Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 4:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಈ ಗಳಿಗೆಯವರೆಗೂ ನಾವು ಹಸಿದವರೂ, ಬಾಯಾರಿಕೆಯುಳ್ಳವರೂ, ವಸ್ತ್ರವಿಲ್ಲದವರೂ, ಪೆಟ್ಟು ತಿನ್ನುವವರೂ ಮನೆಯಿಲ್ಲದವರೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಈ ಗಳಿಗೆಯವರೆಗೂ ನಾವು ಹಸಿದು ಬಾಯಾರಿದವರು, ಬಟ್ಟೆಬರೆ ಇಲ್ಲದವರು, ಏಟುಪೆಟ್ಟು ತಿನ್ನುವವರು ಮತ್ತು ಮನೆಮಠವಿಲ್ಲದೆ ಅಲೆಯುವವರು ಆಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಈ ಗಳಿಗೆಯವರೆಗೂ ನಾವು ಹಸಿದವರೂ ಬಾಯಾರಿಕೆಯುಳ್ಳವರೂ ಮೈಗೆ ವಸ್ತ್ರವಿಲ್ಲದವರೂ ಗುದ್ದು ತಿನ್ನುವವರೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಈಗಲೂ ಸಹ ನಾವು ಹಸಿದವರಾಗಿದ್ದೇವೆ; ಬಾಯಾರಿದವರಾಗಿದ್ದೇವೆ; ಧರಿಸಿಕೊಳ್ಳಲು ಸಾಕಷ್ಟು ಬಟ್ಟೆಯಿಲ್ಲದವರಾಗಿದ್ದೇವೆ. ಆಗಾಗ್ಗೆ ನಮಗೆ ಪೆಟ್ಟುಗಳು ಬೀಳುತ್ತಿರುತ್ತವೆ; ನಮಗೆ ಮನೆಗಳೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಈ ಗಳಿಗೆಯವರೆಗೂ ನಾವು ಹಸಿದು ಬಾಯಾರಿದವರೂ, ಸಾಕಷ್ಟು ವಸ್ತ್ರವಿಲ್ಲದವರೂ, ಕ್ರೂರವಾಗಿ ಪೆಟ್ಟಿಗೆ ಗುರಿಯಾಗುವವರೂ, ಮನೆಯಿಲ್ಲದವರೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಅಜುನ್ ಪತರ್ ಅಮಿ ಭುಕೆನ್ ಅನಿ ಸೊಸೆನ್ ರ್‍ಹಾತಾಂವ್, ಕಪ್ಡೆ ನಸ್ತಾನಾ ಹಾಂವ್ ಮಾರ್ ಖಾತಾಂವ್ ಅನಿ ಘರ್-ದಾರ್ ನಸ್ತಾನಾ ಗಾಂವಾತ್ ರ್‍ಹಾತಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 4:11
13 ತಿಳಿವುಗಳ ಹೋಲಿಕೆ  

ಈ ಕ್ರಿಸ್ತನ ಪ್ರೀತಿಯಿಂದ ನಮ್ಮನ್ನು ಅಗಲಿಸುವವರು ಯಾರು? ಕಷ್ಟವೋ? ಸಂಕಟವೋ? ಹಿಂಸೆಯೋ? ಹಸಿವೋ? ವಸ್ತ್ರವಿಲ್ಲದಿರುವುದೋ? ಗಂಡಾಂತರವೋ? ಖಡ್ಗವೋ?


ಬಡವನಾಗಿರಲೂ ಬಲ್ಲೆನು, ಸಮೃದ್ಧಿಯುಳ್ಳವನಾಗಿರಲೂ ಬಲ್ಲೆನು. ನಾನು ತೃಪ್ತನಾಗಿದ್ದರೂ, ಹಸಿದವನಾಗಿದ್ದರೂ, ಸಮೃದ್ಧಿಯುಳ್ಳವನಾದರೂ, ಕೊರತೆಯುಳ್ಳವನಾದರೂ ಯಾವ ತರದ ಸ್ಥಿತಿಯಲ್ಲಿರುವವನಾದರೂ ಅದರ ಗುಟ್ಟು ನನಗೆ ತಿಳಿದಿದೆ.


ಅಂತಿಯೋಕ್ಯ, ಇಕೋನ್ಯ, ಲುಸ್ತ್ರ ಎಂಬ ಪಟ್ಟಣಗಳಲ್ಲಿ ನನಗೆ ಸಂಭವಿಸಿದ ಹಿಂಸೆಗಳನ್ನೂ, ಕಷ್ಟಾನುಭವಗಳನ್ನೂ ತಿಳಿದವನಾಗಿದ್ದೀ. ನಾನು ಎಂಥೆಂಥ ಹಿಂಸೆಗಳನ್ನು ಸಹಿಸಿಕೊಂಡೆನು, ಅವೆಲ್ಲವುಗಳೊಳಗಿನಿಂದ ಕರ್ತನು ನನ್ನನ್ನು ಬಿಡಿಸಿದನು.


ಯೇಸು ಅವನಿಗೆ, “ನರಿಗಳಿಗೆ ಗುದ್ದುಗಳಿವೆ, ಆಕಾಶದಲ್ಲಿ ಹಾರಾಡುವ ಹಕ್ಕಿಗಳಿಗೆ ಗೂಡುಗಳಿವೆ; ಆದರೆ ಮನುಷ್ಯಕುಮಾರನಿಗೆ ತಲೆಯಿಡುವಷ್ಟು ಸ್ಥಳವೂ ಇಲ್ಲ” ಎಂದು ಹೇಳಿದನು.


ಎಲ್ಲಾದರಲ್ಲಿಯೂ ನಮಗೆ ಇಕ್ಕಟ್ಟು ಇದ್ದರೂ ನಾವು ಸಂಕಟಪಡುವವರಲ್ಲ. ನಾವು ಗೊಂದಲಕ್ಕೀಡಾಗಿದ್ದರೂ ಹತಾಶರಾಗುವವರಲ್ಲ.


ಅನ್ನ, ಪಾನಗಳಿಗೆ ನಮಗೆ ಹಕ್ಕಿಲ್ಲವೇ?


ಅದಕ್ಕೆ ಮಹಾಯಾಜಕನಾದ ಅನನೀಯನು; ಅವನ ಬಾಯಿಯ ಮೇಲೆ ಹೊಡೆಯಿರಿ ಎಂದು ಹತ್ತಿರದಲ್ಲಿ ನಿಂತಿದ್ದವರಿಗೆ ಅಪ್ಪಣೆ ಕೊಡಲು ಪೌಲನು ಅವನಿಗೆ;


ಅವರಿಗೆ ಬಹಳ ಹೊಡೆತಗಳನ್ನು ಹೊಡಿಸಿದ ಮೇಲೆ ಸೆರೆಮನೆಯೊಳಗೆ ಹಾಕಿಸಿ, ಇವರನ್ನು ಭದ್ರವಾಗಿ ಕಾಯಬೇಕೆಂದು ಸೆರೆಯ ಯಜಮಾನನಿಗೆ ಆಜ್ಞಾಪಿಸಿದರು.


ತರುವಾಯ ಅಂತಿಯೋಕ್ಯದಿಂದಲೂ, ಇಕೋನ್ಯದಿಂದಲೂ ಯೆಹೂದ್ಯರು ಬಂದು, ಜನರನ್ನು ಪ್ರೇರೇಪಿಸಿ ಪೌಲನನ್ನು ಕೊಲ್ಲುವುದಕ್ಕೆ ಕಲ್ಲೆಸೆದರು, ಅವನು ಸತ್ತನೆಂದು ಭಾವಿಸಿ ಊರಹೊರಕ್ಕೆ ಅವನನ್ನು ಎಳೆದುಹಾಕಿದರು.


ನೋಡು, ನಿನ್ನ ಸಹೋದರನಿಂದ ಸುಮ್ಮನೆ ಒತ್ತೆಯಾಳುಗಳನ್ನು ತೆಗೆದುಕೊಂಡಿದ್ದಿ, ಬೆತ್ತಲೆಯವರ ಬಟ್ಟೆಯನ್ನೂ ಸೆಳಕೊಂಡಿದ್ದಿ.


ಒಬ್ಬನು ನಿಮ್ಮನ್ನು ತನಗೆ ವಶಮಾಡಿಕೊಂಡರೂ, ಒಬ್ಬನು ನಿಮ್ಮನ್ನು ನುಂಗಿಬಿಟ್ಟರೂ, ಒಬ್ಬನು ನಿಮ್ಮನ್ನು ಮರಳುಗೊಳಿಸಿ ಹಿಡಿದರೂ, ಒಬ್ಬನು ತನ್ನನ್ನು ಹೆಚ್ಚಿಸಿಕೊಂಡರೂ, ಒಬ್ಬನು ನಿಮ್ಮ ಮುಖದ ಮೇಲೆ ಹೊಡೆದರೂ ಸಹಿಸಿಕೊಳ್ಳುತ್ತೀರಲ್ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು