Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 3:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ದೇವರು ನನಗೆ ಕೊಟ್ಟ ಕೃಪೆಯ ಪ್ರಕಾರ ನಾನು ಜಾಣ್ಮೆಯುಳ್ಳ ಪ್ರವೀಣನಾದ ಶಿಲ್ಪಿಯಂತೆ ಅಸ್ತಿವಾರ ಹಾಕಿದೆನು. ಮತ್ತೊಬ್ಬನು ಅದರ ಮೇಲೆ ಕಟ್ಟುತ್ತಾನೆ. ಆದರೆ ತಾನು ಅದರ ಮೇಲೆ ಹೇಗೆ ಕಟ್ಟುತ್ತಿದ್ದೇನೆಂದು ಪ್ರತಿಯೊಬ್ಬನು ಎಚ್ಚರಿಕೆಯಿಂದಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ದೇವರು ನನಗಿತ್ತ ವರದಾನಗಳಿಗೆ ಅನುಸಾರವಾಗಿ ನಾನು ಚತುರಶಿಲ್ಪಿಯಂತೆ ಅಸ್ತಿವಾರ ಹಾಕಿದೆ. ಇನ್ನೊಬ್ಬನು ಅದರ ಮೇಲೆ ಕಟ್ಟುತ್ತಿದ್ದಾನೆ. ಆದರೆ ಕಟ್ಟುವ ಪ್ರತಿಯೊಬ್ಬನು ತಾನು ಹೇಗೆ ಕಟ್ಟುತ್ತಿದ್ದಾನೆ ಎಂಬುದರ ಬಗ್ಗೆ ಎಚ್ಚರದಿಂದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ದೇವರು ನನಗೆ ಕೃಪೆಯಿಂದ ಒಪ್ಪಿಸಿದ ಕೆಲಸವನ್ನು ನಡಿಸಿ ನಾನು ಪ್ರವೀಣಶಿಲ್ಪಿಯಂತೆ ಅಸ್ತಿವಾರ ಹಾಕಿದೆನು, ಮತ್ತೊಬ್ಬನು ಅದರ ಮೇಲೆ ಕಟ್ಟುತ್ತಾನೆ. ಪ್ರತಿಯೊಬ್ಬನು ತಾನು ಅದರ ಮೇಲೆ ಎಂಥದನ್ನು ಕಟ್ಟುತ್ತಾನೋ ಎಚ್ಚರಿಕೆಯಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ದೇವರು ನನಗೆ ಕೊಟ್ಟ ವರದಾನಗಳನ್ನು ಉಪಯೋಗಿಸಿ ಚತುರ ಶಿಲ್ಪಿಯಂತೆ ನಾನು ಆ ಮನೆಗೆ ಅಸ್ತಿವಾರವನ್ನು ಹಾಕಿದೆನು. ಇತರ ಜನರು ಆ ಅಸ್ತಿವಾರದ ಮೇಲೆ ಕಟ್ಟುತ್ತಿದ್ದಾರೆ. ಆದರೆ ಪ್ರತಿಯೊಬ್ಬ ವ್ಯಕ್ತಿಯು ತಾನು ಹೇಗೆ ಕಟ್ಟುತ್ತಿದ್ದಾನೆ ಎಂಬುದರ ಬಗ್ಗೆ ಎಚ್ಚರದಿಂದಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ದೇವರು ನನಗೆ ಕೊಟ್ಟ ಕೃಪೆಗೆ ಅನುಸಾರವಾಗಿ, ನಾನು ಜ್ಞಾನಿಯಾದ ಶಿಲ್ಪಿಯಂತೆ ಅಸ್ತಿವಾರ ಹಾಕಿದೆನು. ಮತ್ತೊಬ್ಬನು ಅದರ ಮೇಲೆ ಕಟ್ಟುತ್ತಾನೆ. ಆದರೆ ಪ್ರತಿಯೊಬ್ಬನೂ ತಾನು ಅದರ ಮೇಲೆ ಎಷ್ಟು ಶ್ರದ್ಧೆಯಿಂದ ಕಟ್ಟುತ್ತಾನೆಂದು ನೋಡಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ದೆವಾನ್ ಮಾಕಾ ದಿಲ್ಲ್ಯಾ ಕುರ್ಪೆಚ್ಯಾ ವೈನಾ, ಮಿಯಾ ಎಕ್ ಶಾನ್ಯಾ ಭಾಂದ್ಪ್ಯಾಚ್ಯಾ ಸಾರ್ಕೆ ಪಾಯಾ ಘಾಟ್ಲಾ ಅನಿ ತೆಚ್ಯಾ ವೈರ್ ದುಸ್ರೊ ಎಕ್ಲೊ ಘರ್ ಭಾಂದುಲ್ಲಾ, ಖರೆ ಹರಿ ಎಕ್ಲೊ ಅಪ್ನಿ ಕಶೆ ಭಾಂದುಲ್ಲಾ ತೆಚ್ಯಾ ವಿಶಯಾತ್ ಕಾಳ್ಜಿ ಘೆವ್ದಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 3:10
37 ತಿಳಿವುಗಳ ಹೋಲಿಕೆ  

ಯೇಸು ಕ್ರಿಸ್ತನೆಂಬ ಅಸ್ತಿವಾರವನ್ನಲ್ಲದೆ ಮತ್ತೊಂದು ಅಸ್ತಿವಾರವನ್ನು ಯಾರೂ ಹಾಕಲಾರರಷ್ಟೆ.


ಅಪೊಸ್ತಲರೂ ಪ್ರವಾದಿಗಳೂ ಎಂಬ ಅಡಿಪಾಯದ ಮೇಲೆ ನೀವೂ ಮಂದಿರದೋಪಾದಿಯಲ್ಲಿ ಕಟ್ಟಲ್ಪಟ್ಟಿದ್ದೀರಿ. ಯೇಸು ಕ್ರಿಸ್ತನೇ ಮುಖ್ಯವಾದ ಮೂಲೆಗಲ್ಲು.


ಮತ್ತೊಬ್ಬರು ಹಾಕಿದ ಅಸ್ತಿವಾರದ ಮೇಲೆ ಕಟ್ಟಬಾರದೆಂದು ಮನಸ್ಸಿನಲ್ಲಿ ತೀರ್ಮಾನಿಸಿ ಕ್ರಿಸ್ತನ ಹೆಸರನ್ನು ತಿಳಿಸಿದ ಕಡೆಯಲ್ಲಿ ನಾನು ಸುವಾರ್ತೆಯನ್ನು ಸಾರುವುದಿಲ್ಲವೆಂಬುದಾಗಿ ನಿಶ್ಚಯಮಾಡಿಕೊಂಡೆನು.


ಜ್ಞಾನಿಗಳು ತೇಜೋಮಯವಾದ ಆಕಾಶಮಂಡಲದಂತೆ ಪ್ರಕಾಶಿಸುವರು. ಬಹಳ ಜನರನ್ನು ಸದ್ಧರ್ಮಿಗಳನ್ನಾಗಿ ಮಾಡುವವರು ಯುಗಯುಗಾಂತರಗಳಲ್ಲಿಯೂ ನಕ್ಷತ್ರಗಳ ಹಾಗೆ ಹೊಳೆಯುವರು.


ಹಾಗಾದರೆ ಯಜಮಾನನು ತನ್ನ ಮನೆಯವರಿಗೆ ಹೊತ್ತು ಹೊತ್ತಿಗೆ ಆಹಾರ ಕೊಡುವುದಕ್ಕಾಗಿ ಅವರ ಮೇಲಿರಿಸಿದ ನಂಬಿಗಸ್ತನೂ, ವಿವೇಕಿಯೂ ಆದಂಥ ಆಳು ಯಾರು?


ಪಟ್ಟಣದ ಗೋಡೆಯ ಅಸ್ತಿವಾರಗಳು ಸಕಲ ವಿಧವಾದ ರತ್ನಗಳಿಂದ ಅಲಂಕೃತವಾಗಿದ್ದವು. ಮೊದಲನೆಯ ಅಸ್ತಿವಾರವು ಸೂರ್ಯಕಾಂತಶಿಲೆ ಎರಡನೆಯದು ನೀಲಮಣಿ ಮೂರನೆಯದು ಪಚ್ಚೆ. ನಾಲ್ಕನೆಯದು ಪದ್ಮರಾಗ,


ಇತರರಿಗೆ ನಾನು ಅಪೊಸ್ತಲನಲ್ಲದಿದ್ದರೂ ನಿಮಗಾದರೋ ಅಪೊಸ್ತಲನಾಗಿದ್ದೇನೆ. ನಾನು ಕರ್ತನ ಅಪೊಸ್ತಲನಾಗಿದ್ದೇನೆಂಬುದಕ್ಕೆ ನೀವೇ ನನ್ನ ಮುದ್ರೆಯಾಗಿದ್ದಿರಿ.


“ಆದುದರಿಂದ, ಈ ನನ್ನ ಮಾತುಗಳನ್ನು ಕೇಳಿ ಅವುಗಳಂತೆ ನಡೆಯುವವನು ಬಂಡೆಯ ಮೇಲೆ ಮನೆಯನ್ನು ಕಟ್ಟಿಕೊಂಡ ಬುದ್ಧಿವಂತನಿಗೆ ಹೋಲುವನು.


ಒಬ್ಬನು ಬೋಧಿಸುವವನಾದರೆ ದೈವೋಕ್ತಿಗಳನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸೇವೆ ಮಾಡುವವನಾದರೆ ದೇವರು ಕೊಡುವ ಶಕ್ತಿಗನುಗುಣವಾಗಿ ಮಾಡಲಿ. ಇವೆಲ್ಲವುಗಳಿಂದ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಉಂಟಾಗುವುದು. ಯೇಸು ಕ್ರಿಸ್ತನಿಗೆ ಅಧಿಪತ್ಯವೂ ಮತ್ತು ಘನವೂ ಯುಗಯುಗಾಂತರಗಳಲ್ಲಿಯೂ ಇರುವವು ಆಮೆನ್.


ನೀನು ದೇವರಿಗೆ ಯೋಗ್ಯನಾಗಿ ಕಾಣಿಸಿಕೊಳ್ಳುವುದಕ್ಕೆ ಪ್ರಯಾಸಪಡು. ಅವಮಾನಕ್ಕೆ ಗುರಿಯಾಗದ ಕೆಲಸದವನೂ ಸತ್ಯವಾಕ್ಯವನ್ನು ಸರಿಯಾಗಿ ಉಪದೇಶಿಸುವವನೂ ಆಗಿರು.


ಅರ್ಖಿಪ್ಪನಿಗೆ, “ನೀನು ಕರ್ತನಿಂದ ಹೊಂದಿರುವ ಸೇವೆಯನ್ನು ಎಚ್ಚರವಾಗಿದ್ದು ನೆರವೇರಿಸಬೇಕೆಂದು” ಹೇಳಿರಿ.


ದೇವರು ನನಗೆ ಕೃಪೆಮಾಡಿದ ಸೇವೆಯನ್ನು ಮಾಡುತ್ತಾ ನಿಮ್ಮಲ್ಲಿ ಒಬ್ಬೊಬ್ಬನಿಗೂ ಹೇಳುವುದೇನಂದರೆ ಯಾರೂ ತನ್ನ ಯೋಗ್ಯತೆಗೆ ಮೀರಿ ತನ್ನನ್ನು ಭಾವಿಸಿಕೊಳ್ಳದೆ ದೇವರು ಒಬ್ಬೊಬ್ಬನಿಗೆ ಎಂಥೆಂಥ ನಂಬಿಕೆಯ ಬಲವನ್ನು ಕೊಟ್ಟಿರುವನೋ, ಅದಕ್ಕೆ ತಕ್ಕ ಹಾಗೆ ನ್ಯಾಯವಾದ ಅಭಿಪ್ರಾಯದಿಂದ ತನ್ನನ್ನು ತಾನು ಭಾವಿಸಿಕೊಳ್ಳಬೇಕು.


ಆತನು ವಂಶಕ್ರಮದಿಂದ ದಾವೀದನ ಸಂತಾನದಲ್ಲಿ ಹುಟ್ಟಿದವನೂ ಪವಿತ್ರವಾದ ಆತ್ಮನ ಶಕ್ತಿಗನುಸಾರವಾಗಿ ಸತ್ತಮೇಲೆ ಜೀವಿತನಾಗಿ ಎದ್ದು ಬಂದು ದೇವಕುಮಾರನೆಂದು ನಿರ್ಣಯಿಸಲ್ಪಟ್ಟವನೂ ಆಗಿದ್ದಾನೆ.


ಆ ಮೇಲೆ ಅಖಾಯಕ್ಕೆ ಹೋಗಬೇಕೆಂದು ಅವನಿಗೆ ಮನಸ್ಸಾದಾಗ ಸಹೋದರರು ಅವನನ್ನು ಪ್ರೋತ್ಸಾಹಗೊಳಿಸಿ ಅಲ್ಲಿದ್ದ ಶಿಷ್ಯರಿಗೆ ಇವನನ್ನು ಸೇರಿಸಿಕೊಳ್ಳಬೇಕೆಂದು ಪತ್ರಿಕೆಯನ್ನು ಬರೆದುಕೊಟ್ಟರು.


ಆದುದರಿಂದ ನಿನ್ನೊಳಗಿರುವ ಬೆಳಕೇ ಕತ್ತಲಾಗಿದೆಯೋ ಏನೋ ನೋಡು.


ಪ್ರಸಂಗಿಯು ಜ್ಞಾನಿಯಾಗಿದ್ದು, ಜನರಿಗೆ ತಿಳಿವಳಿಕೆಯನ್ನು ಬೋಧಿಸುತ್ತಾ ಬಂದನು, ಅನೇಕಾನೇಕ ಜ್ಞಾನೋಕ್ತಿಗಳನ್ನು ಧ್ಯಾನಿಸಿ, ಪರೀಕ್ಷಿಸಿ ಕ್ರಮಪಡಿಸಿದನು.


ನನ್ನ ಸಹೋದರರೇ, ಬೋಧಕರಾದ ನಮಗೆ ಕಠಿಣವಾದ ತೀರ್ಪು ಆಗುವುದೆಂದು ತಿಳಿದುಕೊಂಡು ಬಹಳ ಜನರು ಬೋಧಕರಾಗಬೇಡಿರಿ.


ನಿನ್ನ ವಿಷಯದಲ್ಲಿಯೂ ನಿನ್ನ ಉಪದೇಶದ ವಿಷಯದಲ್ಲಿಯೂ ಎಚ್ಚರಿಕೆಯಾಗಿರು. ನೀನು ಈ ಕಾರ್ಯಗಳಲ್ಲಿ ನಿರತನಾಗಿರು, ಆಗ ನೀನು ನಿನ್ನನ್ನೂ ಮತ್ತು ನಿನ್ನ ಉಪದೇಶ ಕೇಳುವವರನ್ನೂ ರಕ್ಷಿಸುವಿ.


ನನ್ನಲ್ಲಿ ಕಾರ್ಯಸಾಧಿಸುವ ದೇವರ ಬಲದಿಂದ ಇದಕ್ಕೊಸ್ಕರವೇ ಶ್ರಮಿಸಿ ಹೋರಾಡುತ್ತೇನೆ.


ಆದರೂ ಪ್ರಿಯರೇ, ನಿಮ್ಮನ್ನು ನೆನಪಿಸುವುದಕ್ಕಾಗಿ ಕೆಲವೊಂದು ವಿಷಯಗಳನ್ನು ಹೆಚ್ಚಾದ ಧೈರ್ಯದಿಂದ ಬರೆದಿದ್ದೇನೆ. ಯಾಕೆಂದರೆ ನಾನು ಅನ್ಯಜನರಿಗೋಸ್ಕರ ಯೇಸು ಕ್ರಿಸ್ತನ ಸೇವಕನಾಗುವುದಕ್ಕೆ ನನಗೆ ದೇವರ ಆಶೀರ್ವಾದವಾಯಿತು. ನಾನು ದೇವರ ಸುವಾರ್ತಾ ಸೇವೆಯನ್ನು ಯಾಜಕ ಸೇವೆ ಎಂಬಂತೆ ನಡಿಸಿ ಪವಿತ್ರಾತ್ಮನ ಮೂಲಕವಾಗಿ ದೇವರಿಗೆ ಸಮರ್ಪಕವಾಗುವಂತೆ ಯತ್ನಿಸುವವನಾಗಿದ್ದೇನೆ.


ಯೇಸು ಹೇಳಿದ್ದೇನಂದರೆ, “ನೀವು ಮೋಸಹೋಗದಂತೆ ಎಚ್ಚರವಾಗಿರಿ. ಏಕೆಂದರೆ ಅನೇಕರು ಬಂದು ನನ್ನ ಹೆಸರನ್ನು ಹೇಳಿಕೊಂಡು ‘ನಾನೇ ಕ್ರಿಸ್ತನು, ನಾನೇ ಕ್ರಿಸ್ತನು’ ಎಂತಲೂ ‘ಆ ಕಾಲ ಹತ್ತಿರವಾಯಿತು’ ಎಂತಲೂ ಹೇಳುವರು. ಅವರ ಹಿಂದೆ ಹೋಗಬೇಡಿರಿ.


“ಜೆರುಬ್ಬಾಬೆಲನ ಕೈಗಳು ಈ ಆಲಯದ ಅಸ್ತಿವಾರವನ್ನು ಹಾಕಿವೆ. ಆ ಕೈಗಳೇ ಇದನ್ನು ಪೂರೈಸುವವು. ಆಗ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದವನು ಸೇನಾಧೀಶ್ವರನಾದ ಯೆಹೋವನೇ” ಎಂದು ನನಗೆ ಗೊತ್ತಾಗುವುದು.


ಇದಲ್ಲದೆ, “ಭೂಮ್ಯಾಕಾಶಗಳನ್ನು ಉಂಟುಮಾಡಿದ ಇಸ್ರಾಯೇಲ್ ದೇವರಾದ ಯೆಹೋವನು ತನಗೋಸ್ಕರ ದೇವಾಲಯವನ್ನೂ, ರಾಜನಿಗೋಸ್ಕರ ಅರಮನೆಯನ್ನೂ ಕಟ್ಟಿಸತಕ್ಕ ಬುದ್ಧಿ, ಜ್ಞಾನ, ವಿವೇಕವುಳ್ಳ ಮಗನನ್ನು ಅರಸನಾದ ದಾವೀದನಿಗೆ ಕೊಟ್ಟಿದ್ದರಿಂದ ಆತನಿಗೆ ಸ್ತೋತ್ರವಾಗಲಿ.


ಪಟ್ಟಣದ ಪ್ರಾಕಾರಕ್ಕೆ ಹನ್ನೆರಡು ಅಸ್ತಿವಾರಗಳಿದ್ದವು. ಅವುಗಳ ಮೇಲೆ ಯಜ್ಞದ ಕುರಿಮರಿಯಾದಾತನ ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳಿದ್ದವು.


ನಾವು ಮಿತಿಗಳನ್ನು ಮೀರಿ ಮತ್ತೊಬ್ಬರ ಪ್ರಯಾಸದ ಫಲಗಳನ್ನು ತೆಗೆದುಕೊಂಡು, ಇವು ನಮ್ಮವು ಎಂದು ಹಿಗ್ಗುವವರಲ್ಲ. ಆದರೆ ನಿಮ್ಮ ನಂಬಿಕೆಯು ಹೆಚ್ಚಿದಾಗೆಲ್ಲಾ ನಿಮ್ಮ ಮೂಲಕ ನಮ್ಮ ಮಿತಿಯು ಇನ್ನೂ ವಿಸ್ತರಿಸಿತು.


ಜ್ಞಾನವೆಂಬಾಕೆಯು ಏಳು ಕಂಬಗಳನ್ನು ಕಡಿದು, ತನ್ನ ಮನೆಯನ್ನು ಕಟ್ಟಿಕೊಂಡಿದ್ದಾಳೆ.


ನಿಮ್ಮ ಮೇಲೆ ಬಂದಿರುವ ಸಂಕಟಗಳಲ್ಲಿ ಒಬ್ಬರೂ ಚಂಚಲರಾಗದಂತೆ ನಿಮ್ಮನ್ನು ದೃಢಪಡಿಸುವುದಕ್ಕೂ ನಿಮ್ಮ ನಂಬಿಕೆಯ ವಿಷಯವಾಗಿ ಉತ್ತೇಜನಪಡಿಸುವುದಕ್ಕೂ ನಮ್ಮ ಸಹೋದರನೂ, ಕ್ರಿಸ್ತನ ಸುವಾರ್ತೆಯ ಕಾರ್ಯದಲ್ಲಿ ದೇವರ ಸೇವಕನೂ ಆಗಿರುವ ತಿಮೊಥೆಯನನ್ನು ನಿಮ್ಮ ಬಳಿಗೆ ಕಳುಹಿಸಿದೆವು.


ನಮ್ಮ ಕರ್ತನ ದೀರ್ಘಶಾಂತಿಯು ನಮ್ಮ ರಕ್ಷಣಾರ್ಥವಾಗಿ ಇದೆ ಎಂದು ಪರಿಗಣಿಸಿರಿ. ನಮ್ಮ ಪ್ರಿಯ ಸಹೋದರನಾದ ಪೌಲನು ಸಹ ತನಗೆ ಅನುಗ್ರಹಿಸಿರುವ ಜ್ಞಾನದ ಪ್ರಕಾರ ನಿಮಗೆ ಬರೆದಿದ್ದಾನೆ.


ಆಗ ದೇವಮಂದಿರದ ಕೆಲಸವನ್ನು ಮಾಡುತ್ತಿದ್ದ ಆ ಜ್ಞಾನಿಗಳೆಲ್ಲರು,


ಬುದ್ಧಿವಂತನನ್ನು ಅವನ ಬುದ್ಧಿಗೆ ತಕ್ಕಂತೆ ಹೊಗಳುವರು, ವಕ್ರಬುದ್ಧಿಯುಳ್ಳವನನ್ನು ತಿರಸ್ಕರಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು