Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 4:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನಿಮಗೆ ಕ್ರಿಸ್ತನಲ್ಲಿ ಬೋಧಕರು ಸಾವಿರಾರು ಮಂದಿ ಇದ್ದರೂ ತಂದೆಗಳು ಬಹು ಮಂದಿ ಇಲ್ಲ ನಾನೇ ನಿಮ್ಮನ್ನು ಸುವಾರ್ತೆಯ ಮೂಲಕ ಕ್ರಿಸ್ತ ಯೇಸುವಿನಲ್ಲಿ ಪಡೆದ ತಂದೆಯಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ನಿಮಗೆ ಕ್ರಿಸ್ತಯೇಸುವಿನಲ್ಲಿ ಸಾವಿರಾರು ಮಂದಿ ಶಿಕ್ಷಕರು ಇರಬಹುದು. ಆದರೆ ನಿಮಗೆ ನಾನೊಬ್ಬನೇ ತಂದೆ. ಶುಭಸಂದೇಶದ ಮೂಲಕ ನಾನೇ ನಿಮ್ಮನ್ನು ಕ್ರಿಸ್ತಯೇಸುವಿನಲ್ಲಿ ಪಡೆದ ತಂದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನಿಮಗೆ ಕ್ರಿಸ್ತನಲ್ಲಿ ಉಪಾಧ್ಯಾಯರು ಸಾವಿರಾರು ಮಂದಿ ಇದ್ದರೂ ತಂದೆಗಳು ಬಹುಮಂದಿ ಇಲ್ಲ; ನಾನೇ ನಿಮ್ಮನ್ನು ಸುವಾರ್ತೆಯ ಮೂಲಕ ಕ್ರಿಸ್ತ ಯೇಸುವಿನಲ್ಲಿ ಪಡೆದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನಿಮಗೆ ಕ್ರಿಸ್ತನಲ್ಲಿ ಹತ್ತುಸಾವಿರ ಮಂದಿ ಉಪದೇಶಕರಿರಬಹುದು, ಆದರೆ ಬಹು ಮಂದಿ ತಂದೆಗಳು ಇಲ್ಲ. ಸುವಾರ್ತೆಯ ಮೂಲಕವಾಗಿ ಕ್ರಿಸ್ತ ಯೇಸುವಿನಲ್ಲಿ ನಾನೇ ನಿಮಗೆ ಆತ್ಮಿಕ ತಂದೆಯಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಏಕೆಂದರೆ, ನಿಮಗೆ ಕ್ರಿಸ್ತ ಯೇಸುವಿನಲ್ಲಿ ಹತ್ತು ಸಾವಿರ ಮಂದಿ ಪೋಷಕರು ಇದ್ದರೂ, ತಂದೆಗಳು ಬಹುಮಂದಿ ಇಲ್ಲ. ಸುವಾರ್ತೆಯ ಮೂಲಕ ಕ್ರಿಸ್ತ ಯೇಸುವಿನಲ್ಲಿ ನಾನು ನಿಮ್ಮ ತಂದೆಯಾದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ತುಮ್ಕಾ ಕ್ರಿಸ್ತಾಚ್ಯಾ ವೈನಾ ಹಜಾರಾನಿ ಶಿಕ್ವುತಲಿ ಲೊಕಾ ಅಸ್ತಿಲ್, ಹೊಲ್ಯಾರ್ಬಿ ತುಮ್ಕಾ ಆತ್ಮಿಕ್ ಬಾಬಾ ಎಕ್ಲೊಚ್, ಮಿಯಾಚ್ ತೊ ತುಮ್ಕಾ ಬರಿ ಖಬರ್ ಪ್ರಚಾರ್ ಕರುನ್ ಕ್ರಿಸ್ತಾತ್ ತುಮ್ಕಾ ಜಲಮ್ ದಿಲ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 4:15
25 ತಿಳಿವುಗಳ ಹೋಲಿಕೆ  

ನನ್ನ ಪ್ರಿಯರಾದ ಮಕ್ಕಳೇ, ಕ್ರಿಸ್ತನ ಸಾರೂಪ್ಯವು ನಿಮ್ಮಲ್ಲಿ ಉಂಟಾಗುವ ತನಕ ನಾನು ನಿಮಗಾಗಿ ಪ್ರಸವವೇದನೆ ಪಡುತ್ತಿರುವೆನು.


ದೇವರು ನನಗೆ ಕೊಟ್ಟ ಕೃಪೆಯ ಪ್ರಕಾರ ನಾನು ಜಾಣ್ಮೆಯುಳ್ಳ ಪ್ರವೀಣನಾದ ಶಿಲ್ಪಿಯಂತೆ ಅಸ್ತಿವಾರ ಹಾಕಿದೆನು. ಮತ್ತೊಬ್ಬನು ಅದರ ಮೇಲೆ ಕಟ್ಟುತ್ತಾನೆ. ಆದರೆ ತಾನು ಅದರ ಮೇಲೆ ಹೇಗೆ ಕಟ್ಟುತ್ತಿದ್ದೇನೆಂದು ಪ್ರತಿಯೊಬ್ಬನು ಎಚ್ಚರಿಕೆಯಿಂದಿರಬೇಕು.


ಇದೆಲ್ಲವನ್ನು ಸುವಾರ್ತೆಗೋಸ್ಕರವೇ ಮಾಡಿ, ನಾನು ಇತರರ ಸಂಗಡ ಸುವಾರ್ತೆಯ ಆಶೀರ್ವಾದದಲ್ಲಿ ಪಾಲುಗಾರನಾಗಬೇಕೆಂದು ಇದನ್ನು ಮಾಡುತ್ತಿದ್ದೇನೆ.


ಅದೇ ರೀತಿಯಾಗಿ ಕರ್ತನು ಸಹ ಸುವಾರ್ತೆಯನ್ನು ಸಾರುವವರು ಸುವಾರ್ತೆಯಿಂದಲೇ ತಮ್ಮ ಜೀವನಮಾಡಬೇಕೆಂದು ಆಜ್ಞಾಪಿಸಿದ್ದಾನೆ.


ಏಕೆಂದರೆ ನೀವು ಹೊಸದಾಗಿ ಹುಟ್ಟಿರುವಂಥದ್ದು ನಾಶವಾಗುವ ವಾಕ್ಯದಿಂದದ್ದಲ್ಲ. ಆದರೆ ನಾಶವಾಗದಂಥ ವಾಕ್ಯದಿಂದಲೇ. ಅದು ಸದಾ ಜೀವವುಳ್ಳ ದೇವರವಾಕ್ಯದ ಮೂಲಕ ಉಂಟಾಯಿತು.


ದೇವರು ತನ್ನ ಸುಚಿತ್ತದ ಪ್ರಕಾರ ಸತ್ಯವಾಕ್ಯದ ಮೂಲಕ ಜೀವಕೊಟ್ಟಿವುದರಿಂದ ನಾವು ಆತನ ಸರ್ವ ಸೃಷ್ಟಿಯಲ್ಲಿ ಪ್ರಥಮ ಫಲವಾದೆವು.


ನಾನೇ ಕೊಟ್ಟು ತೀರಿಸುತ್ತೇನೆಂದು ಪೌಲನೆಂಬ ನಾನು ಸ್ವಂತ ಕೈಯಿಂದ ಬರೆದಿದ್ದೇನೆ. ನಿನ್ನ ಆತ್ಮದ ವಿಷಯದಲ್ಲಿ ನೀನೇ ನನಗೆ ಹೊಣೆಗಾರನಾಗಿದ್ದೀ ಎಂದು ನಾನು ಬೇರೆ ಹೇಳಬೇಕೇ?


ಹಾಗು, ಆ ಸಂದೇಶವನ್ನು ಸಾರುವ ಜವಾಬ್ದಾರಿಯು ನಮ್ಮ ರಕ್ಷಕನಾದ ದೇವರ ಆಜ್ಞೆಯ ಅನುಸಾರವಾಗಿ ನನಗೆ ಒಪ್ಪಿಸಲ್ಪಟ್ಟಿದೆ ಹಾಗು ಸೂಕ್ತ ಕಾಲದಲ್ಲಿ ಸಂದೇಶವನ್ನು ಸಾರುವುದರ ಮೂಲಕ ತನ್ನ ವಾಕ್ಯವನ್ನು ನನಗೆ ಪ್ರಕಟಪಡಿಸಿದ್ದಾನೆ.


ಯಾಕೆಂದರೆ ಜನರು ಸ್ವಸ್ಥಬೋಧನೆಯನ್ನು ಒಪ್ಪಲಾರದ ಕಾಲವು ಬರುತ್ತದೆ. ಅದರಲ್ಲಿ ಅವರು ಕಿವಿಗೆ ಇಂಪಾಗುವ ಹಾಗೆ ತಮ್ಮ ದುರಾಶೆಗಳಿಗೆ ಅನುಕೂಲವಾದ ಉಪದೇಶಗಳನ್ನು ನೀಡುವ ಅನೇಕ ಉಪದೇಶಕರನ್ನು ಇಟ್ಟುಕೊಳ್ಳುವರು.


ಹಾಗಾದರೆ ನನಗೆ ಸಿಗುವ ಬಹುಮಾನವೇನು? ನಾನು ಸುವಾರ್ತೆಯನ್ನು ಸಾರುವಾಗ ಅದರಿಂದ ದೊರೆಯುವ ಪ್ರತಿಫಲವನ್ನು ಪಡೆಯದೇ ಅದನ್ನು ಉಚಿತವಾಗಿ ಸಾರುವುದೇ ನನಗೆ ದೊರೆಯುವ ಪ್ರತಿಫಲವಾಗಿದೆ.


ಈ ಅಧಿಕಾರ ಇತರರಿಗೆ ನಿಮ್ಮ ಮೇಲೆ ಇದ್ದರೆ ನಮಗೆ ಎಷ್ಟೋ ಹೆಚ್ಚಾಗಿ ಇರಬೇಕಲ್ಲಾ? ಆದರೂ ನಾವು ಆ ಅಧಿಕಾರವನ್ನು ಚಲಾಯಿಸಲಿಲ್ಲ, ಕ್ರಿಸ್ತನ ಸುವಾರ್ತೆಗೆ ಅಡ್ಡಿಮಾಡಬಾರದೆಂದು ಎಲ್ಲವನ್ನು ಸಹಿಸಿಕೊಂಡೆವು.


ನಾನು ಸಸಿಯನ್ನು ನೆಟ್ಟೆನು. ಅಪೊಲ್ಲೋಸನು ನೀರನ್ನು ಹೊಯ್ಯಿದನು. ಆದರೆ ಅದನ್ನು ಬೆಳೆಸಿದವನು ದೇವರೇ.


ಮತ್ತೊಬ್ಬರು ಹಾಕಿದ ಅಸ್ತಿವಾರದ ಮೇಲೆ ಕಟ್ಟಬಾರದೆಂದು ಮನಸ್ಸಿನಲ್ಲಿ ತೀರ್ಮಾನಿಸಿ ಕ್ರಿಸ್ತನ ಹೆಸರನ್ನು ತಿಳಿಸಿದ ಕಡೆಯಲ್ಲಿ ನಾನು ಸುವಾರ್ತೆಯನ್ನು ಸಾರುವುದಿಲ್ಲವೆಂಬುದಾಗಿ ನಿಶ್ಚಯಮಾಡಿಕೊಂಡೆನು.


ನಾನು ಇವರಿಗೆ ಹೆತ್ತ ತಾಯಿಯೇ? ಇವರನ್ನು ಮಗುವನ್ನು ಎತ್ತಿಕೊಂಡು ಹೋಗುವಂತೆ, ಮಡಿಲಲ್ಲಿ ಇಟ್ಟುಕೊಂಡು ಅವರ ಪೂರ್ವಿಕರಿಗೆ ಪ್ರಮಾಣಮಾಡಿದ ದೇಶಕ್ಕೆ ನಡೆಸಬೇಕು ಎಂದು ಹೇಳುತ್ತೀಯಲ್ಲಾ?


ದೇವರು ಈ ರೀತಿ ಮಾಡಿದ್ದರಿಂದಲೇ ಈಗ ನೀವು ಕ್ರಿಸ್ತ ಯೇಸುವಿನಲ್ಲಿದ್ದೀರಿ. ಕ್ರಿಸ್ತ ಯೇಸು ದೇವರ ಕಡೆಯಿಂದ ನಮಗೆ ಜ್ಞಾನವೂ, ನೀತಿಯೂ, ಶುದ್ಧಿಯೂ, ಮತ್ತು ವಿಮೋಚನೆಯು ಆಗಿದ್ದಾನೆ.


ನೆಡುವವನೂ, ನೀರು ಹೊಯ್ಯುವವನೂ ಸರಿಸಮಾನರೇ ಆಗಿದ್ದಾರೆ. ಆದರೆ ಪ್ರತಿಯೊಬ್ಬನಿಗೆ ಅವನವನ ಶಮ್ರಕ್ಕೆ ತಕ್ಕಂತೆ ಕೂಲಿಯು ದೊರೆಯುವುದು.


ನಾನು ಸುವಾರ್ತೆಯನ್ನು ಸಾರಿದರೂ ಹೊಗಳಿಕೊಳ್ಳುವುದಕ್ಕೆ ನನಗೇನೂ ಆಸ್ಪದವಿಲ್ಲ; ಸಾರಲೇ ಬೇಕೆಂಬ ನಿರ್ಬಂಧ ನನ್ನ ಮೇಲಿದೆ, ನಾನು ಸುವಾರ್ತೆಯನ್ನು ಸಾರದಿದ್ದರೆ ನನ್ನ ಗತಿಯನ್ನು ಏನೆಂದು ಹೇಳಲಿ!


ಸಹೋದರರೇ, ನಾನು ನಿಮಗೆ ತಿಳಿಸಿದ ಸುವಾರ್ತೆಯನ್ನು ನಿಮ್ಮ ನೆನಪಿಗೆ ತರುತ್ತೇನೆ; ನೀವು ಅದನ್ನು ಸ್ವೀಕರಿಸಿ, ಅದರಲ್ಲಿ ನಿಂತಿದ್ದೀರಿ.


ನಮ್ಮನ್ನೇ ನಾವು ಪ್ರಚಾರಮಾಡಿಕೊಳ್ಳದೆ ನಮ್ಮನ್ನು ಯೇಸುವಿನ ನಿಮಿತ್ತ ನಿಮ್ಮ ದಾಸರೆಂತಲೂ ಕ್ರಿಸ್ತೇಸುವನ್ನೇ ಕರ್ತನೆಂತಲೂ ಘೋಷಿಸುತ್ತೇವೆ.


ನಾವು ನಂಬಿಕೆಯಿಂದ ಯೇಸು ಕ್ರಿಸ್ತನಲ್ಲಿ ನೀತಿವಂತರೆಂಬ ನಿರ್ಣಯವನ್ನು ಹೊಂದುವ ಕಾಲ ಬರುವ ತನಕ, ಮೋಶೆಯ ಧರ್ಮಶಾಸ್ತ್ರವು ನಮ್ಮನ್ನು ಮುನ್ನಡೆಸುವ ಪಾಲಕನಂತಾಗಿತ್ತು.


ಆದರೆ ಈಗ ಕ್ರಿಸ್ತ ನಂಬಿಕೆಯು ಬಂದಿರಲಾಗಿ ನಾವು ಮುನ್ನಡೆಸುವಂಥ ಧರ್ಮಶಾಸ್ತ್ರದ ಹತೋಟಿಯಲ್ಲಿ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು