Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 2:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಇವುಗಳನ್ನು ಮನುಷ್ಯ ಜ್ಞಾನವು ಕಲಿಸಿದ ಮಾತುಗಳಿಂದ ಹೇಳದೆ ಪವಿತ್ರಾತ್ಮನೇ ಕಲಿಸಿಕೊಟ್ಟ ಮಾತುಗಳಿಂದ ಹೇಳಿ ಆತ್ಮೀಕವಾದವುಗಳನ್ನು ಆತ್ಮೀಕರಾದವರಿಗೆ ಯುಕ್ತವಾದ ರೀತಿಯಲ್ಲಿ ಸ್ಪಷ್ಟಪಡಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ನಾವು ಇವುಗಳನ್ನು ಮಾನವ ಜ್ಞಾನ ಪ್ರೇರೇಪಿಸಿದ ಮಾತುಗಳಿಂದ ಹೇಳುವುದಿಲ್ಲ. ದೇವರ ಆತ್ಮದಿಂದ ಪ್ರೇರಿತವಾದ ಮಾತುಗಳಿಂದ ಹೇಳುತ್ತೇವೆ. ಹೀಗೆ ಆಧ್ಯಾತ್ಮಿಕ ಸತ್ಯಗಳನ್ನು, ಆಧ್ಯಾತ್ಮಿಕ ವ್ಯಕ್ತಿಗಳಿಗೆ ವಿವರಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಇವುಗಳನ್ನು ಮಾನುಷಜ್ಞಾನವು ಕಲಿಸಿದ ಮಾತುಗಳಿಂದ ಹೇಳದೆ ದೇವರಾತ್ಮನೇ ಕಲಿಸಿಕೊಟ್ಟ ಮಾತುಗಳಿಂದ ಹೇಳಿ ಆತ್ಮಸಂಬಂಧವಾದವುಗಳನ್ನು ಆತ್ಮನಿಗೆ ಯುಕ್ತವಾದ ರೀತಿಯಲ್ಲಿ ವಿವರಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನಾವು ಈಸಂಗತಿಗಳನ್ನು ಹೇಳುವಾಗ ಮನುಷ್ಯರ ಜ್ಞಾನದಿಂದ ಕಲಿತುಕೊಂಡಿರುವ ವಾಕ್ಯಗಳನ್ನು ಉಪಯೋಗಿಸದೆ ಆತ್ಮನಿಂದ ಕಲಿತುಕೊಂಡ ವಾಕ್ಯಗಳನ್ನೇ ಉಪಯೋಗಿಸುತ್ತೇವೆ. ಆತ್ಮಿಕ ಸಂಗತಿಗಳನ್ನು ವಿವರಿಸಲು ಆತ್ಮಿಕ ಪದಗಳನ್ನೇ ಬಳಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನಾವು ಮನುಷ್ಯ ಜ್ಞಾನವು ಕಲಿಸಿದ ಮಾತುಗಳಿಂದ ಮಾತನಾಡದೆ, ದೇವರ ಆತ್ಮರು ಕಲಿಸಿಕೊಟ್ಟ ಮಾತುಗಳಿಂದ ಇವುಗಳನ್ನು ಮಾತಾಡುತ್ತೇವೆ. ಹೀಗೆ ನಾವು ಆತ್ಮಿಕ ಸತ್ಯಗಳನ್ನು ದೇವರ ಆತ್ಮರ ಮಾತುಗಳಿಂದಲೇ ಸ್ಪಷ್ಟಪಡಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ತೆಚೆಸಾಟ್ನಿ ಆತ್ಮೊ ಅಸಲ್ಲ್ಯಾಕ್ನಿ ಅಮಿ ಆತ್ಮಿಕ್ ಖರೆಪಾನ್ ಸೊಡ್ವುನ್ ಸಾಂಗಟಲ್ಲ್ಯಾ ಸರ್ಕೆ, ಜೆ ಕಾಯ್ ಅಮಿ ಬೊಲ್ತಾಂವ್, ತೆ ಮಾಸ್ಸಾಚ್ಯಾ ಶಾನ್‍ಪಾನಾನ್ ಶಿಕ್ವುಲ್ಲ್ಯಾ ಗೊಸ್ಟಿಯಾ ನ್ಹಯ್. ಪವಿತ್ರ್ ಆತ್ಮ್ಯಾನುಚ್ ಶಿಕ್ವುಲ್ಲ್ಯಾ ಗೊಸ್ಟಿಯಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 2:13
14 ತಿಳಿವುಗಳ ಹೋಲಿಕೆ  

ನಿಮ್ಮ ನಂಬಿಕೆಯು ಮನುಷ್ಯಜ್ಞಾನವನ್ನು ಆಧಾರ ಮಾಡಿಕೊಳ್ಳದೆ ದೇವರ ಶಕ್ತಿಯನ್ನು ಆಧಾರಮಾಡಿಕೊಳ್ಳಬೇಕೆಂದು ನನ್ನ ಬೋಧನೆಯಲ್ಲಿಯೂ, ಪ್ರಸಂಗದಲ್ಲಿಯೂ ಮನವೊಲಿಸುವ ಜ್ಞಾನವಾಕ್ಯಗಳನ್ನು ನಾನು ಪ್ರಯೋಗಿಸದೇ ದೇವರಾತ್ಮನ ಬಲವನ್ನು ತೋರ್ಪಡಿಸುವ ವಾಕ್ಯಗಳನ್ನೇ ಪ್ರಯೋಗಿಸಿದೆನು.


ಪ್ರಾಪಂಚಿಕನಾದವನು ದೇವರಾತ್ಮನ ವಿಷಯಗಳನ್ನು ಬೇಡವೆನ್ನುತ್ತಾನೆ; ಅವು ಅವನಿಗೆ ಹುಚ್ಚುಮಾತನಾಗಿ ತೋರುತ್ತವೆ; ಅವು ಆಧ್ಯಾತ್ಮದ ಮೂಲಕ ತಿಳಿದುಕೊಳ್ಳ ಬೇಕಾಗಿರುವುದರಿಂದ ಅವನು ಅವುಗಳನ್ನು ಗ್ರಹಿಸಲಾರನು.


ಕ್ರಿಸ್ತನು ನನ್ನನ್ನು ಕಳುಹಿಸಿದ್ದು ದೀಕ್ಷಾಸ್ನಾನಮಾಡಿಸುವುದಕ್ಕಲ್ಲ ಆದರೆ ಸುವಾರ್ತೆಯನ್ನು ಸಾರುವುದಕ್ಕಾಗಿಯೇ. ಅದನ್ನು ಮನುಷ್ಯಜ್ಞಾನದ ಮಾತುಗಳಿಂದ ಸಾರಬೇಕೆಂದು ಕಳುಹಿಸಲಿಲ್ಲ; ಹಾಗೆ ಸಾರಿದರೆ ಕ್ರಿಸ್ತನ ಶಿಲುಬೆಯ ಶಕ್ತಿಯು ಮಾತಿನ ಚತುರತೆಯಿಂದ ನಿರರ್ಥಕವಾಗಿ ಹೋಗುತ್ತದೆ.


ಸಹೋದರರೇ, ನಾನು ಗುಪ್ತವಾಗಿದ್ದ ದೇವರ ಸತ್ಯಾರ್ಥಗಳನ್ನು ತಿಳಿಸುವವನಾಗಿ ನಿಮ್ಮ ಬಳಿಗೆ ಬಂದಾಗ ವಾಕ್ಚಾತುರ್ಯದಿಂದಾಗಲಿ, ಜ್ಞಾನದಿಂದಾಗಲಿ ಬರಲಿಲ್ಲ.


ಆದರೆ ಈ ಸಂಗತಿಗಳನ್ನು ಮುಂತಿಳಿಸುವುದರಲ್ಲಿ ತಮಗೋಸ್ಕರವಲ್ಲ ನಿಮಗೋಸ್ಕರವೇ ಸೇವೆ ಮಾಡುವವರಾಗಿದ್ದಾರೆಂಬುದು ಅವರಿಗೆ ಪ್ರಕಟವಾಯಿತು. ಅವರು ಮುಂದಾಗಿ ಹೇಳಿದ ಸಂಗತಿಗಳೇ ಈಗ ಸಂಭವಿಸಲ್ಪಡುತ್ತಿವೆ ಎಂಬ ವರ್ತಮಾನವು ಪರಲೋಕದಿಂದ ಕಳುಹಿಸಲ್ಪಟ್ಟ ಪವಿತ್ರಾತ್ಮನ ಬಲದಿಂದ ನಿಮಗೆ ಸುವಾರ್ತೆಯನ್ನು ಸಾರಿದವರ ಮೂಲಕ ನಿಮಗೆ ಪ್ರಸಿದ್ಧಿಮಾಡಲ್ಪಟ್ಟಿದೆ. ದೇವದೂತರೂ ಈ ಸಂಗತಿಗಳನ್ನು ಲಕ್ಷ್ಯವಿಟ್ಟು ನೋಡಬೇಕೆಂದು ಬಯಸುತ್ತಿದ್ದಾರೆ.


ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ. ಸಕಲಜ್ಞಾನದಿಂದ ಒಬ್ಬರಿಗೊಬ್ಬರು ಉಪದೇಶಮಾಡಿಕೊಂಡು ಬುದ್ಧಿಹೇಳಿಕೊಳ್ಳಿರಿ. ಕೀರ್ತನೆಗಳಿಂದಲೂ, ಸ್ತುತಿಪದಗಳಿಂದಲೂ ಮತ್ತು ಆತ್ಮೀಕವಾದ ಗೀತೆಗಳಿಂದಲೂ ಹಾಗೂ ನಿಮ್ಮ ಹೃದಯಗಳಲ್ಲಿ ದೇವರಿಗೆ ಕೃತಜ್ಞತೆಯಿಂದಲೂ ಹಾಡಿರಿ.


ನಮ್ಮ ಕರ್ತನಾದ ಯೇಸುಕ್ರಿಸ್ತನ ಶಕ್ತಿಯನ್ನೂ, ಪ್ರತ್ಯಕ್ಷತೆಯನ್ನೂ ನಿಮಗೆ ತಿಳಿಯಪಡಿಸಿದ್ದರಲ್ಲಿ ಚಮತ್ಕಾರದಿಂದ ಕಲ್ಪಿಸಿದ ಕಟ್ಟುಕಥೆಗಳನ್ನು ನಾವು ಅನುಸರಿಸಲಿಲ್ಲ. ಆತನ ಮಹತ್ತನ್ನು ಕಣ್ಣಾರೆ ಕಂಡವರಾಗಿಯೇ ಅದನ್ನು ತಿಳಿಯಪಡಿಸಿದೆವು.


ಕೀರ್ತನೆಗಳಿಂದಲೂ, ಸ್ತುತಿಪದಗಳಿಂದಲೂ, ಆತ್ಮೀಕ ಹಾಡುಗಳಿಂದಲೂ ಒಬ್ಬರಿಗೊಬ್ಬರು ಮಾತನಾಡಿಕೊಳ್ಳುತ್ತಾ ನಿಮ್ಮ ಹೃದಯಗಳಲ್ಲಿ ಕರ್ತನನ್ನು ಹಾಡಿ ಕೊಂಡಾಡಿರಿ.


ಅನ್ಯಭಾಷೆಗಳನ್ನಾಡುವವನು ದೇವರ ಸಂಗಡ ಮಾತನಾಡುತ್ತಾನೆಯೇ ಹೊರತು ಮನುಷ್ಯರ ಸಂಗಡ ಅಲ್ಲ. ಅವನು ಆತ್ಮ ಪ್ರೇರಿತನಾಗಿ ಗುಪ್ತ ವಿಷಯಗಳನ್ನಾಡುತ್ತಾನೆ. ಅವನು ಮಾತನಾಡುವ ಮಾತುಗಳನ್ನು ಯಾರೂ ಅರ್ಥಮಾಡಿಕೊಳ್ಳುವುದಿಲ್ಲ.


ನಾವು ನಿಮ್ಮಲ್ಲಿ ಆತ್ಮೀಕವಾದ ಬೀಜವನ್ನು ಬಿತ್ತಿದ ಮೇಲೆ ನಿಮ್ಮಿಂದ ಭೌತಿಕವಾದ ಪೈರನ್ನು ಕೊಯ್ಯುವುದು ದೊಡ್ಡ ವಿಷಯವೋ?


ಏಕೆಂದರೆ ನೀವು ಹೇಳತಕ್ಕದ್ದನ್ನು ಪವಿತ್ರಾತ್ಮನು ಆ ಗಳಿಗೆಯಲ್ಲಿಯೇ ನಿಮಗೆ ಕಲಿಸಿಕೊಡುವನು” ಅಂದನು.


ಆಗ ಅವರೆಲ್ಲರೂ ಪವಿತ್ರಾತ್ಮಭರಿತರಾದರು, ಅವರಿಗೆ ಆ ಪವಿತ್ರಾತ್ಮನು ನೀಡಿದ ಶಕ್ತಿಯ ಪ್ರಕಾರ ಬೇರೆಬೇರೆ ಭಾಷೆಗಳಲ್ಲಿ ಮಾತನಾಡುವುದಕ್ಕೆ ಪ್ರಾರಂಭಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು