Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 4:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಹೀಗಿರಲು ನಿರ್ವಾಹಕರು ನಂಬಿಗಸ್ತರಾಗಿ ಕಂಡುಬರುವದು ಅಗತ್ಯವಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ನಿರ್ವಾಹಕರು ಪ್ರಾಮಾಣಿಕರಾಗಿರಬೇಕಾದುದು ಅತ್ಯವಶ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಹೀಗಿರಲು ಮನೆವಾರ್ತೆಯವನು ನಂಬಿಗಸ್ತನಾಗಿ ಕಂಡುಬರುವದು ಅವಶ್ಯವಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಹೀಗಿರಲು, ಜವಾಬ್ದಾರಿಕೆಯನ್ನು ವಹಿಸಿಕೊಂಡವರು ತಾವು ತಮ್ಮ ಕೆಲಸದಲ್ಲಿ ನಂಬಿಗಸ್ತರೆಂಬುದನ್ನು ತೋರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಹೀಗಿರುವುದರಿಂದ ನಂಬಿಗಸ್ತರಾಗಿರುವುದು ನಿರ್ವಾಹಕರಲ್ಲಿ ಅವಶ್ಯವಾಗಿ ಕಾಣತಕ್ಕ ಸದ್ಗುಣವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಅಸ್ಲ್ಯಾ ಸೆವಾಕಾಕ್ನಿ ಎಕ್ ಎವ್ಡೆಚ್ ರ್‍ಹಾವ್ಕ್ ಪಾಜೆ ತೆ ಕಾಯ್ ಮಟ್ಲ್ಯಾರ್, ಅಪ್ನಾಚ್ಯಾ ಯಜಮಾನಾಕ್ ವಿಶ್ವಾಸಾನ್ ರ್‍ಹಾತಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 4:2
17 ತಿಳಿವುಗಳ ಹೋಲಿಕೆ  

ಅವನ ಯಜಮಾನನು ಅವನಿಗೆ, ‘ಭಲಾ, ನಂಬಿಗಸ್ತನಾದ ಒಳ್ಳೆಯ ಸೇವಕನೇ; ನೀನು ಸ್ವಲ್ಪ ಕೆಲಸದಲ್ಲಿ ಪ್ರಾಮಾಣಿಕನಾಗಿದ್ದಿ; ದೊಡ್ಡ ಕೆಲಸದಲ್ಲಿ ನಿನ್ನನ್ನು ಇಡುತ್ತೇನೆ; ನಿನ್ನ ಒಡೆಯನ ಸಂತೋಷದಲ್ಲಿ ಸೇರು’ ಅಂದನು.


ಕರ್ತನು ಹೇಳಿದ್ದೇನಂದರೆ, “ಹೊತ್ತು ಹೊತ್ತಿಗೆ ಅವಶ್ಯಕತೆಗೆ ಬೇಕಾದದ್ದನ್ನು ಅಳೆದು ಕೊಡುವುದಕ್ಕಾಗಿ ಯಜಮಾನನು ತನ್ನ ಆಳುಗಳ ಮೇಲೆ ನೇಮಿಸಿದ ನಂಬಿಗಸ್ತನೂ ವಿವೇಕಿಯೂ ಆದ ಮೇಲ್ವಿಚಾರಕ ಯಾರು?


ಅವನ ಯಜಮಾನನು ಅವನಿಗೆ, ‘ಭಲಾ, ನಂಬಿಗಸ್ತನಾದ ಒಳ್ಳೆಯ ಸೇವಕನೇ; ನೀನು ಸ್ವಲ್ಪ ಕೆಲಸದಲ್ಲಿ ಪ್ರಾಮಾಣಿಕನಾಗಿದ್ದಿ, ದೊಡ್ಡ ಕೆಲಸದಲ್ಲಿ ನಿನ್ನನ್ನು ಇಡುತ್ತೇನೆ; ನಿನ್ನ ಒಡೆಯನ ಸಂತೋಷದಲ್ಲಿ ಸೇರು’ ಎಂದು ಹೇಳಿದನು.


ಕೆಟ್ಟ ದೂತನು ಕೇಡಿಗೆ ಬೀಳುವನು, ನಂಬಿಗಸ್ತನಾದ ರಾಯಭಾರಿಯು ಕ್ಷೇಮದಾಯಕನು.


ನನ್ನ ಸೇವಕನಾದ ಮೋಶೆಯು ಅಂಥವನಲ್ಲ. ಅವನು ನನ್ನ ಮನೆಯಲ್ಲೆಲ್ಲಾ ನಂಬಿಗಸ್ತನಾಗಿದ್ದಾನೆ.


ಅರ್ಖಿಪ್ಪನಿಗೆ, “ನೀನು ಕರ್ತನಿಂದ ಹೊಂದಿರುವ ಸೇವೆಯನ್ನು ಎಚ್ಚರವಾಗಿದ್ದು ನೆರವೇರಿಸಬೇಕೆಂದು” ಹೇಳಿರಿ.


ಎಷ್ಟೋ ಮಂದಿ ದೇವರ ವಾಕ್ಯವನ್ನು ಕಲಬೆರಕೆ ಮಾಡಿ ವ್ಯಾಪಾರಮಾಡುತ್ತಾರೆ. ನಾವು ಹಾಗಲ್ಲ; ದೇವರಿಂದಲೇ ನಿಯೋಜಿತರಾಗಿ, ದೇವರ ಸಮಕ್ಷಮದಲ್ಲಿ, ಕ್ರಿಸ್ತ ಅನ್ಯೋನ್ಯತೆಯಲ್ಲಿ ನಾವು ಯಥಾರ್ಥವಾದುದನ್ನೇ ಉಪದೇಶಿಸುವವರು.


ಈ ಸುವಾರ್ತೆಯನ್ನು ಕ್ರಿಸ್ತನ ನಂಬಿಗಸ್ತ ಸೇವಕನೂ, ನಮ್ಮ ಪ್ರಿಯ ಜೊತೆಸೇವಕನೂ ಆದ ಎಪಫ್ರನಿಂದ ನೀವು ಕಲಿತುಕೊಂಡಿದ್ದೀರಿ.


ಅವಿವಾಹಿತರಾದ ಕನ್ಯೆಯರನ್ನು ಕುರಿತಂತೆ ಕರ್ತನಿಂದ ಬಂದ ಆಜ್ಞೆ ನನಗೆ ಯಾವುದೂ ಇಲ್ಲ. ಆದರೆ ನಾನು ನಂಬಿಗಸ್ತನಾಗಿರುವುದಕ್ಕೆ ಕರ್ತನಿಂದ ಕರುಣೆಯನ್ನು ಹೊಂದಿದವನಾಗಿ ನನ್ನ ಅಭಿಪ್ರಾಯವನ್ನು ಹೇಳುತ್ತೇನೆ.


ನಾಚಿಕೆಪಡುವಂತಹ ಗುಪ್ತಕಾರ್ಯಗಳನ್ನು ಬಿಟ್ಟು ಕುತಂತ್ರದಲ್ಲಿ ನಡೆಯದೆ ದೇವರ ವಾಕ್ಯವನ್ನು ಬೆರಕೆ ಮಾಡದೆ, ಸತ್ಯವನ್ನು ಪ್ರಾಮಾಣಿಕವಾಗಿ ಬೋಧಿಸುತ್ತಾ ನಾವು ನೀತಿವಂತರೆಂದು ಪ್ರತಿ ಮನುಷ್ಯನ ಮನಸ್ಸಾಕ್ಷಿಯು ದೇವರ ಮುಂದೆ ಒಪ್ಪಬೇಕಾದ ರೀತಿಯಲ್ಲಿ ನಡೆಯುತ್ತೇವೆ.


ಪ್ರಿಯ ಸಹೋದರನೂ, ನಂಬಿಗಸ್ತನಾದ ಸೇವಕನೂ ಮತ್ತು ಕರ್ತನಲ್ಲಿ ಜೊತೆಯ ದಾಸನೂ ಆಗಿರುವ ತುಖಿಕನು ನನ್ನ ವಿಷಯಗಳನ್ನೆಲ್ಲಾ ನಿಮಗೆ ತಿಳಿಸುವನು.


ಈ ಕಾರಣದಿಂದ ಕರ್ತನಲ್ಲಿ ನನ್ನ ಪ್ರಿಯ ಮತ್ತು ನಂಬಿಗಸ್ತ ಮಗನಾದ ತಿಮೊಥೆಯನನ್ನು ನಿಮ್ಮ ಬಳಿಗೆ ಕಳುಹಿಸಿಕೊಟ್ಟಿದ್ದೇನೆ. ನಾನು ಪ್ರತಿಯೊಂದು ಸಭೆಗಳಲ್ಲಿಯೂ, ಎಲ್ಲೆಲ್ಲಿಯೂ ಬೋಧಿಸುವ ಹಾಗೆ ಕ್ರಿಸ್ತನಲ್ಲಿರುವ ನನ್ನ ನಡವಳಿಕೆಗಳನ್ನು ಅವನು ನಿಮ್ಮ ನೆನಪಿಗೆ ತರುವನು.


ಕೆಲಸಗಾರರಿಗೆ ಸಂಬಳಕೊಡುವ ಮುಖ್ಯಸ್ಥರು ನಂಬಿಗಸ್ತರಾಗಿದ್ದರಿಂದ ಅವರ ವಶಕ್ಕೆ ಕೊಡಲ್ಪಟ್ಟ ಹಣದ ಲೆಕ್ಕವನ್ನು ಯಾರೂ ಕೇಳುತ್ತಿರಲಿಲ್ಲ.


ಅವರು ನಂಬಿಗಸ್ತರಾಗಿರುವುದರಿಂದ ಅವರ ವಶಕ್ಕೆ ಕೊಡಲ್ಪಡುವ ಹಣದ ಲೆಕ್ಕವನ್ನು ಕೇಳಬಾರದು” ಎಂದು ಆಜ್ಞಾಪಿಸಿ ಅವನನ್ನು ಯೆಹೋವನ ಆಲಯಕ್ಕೆ ಕಳುಹಿಸಿದನು.


ಜನರು ನಮ್ಮನ್ನು ಕ್ರಿಸ್ತನ ಸೇವಕರೆಂತಲೂ ದೇವರ ಗುಪ್ತವಾಗಿದ್ದ ಸತ್ಯಾರ್ಥಗಳ ವಿಷಯದಲ್ಲಿ ದೇವರ ಮನೆವಾರ್ತೆಯವರೆಂತಲೂ ಪರಿಗಣಿಸಲಿ.


ನನಗಾದರೂ ನಿಮ್ಮಿಂದಾಗಲಿ ಅಥವಾ ಮನುಷ್ಯರು ಮಾಡುವ ವಿಚಾರಣೆಯಾಗಲಿ ತೀರಾ ಲಘುವೆನಿಸಿದೆ. ನಾನೂ ನನ್ನನ್ನು ನ್ಯಾಯತೀರ್ಪು ಮಾಡಿಕೊಳ್ಳುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು