Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 3:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆ ಅಸ್ತಿವಾರದ ಮೇಲೆ ಚಿನ್ನ, ಬೆಳ್ಳಿ, ರತ್ನಗಳು, ಕಟ್ಟಿಗೆ, ಹುಲ್ಲು, ಆಪು ಮುಂತಾದವುಗಳಲ್ಲಿ ಯಾವುದರಿಂದ ಕಟ್ಟಿದರೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಈ ಅಸ್ತಿವಾರದ ಮೇಲೆ ಕೆಲವರು ಚಿನ್ನ, ಬೆಳ್ಳಿ, ರತ್ನ - ಇವುಗಳನ್ನು ಉಪಯೋಗಿಸ ಕಟ್ಟುತ್ತಾರೆ. ಮತ್ತೆ ಕೆಲವರು ಹುಲ್ಲು, ಕಟ್ಟಿಗೆ, ಜೊಂಡು - ಇವುಗಳನ್ನು ಬಳಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆ ಅಸ್ತಿವಾರದ ಮೇಲೆ ಚಿನ್ನ ಬೆಳ್ಳಿ ರತ್ನ ಕಟ್ಟಿಗೆ ಹುಲ್ಲು ಆಪು ಮುಂತಾದವುಗಳಲ್ಲಿ ಯಾವದರಿಂದ ಕಟ್ಟಿದರೂ ಅವನವನ ಕೆಲಸವು ವ್ಯಕ್ತವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಒಬ್ಬ ವ್ಯಕ್ತಿಯು ಆ ಅಸ್ತಿವಾರದ ಮೇಲೆ ಚಿನ್ನ, ಬೆಳ್ಳಿ, ರತ್ನ, ಮರ, ಹುಲ್ಲು ಮತ್ತು ಜೊಂಡುಗಳಿಂದ ಕಟ್ಟಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಯಾವನಾದರೂ ಆ ಅಸ್ತಿವಾರದ ಮೇಲೆ ಚಿನ್ನ, ಬೆಳ್ಳಿ, ರತ್ನ, ಕಟ್ಟಿಗೆ, ಹುಲ್ಲು ಅಥವಾ ಜೊಂಡು ಮುಂತಾದವುಗಳಿಂದ ಕಟ್ಟಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಉಲ್ಲೆ ಜಾನಾ ಸೊನೆ, ನಾ ಹೊಲ್ಯಾರ್ ಚಾಂದಿ, ನಾ ಹೊಲ್ಯಾರ್ ಲೈ ಕಿಮ್ತಿಚೆ ಗುಂಡೆ ಹ್ಯಾ ಪಾಯಾಚ್ಯಾ ವೈರ್ ಭಾಂದಾಪ್ ಭಾಂದುಕ್ ವಾಪರ್ತಾತ್ ಅನಿ ಉಲ್ಲೆ ಜಾನಾ ನಾಕುಡ್, ನಾ ಜಾಲ್ಯಾರ್ ಗವಾತ್, ನಾ ಜಾಲ್ಯಾರ್ ಬಾರಿಕ್ ಝಾಡ್ ವಾಪರ್ತಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 3:12
33 ತಿಳಿವುಗಳ ಹೋಲಿಕೆ  

ಯಾಕೆಂದರೆ ಜನರು ಸ್ವಸ್ಥಬೋಧನೆಯನ್ನು ಒಪ್ಪಲಾರದ ಕಾಲವು ಬರುತ್ತದೆ. ಅದರಲ್ಲಿ ಅವರು ಕಿವಿಗೆ ಇಂಪಾಗುವ ಹಾಗೆ ತಮ್ಮ ದುರಾಶೆಗಳಿಗೆ ಅನುಕೂಲವಾದ ಉಪದೇಶಗಳನ್ನು ನೀಡುವ ಅನೇಕ ಉಪದೇಶಕರನ್ನು ಇಟ್ಟುಕೊಳ್ಳುವರು.


ಆ ಸ್ತ್ರೀಯರು ಯಾವಾಗಲೂ ಉಪದೇಶ ಕೇಳುತ್ತಿದ್ದರೂ ಸತ್ಯದ ಪರಿಜ್ಞಾನವನ್ನು ಹೊಂದಲಾರದವರು.


ದೊಡ್ಡ ಮನೆಯಲ್ಲಿ ಬೆಳ್ಳಿ ಬಂಗಾರದ ಪಾತ್ರೆಗಳಲ್ಲದೆ, ಮರದ ಪಾತ್ರೆಗಳೂ, ಮಣ್ಣಿನ ಪಾತ್ರೆಗಳೂ ಇರುತ್ತವೆ. ಅವುಗಳಲ್ಲಿ ಕೆಲವನ್ನು ಉತ್ತಮವಾದ ಬಳಕೆಗೂ ಕೆಲವನ್ನು ಹೀನವಾದ ಬಳಕೆಗೂ ಬಳಸಲಾಗುತ್ತದೆ.


ಆ ಗೋಡೆಯು ಸೂರ್ಯಕಾಂತ ಶಿಲೆಯಿಂದ ಕಟ್ಟಲ್ಪಟ್ಟಿತ್ತು ಪಟ್ಟಣವು ಶುದ್ಧ ಗಾಜಿನಂತಿರುವ ಅಪ್ಪಟ ಬಂಗಾರವಾಗಿತ್ತು.


ನೀನು ಐಶ್ವರ್ಯವಂತನಾಗಲು ಬೆಂಕಿಯಲ್ಲಿ ಪುಟಾಹಾಕಿದ ಚಿನ್ನವನ್ನೂ, ಲಜ್ಜಾಸ್ಪದವಾದ ನಿನ್ನ ಬೆತ್ತಲೆತನ ಕಾಣಿಸದಂತೆ ಧರಿಸಿಕೊಳ್ಳುವುದಕ್ಕಾಗಿ ಬಿಳೀವಸ್ತ್ರಗಳನ್ನೂ, ಕಣ್ಣುಕಾಣುವಂತೆ ನಿನ್ನ ಕಣ್ಣುಗಳಿಗೆ ಹಚ್ಚುವುದಕ್ಕಾಗಿ ಅಂಜನವನ್ನೂ ನನ್ನಿಂದ ಕೊಂಡುಕೊಳ್ಳಬೇಕೆಂದು ನಾನು ನಿನಗೆ ಬುದ್ಧಿ ಹೇಳುತ್ತೇನೆ.


ನಾಶವಾಗುವಂತಹದ್ದೂ, ಬೆಂಕಿಯಿಂದ ಶೋಧಿಸುವಂತಹದ್ದೂ ಆಗಿರುವ ಬಂಗಾರಕ್ಕಿಂತಲೂ ಬಹು ಅಮೂಲ್ಯವಾಗಿರುವ ನಿಮ್ಮ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ಕೀರ್ತಿ, ಮಾನ, ಮಹಿಮೆಗಳನ್ನು ಉಂಟುಮಾಡುವಂತಹದ್ದಾಗಿದೆ.


ನೀನು ಕೊಟ್ಟ ಧರ್ಮಶಾಸ್ತ್ರವು, ಸಾವಿರಾರು ಚಿನ್ನ, ಬೆಳ್ಳಿಯ ನಾಣ್ಯಗಳಿಗಿಂತಲೂ ನನಗೆ ಅತಿಪ್ರಿಯವಾಗಿದೆ. ಯೋದ್.


ಅವು ಬಂಗಾರಕ್ಕಿಂತಲೂ, ಅಪರಂಜಿರಾಶಿಗಿಂತಲೂ ಅಪೇಕ್ಷಿಸತಕ್ಕವುಗಳು. ಅವು ಜೇನಿಗಿಂತಲೂ, ಶೋಧಿಸಿದ ಜೇನುತುಪ್ಪಕ್ಕಿಂತಲೂ ಸಿಹಿಯಾಗಿವೆ.


ಕೆಲವು ವಿಷಯಗಳಲ್ಲಿ ನಿನ್ನ ವಿರುದ್ಧ ನನಗೆ ಅಪಾದನೆಗಳಿವೆ. ವಿಗ್ರಹಕ್ಕೆ ನೈವೇದ್ಯಮಾಡಿದ ಪದಾರ್ಥಗಳನ್ನು ತಿನ್ನುವುದರಲ್ಲಿಯೂ ಜಾರತ್ವದಲ್ಲಿಯೂ ಇಸ್ರಾಯೇಲ್ಯರು ಮುಗ್ಗರಿಸಿ ಬೀಳಬೇಕೆಂದು ಬಿಳಾಮನು ಬಾಲಾಕನಿಗೆ ಕಲಿಸಿದ ದುರ್ಬೋಧನೆಯನ್ನು ಅವಲಂಬಿಸಿರುವವರು ನಿನ್ನಲ್ಲಿ ಇದ್ದಾರೆ.


ನಾನಾ ವಿಧವಾದ ಅನ್ಯೋಪದೇಶಗಳ ಸೆಳವಿಗೆ ಸಿಕ್ಕಿಕೊಳ್ಳಬೇಡಿರಿ. ಏಕೆಂದರೆ ದೇವರ ಕೃಪೆಯಿಂದ ಹೃದಯವನ್ನು ದೃಢಪಡಿಸಿಕೊಳ್ಳುವುದು ಒಳ್ಳೆಯದು. ಭೋಜನ ಪದಾರ್ಥಗಳ ಕುರಿತಾದ ನಿಯಮಗಳನ್ನು ಅನುಸರಿಸುವವರಿಗೆ ಏನೂ ಪ್ರಯೋಜನವಾಗುವುದಿಲ್ಲ.


ಆದರೆ ದುಷ್ಟರೂ, ವಂಚಕರೂ ಇತರರನ್ನು ಮೋಸಮಾಡುತ್ತಾ ತಾವೇ ಮೋಸಹೋಗುತ್ತಾ ಹೆಚ್ಚಾದ ಕೆಟ್ಟತನಕ್ಕೆ ಹೋಗುವರು.


ಯಾವನಾದರೂ ಭಿನ್ನವಾದ ಉಪದೇಶವನ್ನು ಮಾಡಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಸ್ವಸ್ಥವಾದ ಮಾತುಗಳಿಗೂ, ಭಕ್ತಾನುಸಾರವಾದ ಉಪದೇಶಗಳಿಗೂ ಸಮ್ಮತಿಸದೆ ಹೋದರೆ,


ಮೋಸಕರವಾದ ಮತ್ತು ವ್ಯರ್ಥವಾದ ತತ್ವಜ್ಞಾನ ಬೋಧನೆಯಿಂದ ಯಾರೂ ನಿಮ್ಮನ್ನು ವಶಮಾಡಿಕೊಳ್ಳದಂತೆ ಎಚ್ಚರಿಕೆಯಾಗಿರಿ. ಇವುಗಳು ಮನುಷ್ಯರ ಸಂಪ್ರದಾಯಗಳಿಗೆ ಮತ್ತು ಪ್ರಾಪಂಚಿಕ ಮೂಲ ಬೋಧನೆಗಳಿಗೆ ಸಂಬಂಧಿಸಿದವುಗಳೇ ಹೊರತು ಕ್ರಿಸ್ತನಿಗಲ್ಲ.


ಎಷ್ಟೋ ಮಂದಿ ದೇವರ ವಾಕ್ಯವನ್ನು ಕಲಬೆರಕೆ ಮಾಡಿ ವ್ಯಾಪಾರಮಾಡುತ್ತಾರೆ. ನಾವು ಹಾಗಲ್ಲ; ದೇವರಿಂದಲೇ ನಿಯೋಜಿತರಾಗಿ, ದೇವರ ಸಮಕ್ಷಮದಲ್ಲಿ, ಕ್ರಿಸ್ತ ಅನ್ಯೋನ್ಯತೆಯಲ್ಲಿ ನಾವು ಯಥಾರ್ಥವಾದುದನ್ನೇ ಉಪದೇಶಿಸುವವರು.


ಪ್ರಿಯರೇ, ನೀವು ಹೊಂದಿದ ಉಪದೇಶಕ್ಕೆ ವಿರುದ್ಧವಾಗಿ ಭೇದಗಳನ್ನೂ, ವಿಘ್ನಗಳನ್ನೂ ನಿಮ್ಮಲ್ಲಿ ಉಂಟುಮಾಡುವವರನ್ನು ಗುರುತಿಸಿ ಅವರನ್ನು ಬಿಟ್ಟು ದೂರ ಹೋಗಿರಿ ಎಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.


ಇದಲ್ಲದೆ ನಿಮ್ಮಲ್ಲೇ ಕೆಲವರು ಎದ್ದು ಅಸತ್ಯವಾದ ಬೋಧನೆಗಳನ್ನು ಮಾಡಿ ಶಿಷ್ಯರನ್ನು ತಮ್ಮ ಕಡೆಗೆ ಎಳೆದುಕೊಳ್ಳುವರು.


ಕನಸು ಕಂಡ ಪ್ರವಾದಿಯು ಕನಸನ್ನು ತಿಳಿಸಿದರೆ ತಿಳಿಸಲಿ. ನನ್ನ ಮಾತನ್ನು ಕೇಳಿದವನೋ ನನ್ನ ಮಾತನ್ನು ಯಥಾರ್ಥವಾಗಿ ನುಡಿಯಲಿ.


ತಾಮ್ರಕ್ಕೆ ಬದಲಾಗಿ ಚಿನ್ನವನ್ನು, ಕಬ್ಬಿಣಕ್ಕೆ ಪ್ರತಿಯಾಗಿ ಬೆಳ್ಳಿಯನ್ನು, ಮರವಿದ್ದಲ್ಲಿ ತಾಮ್ರವನ್ನು, ಕಲ್ಲುಗಳ ಸ್ಥಾನದಲ್ಲಿ ಕಬ್ಬಿಣವನ್ನು ಒದಗಿಸುವೆನು; ಸಮಾಧಾನವನ್ನು ನಿನಗೆ ಅಧಿಪತಿಯನ್ನಾಗಿ, ಧರ್ಮವನ್ನು ನಿನಗೆ ಅಧಿಕಾರಿಯನ್ನಾಗಿ ನೇಮಿಸುವೆನು.


ಆತನ ಮಾತುಗಳಿಗೆ ಯಾವುದನ್ನೂ ಸೇರಿಸಬೇಡ, ಆತನು ನಿನ್ನನ್ನು ಖಂಡಿಸುವಾಗ ನೀನು ಸುಳ್ಳುಗಾರನೆಂದು ತೋರಿಬಂದೀಯೆ.


ಬಂಗಾರಕ್ಕಿಂತಲೂ ಜ್ಞಾನವನ್ನು ಪಡೆಯುವುದು ಎಷ್ಟೋ ಮೇಲು, ಬೆಳ್ಳಿಗಿಂತಲೂ ವಿವೇಕವನ್ನು ಹೊಂದುವುದು ಲೇಸು.


ನನ್ನ ಬೋಧನೆಯನ್ನು ಬೆಳ್ಳಿಗಿಂತಲೂ ಮತ್ತು ಜ್ಞಾನೋಪದೇಶವನ್ನು ಅಪರಂಜಿಗಿಂತಲೂ ಉತ್ತಮವೆಂದು ಹೊಂದಿಕೊಳ್ಳಿರಿ.


ನಾಚಿಕೆಪಡುವಂತಹ ಗುಪ್ತಕಾರ್ಯಗಳನ್ನು ಬಿಟ್ಟು ಕುತಂತ್ರದಲ್ಲಿ ನಡೆಯದೆ ದೇವರ ವಾಕ್ಯವನ್ನು ಬೆರಕೆ ಮಾಡದೆ, ಸತ್ಯವನ್ನು ಪ್ರಾಮಾಣಿಕವಾಗಿ ಬೋಧಿಸುತ್ತಾ ನಾವು ನೀತಿವಂತರೆಂದು ಪ್ರತಿ ಮನುಷ್ಯನ ಮನಸ್ಸಾಕ್ಷಿಯು ದೇವರ ಮುಂದೆ ಒಪ್ಪಬೇಕಾದ ರೀತಿಯಲ್ಲಿ ನಡೆಯುತ್ತೇವೆ.


ಯೇಸು ಕ್ರಿಸ್ತನೆಂಬ ಅಸ್ತಿವಾರವನ್ನಲ್ಲದೆ ಮತ್ತೊಂದು ಅಸ್ತಿವಾರವನ್ನು ಯಾರೂ ಹಾಕಲಾರರಷ್ಟೆ.


ಅವನವನ ಕೆಲಸವು ಪ್ರಕಟವಾಗುವುದು. ಕ್ರಿಸ್ತನು ಬರುವ ದಿನವು ಬೆಂಕಿಯೊಡನೆ ಉದಯವಾಗಿ ಆ ಕೆಲಸವನ್ನು ಸ್ಪಷ್ಟವಾಗಿ ತೋರಿಸುವುದು. ಅವನವನ ಕೆಲಸವೆಂಥದೆಂಬುದನ್ನು ಆ ಬೆಂಕಿ ಶೋಧಿಸುವುದು.


ಹೀಗಿರಲಾಗಿ ಜನರು ಹುಲ್ಲನ್ನು ಕೂಡಿಸಿಕೊಳ್ಳುವುದಕ್ಕಾಗಿ ಐಗುಪ್ತ ದೇಶದಲ್ಲೆಲ್ಲಾ ಚದರಿಹೋಗಿ ಹುಡುಕತೊಡಗಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು