಾಗಿರುವಾತನಿಂದ ಅಭಿಷೇಕವನ್ನು ಹೊಂದಿದವರಾಗಿದ್ದೀರಿ ಎಂಬ ಸತ್ಯವನ್ನೂ ತಿಳಿದವರಾಗಿದ್ದೀರಿ.


ಆದ್ದರಿಂದ ಈಗ ಕ್ರಿಸ್ತ ಯೇಸುವಿನಲ್ಲಿರುವವರಿಗೆ ಯಾವ ಅಪರಾಧ ನಿರ್ಣಯವೂ ಇಲ್ಲ,


ಇವರಲ್ಲಿ ದೇವರ ಪ್ರತಿರೂಪವಾಗಿರುವ ಕ್ರಿಸ್ತನ ತೇಜಸ್ಸನ್ನು ತೋರಿಸುವ ಸುವಾರ್ತೆಯ ಬೆಳಕನ್ನು ನೋಡಬಾರದೆಂದು ಈ ಲೋಕದ ದೇವರು ನಂಬಿಕೆಯಿಲ್ಲದವರ ಮನಸ್ಸನ್ನು ಕುರುಡು ಮಾಡಿದ್ದಾನೆ.


ದೇವರು ನಮ್ಮಲ್ಲಿ ಇರಿಸಿರುವ ಪವಿತ್ರಾತ್ಮನು ಅಭಿಮಾನತಾಪದಿಂದ ನಮಗೋಸ್ಕರ ಹಂಬಲಿಸುತ್ತಾನೆಂಬ ವೇದೋಕ್ತಿ ಬರಿ ಮಾತೆಂದು ನೀವು ಭಾವಿಸುತ್ತೀರೋ?


ಸ್ವಂತ ಮಗನನ್ನು ಉಳಿಸಿಕೊಳ್ಳದೆ ಆತನನ್ನು ನಮ್ಮೆಲ್ಲರಿಗೋಸ್ಕರ ಒಪ್ಪಿಸಿಕೊಟ್ಟನಲ್ಲಾ, ಮಗನನ್ನು ಕೊಟ್ಟ ಮೇಲೆ ಸಮಸ್ತವನ್ನೂ ನಮಗೆ ದಯಪಾಲಿಸದೆ ಇರುವನೋ?


ಆ ಮೇಲೆ ದೇವದೂತನು ನನಗೆ, “ಈ ಮಾತುಗಳು ನಂಬತಕ್ಕವುಗಳೂ ಸತ್ಯವಾದವುಗಳೂ ಆಗಿವೆ. ಪ್ರವಾದಿಗಳ ಆತ್ಮಗಳನ್ನು ಪ್ರೇರೇಪಿಸುವ ದೇವರಾದ ಕರ್ತನು ಅತಿಶೀಘ್ರದಲ್ಲಿ ಸಂಭವಿಸತಕ್ಕ ಸಂಗತಿಗಳನ್ನು ತನ್ನ ದಾಸರಿಗೆ ತೋರಿಸುವುದಕ್ಕಾಗಿ ತನ್ನ ದೇವದೂತನನ್ನು ಕಳುಹಿಸಿಕೊಟ್ಟನು.


ಪೌಲನಾಗಲಿ, ಅಪೊಲ್ಲೋಸನಾಗಲಿ, ಕೇಫನಾಗಲಿ ಲೋಕವಾಗಲಿ, ಜೀವವಾಗಲಿ ಮರಣವಾಗಲಿ ಈಗಿನ ಸಂಗತಿಗಳಾಗಲಿ ಮುಂದಣ ಸಂಗತಿಗಳಾಗಲಿ ಸಮಸ್ತವೂ ನಿಮ್ಮದೇ.


ಪೂರ್ವದಲ್ಲಿ ನೀವು ಇಹಲೋಕದ ಪದ್ಧತಿಗೆ ಅನುಸಾರವಾಗಿಯೂ, ವಾಯುಮಂಡಲದಲ್ಲಿ ಅಧಿಕಾರ ನಡಿಸುವ ಅಧಿಪತಿಗೆ ಅಂದರೆ ಅವಿಧೇಯತೆಯ ಮಕ್ಕಳಲ್ಲಿ ಈಗ ಕೆಲಸ ನಡೆಸುವ ಆತ್ಮನಿಗನುಸಾರವಾಗಿ ಜೀವನ ನಡಿಸಿದ್ದೀರಿ.


ಆದರೆ ಪರಿಪಕ್ವತೆಯುಳ್ಳವರ ಮಧ್ಯದಲ್ಲಿ ಜ್ಞಾನವನ್ನೇ ಹೇಳುತ್ತೇವೆ. ಅದು ಇಹಲೋಕದ ಜ್ಞಾನವಲ್ಲ, ಗತಿಸಿ ಹೋಗುವ ಇಹಲೋಕಾಧಿಕಾರಿಗಳ ಜ್ಞಾನವೂ ಅಲ್ಲ.


ದೇವರು ಜ್ಞಾನಿಗಳನ್ನು ನಾಚಿಕೆಪಡಿಸುವುದಕ್ಕಾಗಿ ಈ ಲೋಕದ ಬುದ್ಧಿಹೀನರನ್ನು ಆರಿಸಿಕೊಂಡನು; ದೇವರು ಬಲಿಷ್ಠರನ್ನು ನಾಚಿಕೆಪಡಿಸುವುದಕ್ಕಾಗಿ ಈ ಲೋಕದ ಅಶಕ್ತರನ್ನು, ಬಲಹೀನರನ್ನು ಆರಿಸಿಕೊಂಡನು.


ಭೂಲೋಕದವರನ್ನೆಲ್ಲಾ ಮರುಳುಗೊಳಿಸಿ ಪಾಪ ಮಾಡಿಸುತ್ತಿದ್ದ ಆ ಮಹಾ ಘಟಸರ್ಪವು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಆ ಪುರಾತನ ಸರ್ಪವನ್ನು ಭೂಮಿಗೆ ತಳ್ಳಲಾಯಿತು. ಅವನ ದೂತರು ಅವನೊಂದಿಗೆ ದೊಬ್ಬಲ್ಪಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು